Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ ಚಿತ್ರಗಳನ್ನು ಒಳಗೊಂಡ ಕೊಲಾಜ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಗೆ ಬಿಜೆಪಿ ಟಿಕೆಟ್ ನೀಡಿದ್ದರೆ, ಅದೇ ಪ್ರಕರಣದ ಆರೋಪಿಯ ಪರವಾಗಿ ವಾದ ಮಂಡಿಸಿದ ವಕೀಲೆ ಮೇನಕಾ ಗುರುಸ್ವಾಮಿ ಅವರಿಗೆ ಟಿಎಂಸಿ ರಾಜ್ಯಸಭಾ ಸದಸ್ಯತ್ವ ನೀಡಿದೆ ಎಂದು ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ತಜಿಂದರ್ ಬಗ್ಗಾ ಸೇರಿದಂತೆ ಬಿಜೆಪಿಯ ಹಲವಾರು ನಾಯಕರು ಮತ್ತು ಬಿಜೆಪಿ ಬೆಂಬಲಿತ ಸಾಮಾಜಿಕ ಜಾಲತಾಣ ಇನ್ಫ್ಲುಯೆನ್ಸರ್‌ಗಳು ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ವೈರಲ್ ಆಗಿರುವ ಈ ಸುಳ್ಳು ಸುದ್ದಿಯನ್ನು ಹರಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಫಾಲೋ ಮಾಡುತ್ತಿರುವ ಅರ್ಪಿತಾ ಚಟರ್ಜಿ ಎಂಬ ಬಿಜೆಪಿ ಬೆಂಬಲಿಗರು ಮತ್ತು ಇನ್ಫ್ಲುಯೆನ್ಸರ್‌ ಕೂಡ ಈ ಚಿತ್ರವನ್ನು ಹಂಚಿಕೊಂಡಿದ್ದು, “ಇದು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ರಾಜಕಾರಣದ ಬಗ್ಗೆ ಎಲ್ಲವನ್ನೂ ತಿಳಿಸುತ್ತದೆ” ಎಂಬ ಒಕ್ಕಣೆಯೊಂದಿಗೆ ಈ ತಪ್ಪು ಮಾಹಿತಿಯನ್ನು ಹರಡಲು ಸಹಾಯ ಮಾಡಿದ್ದಾರೆ.

ಬಿಜೆಪಿ ಬೆಂಬಲಿತ ಇನ್ನೂ ಅನೇಕ ನಾಯಕರು ಮತ್ತು ಸಾಮಾಜಿಕ ಜಾಲತಾಣದ ಪ್ರಭಾವಿ ವ್ಯಕ್ತಿಗಳು ಈ ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಅದನ್ನು ಮತ್ತಷ್ಟು ಪಸರಿಸಿದ್ದಾರೆ. ಈ ಪೋಸ್ಟ್‌ಗಳು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಅವುಗಳನ್ನು ಇಲ್ಲಿ ನೋಡಬಹುದು 1, 2, 3

ಫ್ಯಾಕ್ಟ್‌ಚೆಕ್‌ : ಮೇನಕಾ ಗುರುಸ್ವಾಮಿ ಅವರು ಸುಪ್ರೀಂ ಕೋರ್ಟ್ ಮುಂದೆ ಪಶ್ಚಿಮ ಬಂಗಾಳ ಸರ್ಕಾರದ ವಕೀಲರಾಗಿ ಹಾಜರಾಗಿದ್ದರು, ಆರೋಪಿಯ ಪರವಾಗಿ ಅಲ್ಲ ಎಂದು ಖ್ಯಾತ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆ ಆಲ್ಟ್ ನ್ಯೂಸ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ಅಬ್ಸರ್ವರ್ (Supreme Court Observer) ವರದಿ ಮಾಡಿರುವಂತೆ, ಅರ್‌ಜಿ ಕರ್‌ ಪ್ರಕರಣದಲ್ಲಿ  ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಮೇನಕಾ ಗುರುಸ್ವಾಮಿ ಸೇರಿದಂತೆ ಇತರರು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ಮತ್ತು ಅವರ ತಂಡವು ಕೇಂದ್ರೀಯ ತನಿಖಾ ದಳವನ್ನು (ಸಿಬಿಐ) ಪ್ರತಿನಿಧಿಸಿತ್ತು.

ದಿ ಟೆಲಿಗ್ರಾಫ್ ವರದಿಯ ಪ್ರಕಾರ, ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ತನ್ನನ್ನು ಸಮರ್ಥಿಸಿಕೊಳ್ಳಲು ಪಶ್ಚಿಮ ಬಂಗಾಳ ಸರ್ಕಾರವು ಅತಿಯಾದ ಕಾನೂನು ಯಂತ್ರವನ್ನು ಬಳಸುತ್ತಿದೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮೇನಕಾ ಗುರುಸ್ವಾಮಿ ಅವರು ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮತ್ತೊಂದೆಡೆ, ಆರೋಪಿ ಸಂಜಯ್ ರಾಯ್‌ನ ವಿಚಾರಣೆ ನಡೆದ ಸೀಲ್ದಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ, ಸೌರವ್ ಬಂಡೋಪಾಧ್ಯಾಯ, ಸುಬ್ರತಾ ಕುಮಾರ್ ಗಿರಿ, ಕವಿತಾ ಸರ್ಕಾರ್ ಮತ್ತು ಸಂಜುತಿ ಚಕ್ರವರ್ತಿ ಸೇರಿದಂತೆ ಕಾನೂನು ನೆರವು ರಕ್ಷಣಾ ಮಂಡಳಿಯ (ಎಲ್‌ಎಡಿಸಿ) ವಕೀಲರ ತಂಡವು ಆತನನ್ನು ಪ್ರತಿನಿಧಿಸಿತ್ತು. ಆರೋಪಿಯು ಯಾವುದೇ ವಕೀಲರನ್ನು ಹೊಂದಿಲ್ಲದ ಸಂದರ್ಭದಲ್ಲಿ ಎಲ್‌ಎಡಿಸಿ ಕಾರ್ಯರೂಪಕ್ಕೆ ಬರುತ್ತದೆ. ಸಂವಿಧಾನದ 39ಎ ವಿಧಿಯ ಅಡಿಯಲ್ಲಿ ಸೀಲ್ದಾ ನ್ಯಾಯಾಲಯವು ಈ ಎಲ್‌ಎಡಿಸಿ ವಕೀಲರನ್ನು ನೇಮಿಸಿತ್ತು. ಈ ವಿಧಿಯು ವಕೀಲರನ್ನು ನೇಮಿಸಿಕೊಳ್ಳಲು ಆರ್ಥಿಕ ಶಕ್ತಿಯಿಲ್ಲದವರಿಗೆ ಅಥವಾ ವಕೀಲರು ಸ್ವಯಂಪ್ರೇರಿತರಾಗಿ ಯಾರ ಪರ ವಾದಿಸಲು ಸಿದ್ಧರಿಲ್ಲದ ಅಂತಹ ಪ್ರಕರಣಗಳಲ್ಲಿ ಉಚಿತ ಕಾನೂನು ನೆರವು ನೀಡುವುದನ್ನು ಖಾತರಿಪಡಿಸುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸುಪ್ರೀಂ ಕೋರ್ಟ್ ವಕೀಲೆ ಮತ್ತು ಈಗ ತೃಣಮೂಲ ಕಾಂಗ್ರೆಸ್ ಸಂಸದೆಯಾಗಿರುವ ಮೇನಕಾ ಗುರುಸ್ವಾಮಿ ಅವರು ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯ ಪರವಾಗಿ ವಾದ ಮಂಡಿಸಿಲ್ಲ. ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಪರ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. 21 ವಕೀಲರ ತಂಡದಲ್ಲಿ ಈಕೆ ಕೂಡ ಒಬ್ಬರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...