Homeಮುಖಪುಟಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

- Advertisement -
- Advertisement -

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ ಮತ್ತು ಸಿಲಿಗುರಿಯಿಂದ ಕೂಚ್ ಬೆಹಾರ್, ದಿನಜ್‌ಪುರದವರೆಗೆ ಹಲವಾರು ಜಾನುವಾರು ಮಾರುಕಟ್ಟೆಗಳಲ್ಲಿ ಕಡಿಮೆ ಚಟುವಟಿಕೆ ಇತ್ತು. ಇದರಿಂದ ರೈತರು ತಮ್ಮ ಜೀವನೋಪಾಯದ ಬಗ್ಗೆ ಚಿಂತಿತರಾಗಿದ್ದಾರೆ.

ಬುಧವಾರ ಮಾರುಕಟ್ಟೆಗಳಿಗೆ ಆಗಮಿಸಿದ ಅನೇಕ ಜಾನುವಾರು ರೈತರು ಯಾವುದೇ ಜಾನುವಾರು ಮಾರಾಟ ಮಾಡದೆ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಪ್ರತಿ ವರ್ಷ ಈದ್ ಅಲ್-ಅಧಾ ಮೊದಲು ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆಯುತ್ತಿತ್ತು, ಆದರೆ ಈ ಬಾರಿ ವಹಿವಾಟುಗಳು ಬಹುತೇಕ ನಿಂತುಹೋಗಿವೆ ಎಂದು ವ್ಯಾಪಾರಿಗಳು ಹೇಳಿಕೊಂಡಿದ್ದಾರೆ.

ಮಾಲ್ಡಾದ ಮಾಣಿಕ್‌ಚಕ್ ಪ್ರದೇಶದ ಮಥುರಾಪುರದ ಯುವ ಜಾನುವಾರು ಮಾಲೀಕ ಬಾಪಿ ಮೊಂಡಲ್ ಮಾತನಾಡಿ, ತನ್ನ ಜಾನುವಾರುಗಳಿಗೆ ಆಹಾರ ಮತ್ತು ನಿರ್ವಹಣೆಗಾಗಿ ದಿನವಿಡೀ ಹಣವನ್ನು ಖರ್ಚು ಮಾಡಿದ್ದೇನೆ. ಆದರೆ, ಖರೀದಿದಾರರನ್ನು ಹುಡುಕಲು ವಿಫಲನಾಗಿದ್ದೇನೆ ಎಂದು ಹೇಳಿದರು.

“ನಾನು ನನ್ನ ಜಾನುವಾರುಗಳಿಗೆ ಪ್ರತಿದಿನ ಸುಮಾರು 200 ರೂ. ಖರ್ಚು ಮಾಡುತ್ತೇನೆ, ಆದರೆ ಯಾವುದೇ ಆದಾಯವಿಲ್ಲ. ಜಾನುವಾರು ವ್ಯಾಪಾರ ಸಂಪೂರ್ಣವಾಗಿ ನಿಂತುಹೋದರೆ, ಪ್ರಾಣಿಗಳಿಗೆ ಮಾತ್ರವಲ್ಲದೆ ನಮಗೂ ಆಹಾರ ಪಡೆದುಕೊಳ್ಳಲು ನಾವು ಕಷ್ಟಪಡುತ್ತೇವೆ” ಎಂದು ಅವರು ಹೇಳಿದರು.

ದನಗಳ ಕೊರತೆಯಿಂದಾಗಿ ಮೇಕೆ ಮಾಂಸದ ಬೆಲೆ ಏರಿಕೆ

ದನಗಳು ಲಭ್ಯವಿಲ್ಲದ ಕಾರಣ, ಅನೇಕ ಜಿಲ್ಲೆಗಳಲ್ಲಿ ಮೇಕೆಗಳಿಗೆ ಬೇಡಿಕೆ ತೀವ್ರವಾಗಿ ಹೆಚ್ಚಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಈದ್ ಅಲ್-ಅಧಾ ಮುನ್ನ ಮೇಕೆ ಮಾಂಸದ ಬೆಲೆ ಪ್ರತಿ ಕಿಲೋಗ್ರಾಂಗೆ ಸುಮಾರು 800–900 ರೂ.ಗಳಿಂದ ಸುಮಾರು 1,500 ರೂ.ಗಳಿಗೆ ಏರಿದೆ.

ದಕ್ಷಿಣ ದಿನಾಜ್‌ಪುರದ ಕುಮಾರ್‌ಗಂಜ್ ಬ್ಲಾಕ್‌ನಲ್ಲಿರುವ ದೋರಾಹಾ ಗ್ರಾಮದ ರೈತ ತೈಫೂರ್ ಮೊಂಡಲ್, ಅನೇಕ ಕುಟುಂಬಗಳು ಈದ್ ಬಲಿದಾನಕ್ಕಾಗಿ ತಮ್ಮ ಯೋಜನೆಗಳನ್ನು ಬದಲಾಯಿಸುತ್ತಿವೆ ಎಂದು ಹೇಳಿದರು.

“ನಮಗೆ ಈದ್‌ಗಾಗಿ ದನಗಳು ಸಿಗುತ್ತಿಲ್ಲ. ಬದಲಾಗಿ ನಾವು ಮೇಕೆಗಳೊಂದಿಗೆ ಬಕ್ರೀದ್ ಆಚರಿಸುತ್ತೇವೆ” ಎಂದು ಅವರು ಹೇಳಿದರು.

ಮಳೆಗಾಲ ಸಮೀಪಿಸುತ್ತಿದ್ದಂತೆ ಕೃಷಿ ಕೆಲಸದ ಬಗ್ಗೆಯೂ ರೈತರು ಕಳವಳ ವ್ಯಕ್ತಪಡಿಸಿದರು. ಅನೇಕ ಗ್ರಾಮೀಣ ಪ್ರದೇಶಗಳಲ್ಲಿ, ಉಳುಮೆ ಮಾಡಲು ಮತ್ತು ಕೃಷಿ ಭೂಮಿಯನ್ನು ಸಮತಟ್ಟು ಮಾಡಲು ಎತ್ತುಗಳು ಇನ್ನೂ ಬೇಕಾಗುತ್ತವೆ. ಆದರೆ, ದನಗಳ ಕೊರತೆಯಿಂದಾಗಿ ರೈತರು ಕೆಲಸ ಮಾಡುವ ಪ್ರಾಣಿಗಳನ್ನು ಖರೀದಿಸುವುದು ಕಷ್ಟಕರವಾಗಿದೆ ಎಂದರು.

ಕೂಚ್ ಬೆಹಾರ್‌ನ ರೈತ ಗಣೇಶ್ ಬರ್ಮನ್ ಮಾತನಾಡಿ, “ಹೆಚ್ಚಿನ ಕೃಷಿಯನ್ನು ಈಗ ಯಂತ್ರಗಳಿಂದ ಮಾಡಲಾಗುತ್ತದೆ, ಆದರೆ ಕೆಲವು ಹೊಲಗಳಲ್ಲಿ ಎತ್ತುಗಳು ಇನ್ನೂ ಅಗತ್ಯವಿದೆ. ಮಾರುಕಟ್ಟೆಯಲ್ಲಿನ ಕೊರತೆಯಿಂದಾಗಿ ಅನೇಕ ರೈತರು ಅವುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ಹೊರಹಾಕಿದರು.

ಜಾನುವಾರು ವ್ಯಾಪಾರದ ಮೇಲೆ ಪರಿಣಾಮ ಬೀರಿದ ಸರ್ಕಾರಿ ಮಾರ್ಗಸೂಚಿ

ಸ್ಥಳೀಯ ವ್ಯಾಪಾರಿಗಳು ಮತ್ತು ರೈತರು ಪಶು ವ್ಯಾಪಾರದಲ್ಲಿನ ಕುಸಿತವನ್ನು ಪಶ್ಚಿಮ ಬಂಗಾಳ ಸರ್ಕಾರವು ಬಲಿಗಾಗಿ ಪ್ರಾಣಿಗಳ ಮಾರಾಟದ ಕುರಿತು ಇತ್ತೀಚೆಗೆ ಹೊರಡಿಸಿದ ಮಾರ್ಗಸೂಚಿಗಳ ಕಡೆಗೆ ಬೊಟ್ಟು ಮಾಡಿದ್ದಾರೆ.

ಪತಿರಾಮ್, ಹರಿರಾಂಪುರ್, ದಂಗರ್‌ಹ್ಯಾಟ್, ದುರ್ಗಾಪುರ್ ಹಾತ್, ಕಮಲಾಬರಿ ಹಾತ್, ಬಂಗಲ್‌ಬರಿ ಹಾತ್, ರಾಮಗಂಜ್ ಹಾತ್, ಪಂಜಿಪರಾ ಹಾತ್ ಮತ್ತು ಮಲ್ಲಿಕ್‌ಪುರ್ ಹಾತ್ ಸೇರಿದಂತೆ ಉತ್ತರ ಬಂಗಾಳದಾದ್ಯಂತದ ಹಲವಾರು ಜಾನುವಾರು ಮಾರುಕಟ್ಟೆಗಳು ಕಳೆದ ಕೆಲವು ದಿನಗಳಿಂದ ಜಾನುವಾರು ಖರೀದಿ ಮತ್ತು ಮಾರಾಟದಲ್ಲಿ ಪ್ರಮುಖ ಕುಸಿತವನ್ನು ಕಂಡಿವೆ ಎಂದು ವರದಿಯಾಗಿದೆ.

ಇಟಾಹಾರ್‌ನ ರೈತ ಇಸ್ರೇಲ್ ಅಲಿ, ನಿರ್ಬಂಧಗಳು ಜಾನುವಾರು ಮಾಲೀಕರಿಗೆ ವ್ಯಾಪಕ ಸಮಸ್ಯೆಗಳನ್ನು ಸೃಷ್ಟಿಸಿವೆ ಎಂದು ಹೇಳಿದರು.

“ಜಾನುವಾರು ವ್ಯಾಪಾರದ ಮೇಲಿನ ನಿರ್ಬಂಧಗಳಿಂದಾಗಿ, ಎಲ್ಲೆಡೆ ಸಮಸ್ಯೆಗಳು ಹೆಚ್ಚುತ್ತಿವೆ. ಹಾಲು ನೀಡುವುದನ್ನು ನಿಲ್ಲಿಸಿದ ಹಸುಗಳನ್ನು ಸಹ ಮಾರಾಟ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಜಾನುವಾರು ವ್ಯಾಪಾರದಲ್ಲಿನ ನಿಧಾನಗತಿಯು ವಾರದ ಮಾರುಕಟ್ಟೆಗಳನ್ನು ಅವಲಂಬಿಸಿರುವ ಸಣ್ಣ ವ್ಯವಹಾರಗಳ ಮೇಲೂ ಪರಿಣಾಮ ಬೀರಿದೆ.

ಹಳೆ ಮಾಲ್ಡಾದ ಬೊಲಾಟುಲಿಯಲ್ಲಿ ದೀರ್ಘಕಾಲದಿಂದ ನಡೆಯುತ್ತಿರುವ ಸಾಪ್ತಾಹಿಕ ಜಾನುವಾರು ಮಾರುಕಟ್ಟೆಯಲ್ಲಿ, ಆಹಾರ ಮಳಿಗೆಯ ಮಾಲೀಕ ಸಾಧನ್ ಸರ್ಕಾರ್ ಅವರು ಸಂತೆಗೆ ಕಡಿಮೆ ಜನರು ಭೇಟಿ ನೀಡಿದ್ದರಿಂದ ಆದಾಯದಲ್ಲಿ ಕುಸಿತ ಕಂಡಿದೆ ಎಂದು ಹೇಳಿದರು.

“ಮಾರುಕಟ್ಟೆಯು ಮುಖ್ಯವಾಗಿ ಜಾನುವಾರು ವ್ಯಾಪಾರವನ್ನು ಅವಲಂಬಿಸಿದೆ. ಜಾನುವಾರುಗಳನ್ನು ಮಾರಾಟ ಮಾಡದಿದ್ದರೆ, ಜನರು ಬರುವುದಿಲ್ಲ. ಅದು ನನ್ನ ಆಹಾರ ವ್ಯವಹಾರದ ಮೇಲೂ ಪರಿಣಾಮ ಬೀರಿದೆ” ಎಂದು ಅವರು ಹೇಳಿದರು.

ಉತ್ತರ ಬಂಗಾಳದಾದ್ಯಂತದ ರೈತರು ಮತ್ತು ವ್ಯಾಪಾರಿಗಳು ಈದ್ ಅಲ್-ಅಧಾ ಆಚರಣೆ. ಗ್ರಾಮೀಣ ಜೀವನೋಪಾಯ ಎರಡಕ್ಕೂ ಪರಿಸ್ಥಿತಿ ಅನಿಶ್ಚಿತತೆಯನ್ನು ಸೃಷ್ಟಿಸಿದೆ ಎಂದು ಹೇಳುತ್ತಾರೆ. ವಿಶೇಷವಾಗಿ ಕೃಷಿ ಋತು ಪ್ರಾರಂಭವಾಗುವ ಮೊದಲು ಅನೇಕರು ಜಾನುವಾರು ಮಾರಾಟವನ್ನು ಅವಲಂಬಿಸಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...