Homeಮುಖಪುಟಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು ನೀಡಿದೆ.

ಕೋಲ್ಕತ್ತಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಘೋಷಿಸಲಾದ ವಿಶಾಲವಾದ ಕಾನೂನು ಮತ್ತು ಸುವ್ಯವಸ್ಥೆ ಕೂಲಂಕುಷ ಪರೀಕ್ಷೆಯ ಭಾಗವಾಗಿ ಸಭೆ ನಡೆಸಲಾಗಿದೆ.

ಲೌಡ್‌ಸ್ಪೀಕರ್‌ಗಳಿಂದ ಬರುವ ಶಬ್ದವು ಧಾರ್ಮಿಕ ಆವರಣಗಳನ್ನು ಮೀರಿ ಆಚೆ ಬರಬಾರದು; ವಿಶೇಷ ಸಂದರ್ಭಗಳಲ್ಲಿ ಹೊರತುಪಡಿಸಿ, ಸಾರ್ವಜನಿಕ ಅನಾನುಕೂಲತೆಯನ್ನು ತಪ್ಪಿಸುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಲೌಡ್‌ಸ್ಪೀಕರ್‌ಗಳಿಂದ ಬರುವ ಶಬ್ದವು ಧಾರ್ಮಿಕ ಆವರಣಗಳಲ್ಲಿಯೇ ಇರಬೇಕು, ಕಾನೂನುಬದ್ಧ ಶಬ್ದ ಮಿತಿಗಳನ್ನು ಅನುಸರಿಸಬೇಕು” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದರು.

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅಧ್ಯಕ್ಷತೆಯಲ್ಲಿ, ಅವರು ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಪ್ರಮುಖ ಸಭೆಯಲ್ಲಿ ನಿರ್ದೇಶನಗಳನ್ನು ನೀಡಲಾಯಿತು. ಸಭೆ ನಬನ್ನಾದಲ್ಲಿ ನಡೆದಿದ್ದು, ಡಿಜಿಪಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಅಧಿಕಾರಿಗಳ ಪ್ರಕಾರ, ಮುಖ್ಯಮಂತ್ರಿಗಳು ಹಲವು ಇಲಾಖೆಗಳಿಗೆ ಸುಮಾರು ಒಂದು ಡಜನ್ ಸೂಚನೆಗಳನ್ನು ನೀಡಿದರು. ಅಕ್ರಮ ಕಲ್ಲಿದ್ದಲು ಗಣಿಗಾರಿಕೆ, ಮರಳು ಕಳ್ಳಸಾಗಣೆ, ಜಾನುವಾರು ಸಾಗಣೆ, ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಚುನಾವಣಾ ನಂತರದ ಹಿಂಸಾಚಾರ ಪ್ರಕರಣಗಳ ವಿರುದ್ಧ ಕಠಿಣ ಕ್ರಮಗಳು ಇದರಲ್ಲಿ ಸೇರಿವೆ.

“ಎಲ್ಲಾ ಪ್ರಕರಣಗಳಲ್ಲಿ ಕಾನೂನಿನ ಕಟ್ಟುನಿಟ್ಟಿನ ಜಾರಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪಕ್ಷಪಾತವಿಲ್ಲದೆ ವರ್ತಿಸಲು ಮುಖ್ಯಮಂತ್ರಿ ನಮಗೆ ಹೇಳಿದರು” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರಸ್ತೆಬದಿಯ ಪ್ರಾರ್ಥನೆ ಮತ್ತು ಧ್ವನಿವರ್ಧಕಗಳ ಬಳಕೆಗೆ ನಿಷೇಧ

ಧಾರ್ಮಿಕ ಚಟುವಟಿಕೆಗಳಿಗಾಗಿ ರಸ್ತೆಗಳನ್ನು ನಿರ್ಬಂಧಿಸುವುದು, ಸಂಚಾರಕ್ಕೆ ಅಡ್ಡಿಯಾಗುವುದನ್ನು ತಡೆಯುವ ಪ್ರಮುಖ ನಿರ್ದೇಶನಗಳಾಗಿವೆ. ನಿಗದಿಪಡಿಸಿದ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆಗಳನ್ನು ನಡೆಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

“ನಮಾಜ್ ಅಥವಾ ಯಾವುದೇ ಧಾರ್ಮಿಕ ಸಭೆಗಾಗಿ ರಸ್ತೆಗಳನ್ನು ನಿರ್ಬಂಧಿಸಬಾರದು. ಮಸೀದಿಗಳು ಅಥವಾ ಗೊತ್ತುಪಡಿಸಿದ ಸ್ಥಳಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಮುಕ್ತರಾಗಿದ್ದಾರೆ. ಆದರೆ, ಸಾರ್ವಜನಿಕ ರಸ್ತೆಗಳನ್ನು ಅದಕ್ಕೆ ಬಳಸಲಾಗುವುದಿಲ್ಲ” ಎಂದು ಬಿಜೆಪಿ ನಾಯಕ ಅರ್ಜುನ್ ಸಿಂಗ್ ಹೇಳಿದರು.

ಹಿಂದೆ ದೊಡ್ಡ ಸಭೆಗಳಿಗೆ ಸಾಕಷಿಯಾಗುತ್ತಿದ್ದ ರೆಡ್ ರೋಡ್ ಸೇರಿದಂತೆ ಕೋಲ್ಕತ್ತಾದ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ಪ್ರಾರ್ಥನೆಗಳಿಗೆ ನಿರ್ಬಂಧಗಳು ಅನ್ವಯಿಸುತ್ತವೆ ಎಂದು ಅವರು ಹೇಳಿದರು.

ಕೆಲವು ಧಾರ್ಮಿಕ ವ್ಯಕ್ತಿಗಳು ಸರ್ಕಾರದ ಮಾರ್ಗಸೂಚಿಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ನಿಯಮಗಳನ್ನು ಎಲ್ಲಾ ಸಮುದಾಯಗಳಿಗೆ ನ್ಯಾಯಯುತವಾಗಿ ಅನ್ವಯಿಸಿದರೆ ನಾವೂ ಕೂಡ ಅನುಸರಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

“ಅಂತಹ ಕ್ರಮಗಳನ್ನು ತೆಗೆದುಕೊಂಡರೆ, ಕಾನೂನು ಪಾಲಿಸುವ ನಾಗರಿಕರಾಗಿ ನಾವು ಸ್ವಾಗತಿಸುತ್ತೇವೆ. ಯಾವುದೇ ಧಾರ್ಮಿಕ ಕಾರ್ಯಕ್ರಮವು ರಸ್ತೆಗಳಿಗೆ ಅಡ್ಡಿಯಾಗಬಾರದು. ಕಾನೂನು ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು” ಎಂದು ನಖೋಡಾ ಮಸೀದಿಯ ಟ್ರಸ್ಟಿ ನಾಸಿರ್ ಇಬ್ರಾಹಿಂ ಹೇಳಿದರು.

ಸರ್ಬ ಭಾರತೀಯ ಪ್ರಾಚ್ಯ ಅಕಾಡೆಮಿಯ ಪ್ರಾಂಶುಪಾಲ ಜಯಂತ್ ಕುಶಾರಿ ಕೂಡ ಈ ಕ್ರಮವನ್ನು ಬೆಂಬಲಿಸಿದರು. ಧಾರ್ಮಿಕ ಆಚರಣೆಗಳು ನಾಗರಿಕ ಜವಾಬ್ದಾರಿಯೊಂದಿಗೆ ಹೊಂದಿಕೆಯಾಗಬೇಕು ಎಂದು ಹೇಳಿದರು.

“ಪ್ರಾರ್ಥನೆಯು ವೈಯಕ್ತಿಕ ಮತ್ತು ಆಧ್ಯಾತ್ಮಿಕ ವಿಷಯವಾಗಿದೆ. ಯಾವುದೇ ಧರ್ಮವು ಧ್ವನಿವರ್ಧಕಗಳನ್ನು ಅತ್ಯಗತ್ಯವೆಂದು ಕಡ್ಡಾಯಗೊಳಿಸುವುದಿಲ್ಲ. ನಾಗರಿಕ ಜವಾಬ್ದಾರಿ ಮತ್ತು ಸಾರ್ವಜನಿಕ ಅನುಕೂಲವು ಮೊದಲು ಬರಬೇಕು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...