HomeಅಂಕಣಗಳುKarnataka SIR'ಕರ್ನಾಟಕದಲ್ಲಿ SIR' ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

- Advertisement -
- Advertisement -

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಜೂನ್ 30 ರಿಂದ ನಡೆಯುವ ಎಸ್‌ಐಆರ್ (SIR) ಅನ್ನು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಅದಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರ ಸಭೆ ಸ್ಪಷ್ಟ ನಿದರ್ಶನ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವರ ಕಾರ್ಯವೈಖರಿ ಮತ್ತು ಪಕ್ಷದ ಸಂಘಟನೆಗೆ ಗೈರಾಗುವ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸರ್ಕಾರದ ಸಚಿವರು ಮತ್ತು ಶಾಸಕರನ್ನು ನಾನು ಸುಮ್ಮನೆ ಬಿಡುವುದಿಲ್ಲ. ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕೆಲಸ ಮಾಡಲೇಬೇಕು” ಎಂದಿದ್ದಾರೆ.

“ಮೊನ್ನೆ ನಡೆದ ಪ್ರಮುಖ ಸಭೆಗೆ ಹಲವು ಆಫೀಸ್ ಬೇರರ್ಸ್ ಬರಲೇ ಇಲ್ಲ. ಸಮಯ ಕೊಟ್ಟಿದ್ದರೂ ಬೇಜವಾಬ್ದಾರಿ ತೋರಿದ್ದಾರೆ. ಇಂತಹವರನ್ನು ಎಐಸಿಸಿ (AICC) ಒಂದೇ ದಿನದಲ್ಲಿ ಹುದ್ದೆಯಿಂದ ತೆಗೆದುಹಾಕಿದೆ. ನಿರ್ಲಕ್ಷ್ಯ ವಹಿಸಿದರೆ ಜನರಲ್ ಸೆಕ್ರೆಟರಿ, ವೈಸ್ ಪ್ರೆಸಿಡೆಂಟ್‌ಗಳೆಲ್ಲಾ ಒಂದೇ ದಿನದಲ್ಲಿ ‘ಮಾಜಿ’ ಆಗ್ತಾರೆ” ಎಂದು ಎಚ್ಚರಿಸಿದ್ದಾರೆ.

‘ಎಸ್ಐಆರ್’ (ಮತದಾರರ ಪಟ್ಟಿ ಪರಿಷ್ಕರಣೆ/ಶುದ್ಧೀಕರಣ ಪ್ರಕ್ರಿಯೆ) ಕುರಿತು ಮಾತನಾಡಿದ ಅವರು, “ಇದು ನಮಗೆ ಸಿಕ್ಕಿರುವ ದೊಡ್ಡ ಅವಕಾಶ ಹಾಗೂ ಅಷ್ಟೇ ದೊಡ್ಡ ಅಪಾಯ ಕೂಡ ಹೌದು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬರೊಬ್ಬರಿ 90 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟು ರಾಜಕೀಯ ಚದುರಂಗದಾಟ ಆಡಲಾಗಿತ್ತು. ಇದು ಕೇವಲ ತಾಂತ್ರಿಕ ಪ್ರಕ್ರಿಯೆಯಲ್ಲ, ಬದಲಿಗೆ ವಿರೋಧ ಪಕ್ಷಗಳು ಅಥವಾ ವ್ಯವಸ್ಥೆಯು ತಮ್ಮ ಮತಬ್ಯಾಂಕ್ ಅನ್ನು ಧ್ವಂಸಗೊಳಿಸಲು ಬಳಸಬಹುದಾದ ಒಂದು ದೊಡ್ಡ “ಅಪಾಯ” ಎಂಬುದನ್ನು ಅವರು ಮನಗಂಡಿದ್ದಾರೆ.

ಈ ಮೂಲಕ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಎದುರಾಗಬಹುದಾದ ಗಂಭೀರ ಪರಿಣಾಮವನ್ನು ಪಕ್ಷಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕರ್ನಾಟಕದಲ್ಲೂ ಇಂತಹದ್ದೇ ಹುನ್ನಾರ ನಡೆಯುವ ಸಾಧ್ಯತೆಯಿದೆ. ಆದ್ದರಿಂದ ನಮ್ಮ ನಾಯಕರು ಜಾಗೃತರಾಗಿರಬೇಕು” ಎಂದಿದ್ದಾರೆ.

ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೊಸ ನಿಯಮಗಳನ್ನು ತರಲಾಗುವುದು ಎಂದು ಪ್ರಕಟಿಸಿದ ಡಿಕೆಶಿ, “ಎಲ್ಲಾ ಸಚಿವರು ಮತ್ತು ಎಂಎಲ್‌ಎಗಳು ಕೇವಲ ಬೆಂಗಳೂರಿಗೆ ಸೀಮಿತವಾಗದೆ, ತಮಗೆ ವಹಿಸಿದ ಜಿಲ್ಲೆ ಹಾಗೂ ಕ್ಷೇತ್ರಗಳಿಗೆ ಭೇಟಿ ನೀಡಿ ಕಡ್ಡಾಯವಾಗಿ ಸಭೆ ನಡೆಸಬೇಕು. ಬೂತ್ ಮಟ್ಟದ ಏಜೆಂಟರಿಗೆ (BLA) ತಕ್ಷಣವೇ ಸೂಕ್ತ ತರಬೇತಿ ನೀಡಿ, ಅವರು ಸರ್ಕಾರಿ ಅಧಿಕಾರಿಗಳ (BLO) ಜೊತೆಗೂಡಿ ಮತದಾರರ ಪಟ್ಟಿಯನ್ನು ಮರುಪರಿಶೀಲಿಸುವಂತೆ ನೋಡಿಕೊಳ್ಳಬೇಕು” ಎಂದು ಕಾರ್ಯಕರ್ತರು ಹಾಗೂ ನಾಯಕರಿಗೆ ಖಡಕ್ ಆದೇಶ ನೀಡಿದ್ದಾರೆ.

ಸಾಮಾನ್ಯವಾಗಿ ಕಾರ್ಯಕರ್ತರು ಮತ್ತು ನಾಯಕರು “ನಮಗೆ 25 ವರ್ಷಗಳಿಂದ ವೋಟ್ ಇದೆ, ನಮ್ಮ ತಾತನ ಕಾಲದಿಂದಲೂ ಇಲ್ಲೇ ವೋಟ್ ಇದೆ, ಮ್ಯಾಪಿಂಗ್ 80-90% ಮುಗಿದಿದೆ” ಎಂದು ಅಸಡ್ಡೆ ತೋರಿಸದೆ, ಎಸ್‌ಐಆರ್ ಎಂದರೆ ಹೊಸದಾಗಿ ನಡೆಯುವ ವಿಶೇಷ ಪರಿಷ್ಕರಣೆ (Special Revision) ಆಗಿರುವುದರಿಂದ, ಪ್ರತಿ ವೋಟನ್ನು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹಳೆಯ ದಾಖಲೆಗಳ ಮೇಲಿನ ಅತಿಯಾದ ಆತ್ಮವಿಶ್ವಾಸ ಮತದಾನದ ಹಕ್ಕಿಗೆ ಮುಳುವಾಗಬಾರದು ಎಂದಿದ್ದಾರೆ.

ಶಿವಕುಮಾರ್ ಅವರು ಮತದಾರರನ್ನು ಜಾಗೃತಗೊಳಿಸಲು ಅತ್ಯಂತ ಚಾಣಾಕ್ಷ ರಾಜಕೀಯ ತಂತ್ರವೊಂದನ್ನು ಬಳಸಿದ್ದಾರೆ. “ನಿಮ್ಮ ವೋಟ್ ಲಿಸ್ಟ್‌ನಲ್ಲಿ ಹೆಸರಿಲ್ಲದಿದ್ದರೆ, ನಿಮಗೆ ಗೃಹಲಕ್ಷ್ಮಿ ಇಲ್ಲ, ಗೃಹಜ್ಯೋತಿ ಇಲ್ಲ, ಅನ್ನಭಾಗ್ಯ ಇಲ್ಲ” ಎಂದು ಹೇಳುವ ಮೂಲಕ, ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳುವುದನ್ನು ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಲಿಂಕ್ ಮಾಡಿದ್ದಾರೆ. ಇದು ಕಾರ್ಯಕರ್ತರು ಸಾರ್ವಜನಿಕರ ಮನೆ ಬಾಗಿಲಿಗೆ ಹೋದಾಗ, ಜನರೇ ಸ್ವಯಂಪ್ರೇರಿತರಾಗಿ ತಮ್ಮ ವೋಟನ್ನು ಪರಿಶೀಲಿಸಿಕೊಳ್ಳುವಂತೆ ಮಾಡುವ ಅತ್ಯಂತ ಪರಿಣಾಮಕಾರಿ ಅಸ್ತ್ರವಾಗಿದೆ.

ಪ್ರತಿ ಜಿಲ್ಲೆ ಮತ್ತು ಕ್ಷೇತ್ರಗಳಿಗೆ ಶಾಸಕರು ಮತ್ತು ಮಂತ್ರಿಗಳು ಕಡ್ಡಾಯವಾಗಿ ಭೇಟಿ ನೀಡಿ ಮೀಟಿಂಗ್ ಮಾಡಬೇಕು. ಬೂತ್ ಮಟ್ಟದ ಏಜೆಂಟ್‌ಗಳಿಗೆ ಸೂಕ್ತ ತರಬೇತಿ ನೀಡಿ, ಅವರು ಬಿಎಲ್‌ಒ (BLO – Booth Level Officers) ಗಳ ಜೊತೆ ಮನೆ ಮನೆಗೆ ಹೋಗುವಂತೆ ನೋಡಿಕೊಳ್ಳುವುದು. ಮಹಾನಗರ ಪಾಲಿಕೆ (Corporation) ಚುನಾವಣೆಗಳ ಜವಾಬ್ದಾರಿಯನ್ನು ಮಂತ್ರಿಗಳಿಗೆ ಹಂಚಿ, ವಿಶೇಷ ತಂಡಗಳನ್ನು ನೇಮಕ ಮಾಡಲಾಗುತ್ತಿದೆ.

ಈ ಹಿಂದೆ ಎಸ್‌ಆರ್‌ಐ ಮೀಟಿಂಗ್‌ಗೆ ಬರದೇ ನಿರ್ಲಕ್ಷ್ಯ ವಹಿಸಿದ್ದ ಎಐಸಿಸಿ (AICC) ಮಟ್ಟದಲ್ಲಿ ಹುದ್ದೆಗಳಿಂದ ತೆಗೆದುಹಾಕಿದ್ದನ್ನು ಉಲ್ಲೇಖಿಸಿ, ಕೆಲಸ ಮಾಡದಿದ್ದರೆ ಕಠಿಣ ಕ್ರಮ ಗ್ಯಾರಂಟಿ ಎಂಬ ಸಂದೇಶ ರವಾನಿಸಿದ್ದಾರೆ. ಅದೇ ರೀತಿ ದೇವನಹಳ್ಳಿಯಲ್ಲಿ ನಡೆದ ಎಸ್‌ಐಆರ್ ಕಾರ್ಯಗಾರಕ್ಕೆ ಗೈರಾದ ಪ್ರಮುಖ ನಾಯಕರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ.

“ನನ್ನ ಹಿಂದೆ ಸುತ್ತಾಡುವುದು ಅಥವಾ ದೊಡ್ಡ ನಾಯಕರ ಹಿಂದೆ ತಿರುಗಾಡಿ ಟಿಕೆಟ್ ಕೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾರು ವಾರ್ಡ್‌ಗಳಲ್ಲಿ, ಬೂತ್ ಮಟ್ಟದಲ್ಲಿ ಮನೆ ಮನೆಗೆ ಹೋಗಿ ಎಸ್‌ಐಆರ್ ಕೆಲಸ ಮಾಡಿ ವೋಟ್ ಉಳಿಸುತ್ತಾರೋ, ಅವರಿಗೆ ಮಾತ್ರ ಟಿಕೆಟ್” ಎಂದು ಹೇಳಿದ್ದಾರೆ. ಇದು ಅವರು ಪಕ್ಷದ ಗೆಲುವಿಗಾಗಿ ಎಷ್ಟು ಗಂಭೀರ ಹಾಗೂ ಪಾರದರ್ಶಕ ಪ್ರಯತ್ನ ಮಾಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ.

ಡಿ. ಕೆ. ಶಿವಕುಮಾರ್ ಅವರು ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿನ ಗೊಂದಲಗಳನ್ನು ಕೇವಲ ಆಡಳಿತಾತ್ಮಕ ವಿಷಯವಾಗಿ ನೋಡದೆ. ಭವಿಷ್ಯವನ್ನು ನಿರ್ಧರಿಸುವ ” ಹೋರಾಟ” ಎಂಬಂತೆ ಪರಿಗಣಿಸಿದ್ದಾರೆ. ತಳಮಟ್ಟದ ಸಣ್ಣ ತಪ್ಪುಗಳೂ ಸಹ ದೊಡ್ಡ ರಾಜಕೀಯ ನಷ್ಟಕ್ಕೆ ಕಾರಣವಾಗಬಹುದು ಎಂಬುದನ್ನು ಅರಿತು, ಅವರು ಇಡೀ ಪಕ್ಷದ ಯಂತ್ರಾಂಗವನ್ನು ಕಣಕ್ಕಿಳಿಸಲು ತೋರುತ್ತಿರುವ ಉತ್ಸಾಹ ರಾಜ್ಯದಲ್ಲಿ ನಡೆಯುವ ಎಸ್‌ಐಆರ್ ಮಹತ್ವ ಪಡೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...