HomeಮುಖಪುಟCBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

- Advertisement -
- Advertisement -

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ ಮಂಗಳವಾರ (ಜೂ.3) ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಖುದ್ದು ಹಾಜರಾಗಿದ್ದಾರೆ.

ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಆಗಿ ಮೌಲ್ಯಮಾಪನ ಮಾಡಲು ಈ ವರ್ಷ ಹೊಸ ವ್ಯವಸ್ಥೆಯನ್ನು ಪರಿಚಯಿಸಿತ್ತು. ಈ ವ್ಯವಸ್ಥೆಯ ಜಾರಿಯ ನಂತರ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಮೌಲ್ಯಮಾಪನ ದೋಷಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಜಾರ್ಖಂಡ್‌ನ ರಾಂಚಿಯ ನಿವಾಸಿಯಾದ ಸಾರ್ಥಕ್ ಸಿದ್ಧಾಂತ್, ತನಗೂ ಕೂಡ ಮರುಮೌಲ್ಯಮಾಪನದ ವೇಳೆ ಮಸುಕಾದ ಮತ್ತು ಅಪೂರ್ಣವಾದ ಡಿಜಿಟಲ್ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳು ಸಿಕ್ಕಾಗ ಅದರ ಬೆನ್ನು ಬಿದ್ದಿದ್ದರು.

ನೂರಾರು ಅಧಿಕೃತ ಪ್ರೊಕ್ಯೂರ್‌ಮೆಂಟ್ ದಾಖಲೆಗಳು ಮತ್ತು ಟೆಂಡರ್ ಪತ್ರಗಳನ್ನು ಪರಿಶೀಲಿಸಿದ ಸಾರ್ಥಕ್, ಸಿಬಿಎಸ್ಇ ಮೂರು ಹಂತಗಳಲ್ಲಿ ಟೆಂಡರ್ ನಿಯಮಗಳನ್ನು ಹೇಗೆ ಬದಲಾಯಿಸಿದೆ ಎಂಬುದನ್ನು ಪತ್ತೆಹಚ್ಚಿ ತನ್ನ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದರು.

ಹೈದರಾಬಾದ್ ಮೂಲದ ‘ಕೋಯೆಂಪ್ಟ್ ಎಜು ಟೆಕ್’ ಎಂಬ ಖಾಸಗಿ ವೆಂಡರ್ ಸಂಸ್ಥೆಗೆ ಲಾಭ ಮಾಡಿಕೊಡಲು ಸಿಬಿಎಸ್ಇ ಅರ್ಹತಾ ಮಾನದಂಡಗಳು ಮತ್ತು ತಾಂತ್ರಿಕ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಸಾರ್ಥಕ್ ಕನಿಷ್ಠ 15ಕ್ಕೂ ಹೆಚ್ಚು ಲೋಪದೋಷಗಳನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರು.

ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ನೇತೃತ್ವದ ಶಿಕ್ಷಣ, ಮಹಿಳಾ, ಮಕ್ಕಳ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿತ್ತು.

ಸಾರ್ಥಕ್ ಸಿದ್ಧಾಂತ್ ಸಿಬಿಎಸ್‌ಸಿಯ ಖರೀದಿ ನಿಯಮಗಳ ಉಲ್ಲಂಘನೆ ಮತ್ತು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಯ ಕೊರತೆಯ ಬಗ್ಗೆ ಸಂಸದರ ಮುಂದೆ ದೃಢವಾದ ಪ್ರೆಸೆಂಟೇಶನ್ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾರ್ಥಕ್ ಅವರ ಈ ಸಾಹಸ ಮತ್ತು ಧೈರ್ಯ ಪ್ರಸ್ತುತ ದೇಶದಾದ್ಯಂತ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದು, ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಿಬಿಎಸ್ಇ ಹೊಣೆಗಾರಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಸಾರ್ಥಕ್ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿರುವ ದಿಗ್ವಿಜಯ್ ಸಿಂಗ್, ‘ಆನ್ ಸ್ಕ್ರೀನ್ ಮಾರ್ಕಿಂಗ್ ವ್ಯವಸ್ಥೆಯಿಂದ ತೊಂದರೆ ಅನುಭವಿಸಿರುವುದಾಗಿ ಹೇಳಿರುವ ಸಾರ್ಥಕ್ ಸಿದ್ಧಾಂತ್ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮಂಡಿಸಿದ್ದಾರೆ. ಈ ವಿಷಯದ ಬಗ್ಗೆ ಸಿಬಿಎಸ್‌ಸಿಯ ಪ್ರತಿಕ್ರಿಯೆಯನ್ನೂ ನಾವು ನಿರೀಕ್ಷಿಸುತ್ತಿದ್ದೇವೆ. ಸಿಬಿಎಸ್‌ಸಿ ನೀಡುವ ಉತ್ತರದ ಆಧಾರದಲ್ಲಿ ಸಮಿತಿಯು ಮುಂದಿನ ನಿರ್ಧಾರ ಕೈಗೊಳ್ಳಲಿದೆ’ ಎಂದು ಹೇಳಿದ್ದಾರೆ.

ಲೋಕಸಭೆಯ 21 ಸದಸ್ಯರು ಹಾಗೂ ರಾಜ್ಯಸಭೆಯ 10 ಸದಸ್ಯರನ್ನು ಒಳಗೊಂಡಿರುವ ಈ ಸಂಸದೀಯ ಸ್ಥಾಯಿ ಸಮಿತಿಯ ನೇತೃತ್ವವನ್ನು ದಿಗ್ವಿಜಯ್ ಸಿಂಗ್ ವಹಿಸಿದ್ದಾರೆ. ಸಿಬಿಎಸ್‌ಸಿಯ ಆನ್ ಸ್ಕ್ರೀನ್ ಮಾರ್ಕಿಂಗ್ ಪೋರ್ಟಲ್ ಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 9 ಮತ್ತು 10ನೇ ತರಗತಿಗಳಲ್ಲಿ ತ್ರಿಭಾಷಾ ಸೂತ್ರದ ಅನುಷ್ಠಾನದ ಕುರಿತು ವ್ಯಕ್ತವಾಗಿರುವ ಕಳವಳಗಳನ್ನೂ ಸಮಿತಿ ಪರಿಶೀಲಿಸುತ್ತಿದೆ.

ಪ್ರಸ್ತುತ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬಿಎಸ್‌ಸಿ ಅಧ್ಯಕ್ಷರ ಅಭಿಪ್ರಾಯಗಳನ್ನೂ ಸಮಿತಿ ಆಲಿಸಿದೆ ಎಂದು ವರದಿಗಳು ತಿಳಿಸಿವೆ.

ಸಂಸದೀಯ ಸಮಿತಿಯ ಮುಂದೆ ಸಾಕ್ಷ್ಯಾಧಾರ ಅಥವಾ ಅಗತ್ಯ ಮಾಹಿತಿಯನ್ನು ಸಲ್ಲಿಸಲು ಯಾವುದೇ ಅಧಿಕಾರಿ ವಿಫಲರಾದರೆ ಅಥವಾ ಸಮಿತಿಯ ಕಾರ್ಯಕ್ಕೆ ಸಹಕರಿಸದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಲೋಕಸಭೆಯ ಹಕ್ಕುಚ್ಯುತಿ ನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅವಕಾಶವಿದೆ.

ಏನಿದು ಆನ್-ಸ್ಕ್ರೀನ್ ಮಾರ್ಕಿಂಗ್ ?

ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಎನ್ನುವುದು ವಿದ್ಯಾರ್ಥಿಗಳ ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಕಂಪ್ಯೂಟರ್ ಸ್ಕ್ರೀನ್ (ತೆರೆ) ಮೇಲೆಯೇ ಡಿಜಿಟಲ್ ಆಗಿ ಮೌಲ್ಯಮಾಪನ ಮಾಡುವ ಒಂದು ಆಧುನಿಕ ತಂತ್ರಜ್ಞಾನ ವ್ಯವಸ್ಥೆಯಾಗಿದೆ.

ಸಿಬಿಎಸ್ಇ ಸೇರಿದಂತೆ ಪ್ರಮುಖ ಪರೀಕ್ಷಾ ಮಂಡಳಿಗಳು ಮೌಲ್ಯಮಾಪನ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಪಾರದರ್ಶಕತೆ ತರಲು ಈ ವ್ಯವಸ್ಥೆಯನ್ನು ಬಳಸುತ್ತಿವೆ.

ವಿದ್ಯಾರ್ಥಿಗಳು ಬರೆದ ಭೌತಿಕ ಉತ್ತರ ಪತ್ರಿಕೆಗಳನ್ನು ಮೊದಲು ಹೈ-ಸ್ಪೀಡ್ ಸ್ಕ್ಯಾನರ್‌ಗಳ ಮೂಲಕ ಡಿಜಿಟಲ್ ಪ್ರತಿಗಳಾಗಿ (PDF/Image) ಪರಿವರ್ತಿಸಲಾಗುತ್ತದೆ.

ಸ್ಕ್ಯಾನ್ ಮಾಡಿದ ಈ ಪ್ರತಿಗಳನ್ನು ಅತ್ಯಂತ ಸುರಕ್ಷಿತವಾದ ಕೇಂದ್ರೀಕೃತ ಸರ್ವರ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮೌಲ್ಯಮಾಪಕರು (ಶಿಕ್ಷಕರು) ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಪರದೆಯ ಮೇಲೆ ಉತ್ತರ ಪತ್ರಿಕೆಗಳನ್ನು ನೋಡಿ, ಡಿಜಿಟಲ್ ಪೆನ್ ಅಥವಾ ಮೌಸ್ ಬಳಸಿ ತಪ್ಪು-ಒಪ್ಪುಗಳನ್ನು ಗುರುತಿಸುತ್ತಾರೆ.

ಪ್ರತಿ ಪ್ರಶ್ನೆಗೆ ಬರುವ ಅಂಕಗಳನ್ನು ಸಾಫ್ಟ್‌ವೇರ್‌ನಲ್ಲೇ ನೇರವಾಗಿ ನಮೂದಿಸಲಾಗುತ್ತದೆ. ಸಿಸ್ಟಮ್ ಸ್ವಯಂಚಾಲಿತವಾಗಿ ಒಟ್ಟು ಅಂಕಗಳನ್ನು ಲೆಕ್ಕ ಹಾಕುತ್ತದೆ.

ಮೌಲ್ಯಮಾಪನ ಮುಗಿದ ತಕ್ಷಣ ಅಂಕಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಆಗುವುದರಿಂದ ಫಲಿತಾಂಶ ಬೇಗ ಸಿಗುತ್ತದೆ. ಕಂಪ್ಯೂಟರ್ ತಾನಾಗಿಯೇ ಒಟ್ಟು ಅಂಕಗಳನ್ನು ಕೂಡುವುದರಿಂದ ಶಿಕ್ಷಕರು ಮಾಡುವ ಗಣಿತದ ತಪ್ಪುಗಳು ಇಲ್ಲಿ ಇರುವುದಿಲ್ಲ ಎನ್ನಲಾಗುತ್ತದೆ.

ಸಾಫ್ಟ್‌ವೇರ್‌ನಲ್ಲಿ ಎಲ್ಲ ಪ್ರಶ್ನೆಗಳಿಗೂ ಅಂಕ ನೀಡುವವರೆಗೂ ಸಬ್ಮಿಟ್ ಮಾಡಲು ಸಾಧ್ಯವಾಗದ ಕಾರಣ, ಯಾವುದೇ ಉತ್ತರ ಮೌಲ್ಯಮಾಪನವಾಗದೆ ಬಿಟ್ಟುಹೋಗುವ ಸಾಧ್ಯತೆ ಇರುವುದಿಲ್ಲ. ಭೌತಿಕ ಉತ್ತರ ಪತ್ರಿಕೆಗಳು ಕಳೆದುಹೋಗುವ ಅಥವಾ ಹಾನಿಯಾಗುವ ಭಯ ಇರುವುದಿಲ್ಲ.

ಸಾರ್ಥಕ್ ಸಿದ್ಧಾಂತ್ ಪ್ರಕರಣದಲ್ಲಿ ಉಂಟಾದ ಸಮಸ್ಯೆಗಳೇನು?

ಒಎಸ್‌ಎಂ ತಂತ್ರಜ್ಞಾನ ಒಳ್ಳೆಯದೇ ಆದರೂ, ಸಿಬಿಎಸ್ಇ ಬಳಸಿದ ವೆಂಡರ್ ಸಾಫ್ಟ್‌ವೇರ್‌ನಲ್ಲಿ ಗಂಭೀರ ಲೋಪಗಳಿದ್ದವು ಎಂದು ಸಾರ್ಥಕ್ ಆರೋಪಿಸಿದ್ದಾರೆ.

ಪೇಪರ್‌ಗಳನ್ನು ಸರಿಯಾಗಿ ಸ್ಕ್ಯಾನ್ ಮಾಡದ ಕಾರಣ ಶಿಕ್ಷಕರಿಗೆ ಉತ್ತರಗಳು ಸ್ಪಷ್ಟವಾಗಿ ಕಾಣಿಸದೆ ತಪ್ಪು ಮೌಲ್ಯಮಾಪನವಾಗಿದೆ. ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಅವರಿಗೆ ಅಪೂರ್ಣ ಮತ್ತು ಕತ್ತರಿಸಿದ ಡಿಜಿಟಲ್ ಪ್ರತಿಗಳು ಸಿಕ್ಕಿವೆ. ಸಾಫ್ಟ್‌ವೇರ್ ಸರ್ವರ್‌ಗಳು ಸರಿಯಾಗಿ ಕೆಲಸ ಮಾಡದೆ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಸಾರ್ಥಕ್ ಹೇಳಿದ್ದಾರೆ.
















 

 

 

 

 

  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...