Homeಮುಖಪುಟಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

- Advertisement -
- Advertisement -

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ. ಇಂತಹ ನಡವಳಿಕೆಯು ‘ಫ್ಯೂಡಲ್’ ಮನಸ್ಥಿತಿಯನ್ನು ನೆನಪಿಸುತ್ತದೆ. ಹೌದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂತಹ ನಡವಳಿಕೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ಟೀಕೆಗೆ ಗುರಿಯಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೇಬನ್ನು ಕಚ್ಚಿ, ಬಳಿಕ ಅದನ್ನು ನೆರೆದಿದ್ದ ಜನರತ್ತ ಎಸೆಯುತ್ತಿರುವ ವಿಡಿಯೋ

ಕನಕಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೇಬನ್ನು ಕಚ್ಚಿ, ಬಳಿಕ ಅದನ್ನು ನೆರೆದಿದ್ದ ಜನರತ್ತ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಡಿ.ಕೆ. ಶಿವಕುಮಾರ್ ಅವರು ಕನಕಪುರದ ಹಾರೋಹಳ್ಳಿಗೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದ್ದು, ಅಲ್ಲಿನ ಬೆಂಬಲಿಗರು ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಅವರಿಗೆ ತಾಜಾ ಸೇಬು ಮತ್ತು ಹೂವುಗಳಿಂದ ಮಾಡಿದ ಬೃಹತ್‌ “ಗಜಮಾಲೆ”ಯನ್ನು ಹಾಕಿ ಬರಮಾಡಿಕೊಂಡಿದ್ದರು.

ವೈರಲ್ ವಿಡಿಯೋದಲ್ಲಿ, ಶಿವಕುಮಾರ್ ಅವರು ಆ ಗಜಮಾಲೆಯಿಂದ ಸೇಬುಗಳನ್ನು ಕಿತ್ತು, ಅದಕ್ಕೊಂದು ಕಚ್ಚು ಹಾಕಿ, ನಂತರ ಅಲ್ಲಿ ನೆರೆದಿದ್ದ ಬೆಂಬಲಿಗರ ಕಡೆಗೆ ಎಸೆಯುತ್ತಿರುವುದನ್ನು ಕಾಣಬಹುದು. ಅಲ್ಲಿ ನೆರೆದಿದ್ದ ಜನರೂ ಸಹ ಅಷ್ಟೇ ಉತ್ಸಾಹದಿಂದ, ಗಾಳಿಯಲ್ಲಿ ತೇಲಿಬರುತ್ತಿದ್ದ ಆ ಸೇಬುಗಳನ್ನು ಹಿಡಿಯಲು ಮುಗಿಬಿದ್ದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವು ಬೆಂಬಲಿಗರು ಇದನ್ನು “ಜನರ ಮೇಲಿನ ಪ್ರೀತಿ ಮತ್ತು ಸಹಜ ಒಡನಾಟ” ಎಂದು ಬಣ್ಣಿಸಿದರೆ, ವಿರೋಧಿಗಳು ಮತ್ತು ವಿಮರ್ಶಕರು “ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೀಗೆ ಎಂಜಲು ಮಾಡಿದ ಆಹಾರವನ್ನು ಎಸೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸುತ್ತಿದ್ದಾರೆ.

ಈ ವಿಡಿಯೋಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು, “ಡಿ.ಕೆ. ಶಿವಕುಮಾರ್ ಅವರು ತಮ್ಮನ್ನು ತಾವೇ ದೇವರೆಂದು ಅಂದುಕೊಂಡಿದ್ದಾರೆಯೇ? ಸೇಬಿನ ಮಾಲೆಯನ್ನು ಕಚ್ಚಿ ಅದನ್ನೇನೋ ದೇವರ ಪ್ರಸಾದ ಎಂಬಂತೆ ಜನರಿಗೆ ಹಂಚುತ್ತಿದ್ದಾರೆ. ಇದು ಯಾವ ಸೀಮೆಯ ನ್ಯಾಯ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪುನರಾವರ್ತನೆಯಾಗುತ್ತಿರುವ ವಿವಾದಾತ್ಮಕ ನಡವಳಿಕೆ

ಸಿಎಂ ಡಿ.ಕೆ. ಶಿವಕುಮಾರ್ ಅವರ ಸಾರ್ವಜನಿಕ ವರ್ತನೆಗಳು ವಿವಾದಕ್ಕೆ ಇಡಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ತಮ್ಮನ್ನು ಸೆಲ್ಫಿ ಕೇಳಲು ಬಂದ ಅಭಿಮಾನಿಯ ಕೈಗೆ ಹೊಡೆದಿದ್ದು, ಪಕ್ಷದ ಕಾರ್ಯಕರ್ತರನ್ನು ಸಾರ್ವಜನಿಕವಾಗಿ ತಳ್ಳಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದ್ದವು. ಈಗ ಮುಖ್ಯಮಂತ್ರಿಯಾದ ಮೇಲೂ ಕಚ್ಚಿದ ಹಣ್ಣನ್ನು ಜನರತ್ತ ಎಸೆದಿರುವುದು ಅವರ ಫ್ಯೂಡಲ್ ಮತ್ತು ಉಡಾಫೆಯ ವರ್ತನೆ ಮತ್ತೆ ಪುನರಾವರ್ತನೆಯಾಗುತ್ತಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

ಅಧಿಕಾರ ಮತ್ತು ಜನಪ್ರಿಯತೆ ಹೆಚ್ಚಾದಂತೆ ವಿನಯತೆ ಕೂಡ ಹೆಚ್ಚಾಗಬೇಕು. ಕರ್ನಾಟಕ ರಾಜ್ಯವೊಂದರ ಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ರವರ ಬೇಜವಾಬ್ದಾರಿ ವರ್ತನೆಗಳು ಅವರ ಇಡೀ ರಾಜಕೀಯ ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆಯಾಗುತ್ತವೆ. ಇನ್ನಾದರೂ ಜನಪ್ರತಿನಿಧಿಗಳು ಸಾರ್ವಜನಿಕ ವೇದಿಕೆಗಳಲ್ಲಿ ತಮ್ಮ ಬಾಡಿ ಲಾಂಗ್ವೇಜ್ ಮತ್ತು ನಡವಳಿಕೆಗಳ ಬಗ್ಗೆ ಸ್ವಯಂ ವಿಮರ್ಶೆ ಮಾಡಿಕೊಳ್ಳಬೇಕಾದ ತುರ್ತು ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...