Homeರಾಷ್ಟ್ರೀಯಅಷ್ಟೊಂದು 'ಸೆಂಟಿಮೆಂಟ್' ಬೇಡ: 'ಕಾಕ್ರೋಚ್ ಅಭಿಯಾನ'ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

- Advertisement -
- Advertisement -

“ವ್ಯವಸ್ಥೆಯ ಮೇಲೆ ದಾಳಿ ಮಾಡುವವರ” ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು “ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ  ಸೂರ್ಯ ಕಾಂತ್ ಅವರು ವಕೀಲರೊಬ್ಬರಿಗೆ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದರೂ ಸಹ, ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆ ತರಲು ದುರುದ್ದೇಶಪೂರಿತ ಅಪಪ್ರಚಾರವನ್ನು ಮುಂದುವರಿಸಲಾಗಿದೆ ಎಂದು ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ  ಸಲ್ಲಿಸಿದ್ದರು. ಅಲ್ಲದೆ, ನ್ಯಾಯಾಲಯದ ಒಳಗೆ ನಡೆಯುವ ವಾದ-ಪ್ರತಿವಾದಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಿಕೊಳ್ಳಬಾರದು ಎಂದು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು. ಇದರೊಂದಿಗೆ, ‘ಕಾಕ್ರೋಚ್ ಜನತಾ ಪಾರ್ಟಿ’ಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಮತ್ತೊಂದು ಪ್ರತ್ಯೇಕ ಪಿಐಎಲ್ ಕೂಡ ಸಲ್ಲಿಕೆಯಾಗಿತ್ತು.

“ಗೌರವಾನ್ವಿತ ಸಿಜೆಐ ಅವರು ಸ್ಪಷ್ಟನೆ ನೀಡಿದ ನಂತರವೂ, ವಿಷಯವನ್ನು ತಿರುಚಿ ದುರುದ್ದೇಶಪೂರಿತವಾಗಿ ಹರಡಲಾಗುತ್ತಿದೆ” ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಾಗ, ಮುಖ್ಯ ನ್ಯಾಯಮೂರ್ತಿಗಳು, “ಇದನ್ನು ಅಷ್ಟೊಂದು ಸೆಂಟಿಮೆಂಟಲ್ ಆಗಿ ತಗೋಬೇಡಿ,” ಎಂದು ಪ್ರತಿಕ್ರಿಯಿಸಿದರು. ಅಷ್ಟೇ ಅಲ್ಲದೆ, ಈ ಅರ್ಜಿಗಳ ತುರ್ತು ವಿಚಾರಣೆಯ ಮನವಿಯನ್ನು ತಿರಸ್ಕರಿಸಿದ ಸಿಜೆಐ, ಸೂಕ್ತ ಸಮಯದಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ವಿವಾದಕ್ಕೆ ಕಾರಣವೇನು?

ಕಳೆದ ಮೇ 15 ರಂದು ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಆಡಿದ್ದ ಕೆಲವು ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಇದೇ ವಿಷಯವನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಹೆಸರಿನಲ್ಲಿ ಆನ್‌ಲೈನ್ ಅಭಿಯಾನವೊಂದು ಶುರುವಾಗಿತ್ತು.

ಹಿರಿಯ ವಕೀಲರ ಹುದ್ದೆಯ ಆಕಾಂಕ್ಷಿಯಾಗಿದ್ದ ವಕೀಲರೊಬ್ಬರು, ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಆ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದ ಸಿಜೆಐ, ಈ ಹುದ್ದೆಗಾಗಿ ಹೀಗೆ “ಬೆನ್ನುಬೀಳುವುದು” ಸರಿಯೇ ಎಂದು ಪ್ರಶ್ನಿಸಿದ್ದರು.

ಆ ಸಂದರ್ಭದಲ್ಲಿ ಅವರು, “ಸಮಾಜದಲ್ಲಿ ವ್ಯವಸ್ಥೆಯ ಮೇಲೆ ದಾಳಿ ಮಾಡುವ ಕೆಲವು ಪರಾವಲಂಬಿಗಳು  ಈಗಾಗಲೇ ಇದ್ದಾರೆ, ನೀವು ಅವರೊಂದಿಗೆ ಕೈಜೋಡಿಸಲು ಬಯಸುತ್ತೀರಾ? ಸಮಾಜದಲ್ಲಿ ಯಾವುದೇ ಉದ್ಯೋಗ ಅಥವಾ ವೃತ್ತಿ ಬದುಕಿಲ್ಲದ ಕೆಲವು ಯುವಕರು ಜಿರಳೆಗಳ  ತರಹ ಇದ್ದಾರೆ. ಅಂಥವರು ಮಾಧ್ಯಮ, ಸಾಮಾಜಿಕ ಜಾಲತಾಣ, ಆರ್‌ಟಿಐ  ಕಾರ್ಯಕರ್ತರು ಮತ್ತು ಇತರೆ ಹೋರಾಟಗಾರರ ಸೋಗಿನಲ್ಲಿ ಎಲ್ಲರ ಮೇಲೆಯೂ ದಾಳಿ ಮಾಡಲು ಆರಂಭಿಸುತ್ತಾರೆ,” ಎಂದು ಹೇಳಿದ್ದರು.

ಸಿಜೆಐ ನೀಡಿದ ಸ್ಪಷ್ಟನೆ

ಈ ಹೇಳಿಕೆ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ತಾವು ದೇಶದ ಯುವಕರನ್ನು ಟೀಕಿಸಿಲ್ಲ, ಅದು ಸಂಪೂರ್ಣ ಆಧಾರರಹಿತವಾದದ್ದು ಎಂದು ಅವರು ಸ್ಪಷ್ಟಪಡಿಸಿದ್ದರು.

“ನಕಲಿ ಮತ್ತು ಬೋಗಸ್ ಪದವಿಗಳನ್ನು ಇಟ್ಟುಕೊಂಡು ವಕೀಲಿಕೆ ಸೇರಿದಂತೆ ಇತರೆ ಉದಾತ್ತ ವೃತ್ತಿಗಳಿಗೆ ನುಗ್ಗಿರುವವರನ್ನು ಮಾತ್ರ ನಾನು ನಿರ್ದಿಷ್ಟವಾಗಿ ಟೀಕಿಸಿದ್ದೇನೆ. ಇಂತಹವರೇ ಮಾಧ್ಯಮ, ಸೋಶಿಯಲ್ ಮೀಡಿಯಾಗಳಲ್ಲೂ ನುಸುಳಿದ್ದಾರೆ. ಇವರು ಸಮಾಜದ ಪರಾವಲಂಬಿಗಳಿದ್ದಂತೆ. ನಾನು ದೇಶದ ಯುವ ಜನತೆಯನ್ನು ಟೀಕಿಸಿದ್ದೇನೆ ಎನ್ನುವುದು ತಪ್ಪು. ನಮ್ಮ ದೇಶದ ಯುವ ಸಂಪತ್ತಿನ ಬಗ್ಗೆ ನನಗೆ ಹೆಮ್ಮೆಯಿದೆ, ಭಾರತದ ಪ್ರತಿಯೊಬ್ಬ ಯುವಕನೂ ನನಗೆ ಸ್ಫೂರ್ತಿ,” ಎಂದು ಸಿಜೆಐ ಹೇಳಿದ್ದರು.

ಮಹಾರಾಷ್ಟ್ರ ಮೂಲದ, ಪ್ರಸ್ತುತ ಅಮೆರಿಕದಲ್ಲಿ ನೆಲೆಸಿರುವ 30 ವರ್ಷದ ಅಭಿಜೀತ್ ದಿಪ್ಕೆ ಎಂಬುವವರು ಸಿಜೆಐ ಅವರ “ಜಿರಳೆ” ಹೇಳಿಕೆಗೆ ಕೌಂಟರ್ ಆಗಿ ಯುವಕರಿಗಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಂಬ ವೇದಿಕೆಯನ್ನು ಘೋಷಿಸಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಆಗಿತ್ತು.

ಆದರೆ, “ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ” ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಮೇರೆಗೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ  ಆದೇಶದಂತೆ ಗುರುವಾರ ಈ ‘ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ . ಇದರ ಬೆನ್ನಲ್ಲೇ ಅಭಿಜೀತ್ ದಿಪ್ಕೆ ಅವರು ‘ಕಾಕ್ರಾಚ್ ಈಸ್ ಬ್ಯಾಕ್’  ಎಂಬ ಹೊಸ ಖಾತೆಯನ್ನು ತೆರೆದು, ಜನರನ್ನು ಅದಕ್ಕೆ ಸೇರುವಂತೆ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...