Homeಮುಖಪುಟಖಾತೆ ಹಂಚಿಕೆ ವಿವಾದ: ರಾಜೀನಾಮೆ ಕೊಟ್ಟ ಶಿವಸೇನೆಯ ಅಬ್ದುಲ್‌ ಸತ್ತಾರ್‌

ಖಾತೆ ಹಂಚಿಕೆ ವಿವಾದ: ರಾಜೀನಾಮೆ ಕೊಟ್ಟ ಶಿವಸೇನೆಯ ಅಬ್ದುಲ್‌ ಸತ್ತಾರ್‌

- Advertisement -
- Advertisement -

ಖಾತೆ ಹಂಚಿಕೆ ವಿಚಾರವಾಗಿ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಕ್ಯಾಬಿನೆಟ್ ಸಚಿವ ಸ್ಥಾನ ಸಿಗದ ಕಾರಣ ಶಿವಸೇನೆಯ ಸಚಿವ ಅಬ್ದುಲ್ ಸತ್ತಾರ್ ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಔರಂಗಾಬಾದ್ ಜಿಲ್ಲೆಯ ಸಿಲ್ಲೋಡ್‌ನ ಶಾಸಕರಾದ ಸತ್ತಾರ್ ಅವರು ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ತೊರೆದು ಶಿವಸೇನೆ ಸೇರಿದ್ದರು. ಅವರಿಗೆ ಸದ್ಯ ರಾಜ್ಯ ಸಚಿವರನ್ನಾಗಿ ಮಾಡಲಾಗಿತ್ತು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿಲ್ಲ ಎಂದು ರಾಜೀನಾಮೆ ಸಲ್ಲಿಸಿದ್ದಾರೆ.

ಆದರೆ ಸಚಿವರ ರಾಜೀನಾಮೆ ಕುರಿತು ಮುಖ್ಯಮಂತ್ರಿಯವರ ಕಚೇರಿಯಿಂದ ಅಥವಾ ರಾಜಭವನದಿಂದ ಯಾವುದೇ ದೃಢೀಕರಣ ಬಂದಿಲ್ಲ. ಅಲ್ಲದೇ ಸತ್ತಾರ್ ಸ್ವತಃ ಏನನ್ನೂ ತಿಳಿಸಿಲ್ಲ.

ಆದರೆ ಹಿರಿಯ ಶಿವಸೇನೆಯ ಮುಖಂಡರು ಸತ್ತಾರ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ. ಹಿರಿಯ ಸೇನಾ ಕಾರ್ಯಕರ್ತ ಅನಿಲ್ ದೇಸಾಯಿ ಅವರು ಸತ್ತಾರ್ ರಾಜೀನಾಮೆ ನೀಡಿಲ್ಲ ಎಂದು ಹೇಳಿದರು. ಈ ಮಧ್ಯೆ ಸತಾರ್ ಅವರನ್ನು ಭೇಟಿ ಮಾಡಲು ಮತ್ತು ಚರ್ಚಿಸಲು ಪಕ್ಷದ ಪರವಾಗಿ ಸೇನೆಯ ಅರ್ಜುನ್ ಖೋಟ್ಕರ್ ಅವರನ್ನು ಕಳುಹಿಸಲಾಗಿದೆ. ಔರಂಗಾಬಾದ್‌ನ ಹೋಟೆಲ್‌ವೊಂದರಲ್ಲಿ ಶನಿವಾರ ಬೆಳಿಗ್ಗೆ ಖೋಟ್ಕರ್, ಸತ್ತಾರ್ ಅವರನ್ನು ಭೇಟಿಯಾಗಿದ್ದರೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸತ್ತಾರ್ ಅವರ ಮಗ ಸಮೀರ್, “ಅವರು ರಾಜೀನಾಮೆ ನೀಡಿದ್ದಾರೋ ಇಲ್ಲವೋ ನನಗೆ ತಿಳಿದಿಲ್ಲ. ಅವರು ಮಾತ್ರ ಈ ವಿಷಯದ ಬಗ್ಗೆ ಮಾತನಾಡಲು ಸಾಧ್ಯವಾಗುತ್ತದೆ. ” ಎಂದು ತಿಳಿಸಿದ್ದಾರೆ.

ಡಿಸೆಂಬರ್ 30 ರಂದು ನಡೆದ ಕ್ಯಾಬಿನೆಟ್ ವಿಸ್ತರಣೆಯಲ್ಲಿ ಪಕ್ಷದ ಅನೇಕ ಹಿರಿಯ ನಾಯಕರನ್ನು ಕಡೆಗಣಿಸಿದ ನಂತರ ಸೇನೆಯೊಳಗೆ ಅಸಮಾಧಾನ ಮೂಡಿದೆ. ಹಿಂದಿನ ಕಾಂಗ್ರೆಸ್-ಎನ್‌ಸಿಪಿ ಸರ್ಕಾರಗಳಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿದ್ದ ಸತ್ತಾರ್ ಅವರಿಗೆ ಶಿವಸೇನಾ ಕೋಟಾದಿಂದ ಕ್ಯಾಬಿನೆಟ್ ಸ್ಥಾನ ನೀಡಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸೇನಾ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸರ್ಕಾರವನ್ನು ಬೆಂಬಲಿಸುವ ಮೂವರು ಸ್ವತಂತ್ರ ಶಾಸಕರಿಗೆ ಕ್ಯಾಬಿನೆಟ್ ಸ್ಥಾನ ಮತ್ತು ಇಬ್ಬರು ಕಿರಿಯರಿಗೆ ಸಚಿವ ಹುದ್ದೆಗಳನ್ನು ನೀಡಿದ ನಂತರ ಅನೇಕ ಶಿವಸೇನಾ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...