Homeಮುಖಪುಟರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

- Advertisement -
- Advertisement -

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ ಸಿವಿಲ್ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಅಮೆರಿಕದ ಮಾರುಕಟ್ಟೆ ನಿಯಂತ್ರಣ ಸಂಸ್ಥೆಯಾದ ಯುಎಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ದಾಖಲಿಸಿದ್ದ ಸಿವಿಲ್ ವಂಚನೆ ಮೊಕದ್ದಮೆಯನ್ನು ಕೊನೆಗೊಳಿಸಲು ಅದಾನಿ ಗ್ರೂಪ್ ಜಂಟಿ ಒಪ್ಪಂದಕ್ಕೆ ಬಂದಿದೆ. ನ್ಯಾಯಾಲಯದ ಅಂತಿಮ ಅನುಮೋದನೆಗೆ ಒಳಪಟ್ಟು ಈ ಇತ್ಯರ್ಥ ಪ್ರಕ್ರಿಯೆ ನಡೆಯಲಿದೆ ಎಂದು ವರದಿಗಳು ಹೇಳಿವೆ.

ಒಪ್ಪಂದದ ಪ್ರಕಾರ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಜಂಟಿಯಾಗಿ 18 ಮಿಲಿಯನ್ ಡಾಲರ್ ದಂಡ ಪಾವತಿಸಲಿದ್ದಾರೆ. ಆದರೆ, ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಇಬ್ಬರೂ ಸ್ಪಷ್ಟಪಡಿಸಿದ್ದಾರೆ.

ಅದಾನಿ ಪರ ವಕೀಲರು ಈ ಪ್ರಕರಣಕ್ಕೆ ಅಮೆರಿಕದ ನ್ಯಾಯವ್ಯಾಪ್ತಿ (Jurisdiction) ಇಲ್ಲ ಮತ್ತು ಯಾವುದೇ ಸೂಕ್ತ ಸಾಕ್ಷ್ಯಗಳಿಲ್ಲ ಎಂದು ವಾದಿಸಿದ್ದರು. ಇದರ ಬೆನ್ನಲ್ಲೇ, ಯುಎಸ್ ನ್ಯಾಯಾಂಗ ಇಲಾಖೆಯು ಕ್ರಿಮಿನಲ್ ವಂಚನೆಯ ಆರೋಪಗಳನ್ನು ಕೈಬಿಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ನವೆಂಬರ್ 2024ರಲ್ಲಿ, ನ್ಯೂಯಾರ್ಕ್‌ನ ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯದಲ್ಲಿ ಅದಾನಿ ಮತ್ತು ಇತರರ ವಿರುದ್ಧ ದೋಷಾರೋಪಣೆ ಸಲ್ಲಿಕೆಯಾಗಿತ್ತು. ಅದಾನಿ ಗ್ರೀನ್ ಎನರ್ಜಿ ಸಂಸ್ಥೆಗೆ ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್‌ಗೂ ಅಧಿಕ ಲಂಚ ನೀಡಿದ ಆರೋಪ ಮತ್ತು ಅಮೆರಿಕದ ಹೂಡಿಕೆದಾರರನ್ನು ದಾರಿ ತಪ್ಪಿಸಿ 3 ಶತಕೋಟಿ ಡಾಲರ್‌ಗೂ ಹೆಚ್ಚು ಹಣ ಸಂಗ್ರಹಿಸಿದ ಆರೋಪಗಳನ್ನು ಇವರ ಮೇಲೆ ಹೊರಿಸಲಾಗಿತ್ತು.

ಪ್ರಕರಣದ ಹಿನ್ನೋಟ

ಅಕ್ಟೋಬರ್ 24, 2024ರಲ್ಲಿ ನ್ಯೂಯಾರ್ಕ್‌ನ ಈಸ್ಟರ್ನ್ ಡಿಸ್ಟ್ರಿಕ್ಟ್‌ನ ಯುಎಸ್ ಫೆಡರಲ್ ಪ್ರಾಸಿಕ್ಯೂಟರ್‌ಗಳು ಗೌತಮ್ ಅದಾನಿ ಮತ್ತು ಇತರರ ವಿರುದ್ಧ ರಹಸ್ಯವಾಗಿ ದೋಷಾರೋಪಣೆಯನ್ನು ಸಿದ್ಧಪಡಿಸಿದ್ದರು.

ನವೆಂಬರ್ 20, 2024ರಂದು ಅಮೆರಿಕದ ನ್ಯಾಯಾಂಗ ಇಲಾಖೆ (ಡಿಒಜಿ) ಮತ್ತು ಮಾರುಕಟ್ಟೆ ನಿಯಂತ್ರಣ ಸಂಸ್ಥೆ (ಎಸ್‌ಇಸಿ) ಈ ಆರೋಪಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದವು. ಅದಾನಿ ಗ್ರೀನ್ ಎನರ್ಜಿ ಸಂಸ್ಥೆಗೆ ಸೌರಶಕ್ತಿ ಗುತ್ತಿಗೆ ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್ ಲಂಚ ನೀಡಿದ ಮತ್ತು ಅಮೆರಿಕದ ಹೂಡಿಕೆದಾರರಿಂದ 3 ಬಿಲಿಯನ್ ಡಾಲರ್ ಸಾಲ ಸಂಗ್ರಹಿಸಿ ವಂಚಿಸಿದ ಆರೋಪ ಅದಾನಿ ಮತ್ತು ಇತರರ ವಿರುದ್ದ ಹೊರಿಸಲಾಗಿತ್ತು.

ನವೆಂಬರ್ 21, 2024ರಂದು ನ್ಯೂಯಾರ್ಕ್ ಜಿಲ್ಲಾ ನ್ಯಾಯಾಲಯವು ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ 21 ದಿನಗಳಲ್ಲಿ ಪ್ರತಿಕ್ರಿಯಿಸುವಂತೆ ಅಹಮದಾಬಾದ್ ವಿಳಾಸಕ್ಕೆ ಸಮನ್ಸ್ ಜಾರಿ ಮಾಡಿತ್ತು.

ಡಿಸೆಂಬರ್ 12, 2024ರಂದು ನ್ಯಾಯಾಲಯವು ಗೊಂದಲಗಳನ್ನು ತಪ್ಪಿಸಲು ಅದಾನಿ ವಿರುದ್ಧದ ಕ್ರಿಮಿನಲ್ ಮತ್ತು ಸಿವಿಲ್ (ಎಸ್‌ಇಸಿ) ಎರಡೂ ಪ್ರಕರಣಗಳನ್ನು ಒಬ್ಬರೇ ನ್ಯಾಯಾಧೀಶರ ಅಡಿಯಲ್ಲಿ ಸಂಯೋಜಿಸಿತ್ತು.

ಆರೋಪಿಗಳು ಭಾರತದಲ್ಲಿದ್ದ ಕಾರಣ ಎಸ್‌ಇಸಿ ಹ್ಯಾಂಗ್ ಕನ್ವೆನ್ಷನ್ (Hague Convention) ಅಡಿಯಲ್ಲಿ ಭಾರತ ಸರ್ಕಾರದ ಮೂಲಕ ಸಮನ್ಸ್ ತಲುಪಿಸಲು ಪ್ರಯತ್ನಿಸಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಈ ಪ್ರಕ್ರಿಯೆ ಸುಮಾರು ಒಂದು ವರ್ಷ ಕಾಲ ಸ್ಥಗಿತಗೊಂಡಿತ್ತು.

ಭಾರತ ಸರ್ಕಾರದಿಂದ ನಿರೀಕ್ಷಿತ ಸಹಕಾರ ಸಿಗದ ಹಿನ್ನೆಲೆಯಲ್ಲಿ, ರಾಜತಾಂತ್ರಿಕ ಮಾರ್ಗಗಳನ್ನು ಬೈಪಾಸ್ ಮಾಡಿ, ಅದಾನಿ ಅವರ ಯುಎಸ್ ವಕೀಲರು ಮತ್ತು ಇಮೇಲ್ ಮೂಲಕವೇ ಸಮನ್ಸ್ ಜಾರಿ ಮಾಡಲು ಅನುಮತಿ ನೀಡುವಂತೆ ಜನವರಿ 21, 2026ರಂದು ಎಸ್‌ಇಸಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.

ಏಪ್ರಿಲ್ 7, 2026ರಂದು ಅದಾನಿ ಅವರ ಕಾನೂನು ತಂಡವು ನ್ಯಾಯಾಲಯಕ್ಕೆ ಪೂರ್ವ-ಮನವಿ ಪತ್ರವನ್ನು (Pre-motion letter) ಸಲ್ಲಿಸಿ, ಪ್ರಕರಣವನ್ನು ವಜಾಗೊಳಿಸುವಂತೆ ಕೋರಿತ್ತು. ಘಟನೆಗಳು ನಡೆದಿರುವುದು ಭಾರತದಲ್ಲಿ, ಹೀಗಾಗಿ ಇಲ್ಲಿ ಅಮೆರಿಕದ ಕಾನೂನು ಅನ್ವಯಿಸುವುದಿಲ್ಲ ಮತ್ತು ನ್ಯಾಯಾಲಯಕ್ಕೆ ನ್ಯಾಯವ್ಯಾಪ್ತಿ ಇಲ್ಲ ಎಂದು ವಾದಿಸಿತ್ತು.

ಏಪ್ರಿಲ್ 2026ರ ಮಧ್ಯ ಭಾಗದಲ್ಲಿ ವಕೀಲ ರಾಬರ್ಟ್ ಗ್ಯೂಫ್ರಾ ಅವರು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ಪ್ರಾಸಿಕ್ಯೂಟರ್‌ಗಳನ್ನು ಭೇಟಿಯಾಗಿ 100ಕ್ಕೂ ಹೆಚ್ಚು ಸ್ಲೈಡ್‌ಗಳ ಪ್ರಸ್ತುತಿ ನೀಡಿ ಪ್ರಕರಣ ಎಷ್ಟು ದುರ್ಬಲವಾಗಿದೆ ಎಂದು ವಾದಿಸಿದ್ದರು. ಇದೇ ಸಂದರ್ಭದಲ್ಲಿ, ಅದಾನಿ ಸಮೂಹವು ಅಮೆರಿಕದ ಆರ್ಥಿಕತೆಯಲ್ಲಿ 10 ಬಿಲಿಯನ್ ಹೂಡಿಕೆ ಡಾಲರ್ ಮಾಡುವ ಮತ್ತು 15,000 ಉದ್ಯೋಗ ಸೃಷ್ಟಿಸುವ ಭರವಸೆಯನ್ನೂ ಪ್ರಸ್ತಾಪಿಸಿತ್ತು.

ಮೇ 14, 2026 (ನ್ಯೂಯಾರ್ಕ್ ಸಮಯ) / ಮೇ 15, 2026 (ಭಾರತೀಯ ಕಾಲಮಾನ) ಅದಾನಿ ಮತ್ತು ಯುಎಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ ಜಂಟಿಯಾಗಿ ನ್ಯಾಯಾಲಯಕ್ಕೆ ಇತ್ಯರ್ಥದ ಪ್ರಸ್ತಾವನೆಯನ್ನು ಸಲ್ಲಿಸಿದವು.

ಒಪ್ಪಂದದ ಪ್ರಕಾರ ಗೌತಮ್ ಅದಾನಿ 6 ಮಿಲಿಯನ್ ಡಾಲರ್ ಮತ್ತು ಸಾಗರ್ ಅದಾನಿ 12 ಮಿಲಿಯನ್ ಡಾಲರ್ ಸೇರಿದಂತೆ ಒಟ್ಟು 18 ಮಿಲಿಯನ್ (ಸುಮಾರು 172 ಕೋಟಿ ರೂಪಾಯಿ) ಸಿವಿಲ್ ದಂಡ ಪಾವತಿಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇಬ್ಬರೂ ತಮ್ಮ ಮೇಲಿನ ಯಾವುದೇ ತಪ್ಪು ಅಥವಾ ಅಪರಾಧವನ್ನು ಒಪ್ಪಿಕೊಳ್ಳದೇ (Without admitting or denying the charges) ಸಿವಿಲ್ ಪ್ರಕರಣವನ್ನು ಕೊನೆಗೊಳಿಸಲಿದ್ದಾರೆ.

ಸಿವಿಲ್ ಪ್ರಕರಣ ಇತ್ಯರ್ಥವಾದ ಬೆನ್ನಲ್ಲೇ, ಅಮೆರಿಕದ ನ್ಯಾಯಾಂಗ ಇಲಾಖೆಯು ಗೌತಮ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ವಂಚನೆ ಮತ್ತು ಲಂಚದ ಆರೋಪಗಳನ್ನು ಸಂಪೂರ್ಣವಾಗಿ ಹಿಂಪಡೆಯಲು ನಿರ್ಧರಿಸಿದೆ ಎಂದು ಜಾಗತಿಕ ಮಾಧ್ಯಮಗಳು ವರದಿ ಮಾಡಿವೆ.

ಅದಾನಿಗೆ ಸಮನ್ಸ್ ತಲುಪಿಸಲು ನಿರಾಕರಿಸಿತ್ತು ಕೇಂದ್ರ

ಈ ಹಿಂದೆ ಇದೇ ಪ್ರಕರಣದಕ್ಕೆ ಸಂಬಂಧಿಸಿದಂತೆ ಎಸ್‌ಇಸಿ ನೀಡಿದ್ದ ಸಮನ್ಸ್‌ಗಳನ್ನು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ ತಲುಪಿಸಲು ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯವು ಎರಡು ಬಾರಿ ನಿರಾಕರಿಸಿತ್ತು.

ಜನವರಿ 2026ರಲ್ಲಿ ನ್ಯೂಯಾರ್ಕ್ ಫೆಡರಲ್ ನ್ಯಾಯಾಲಯಕ್ಕೆ ಎಸ್‌ಇಸಿ ಸಲ್ಲಿಸಿದ ಅಧಿಕೃತ ದಾಖಲೆಗಳ ಮೂಲಕ ಈ ವಿಷಯ ಬಹಿರಂಗವಾಗಿತ್ತು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಸಮಜಾಯಿಸಿ ನೀಡಿತ್ತು.

ಅಂತಾರಾಷ್ಟ್ರೀಯ ನಿಯಮಗಳಾದ ‘ಹ್ಯಾಂಗ್ ಕನ್ವೆನ್ಷನ್’ (Hague Convention) ಅಡಿಯಲ್ಲಿ ಎಸ್‌ಇಸಿ ಕಳುಹಿಸಿದ್ದ ಸಮನ್ಸ್ ಪತ್ರಗಳಲ್ಲಿ ಅಧಿಕೃತ ಮುದ್ರೆ (Seal) ಮತ್ತು ಕಾಯಂ ಶಾಯಿ ಸಹಿ (Ink Signature) ಇಲ್ಲ ಎಂಬ ಕಾರಣ ನೀಡಿ ಭಾರತ ಸರ್ಕಾರ ಮೊದಲ ಬಾರಿಗೆ ದಾಖಲೆಗಳನ್ನು ವಾಪಸ್ ಕಳುಹಿಸಿತ್ತು.

ಆದರೆ, ಅಂತಾರಾಷ್ಟ್ರೀಯ ನಿಯಮಗಳ ಪ್ರಕಾರ ವ್ಯಕ್ತಿಗತ ಸಮನ್ಸ್‌ಗಳಿಗೆ ಇಂತಹ ಫಾರ್ಮಾಲಿಟಿಗಳ ಅಗತ್ಯವಿಲ್ಲ ಎಂದು ಎಸ್‌ಇಸಿ ವಾದಿಸಿತ್ತು.

ಎಸ್‌ಇಸಿ ನ್ಯೂನತೆಗಳನ್ನು ಸರಿಪಡಿಸಿ ಎರಡನೇ ಬಾರಿ ಕಳುಹಿಸಿದಾಗಲೂ ಕೇಂದ್ರ ಕಾನೂನು ಸಚಿವಾಲಯ ತಾಂತ್ರಿಕ ಮತ್ತು ಕಾನೂನು ಆಕ್ಷೇಪಣೆಗಳನ್ನು ಎತ್ತಿ ಸಮನ್ಸ್ ತಲುಪಿಸಲು ನಿರಾಕರಿಸಿತ್ತು.

ಈ ಬಾರಿ, ಭಾರತದಲ್ಲಿರುವ ವ್ಯಕ್ತಿಗಳಿಗೆ ಸಮನ್ಸ್ ಜಾರಿ ಮಾಡಲು ಅಮೆರಿಕದ ಹೂಡಿಕೆ ನಿಯಂತ್ರಣ ಸಂಸ್ಥೆಗೆ (ಎಸ್‌ಇಸಿ) ಯಾವ ಅಧಿಕಾರ ಅಥವಾ ನ್ಯಾಯವ್ಯಾಪ್ತಿ ಇದೆ? ಎಂದು ಪ್ರಶ್ನಿಸಿ ಆಕ್ಷೇಪ ಎತ್ತಿತ್ತು. 

ಭಾರತ ಸರ್ಕಾರದಿಂದ ಸತತ 14 ತಿಂಗಳುಗಳ ಕಾಲ ಯಾವುದೇ ಸಹಕಾರ ಸಿಗದ ಹಿನ್ನೆಲೆಯಲ್ಲಿ ಬೇಸತ್ತ ಎಸ್‌ಇಸಿ, ಜನವರಿ 21, 2026 ರಂದು ನ್ಯೂಯಾರ್ಕ್ ಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿತ್ತು. “ಭಾರತ ಸರ್ಕಾರದ ರಾಜತಾಂತ್ರಿಕ ಮಾರ್ಗಗಳ ಮೂಲಕ ಸಮನ್ಸ್ ತಲುಪಿಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ನಮಗೆ ಗೌತಮ್ ಅದಾನಿ ಅವರ ಇಮೇಲ್ ಮತ್ತು ಅವರ ಯುಎಸ್ ವಕೀಲರ ಮೂಲಕ ನೇರವಾಗಿ ಸಮನ್ಸ್ ಜಾರಿ ಮಾಡಲು ಅನುಮತಿ ನೀಡಿ” ಎಂದು ಕೋರಿತ್ತು.

ಈ ಬೆಳವಣಿಗೆಯ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಅದಾನಿ ಷೇರುಗಳು ತೀವ್ರ ಕುಸಿತ ಕಂಡಿದ್ದರಿಂದ, ಅದಾನಿ ಪರ ವಕೀಲರು ತಾವಾಗಿಯೇ ಕೋರ್ಟ್ ಮುಂದೆ ಹಾಜರಾಗಿ ಸಮನ್ಸ್ ಸ್ವೀಕರಿಸಲು ಒಪ್ಪಿಕೊಂಡರು ಮತ್ತು ಪ್ರಕರಣದ ಇತ್ಯರ್ಥಕ್ಕೆ ಮಾತುಕತೆ ಆರಂಭಿಸಿದರು.

ಕೇಂದ್ರ ಸರ್ಕಾರದ ಈ ನಿಲುವು ಆ ಸಮಯದಲ್ಲಿ ಭಾರತೀಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವಿರೋಧ ಪಕ್ಷಗಳು “ಕೇಂದ್ರ ಸರ್ಕಾರವು ಅದಾನಿ ಅವರನ್ನು ರಕ್ಷಿಸಲು ಅಮೆರಿಕದ ಸಮನ್ಸ್ ಅನ್ನು ತಡೆಹಿಡಿದಿದೆ” ಎಂದು ಆರೋಪಿಸಿದ್ದರೆ, ಅಧಿಕಾರಿಗಳು ಇದು ಕೇವಲ ನಿಯಮಾನುಸಾರ ನಡೆದ ತಾಂತ್ರಿಕ ಪ್ರಕ್ರಿಯೆಯಷ್ಟೇ ಎಂದು ಸಮಜಾಯಿಸಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...