Homeಮುಖಪುಟ"ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ": ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

- Advertisement -
- Advertisement -

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ ಇಎಸ್ಐ ಆಸ್ಪತ್ರೆಯಿಂದ ಮೃತದೇಹವನ್ನು ಬಿಡುಗಡೆ ಮಾಡಲು ಕಾಗದಪತ್ರಗಳಿಗೆ ಸಹಿ ಹಾಕಿದರು. ನಂತರ ಮೃತದೇಹವನ್ನು ತಮ್ಮ ಸ್ವಂತ ಊರಾದ ಸೇಲಂಗೆ ಕೊಂಡೊಯ್ದು ಅಲ್ಲಿ ಅಂತ್ಯಸಂಸ್ಕಾರ ಮಾಡಿದರು ಎಂದು ಅವರು ತಿಳಿಸಿದ್ದಾರೆ.

thenewsminute.com ವರದಿಯ ಪ್ರಕಾರ, “ನನ್ನ ಅನುಮತಿ ಇಲ್ಲದೆಯೇ ನನ್ನ ಮಗುವನ್ನು ಸುಡಲಾಗಿದೆ. ನಾನು ಆಸ್ಪತ್ರೆಯಲ್ಲಿ ಕಾಯುತ್ತಿದ್ದೆ, ಆದರೆ ಅವರು ಮಗುವನ್ನು ಹಿಂಬಾಗಿಲಿನಿಂದ ಕರೆದುಕೊಂಡು ಹೋದರು” ಎಂದು ತಾಯಿ ಅಲವತ್ತುಕೊಂಡಿದ್ದಾರೆ.

“ನ್ಯಾಯ ಸಿಗುವವರೆಗೂ ಮೃತದೇಹವನ್ನು ಸ್ವೀಕರಿಸಬಾರದು ಎಂದು ನಾನು ನಿರ್ಧರಿಸಿದ್ದೆ. ನನ್ನನ್ನು ಮತ್ತು ನನ್ನ ಕುಟುಂಬದವರನ್ನು ಆಸ್ಪತ್ರೆಯ ಒಳಗೆ ಬಿಡಲಿಲ್ಲ. ನನ್ನ ಪತಿ ಮತ್ತು ಅವರ ಕುಟುಂಬದವರನ್ನು ಮಾತ್ರ ಒಳಗೆ ಬಿಟ್ಟರು. ಮೃತದೇಹವನ್ನು ಅಲ್ಲಿಂದ ತೆಗೆದುಕೊಂಡು ಹೋಗುತ್ತಿರುವುದು ನಮಗೆ ತಿಳಿಯಲೇ ಇಲ್ಲ” ಎಂದು ತಾಯಿ ನೋವು ತೋಡಿಕೊಂಡಿದ್ದಾರೆ.

“ನಾನು ಕಾಗದಪತ್ರಗಳಿಗೆ ಸಹಿ ಹಾಕಲು ನಿರಾಕರಿಸಿದ ಕಾರಣಕ್ಕಾಗಿಯೇ ನನ್ನ ಮಗುವಿನ ಮೃತದೇಹವನ್ನು ನೋಡದಂತೆ ನನ್ನನ್ನು ವಂಚಿಸಲಾಯಿತು” ಎಂದು ತಾಯಿ ಆರೋಪಿಸಿದ್ದಾರೆ. ಅವರು ತಮ್ಮ ಪತಿ ಮತ್ತು ಅವರ ಕುಟುಂಬದ ವಿರುದ್ಧ ತನಿಖೆಗೆ ಒತ್ತಾಯಿಸಿದ್ದಾರೆ.

“ಮೃತದೇಹವನ್ನು ತೆಗೆದುಕೊಂಡು ಹೋಗಿರುವುದು ನಮಗೆ ತಿಳಿಯುತ್ತಿದ್ದಂತೆ, ನಾನು ಕಾರಿನಲ್ಲಿ ನನ್ನ ಪತಿಯ ಊರಿಗೆ ಧಾವಿಸಿದೆ. ಆದರೆ ಅವರು ನನಗಾಗಿ ಕಾಯದೆ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದರು” ಎಂದು ತಿಳಿಸಿದ್ದಾರೆ.

ಮಗುವನ್ನು ಅಪಹರಿಸಿದಾಗ ತಾನು ಮದ್ಯದ ಅಮಲಿನಲ್ಲಿದ್ದೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಬಾಲಕಿಯು ಮೇ 21ರ ಸಂಜೆ ಸುಳೂರು ಬಳಿಯ ಪಲ್ಲಪಾಳ್ಯಂನ ಭಾರತಿಪುರಂನಿಂದ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಲಾಗಿದೆ. ನಂತರ ಆಕೆಯ ಮೃತದೇಹವು ಕಣ್ಣಂಪಾಳ್ಯಂ ಬಳಿಯ ತೆಂಗಿನ ತೋಟದಲ್ಲಿ ಪತ್ತೆಯಾಗಿತ್ತು.

ತಮಿಳುನಾಡು ಪೊಲೀಸರು ಮೇ 23ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪುರುಷರನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ಕೆ. ಕಾರ್ತಿ (33) ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೊ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇನ್ನು ಎರಡನೇ ಆರೋಪಿ ಮೋಹನ್‌ನನ್ನು ಅಪರಾಧಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ತನಿಖೆಯ ಭಾಗವಾಗಿ ಪೊಲೀಸರು ನೂರಾರು ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಎಂದು ಪಶ್ಚಿಮ ವಲಯ ಐಜಿಪಿ ರಮ್ಯಾ ಭಾರತಿ ತಿಳಿಸಿದ್ದಾರೆ. ಬಾಲಕಿಯ ಕುಟುಂಬಕ್ಕೆ ಪರಿಚಿತನಾಗಿದ್ದ ಕಾರ್ತಿ, ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ ಎಂದು ಐಜಿಪಿ ಹೇಳಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಜಿಗಿದ ಪರಿಣಾಮ ಆತನ ಕೈ ಮತ್ತು ಕಾಲಿನ ಮೂಳೆ ಮುರಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಯು ಕೊಯಮತ್ತೂರಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಶೀಘ್ರ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಸುಳೂರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮೇ 24ರ ಭಾನುವಾರದಂದು ಬಾಲಕಿಯ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸಾರಿಗೆ ಸಚಿವ ಎ. ವಿಜಯ್ ತಮಿಳನ್ ಪಾರ್ಥಿಬನ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ವಿ. ಸಂಪತ್ ಕುಮಾರ್ ಅವರು ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ, ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಒಳಪಟ್ಟು 7 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡಿದ್ದಾರೆ.

ಈ ಘಟನೆಯು ಕೇವಲ ಒಂದು ಕುಟುಂಬದ ನಷ್ಟವಲ್ಲ, ಬದಲಿಗೆ ಇಡೀ ರಾಜ್ಯಕ್ಕೆ ಸಂಭವಿಸಿದ ದುರಂತವಾಗಿದೆ ಎಂದು ಪಾರ್ಥಿಬನ್ ಹೇಳಿದ್ದಾರೆ. ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣವು ತಮಿಳುನಾಡಿನಾದ್ಯಂತ ರಾಜಕೀಯ ವಲಯದಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ, ಘಟನೆಯ ಕುರಿತ ಪತ್ರಿಕಾಗೋಷ್ಠಿ ಆರಂಭವಾಗುವ ಮುನ್ನ ಐಜಿಪಿ ರಮ್ಯಾ ಭಾರತಿ ಮತ್ತು ಇತರ ಇಬ್ಬರು ಪೊಲೀಸ್ ಅಧಿಕಾರಿಗಳು ನಕ್ಕಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...