Homeದಲಿತ್ ಫೈಲ್ಸ್ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

- Advertisement -
- Advertisement -

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ ಯುವಕನನ್ನು ಅತ್ಯಂತ ಕ್ರೂರವಾಗಿ ಥಳಿಸಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಾಳಿಯಲ್ಲಿ ಮೃತನ ಸ್ನೇಹಿತ ಕೂಡ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತನನ್ನು ದೇವಲ್ ಗ್ರಾಮದ ನಿವಾಸಿ ಕೇತನ್ ಲಾಲ್ (18) ಎಂದು ಗುರುತಿಸಲಾಗಿದೆ. ದಾಳಿಯಲ್ಲಿ ಬದುಕುಳಿದ ಆತನ ಸ್ನೇಹಿತ ದಿವಾಕರ್ ದಿಮ್ರಿ ತೀವ್ರ ಗಾಯಗೊಂಡಿದ್ದು, ಸದ್ಯ ಬೌರಾರಿಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತ ಕೇತನ್ ಲಾಲ್ ತಂದೆ ಧನಪಾಲ್ ಲಾಲ್ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಈ ಭೀಕರ ಘಟನೆಯು ಭಾನುವಾರ ರಾತ್ರಿ ಖೋಲ್ಗಢ ಗ್ರಾಮದಲ್ಲಿ ನಡೆದಿದೆ. ಕೇತನ್ ಕಳೆದ ಆರು ತಿಂಗಳಿನಿಂದ ಖೋಲ್ಗಢ ಗ್ರಾಮದ ಮೇಲ್ಜಾತಿಯ ಯುವತಿಯೊಬ್ಬಳೊಂದಿಗೆ ಸ್ನೇಹ ಹೊಂದಿದ್ದ ಎನ್ನಲಾಗಿದೆ.

ಭಾನುವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ, ಯುವತಿಯು ಫೋನ್ ಮಾಡಿ ಕೇತನ್‌ನನ್ನು ತನ್ನ ಗ್ರಾಮಕ್ಕೆ ಬರುವಂತೆ ಕೇಳಿಕೊಂಡಿದ್ದಾಳೆ. ಅದರಂತೆ ಕೇತನ್ ತನ್ನ ಸ್ನೇಹಿತ ದಿವಾಕರ್ ಜೊತೆ ಖೋಲ್ಗಢ ಗ್ರಾಮಕ್ಕೆ ಹೋಗಿದ್ದಾನೆ. ಆದರೆ, ಅವರು ಅಲ್ಲಿಗೆ ತಲುಪುತ್ತಿದ್ದಂತೆ ಯುವತಿಯ ಕುಟುಂಬದ ಸದಸ್ಯರು ಇಬ್ಬರನ್ನೂ ಹಿಡಿದು ಕೋಣೆಯೊಂದರಲ್ಲಿ ಕೂಡಿ ಹಾಕಿದ್ದಾರೆ. ನಂತರ ಇಬ್ಬರ ಮೇಲೂ ಕೋಲು ಹಾಗೂ ಮಾರಕಾಸ್ತ್ರಗಳಿಂದ ಮೃಗೀಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಮರುದಿನ ಅಂದರೆ ಸೋಮವಾರ ಮುಂಜಾನೆ, ಘಟನೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯಶ್ವೀರ್ ಸಿಂಗ್ ಪನ್ವಾರ್, ಕೇತನ್ ತಂದೆ ಧನಪಾಲ್ ಲಾಲ್ ಅವರಿಗೆ ಫೋನ್ ಕರೆ ಮಾಡಿ, ನಿಮ್ಮ ಮಗನ ಸ್ಥಿತಿ ಗಂಭೀರವಾಗಿದೆ, ಬಂದು ಕರೆದುಕೊಂಡು ಹೋಗಿ ಎಂದು ತಿಳಿಸಿದ್ದಾನೆ. ಧನಪಾಲ್ ಅವರು ತಕ್ಷಣ ಸ್ಥಳಕ್ಕೆ ಧಾವಿಸಿದಾಗ ಮಗ ಕೇತನ್ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಚೌಂಡ್ ಲಂಬಗಾಂವ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಕರೆದೊಯ್ಯಲಾಯಿತಾದರೂ, ಆತ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಕೊಲೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರು ಹಾಗೂ ಮೃತನ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವವರೆಗೆ ಶವವನ್ನು ಆಸ್ಪತ್ರೆಯಿಂದ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. 

ಈ ಘಟನೆಯ ಕುರಿತು ಮಾಹಿತಿ ನೀಡಿರುವ ತೆಹ್ರಿ ಗರ್ವಾಲ್ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಶ್ವೇತಾ ಚೌಬೆ ಅವರು, “ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯಶ್ವೀರ್ ಸಿಂಗ್ ಪನ್ವಾರ್ ಎಂಬಾತನನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಘಟನೆಗೆ ವ್ಯಾಪಕ ಸಾಮಾಜಿಕ ಆಕ್ರೋಶ ವ್ಯಕ್ತವಾಗಿದ್ದು, ಸಿಪಿಐ (ಎಂಎಲ್) ಲಿಬರೇಶನ್ ಕೇಂದ್ರ ಸಮಿತಿ ಸದಸ್ಯ ಹಾಗೂ ಉತ್ತರಾಖಂಡ ರಾಜ್ಯ ಕಾರ್ಯದರ್ಶಿ ಇಂದ್ರೇಶ್ ಮೈಖುರಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

“ಜಾತಿವಾದಿ ಮನಸ್ಥಿತಿಯು ಮನುಷ್ಯರನ್ನು ಎಷ್ಟು ಹಿಂಸಾತ್ಮಕ ಮತ್ತು ಅನಾಗರಿಕರನ್ನಾಗಿ ಮಾಡುತ್ತದೆ ಎಂಬುದಕ್ಕೆ ಈ ಕೊಲೆಯೇ ಪ್ರತ್ಯಕ್ಷ ಸಾಕ್ಷಿ. 2022 ರಲ್ಲಿ ಮೇಲ್ಜಾತಿಯ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ದಲಿತ ರಾಜಕೀಯ ಕಾರ್ಯಕರ್ತ ಜಗದೀಶ್ ಚಂದ್ರ ಅವರನ್ನು ಇದೇ ರೀತಿ ಹತ್ಯೆ ಮಾಡಲಾಗಿತ್ತು. ಈಗ 18 ವರ್ಷದ ಯುವಕನ ಜೀವ ತೆಗೆಯಲಾಗಿದೆ” ಎಂದು ಅವರು ಹಳೆಯ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

ಮುಂದುವರಿದು ಮಾತನಾಡಿದ ಅವರು, “ಯಶ್ವೀರ್ ಪನ್ವಾರ್ ಮತ್ತು ಆತನ ಸಹಚರರ ರಕ್ತನಾಳಗಳಲ್ಲಿ ಜಾತಿವಾದದ ವಿಷ ಆಳವಾಗಿ ಹರಿಯುತ್ತಿತ್ತು. ಈ ಕೃತ್ಯದಿಂದ ಅವರು ವೀರರೇನೂ ಆಗಲಿಲ್ಲ, ಬದಲಿಗೆ ಸಮಾಜದ ಕ್ರೂರ ಕೊಲೆಗಾರರಾಗಿದ್ದಾರೆ. ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಕೇತನ್ ಕುಟುಂಬಕ್ಕೆ ನ್ಯಾಯ ಸಿಗಬೇಕು” ಎಂದು ಒತ್ತಾಯಿಸಿದ್ದಾರೆ.

ಉತ್ತರಾಖಂಡದಲ್ಲಿ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ: ಆತಂಕಕಾರಿ ಅಂಕಿ-ಅಂಶ

‘ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ (NCDHR) ಇತ್ತೀಚೆಗೆ ಬಿಡುಗಡೆ ಮಾಡಿರುವ “ಭಾರತದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ಅಪರಾಧಗಳ ವಿಶ್ಲೇಷಣೆ (2019-2023)” ವರದಿಯು ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಆತಂಕಕಾರಿ ಚಿತ್ರಣವನ್ನು ತೆರೆದಿಟ್ಟಿದೆ.

ಈ ರಾಷ್ಟ್ರೀಯ ವರದಿಯ ಪ್ರಕಾರ, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರಾಖಂಡ ರಾಜ್ಯವು ಭಾರತೀಯ ರಾಜ್ಯಗಳ ಪೈಕಿ 18ನೇ ಸ್ಥಾನದಲ್ಲಿದೆ. ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧ ನಡೆಯುವ ಒಟ್ಟು ಅಪರಾಧಗಳ ಪೈಕಿ ಶೇಕಡಾ 5.4 ರಷ್ಟು ಪ್ರಕರಣಗಳು ಉತ್ತರಾಖಂಡವೊಂದರಲ್ಲೇ ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಅಷ್ಟೇ ಅಲ್ಲದೆ, ಕಳೆದ ಐದು ವರ್ಷಗಳ ಅವಧಿಯನ್ನು ಗಮನಿಸಿದರೆ ರಾಜ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವುದು ಸ್ಪಷ್ಟವಾಗುತ್ತದೆ. 2019 ರಿಂದ 2023 ರ ನಡುವಿನ ಅವಧಿಯಲ್ಲಿ ಉತ್ತರಾಖಂಡದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ಮತ್ತು ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 21.4 ರಷ್ಟು ಭಾರಿ ಹೆಚ್ಚಳವಾಗಿದೆ ಎಂದು ವರದಿ ಸವಿಸ್ತಾರವಾಗಿ ಉಲ್ಲೇಖಿಸಿದೆ.

ಈ ಅಂಕಿ-ಅಂಶಗಳು ಉತ್ತರಾಖಂಡದಲ್ಲಿ ಹಿಂದುಳಿದ ವರ್ಗಗಳ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯು ತೀವ್ರ ಸವಾಲಾಗಿ ಪರಿಣಮಿಸಿರುವುದನ್ನು ಎತ್ತಿ ತೋರಿಸುತ್ತಿವೆ. ಸದ್ಯ ಪೊಲೀಸರು ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಮಧ್ಯಂತರ ಚುನಾವಣೆ : ಮೇಲ್ಮನೆ ಸೆನೆಟ್‌ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ, ಕೆಳಮನೆಯಲ್ಲೂ ಮುನ್ನಡೆ

ಅಮೆರಿಕದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ 2026ರ ಮಧ್ಯಂತರ ಚುನಾವಣೆಗಳ (US Midterm Elections) ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಪ್ರಸ್ತುತ ಮತ ಎಣಿಕೆ ಕಾರ್ಯ ಚುರುಕಿನಿಂದ ಸಾಗಿದೆ. ಹಾಲಿ ರಿಪಬ್ಲಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...