Homeಮುಖಪುಟಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

- Advertisement -
- Advertisement -

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. “ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾಪವನ್ನು ಯಾವುದೇ ಹಂತದಲ್ಲೂ ಚರ್ಚಿಸಿಲ್ಲ” ಎಂದು ಟಿಎಂಸಿ ಸ್ಪಷ್ಟಪಡಿಸಿದೆ. ರಾಜ್ಯ ಮಟ್ಟದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ಒಕ್ಕೂಟದ (ಇಂಡಿಯಾ ಕೂಟ) ಮಿತ್ರಪಕ್ಷಗಳು ಒಟ್ಟಾಗಿ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವತ್ತ ಮಾತ್ರ ಗಮನ ಹರಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಉಂಟಾಗಿರುವ ಬೆನ್ನಲ್ಲೇ ಟಿಎಂಸಿ ಈ ಸ್ಪಷ್ಟನೆ ನೀಡಿದೆ. ಸೋಮವಾರವಷ್ಟೇ ಸುಖೇಂದು ರಾಯ್ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಬುಧವಾರ (ಇಂದು) ಮತ್ತೊಬ್ಬ ಪ್ರಮುಖ ನಾಯಕಿ ಸುಶ್ಮಿತಾ ದೇವ್ ಅವರು ತಮ್ಮ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್-ಟಿಎಂಸಿ ವಿಲೀನದ ಮಾತುಕತೆಯ ಭಾಗವಾಗಿ ಸೋನಿಯಾ ಗಾಂಧಿ ಅವರು ಮಮತಾ ಬ್ಯಾನರ್ಜಿಗೆ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನವನ್ನು ಹಾಗೂ ಅಭಿಷೇಕ್ ಬ್ಯಾನರ್ಜಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ನೀಡಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ (ಮುಖ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ) ವರದಿಯಾಗಿತ್ತು. ಆದರೆ, ಟಿಎಂಸಿ ಮೂಲಗಳು ಈ ವರದಿಗಳನ್ನು ಸುಳ್ಳು ಎಂದು ಹೇಳಿವೆ.

ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ವಿರೋಧ ಪಕ್ಷಗಳ ‘ಇಂಡಿಯಾ’ (INDIA) ಒಕ್ಕೂಟದ ಸಭೆಯಲ್ಲಿ ಒಗ್ಗಟ್ಟು ಮತ್ತು ಉತ್ತಮ ಸಮನ್ವಯಕ್ಕೆ ಒತ್ತು ನೀಡಿದ ಮರುದಿನವೇ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಅವರ ‘ಜನಪಥ್’ ನಿವಾಸದಲ್ಲಿ ಭೇಟಿಯಾದರು. “ಇಂಡಿಯಾ ಒಕ್ಕೂಟವು ಒಗ್ಗಟ್ಟಿನಿಂದ ಮತ್ತು ಬಲವಾಗಿ ಒಟ್ಟಿಗೆ ಕೆಲಸ ಮಾಡಲಿದೆ,” ಎಂದು ಮಮತಾ ಅವರು ಸೋನಿಯಾ ಗಾಂಧಿ ಅವರಿಗೆ ತಿಳಿಸಿದರು.

ಇತ್ತೀಚಿನ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಎದುರು ಟಿಎಂಸಿ ಸೋಲು ಕಂಡ ನಂತರ, ಪಕ್ಷದ ಹಲವು ನಾಯಕರು ಪಕ್ಷವನ್ನು ತೊರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತು ವಿರೋಧ ಪಕ್ಷಗಳ ಒಕ್ಕೂಟದ ಸಭೆಯ ನಂತರ, ಎರಡೂ ಪಕ್ಷಗಳ ಮುಂದಿನ ಕಾರ್ಯತಂತ್ರದ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಪಿಟಿಐ (PTI) ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಸಭೆ ನಡೆಸಿದರು. ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಮನ್ವಯವನ್ನು ಬಲಪಡಿಸಲು ಮತ್ತು ಒಗ್ಗಟ್ಟನ್ನು ಕಾಯ್ದುಕೊಳ್ಳಲು ಈ ಸಭೆ ನಡೆಯಿತು. ಮಮತಾ ಬ್ಯಾನರ್ಜಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಮರುದಿನವೇ ’10 ಜನಪಥ್’ನಲ್ಲಿ ಈ ಸಭೆ ನಡೆದಿದೆ. ರಾಹುಲ್ ಮತ್ತು ಅಭಿಷೇಕ್ ಬ್ಯಾನರ್ಜಿ ನಡುವಿನ ಈ ಭೇಟಿಯನ್ನು ಕಾಂಗ್ರೆಸ್ ಮತ್ತು ಟಿಎಂಸಿ ನಡುವಿನ ನಿರಂತರ ಸಮಾಲೋಚನೆಯ ಭಾಗವಾಗಿ ನೋಡಲಾಗುತ್ತಿದೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಟಿಎಂಸಿ ಒಳಗಡೆ ಆಂತರಿಕ ಬಂಡಾಯ ಕಾಣಿಸಿಕೊಂಡಿರುವ ಸಮಯದಲ್ಲಿಯೇ ಈ ಸಭೆ ನಡೆದಿದೆ. ಸೋಮವಾರ ನಡೆದ ಇಂಡಿಯಾ ಒಕ್ಕೂಟದ ಸಭೆಯಲ್ಲಿ, ಬಿಜೆಪಿಯನ್ನು ಎದುರಿಸಲು ಮಿತ್ರಪಕ್ಷಗಳ ನಡುವೆ ಹೆಚ್ಚಿನ ಸಮನ್ವಯ ಮತ್ತು ಒಗ್ಗಟ್ಟಿನ ಅಗತ್ಯವಿದೆ ಎಂದು ವಿರೋಧ ಪಕ್ಷದ ನಾಯಕರು ಒತ್ತಿಹೇಳಿದ್ದರು.

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಅವರು ಬುಧವಾರ (ಇಂದು) ಪಕ್ಷ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ಇದು ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಸುಶ್ಮಿತಾ ದೇವ್ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರು ಅಂಗೀಕರಿಸಿದ್ದಾರೆ.

“ರಾಜ್ಯಸಭೆಯಲ್ಲಿ ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸುತ್ತಿದ್ದ ಚುನಾಯಿತ ಸದಸ್ಯೆ ಸುಶ್ಮಿತಾ ದೇವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಸಭೆಯ ಅಧ್ಯಕ್ಷರು ಜೂನ್ 10, 2026 ರಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ,” ಎಂದು ರಾಜ್ಯಸಭಾ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

2021 ರಲ್ಲಿ ಕಾಂಗ್ರೆಸ್ ತೊರೆದು ಟಿಎಂಸಿ ಸೇರಿದ್ದ ಸುಶ್ಮಿತಾ ದೇವ್, ರಾಜೀನಾಮೆ ನೀಡಿದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿದ್ದು, ಅವರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಬಗ್ಗೆ ಅಥವಾ ತಮ್ಮ ಮುಂದಿನ ರಾಜಕೀಯ ಯೋಜನೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ದೇವ್, “ನಾನು ಎಂತಹ ರಾಜಕೀಯ ಮಾಡಬೇಕು ಮತ್ತು ನನ್ನ ನಾಯಕ ಯಾರಾಗಬೇಕು ಎಂಬುದು ನನ್ನ ವೈಯಕ್ತಿಕ ನಿರ್ಧಾರ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...