Homeಮುಖಪುಟಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

- Advertisement -
- Advertisement -

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ…

2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು, “ನಾವು ಜನಸಂಖ್ಯಾ ಸ್ಫೋಟದ ಬಗ್ಗೆ ಚಿಂತಿಸಬೇಕಾಗಿದೆ ಮತ್ತು ಅದನ್ನು ನಿಯಂತ್ರಿಸಲು ಯೋಜನೆಗಳ ಅಗತ್ಯವಿದೆ” ಎಂದು ಹೇಳಿದ್ದರು. ನಂತರ ಮುಂದಿನ ವರ್ಷ, ಅಂದರೆ 2020ರಲ್ಲಿ, “ಜನಸಂಖ್ಯಾ ನಿಯಂತ್ರಣವು ದೇಶಭಕ್ತಿಯ ಒಂದು ರೂಪ” ಎಂದು ಹೊಸ ಘೋಷಣೆ ಹೊರಡಿಸಿದ್ದರು. ಸಣ್ಣ ಕುಟುಂಬಗಳನ್ನು ಹೊಂದಿರುವವರು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದ್ದರು.

2024ರ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳ ಮೊದಲು, ಅಂದರೆ, ಫೆಬ್ರವರಿ 1, 2024ರಂದು ಮಧ್ಯಂತರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ, “ಹೆಚ್ಚುತ್ತಿರುವ ಜನಸಂಖ್ಯಾ ಬೆಳವಣಿಗೆ ಮತ್ತು ಜನಸಂಖ್ಯಾ ಬದಲಾವಣೆಗಳು ‘ವಿಕಸಿತ ಭಾರತ’ದ ಗುರಿಗಳಿಗೆ ಸವಾಲುಗಳನ್ನು ಒಡ್ಡುತ್ತವೆ” ಎಂದು ಹೇಳಿದ್ದರು.

ಸೀತಾರಾಮನ್ ಅವರು “ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಜನಸಂಖ್ಯಾ ಬದಲಾವಣೆಗಳಿಂದ ಉಂಟಾಗುವ ಸವಾಲುಗಳ ಬಗ್ಗೆ ವ್ಯಾಪಕವಾಗಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು” ಎಂದು ತಿಳಿಸಿದ್ದರು. ಮುಂದುವರೆದು, “ಈ ಸಮಿತಿಯು ಮೇಲೆ ತಿಳಿಸಲಾದ ಸವಾಲುಗಳನ್ನು ಎದುರಿಸಲು ಶಿಫಾರಸುಗಳನ್ನು ಮಾಡುವ ಜವಾಬ್ದಾರಿಯನ್ನು ಹೊಂದಿರುತ್ತದೆ” ಎಂದಿದ್ದರು.

ಸಮಿತಿಯಲ್ಲಿ ಯಾರಿದ್ದಾರೆ ಮತ್ತು ಅವರು ಏನು ಕೆಲಸ ಮಾಡಿದ್ದಾರೆ ಎಂಬುವುದು ಸ್ಪಷ್ಟವಾಗಿಲ್ಲ.

2024ರ ಚುನಾವಣೆಗೆ ತಮ್ಮ ಪಕ್ಷದ ಪರ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಪ್ರಚಾರ ಮಾಡುವಾಗ ಮೋದಿಯವರು ‘ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂಬ ವಿಷಯವನ್ನು ಹಲವಾರು ಬಾರಿ ಚುನಾವಣಾ ವಿಷಯವನ್ನಾಗಿ ಮಾಡಲು ಪ್ರಯತ್ನಿಸಿದ್ದರು. ರಾಜಸ್ಥಾನದ ಬನ್ಸ್ವಾರಾದಲ್ಲಿ ಮಾತನಾಡುತ್ತಾ, ನಮಗಿಂತ ಮೊದಲು ಇದ್ದ ಸರ್ಕಾರ ‘ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ’ ಹೆಚ್ಚಿನ ಸಂಪನ್ಮೂಲಗಳನ್ನು ನೀಡಲು ಬಯಸಿತ್ತು ಎಂದು ಅವರು (ತಪ್ಪಾಗಿ) ಹೇಳಿದ್ದರು.

ಬಹುಶಃ ಜನಸಂಖ್ಯಾ ಸ್ಫೋಟದ ಘೋಷಣೆಗಳು ಕೇವಲ ಕೆಲವು ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನೀಡಿದ ಪರೋಕ್ಷ ಸಂಕೇತಗಳಾಗಿದ್ದಿರಬಹುದು. ಏಕೆಂದರೆ, ಗುಜರಾತ್ ಸಿಎಂ ಆಗಿದ್ದ ಕಾಲದಲ್ಲಿ ಅವರು ಗುಜರಾತಿ ಮುಸ್ಲಿಂ ಸಮುದಾಯಗಳನ್ನು ಗುರಿಯಾಗಿಸಿ ಮಾತನಾಡುತ್ತಾ ಹೇಳಿದ “ಹಮ್ ಪಾಂಚ್, ಹಮಾರೆ ಪಚ್ಚೀಸ್” (ನಾವು ಐವರು, ನಮಗೆ ಇಪ್ಪತ್ತೈದು) ಎಂಬ ಮಾತುಗಳು ದಾಖಲೆಗಳಲ್ಲಿವೆ.

ಬಿಜೆಪಿಯ ಸೈದ್ಧಾಂತಿಕ ಗುರುಗಳಾದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು “ಹಿಂದೂ ಕುಟುಂಬಗಳು ಮೂರು (ಅಥವಾ ಅದಕ್ಕಿಂತ ಹೆಚ್ಚು) ಮಕ್ಕಳನ್ನು ಹೊಂದಿರಬೇಕು” (ಹಮ್ ದೋ, ಹಮಾರೆ ತೀನ್) ಎಂದು ನೀಡಿರುವ ನಂತರದ ಹೇಳಿಕೆಗಳು, ಈ ಕಳವಳವು ಅಭಿವೃದ್ಧಿಗೆ ಸಂಬಂಧಿಸಿದ್ದಲ್ಲ ಬದಲಾಗಿ ಸಾಂಪ್ರದಾಯಿಕ ಅಥವಾ ಮತೀಯವಾದದ್ದು ಎಂಬುದನ್ನು ಸ್ಪಷ್ಟಪಡಿಸಿವೆ. ಈ ‘ಕಳವಳ’ವು ಕೇವಲ ಹಿಂದೂಯೇತರ ಕುಟುಂಬಗಳು ತಮ್ಮ ಸಂಖ್ಯೆಯನ್ನು ವೇಗವಾಗಿ ಹೆಚ್ಚಿಸಿಕೊಳ್ಳುತ್ತಿವೆ ಎಂಬ ಆರೋಪದ ಬಗ್ಗೆ ಮಾತ್ರವಾಗಿದೆ. (ಈ ಆರೋಪವು ಕೂಡ 2011ರ ಜನಗಣತಿ ದತ್ತಾಂಶ ಮತ್ತು ನಂತರದ ಅಂಕಿಅಂಶಗಳಿಂದ ಸುಳ್ಳೆಂದು ಸಾಬೀತಾಗಿದೆ.)

ಭಾರತದ ಜನಸಂಖ್ಯೆಯು ಸ್ಫೋಟಗೊಳ್ಳುತ್ತಿಲ್ಲ, ಆದರೆ ಮೋದಿ ಮತ್ತು ಇತರರು ಅದು ಸ್ಫೋಟಗೊಳ್ಳುತ್ತಿದೆ ಎಂದು ಪದೇ ಪದೇ ಹೇಳಲು ಉತ್ಸುಕರಾಗಿದ್ದಾರೆ. 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು (2019-2021) ಭಾರತದ ಫಲವತ್ತತೆ ದರ ಕುಸಿದಿದೆ ಎಂದು ತೋರಿಸುತ್ತದೆ. ಇತರ ದತ್ತಾಂಶಗಳು ಸಹ ಭಾರತದ ಜನಸಂಖ್ಯಾ ಬೆಳವಣಿಗೆಯ ದರವು 2001ರಲ್ಲಿ ಶೇ. 1.73 ರಷ್ಟಿದ್ದುದು 2018ರ ವೇಳೆಗೆ ಶೇ. 1.04ಕ್ಕೆ ಇಳಿಕೆಯಾಗಿದೆ ಎಂದು ತೋರಿಸುತ್ತವೆ.

ಮೋದಿ ಸರ್ಕಾರಕ್ಕೆ ಈ ಹಿಂದೆ ಜನಸಂಖ್ಯೆಯ ಬಗ್ಗೆ ಇದ್ದ ಅತೀವವಾದ ಚಿಂತೆ, ಈಗ ಇದ್ದಕ್ಕಿದ್ದಂತೆ ಸಂಪೂರ್ಣವಾಗಿ ಮಾಯವಾದಂತೆ ಕಾಣುತ್ತಿದೆ. ಇದು ಯಾಕೆ ಹೀಗಾಯಿತು ಎಂದು ಅರ್ಥಮಾಡಿಕೊಳ್ಳುವುದು ಕೂಡ ಕಷ್ಟವಾಗಿದೆ.

ನಾಟಕೀಯ ಬದಲಾವಣೆಯಲ್ಲಿ, ಇದೀಗ ಮೋದಿ ಸರ್ಕಾರ ಜನಸಂಖ್ಯೆ ಹೆಚ್ಚಿರುವ ರಾಜ್ಯಗಳಿಗೆ ಕೊಡುಗೆ ನೀಡಲು ಮುಂದಾಗಿದೆ. ಇದಕ್ಕಾಗಿಯೇ ಜನಸಂಖ್ಯೆ ಹೆಚ್ಚಿರುವ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಲು ಕ್ಷೇತ್ರಗಳ ಮರುವಿಂಗಡಣೆಗೆ ನಿರ್ಧರಿಸಿದೆ. ಈಗಾಗಲೇ ಕಾನೂನಾಗಿರುವ ಮಹಿಳಾ ಮೀಸಲಾತಿಯನ್ನು ಇದಕ್ಕೆ ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ. ಒಟ್ಟಾರೆಯಾಗಿ, ಜನಸಂಖ್ಯೆ ನಿಯಂತ್ರಣ ನಿಲುವಿನಿಂದ ಸ್ಥಾನಗಳ ಹೆಚ್ಚಳದತ್ತ ಸರ್ಕಾರ ಬದಲಾಗಿದೆ.

ಕೇಂದ್ರ ಸರ್ಕಾರದ ಹೊಸ ಕ್ಷೇತ್ರ ಮರುವಿಂಗಡನೆಯು ಎಲ್ಲಿ ಜನಸಂಖ್ಯೆ ಹೆಚ್ಚಿದೆಯೋ ಅಂತಹ ರಾಜ್ಯಗಳಿಗೆ ಹೆಚ್ಚಿನ ಲಾಭ ಸಿಗುವಂತಿದೆ. ಅಂದರೆ, ಜನಸಂಖ್ಯೆಯನ್ನು ನಿಯಂತ್ರಿಸದ ರಾಜ್ಯಗಳಿಗೆ ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳು ಸಿಗಲಿವೆ.

ಭಾರತದ ವಾಸ್ತವ ಮತ್ತು ಜನಸಂಖ್ಯಾ ಪರಿಸ್ಥಿತಿ ಗಮನಿಸಿದರೆ, ಜನಸಂಖ್ಯಾ ತಜ್ಞರು ಈಗಾಗಲೇ ‘ಜನಸಂಖ್ಯಾ ಸ್ಫೋಟ’ದ ಸಿದ್ಧಾಂತವನ್ನು ತಳ್ಳಿಹಾಕಿದ್ದಾರೆ. ಭಾರತದ ಒಟ್ಟು ಫಲವತ್ತತೆ ದರವು ಅತ್ಯಂತ ವೇಗವಾಗಿ ಮತ್ತು ಗಮನಾರ್ಹವಾಗಿ ಕುಸಿದಿದೆ ಎಂದು ಅವರು ಹೇಳಿದ್ದಾರೆ. ಹಲವು ಪ್ರದೇಶಗಳಲ್ಲಿ ಈ ದರವು 2.1ಕ್ಕಿಂತಲೂ ಕೆಳಗಿದೆ (ಜನಸಂಖ್ಯೆಯನ್ನು ಸ್ಥಿರವಾಗಿಡಲು ಅಥವಾ ಸಮತೋಲನ ಕಾಯ್ದುಕೊಳ್ಳಲು 2.1 ದರವು ಅತ್ಯಗತ್ಯ).

ಪಾಪ್ಯುಲೇಷನ್ ಫೌಂಡೇಶನ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕಿ ಪೂನಂ ಮುತ್ರೇಜಾ ಅವರು, “ದೇಶದಲ್ಲಿ ಜನಸಂಖ್ಯಾ ಸ್ಫೋಟವಾಗುತ್ತಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಭಾರತದಲ್ಲಿ ಈಗ ಜನಸಂಖ್ಯಾ ಸ್ಥಿತ್ಯಂತರ ನಡೆಯುತ್ತಿದೆ” ಎಂದು ಹೇಳಿದ್ದಾರೆ. ಮುಂದುವರಿದು “ಭಾರತದ ಜನಗಣತಿ ದತ್ತಾಂಶವು 1991-2011ರ ಅವಧಿಯಲ್ಲಿ ಶೇ. 21.5ರಷ್ಟಿದ್ದ ಜನಸಂಖ್ಯಾ ಬೆಳವಣಿಗೆಯ ದರವು, 2001-2011ರ ಅವಧಿಯಲ್ಲಿ ಶೇ. 17.7ಕ್ಕೆ ಇಳಿಕೆಯಾಗಿದೆ ಎಂಬುದನ್ನು ಖಚಿತಪಡಿಸುತ್ತದೆ. ಭಾರತದ ಒಟ್ಟು ಫಲವತ್ತತೆ ದರವು ಸಹ 2000ದಲ್ಲಿ 3.2ರಷ್ಟಿದ್ದುದು, 2018ರ ಸ್ಯಾಂಪಲ್ ರಿಜಿಸ್ಟ್ರೇಶನ್ ಸಿಸ್ಟಮ್ ಪ್ರಕಾರ 2.2ಕ್ಕೆ ಗಣನೀಯವಾಗಿ ಇಳಿದಿದೆ” ಎಂದು ತಿಳಿಸಿದ್ದಾರೆ.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...