Homeಮುಖಪುಟದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

- Advertisement -
- Advertisement -

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಪಶ್ಚಿಮ ಏಷ್ಯಾ ಸಂರ್ಘದ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ನಿಭಾಯಿಸಲು ಸಾಧ್ಯವಾದಲ್ಲೆಲ್ಲಾ ಮನೆಯಿಂದಲೇ ಕೆಲಸ ಮಾಡಿ, ಸಭೆಗಳನ್ನು ವರ್ಚುವಲ್ ಆಗಿ ಮಾಡಿ, ಒಂದು ವರ್ಷದವರೆಗೆ ವಿದೇಶಿ ಪ್ರಯಾಣ ಮತ್ತು ಚಿನ್ನ ಖರೀದಿಯನ್ನು ಮುಂದೂಡಿ ಮತ್ತು ವಿದೇಶಿ ವಿನಿಮಯವನ್ನು ಸಂರಕ್ಷಿಸಲು ದೇಶೀಯ ಉತ್ಪನ್ನಗಳ ಮೇಲೆ ಹೆಚ್ಚಿನ ಅವಲಂಬನೆ ಮಾಡಿ ಎಂಬ ಉಚಿತ ಸಲಹೆಗಳನ್ನು ಪ್ರಧಾನಿ ದೇಶದ ಜನರಿಗೆ ನೀಡಿದ್ದಾರೆ.

ಆದರೆ, ಸ್ವತಃ ಪ್ರಧಾನಿಯವರ ಮೇ 10 ಮತ್ತು 11ರ ಪ್ರಯಾಣ, ಕಾರ್ಯಕ್ರಮಗಳ ವೇಳಾಪಟ್ಟಿ ನೋಡಿದರೆ, ಅವರು ಹೇಳಿರುವುದಕ್ಕೂ ಮಾಡಿರುವುದಕ್ಕೂ ಅಜಗಜಾಂತರ ವ್ಯತ್ಯಾಸ ಕಾಣುತ್ತದೆ. ಪ್ರಧಾನಿ ದೇಶದ ಜನರಿಗೆ ಸಲಹೆ ನೀಡಿ, ಅವರು ಅದನ್ನು ಪಾಲಿಸುವುದು ಬೇಡವೇ ಎಂಬ ಪ್ರಶ್ನೆ ಮೂಡುತ್ತದೆ.

ದೇಶದ ಜನರಿಗೆ ಸಲಹೆ ನೀಡಿದ ಮೇ 10ರಂದು ಮೋದಿಯವರು ಬೆಂಗಳೂರಿನಿಂದಲೇ ತಮ್ಮ ದಿನವನ್ನು ಆರಂಭಿಸಿದ್ದರು. ‘ಆರ್ಟ್ ಆಫ್ ಲಿವಿಂಗ್’ ಸಂಸ್ಥೆಯ 45ನೇ ವರ್ಷಾಚರಣೆಯೂ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಆನಂತರ ಅವರು ಹೈದರಾಬಾದ್‌ಗೆ ಪ್ರಯಾಣ ಬೆಳೆಸಿ, ಮಧ್ಯಾಹ್ನ ಸುಮಾರು 2:20ಕ್ಕೆ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ತಲುಪಿದರು. ಅಲ್ಲಿಂದ ಸ್ವಲ್ಪ ಸಮಯದ ನಂತರ ಅವರು ರಸ್ತೆಗಳು, ರೈಲ್ವೆ, ಪೆಟ್ರೋಲಿಯಂ ಟರ್ಮಿನಲ್‌ಗಳು, ಜವಳಿ ಮತ್ತು ಕೈಗಾರಿಕಾ ವಲಯಗಳಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭಗಳಲ್ಲಿ ಪಾಲ್ಗೊಂಡರು. ಆಡಳಿತಾತ್ಮಕವಾಗಿ ಇವುಗಳಲ್ಲಿ ಯಾವುದೇ ಕಾರ್ಯಕ್ರಮಗಳಿಗೂ ಪ್ರಧಾನಿಯವರ ವೈಯಕ್ತಿಕ ಉಪಸ್ಥಿತಿಯ ಅಗತ್ಯ ಇರಲಿಲ್ಲ. ಇವುಗಳನ್ನು ನವದೆಹಲಿಯಲ್ಲಿರುವ ಅವರ ಕಚೇರಿಯಿಂದ ವರ್ಚುವಲ್ ಮೂಲಕ ನಿರ್ವಹಿಸಬಹುದಿತ್ತು.

ನಂತರ ಅವರು ಹೆಲಿಕಾಪ್ಟರ್ ಮೂಲಕ ಹೈಟೆಕ್ ಸಿಟಿಗೆ ಪ್ರಯಾಣಿಸಿ, ರಾಜ್ಯಸಭಾ ಸದಸ್ಯ ಮತ್ತು ಹೆಟೆರೋ ಗ್ರೂಪ್ ಸಂಸ್ಥಾಪಕ ಬಂಡಿ ಪಾರ್ಥಸಾರಥಿ ರೆಡ್ಡಿ ಅವರು ನಿರ್ಮಿಸಿರುವ ಬೃಹತ್ ಖಾಸಗಿ ಲಾಭರಹಿತ ಮಲ್ಟಿ-ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯಾದ ‘ಸಿಂಧು ಆಸ್ಪತ್ರೆ’ಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೋದಿ ಅವರು ಸಂಸ್ಥಾಪಕರ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು.

ಸಂಜೆ ವೇಳೆಗೆ ಮೋದಿ ಅವರು ಸಿಕಂದರಾಬಾದ್‌ನ ಪೆರೇಡ್ ಮೈದಾನದಲ್ಲಿ ನಡೆದ ಬಿಜೆಪಿಯ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಅಲ್ಲಿ ನೆರೆದಿದ್ದ ಬೃಹತ್ ಜನಸ್ತೋಮಕ್ಕೆ ಮಿತವ್ಯಯದ ಸಂದೇಶವನ್ನು ನೀಡಿದರು. ನಂತರ ಸುಮಾರು ರಾತ್ರಿ 7 ಗಂಟೆಗೆ ಹೈದರಾಬಾದ್‌ನಿಂದ ಗುಜರಾತ್‌ನ ಜಾಮ್‌ನಗರಕ್ಕೆ ಪ್ರಯಾಣ ಬೆಳೆಸಿದರು. ಅಲ್ಲೂ ಸಹ ಅವರು ಮತ್ತೊಂದು ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಮೋದಿಯವರ ಮೇ 10ರ ದಿನಚರಿಯು ಹಲವಾರು ವಿಮಾನ ಪ್ರಯಾಣಗಳು, ಒಂದು ಪ್ರಮುಖ ನಗರದ ಒಳಗೆ ಹೆಲಿಕಾಪ್ಟರ್ ಸಂಚಾರ, ಉನ್ನತ ಮಟ್ಟದ ಬಿಗಿ ಭದ್ರತಾ ವ್ಯವಸ್ಥೆಗಳೊಂದಿಗೆ ದೊಡ್ಡ ಮಟ್ಟದ ರಸ್ತೆ ಸಂಚಾರ ಮತ್ತು ಪಕ್ಷದ ವತಿಯಿಂದ ದೊಡ್ಡ ಮಟ್ಟದ ಜನಸಮೀಕರಣದ ಅಗತ್ಯವಿದ್ದ ಬೃಹತ್ ಬಹಿರಂಗ ಸಭೆಯನ್ನು ಒಳಗೊಂಡಿತ್ತು. ಈ ಎಲ್ಲಾ ಚಟುವಟಿಕೆಗಳು ಅವರು ಸಾಮಾನ್ಯ ನಾಗರಿಕರಿಗೆ ಬೋಧಿಸಿದ ಇಂಧನ ಉಳಿತಾಯ ಮತ್ತು ಸಂಚಾರ ಕಡಿತದ ಮಿತವ್ಯಯದ ತತ್ವಗಳಿಗೆ ವ್ಯತಿರಿಕ್ತವಾಗಿದ್ದವು.

ಇತರರಿಗೆ ಮಿತವ್ಯಯವನ್ನು ಪಾಲಿಸಲು ಸೂಚಿಸಿದ ಮರುದಿನವೇ, ಅಂದರೆ ಮೇ 11ರ ಸೋಮವಾರದಂದು ಮೋದಿ ಅವರು ತಮ್ಮ ದುಬಾರಿ ಮತ್ತು ಬಿಡುವಿಲ್ಲದ ವಿಮಾನ ಪ್ರಯಾಣದ ವೇಳಾಪಟ್ಟಿಯನ್ನು ಮುಂದುವರಿಸಿದ್ದಾರೆ.

ಬೆಳಿಗ್ಗೆಯೇ ಗುಜರಾತ್‌ನ ಜಾಮ್‌ನಗರದಿಂದ ಹೊರಟ ಅವರು, ಸೋಮನಾಥ ದೇವಾಲಯದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಅಲ್ಲಿ ಅವರು ದರ್ಶನ, ಪೂಜೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೆ, ಗಿರ್ ಸೋಮನಾಥ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿದ್ದು, ನಂತರ ಸಂಜೆ 6 ಗಂಟೆ ಸುಮಾರಿಗೆ ವಡೋದರಾದಲ್ಲಿ ಸರ್ದಾರಧಾಮ ಹಾಸ್ಟೆಲ್ ಉದ್ಘಾಟಿಸಿ ಸ್ಥಳೀಯ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೇ 12ರ ಮಂಗಳವಾರದಂದು, ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮೋದಿ ಅವರು ಅಸ್ಸಾಂನ ಗುವಾಹಟಿಗೆ ಹಾರಲಿದ್ದಾರೆ. ಈ ಸಮಾರಂಭದ ಅದ್ದೂರಿತನದ ಕುರಿತಾದ ವರದಿಗಳು ಮೋದಿ ಅವರ ಮಿತವ್ಯಯದ ಸಲಹೆಯನ್ನು ಅವರದ್ದೇ ಪಕ್ಷದವರು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಅಂಶವನ್ನು ಎತ್ತಿ ತೋರಿಸುತ್ತಿವೆ.

ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಒಂದು ಲಕ್ಷ ಜನರು ಈ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಅಸ್ಸಾಂ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಘೋಷಿಸಿದ್ದಾರೆ. ಅಲ್ಲದೆ ಸೈಕಿಯಾ ಅವರು ಈ ಸಮಾರಂಭವು ಒಂದು “ಅದ್ಭುತ ಮತ್ತು ಭವ್ಯ ಸಮಾರಂಭ” (spectacular event) ಆಗಲಿದೆ ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ, ಮೋದಿಯವರ ಜೊತೆಗೆ ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ವಿಮಾನದ ಮೂಲಕ ಇಲ್ಲಿಗೆ ಆಗಮಿಸುವ ನಿರೀಕ್ಷೆಯಿದೆ.

ಇದು ಹೆಚ್ಚುವರಿ ವಿಮಾನ ಪ್ರಯಾಣ, ರಸ್ತೆ ಸಂಚಾರದ ಭದ್ರತಾ ವ್ಯೂಹ, ಬಿಗಿ ಭದ್ರತಾ ವ್ಯವಸ್ಥೆಗಳು ಮತ್ತು ಬೃಹತ್ ಸಾರ್ವಜನಿಕ ಸಮೀಕರಣಗಳನ್ನು ಒಳಗೊಂಡಿರುತ್ತದೆ. ಈ ಎಲ್ಲಾ ಚಟುವಟಿಕೆಗಳು ಇಂಧನ ಬಳಕೆಯನ್ನು ಕಡಿಮೆ ಮಾಡಲು, ಅನಗತ್ಯ ಪ್ರಯಾಣವನ್ನು ತಪ್ಪಿಸಲು ಮತ್ತು ವರ್ಚುವಲ್ (ದೃಶ್ಯ ಮಾಧ್ಯಮ) ಮೂಲಕ ಸಂವಹನ ನಡೆಸಲು ಅವರು ಹಿಂದಿನ ದಿನವಷ್ಟೇ ನಾಗರಿಕರಿಗೆ ನೀಡಿದ್ದ ಕರೆಗೆ ತದ್ವಿರುದ್ಧವಾಗಿವೆ.

ಮಧ್ಯಮ ವರ್ಗದ ಕುಟುಂಬಗಳು ವಿದೇಶಿ ಪ್ರವಾಸಗಳನ್ನು ಕೈಬಿಡಬೇಕು, ಮದುವೆಯ ಚಿನ್ನದ ಖರೀದಿಯನ್ನು ಮುಂದೂಡಬೇಕು, ಖಾಸಗಿ ವಾಹನಗಳ ಬಳಕೆಯನ್ನು ಕಡಿಮೆ ಮಾಡಬೇಕು ಮತ್ತು ಮನೆಯಿಂದಲೇ ಕೆಲಸ ಮಾಡುವ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಮೋದಿ ಕೇಳಿಕೊಂಡಿದ್ದರು. ಆದರೆ, ಅವರದ್ದೇ ಆದ ವೇಳಾಪಟ್ಟಿಯು ವ್ಯಾಪಕವಾದ ವಿಮಾನ ಮತ್ತು ಹೆಲಿಕಾಪ್ಟರ್ ಪ್ರಯಾಣವನ್ನು ಅವಲಂಬಿಸಿದೆ ಮತ್ತು ಅಪಾರ ಜನಸ್ತೋಮವನ್ನು ಒಂದೆಡೆ ಸೇರಿಸುವಂತಿದೆ.

ಮೋದಿಯವರ ವೈಯಕ್ತಿಕ ಮತ್ತು ಅಧಿಕೃತ ಜೀವನಶೈಲಿಯು ಸುದೀರ್ಘಕಾಲದಿಂದಲೂ ವ್ಯಾಪಕವಾದ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಗಳು, ಬೃಹತ್ ವಾಹನಗಳ ಬೆಂಗಾವಲು ಪಡೆ ಮತ್ತು ಅತ್ಯಂತ ಯೋಜಿತವಾಗಿ ಆಯೋಜಿಸಲಾದ ಸಾರ್ವಜನಿಕ ಕಾರ್ಯಕ್ರಮಗಳನ್ನು ಒಳಗೊಂಡಿದೆ. ಭದ್ರತೆ ಮತ್ತು ಶಿಷ್ಟಾಚಾರಗಳಿಗೆ ಸಂಪನ್ಮೂಲಗಳ ಅಗತ್ಯವಿರುವುದು ನಿಜವಾದರೂ, ಸಾರ್ವಜನಿಕ ಮತ್ತು ಪಕ್ಷದ ಅಪಾರ ಸಂಪನ್ಮೂಲಗಳಿಂದ ನಿರ್ಮಿಸಲಾದ ವೇದಿಕೆಯ ಮೇಲೆ ನಿಂತು ನಾಗರಿಕರಿಗೆ ಮಿತವ್ಯಯದ ಬಗ್ಗೆ ಬೋಧನೆ ಮಾಡುವುದು ಸಾರ್ವಜನಿಕರ ತೀವ್ರ ವಿಮರ್ಶೆಗೆ ದಾರಿಮಾಡಿಕೊಡುತ್ತದೆ.

ಕಳೆದ ಒಂದು ವಾರದಲ್ಲಿ ಮಾತ್ರ ಮೋದಿಯವರು ಐದು ರೋಡ್ ಶೋಗಳನ್ನು ನಡೆಸಿದ್ದಾರೆ ಮತ್ತು ಅಪಾರ ವೆಚ್ಚ ಹಾಗೂ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ವಿವಿಧ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಮೇ 7ರಂದು, ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸೇರಿದಂತೆ ಬಿಹಾರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅವರು ಪಾಲ್ಗೊಂಡಿದ್ದರು. ಅದೇ ದಿನ ಅವರು ಪಾಟ್ನಾದಲ್ಲಿ ರೋಡ್ ಶೋ ಕೂಡ ನಡೆಸಿದ್ದರು. ಇದರ ಬೆನ್ನಲ್ಲೇ, ಮೇ 9 ರಂದು ಕೋಲ್ಕತ್ತಾಗೆ ಪ್ರಯಾಣಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಅವರ ಸಂಪುಟದ ಇತರ ಐವರು ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದರಲ್ಲದೆ, ಅಲ್ಲೂ ಒಂದು ರೋಡ್ ಶೋ ನಡೆಸಿದರು. ಅಂದಿನಿಂದ ಅವರು ಹೈದರಾಬಾದ್, ಜಾಮ್‌ನಗರ ಮತ್ತು ಸೋಮನಾಥದಲ್ಲಿ ಒಟ್ಟು ಮೂರು ರೋಡ್ ಶೋಗಳನ್ನು ನಡೆಸಿದ್ದಾರೆ.

ಬಾಹ್ಯ ಆಘಾತಗಳಿಂದ ಉಲ್ಬಣಗೊಂಡಿರುವ ಆರ್ಥಿಕ ದುರ್ಬಲತೆಯ ಹಂತವನ್ನು ಭಾರತವು ಹಾದುಹೋಗುತ್ತಿರುವಾಗ, ನಾಯಕತ್ವದ ನಡವಳಿಕೆ ಮತ್ತು ಅವರು ಜನರಿಗೆ ನೀಡುವ ಸಲಹೆಗಳ ನಡುವಿನ ಸಮತೋಲನವು ವಿಶ್ವಾಸಾರ್ಹತೆಯ ದೃಷ್ಟಿಯಿಂದ ಬಹಳ ಮುಖ್ಯವಾಗುತ್ತದೆ. ಮೇ 10ರಂದು ಸಾಮಾನ್ಯ ನಾಗರಿಕರು ತಮ್ಮ ಖರ್ಚು-ವೆಚ್ಚಗಳನ್ನು ಕಡಿತಗೊಳಿಸಬೇಕು ಎಂಬ ಮೋದಿಯವರ ಸಂದೇಶ ಸ್ಪಷ್ಟವಾಗಿತ್ತು. ಆದರೆ, ಅಂದಿನ ಅವರ ದಿನಚರಿ ಮತ್ತು ಮೇ 11ರಂದು ಗುಜರಾತ್‌ನಾದ್ಯಂತ ನಡೆದ ದೇವಸ್ಥಾನದ ಕಾರ್ಯಕ್ರಮಗಳು, ರೋಡ್ ಶೋಗಳು ಹಾಗೂ ಉದ್ಘಾಟನಾ ಸಮಾರಂಭಗಳನ್ನು ಗಮನಿಸಿದರೆ, ಅವರ ಮಾತು ಮತ್ತು ಕೃತಿಯ ನಡುವಿನ ವ್ಯತ್ಯಾಸವು ಅತ್ಯಂತ ಎದ್ದುಕಾಣುವಂತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...