HomeಅಂಕಣಗಳುKarnataka against SIRವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

- Advertisement -
- Advertisement -

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು.

ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ ಗಣಿಹಾರ, ಎಸ್‌ಐಆರ್‌ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಲು ಹೊರಟಿರುವ ಜಾಥಾಗೆ ಶುಭವಾಗಲಿ ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಕನ್ನಿ ಮಾತನಾಡಿ, ಎಸ್‌ಐಆರ್ ಏನೆಂದು ಜನರಿಗೆ ಗೊತ್ತಿಲ್ಲ. ಎಸ್‌ಐಆರ್ ಅನ್ನು ಸರ್ ಎನ್ನುತ್ತಾ, ಹಾಗಂದ್ರೆ ಏನು ಎಂದು ಕೇಳುತ್ತಿದ್ದಾರೆ. ಹಾಗಾಗಿ, ಅವರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಸುಮಾರು 150 ಜನ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಎಸ್‌ಐಆರ್ ವಿರೋಧಿ ಒಕ್ಕೂಟ ಜೂನ್ 13ರಿಂದ 18ರವರೆಗೆ ರಾಜ್ಯದ ಕನಿಷ್ಠ 30 ಜಿಲ್ಲೆಗಳ ಸುಮಾರು 100 ತಾಲೂಕುಗಳಲ್ಲಿ ಎಸ್‌ಐಆರ್ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ತಲಾ ಆರು ಜಿಲ್ಲೆಗಳನ್ನು ಒಳಗೊಂಡ ಒಟ್ಟು ಐದು ಮಾರ್ಗಗಳಲ್ಲಿ ಇಂದು ಏಕಕಾಲಕ್ಕೆ ಜಾಥಾಗೆ ಚಾಲನೆ ನೀಡಲಾಗಿದೆ ಎಂದು ವಿವರಿಸಿದರು.

ವಿಜಯಪುರದಲ್ಲಿ ಇಂದು ಚಾಲನೆ ಪಡೆದುಕೊಂಡಿರುವ ಜಾಥಾ ನಾಳೆ (ಜೂ.14) ಬಾಗಲಕೋಟೆ, ಜೂ. 15 ಬೆಳಗಾವಿ, ಜೂ.16 ಧಾರವಾಡ, ಜೂ.17ಂದು ಗದಗ ಜಿಲ್ಲೆಗಳಲ್ಲಿ ಸಂಚರಿಸಿ, ಜೂ.18ರಂದು ಹಾವೇರಿಯಲ್ಲಿ ಸಮಾಪ್ತಿಯಾಗಲಿ. ಜೂ.20ರಂದು ಬೆಂಗಳೂರಿನಲ್ಲಿ ಎಸ್‌ಐಆರ್ ವಿರುದ್ದ ಬೃಹತ್ ಪ್ರತಿರೋಧ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಎರಡನೇ ಹಂತದಲ್ಲಿ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ನಡೆದಿದೆ. ಈ ರಾಜ್ಯಗಳಲ್ಲಿ ಸುಮಾರು 6 ಕೋಟಿ 50 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಎಸ್‌ಐಆರ್‌ನಲ್ಲಿ ಜನರ ಬಳಿ ಇಲ್ಲದ ದಾಖಲೆಗಳನ್ನು ಕೇಳಲಾಗ್ತಿದೆ. ಈ ಮೂಲಕ ಅವರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗ್ತಿದೆ. ನಮ್ಮ ದೇಶದಲ್ಲಿ ಶೇಕಡ 36.5 ಜನರಲ್ಲಿ ಮಾತ್ರ ದಾಖಲೆಗಳಿಗೆ. ದಾಖಲೆಗಳು ಇಲ್ಲದವರು ಶೇಕಡ 63.5ರಷ್ಟಿದ್ದಾರೆ. ಬಡವರು, ದಲಿತರು, ಕೂಲಿ ಕಾರ್ಮಿಕರು ಎಲ್ಲಿಂದ ದಾಖಲೆಗಳನ್ನು ಕೊಡಬೇಕು ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಎಸ್‌ಐಆರ್ ಮೂಲಕ 50 ಲಕ್ಷಕ್ಕೂಹೆಚ್ಚು ಜನರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕುವ ಸಾಧ್ಯತೆ ಇದೆ. ಇದರ ವಿರುದ್ದ ನಾವು ಹೋರಾಟ ರೂಪಿಸುವ ಅಗತ್ಯವಿದೆ. ಸಂವಿಧಾನದ ಆಶಯಗಳನ್ನು ಕಾಪಾಡುವ ಜವಬ್ದಾರಿ ನಮ್ಮಲಿದೆ ಎಂದು ಜನರನ್ನು ಎಚ್ಚರಸಿದರು.

ಅಖಂಡ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ಎಸ್‌ಐಆರ್ ಮೂಲಕ ಜನರ ಮತದಾನದ ಹಕ್ಕನ್ನು ಕಸಿಯಲು ಚುನಾವಣಾ ಆಯೋಗ ಷಡ್ಯಂತ್ರ ರೂಪಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಈ ಮೂಲಕ ಪ್ರಯತ್ನಿಸುತ್ತಿದೆ. ನಮ್ಮನ್ನು ಅಳುವ ರಾಜಕಾರಣಿಗಳನ್ನು ಓಟು ಹಾಕಿ ಗೆಲ್ಲಿಸುವಾಗ ನಾವು ಅವರ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ. ಆದರೆ, ನಾವು ಓಟು ಹಾಕಿ ಗೆಲ್ಲಸಿದವರು ನಮ್ಮ ಪರಿಶೀಲನೆ ಮಾಡಲು ಹೊರಟಿದ್ದಾರೆ. ಮುಂದೆ ನಾವು ಎಂಪಿ, ಎಂಎಲ್‌ಗಳನ್ನು ನಾವು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ದೇಶದ ಇಂದಿನ ಪರಿಸ್ಥಿತಿ ನೋಡಿದರೆ ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ವ್ಯಂಗ್ಯವಾಡಿದರು. ಎಸ್‌ಐಆರ್ ಹಿಂಪಡೆಯಬೇಕು, ಇಲ್ಲದಿದ್ದರೆ ಅದರ ವಿರುದ್ದ ದೇಶದಲ್ಲಿ ಕ್ರಾಂತಿಯಾಗಲಿದೆ ಎಂದರು.

ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ. ಭಗವಾನ್ ರೆಡ್ಡಿ ಮಾತನಾಡಿ, ದೇಶದ ಮೇಲೆ 2 ಲಕ್ಷ ಕೋಟಿ ಸಾಲ‌‌ ಇದೆ. ಆರ್ಥಿಕತೆ ಹದಗೆಡುತ್ತಿದೆ, ಖಾಸಗಿಕರಣ ಆಗ್ತಿದೆ, ನೀಟ್, ಇಡಿ, ಸಿಬಿಐನಂತಹ ಎಲ್ಲಾ ಸಂಸ್ಥೆಗಳು ಹದೆಗೆಡುತ್ತಿವೆ. ಭರವಸೆ ಇದ್ದ ಸುಪ್ರಿಂ‌ ಕೋರ್ಟ್ ಕೂಡ ಎಸ್‌ಐಅರ್‌ಪರ ಇದೆ ಎಂದರು.

ಎಸ್‌ಐಅರ್ ಹಿಂದೆ ಏನೊ ಗೌಪ್ಯ ಉದ್ದೇಶ ಇದೆ. ನುಸುಳುಕೋರರು ಅಂದ್ರೆ 6 ಕೋಟಿ ಜನರು ನುಸುಳುಕೋರರ..ಜನರು ಮತ ಚಲಾಯಿಸಲು ನಾಲಾಯಕ್ ಅಂದ್ರೆ ನಿಮ್ಮ ಅರ್ಹತೆ ಏನು? ಇಲ್ಲಿ ಸರ್ವಾಧಿಕಾರ ತರುವ ಉದ್ದೇಶ ಸರ್ಕಾರಕ್ಕೆ ಇದ್ದಂಗಿದೆ. ಇದು ಬರೀ ಅಲ್ಪ ಸಂಖ್ಯಾತರ ಸಮಸ್ಯೆ ಅಲ್ಲಿ ದಲಿತರು, ಮಹಿಳೆಯರು ಮತ್ತು ಬಡವರ ಸಮಸ್ಯೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಸುರೇಶ ಬಿಜಾಪುರ್ ಮಾತನಾಡಿ, ಇದೇ ರೀತಿ ಮುಂದವರಿದರೆ ಎಸ್‌ಐಆರ್ ಮಾಡಿ ಎಷ್ಟು ಜನರನ್ನು ಮತದಾರರ ಪಟ್ಟಿಯಿಂದ ತೆಗಿಯುತ್ತೀರಿ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿದರು. ಸಾಂವಧಾನಿಕ ಸಂಸ್ಥೆಯಾದ ಆಯೋಗ ರಾಜಕೀಯ ಆಗಬಾರದು ಎಂದರು.

ಜನರು ರೊಚ್ಚಿಗೆದ್ದರೆ ಸರ್ಕಾರ ಇರುವುದಿಲ್ಲ, ಆಯೋಗವೂ ಇರುವುದಿಲ್ಲ. ನಾವು ಅಕ್ರಮ ವಲಸಿಗರ ಹೆಸರು ತೆಗೆಯಬಾರದು ಎಂದು ಹೇಳುತ್ತಿಲ್ಲ. ಭಾರತೀಯರ ಹೆಸರನ್ನು ಗುರಿಯಾಗಿಸಿ ತೆಗಿಯಬೇಡಿ ಎನ್ನುತ್ತಿದ್ದೇವೆ. ಮುಖ್ಯವಾಗಿ ಮುಸಲ್ಮಾನರನ್ನು ಗುರಿಯಾಗುವುಸುದು ಬಿಡಿ. ಇಲ್ಲೇ ಹುಟ್ಟಿ ಬೆಳೆದವರ ಹಕ್ಕು ಕಿತ್ತಿಕೊಳ್ಳುವುದು ಅಂದರೆ ಏನು ಎಂದು ಪ್ರಶ್ನಿಸಿದರು. ಆಧಾರ್ ಕಾರ್ಡ್ ಮುಂದಿಟ್ಟು ಎಸ್‌ಐಆರ್ ಮಾಡಿ ಎಂದು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಮಾತನಾಡಿ, ನಮ್ಮ ಪೂರ್ವಜರು ಕಟ್ಟಿಕೊಟ್ಟ ದೇಶ ಉಳಿಸಿಕೊಳ್ಳಲು ನಾವು ಹೋರಾಡುತ್ತಿದ್ದೇವೆ. ಮತದಾನದ ಹಕ್ಕು ಹೋದರೆ ಈ ದೇಶದ ನಾಗರಿಕತ್ವ ಹೋದಂತೆ. ಈ ನಿಟ್ಟಿನಲ್ಲಿ ನಾವು ಗಂಭೀರವಾಗಿ ಕೆಲಸ ಮಾಡಿಬೇಕಾಗಿದೆ. ನಾಗರಿಕ ಹಕ್ಕುಗಳನ್ನು ಕಿತ್ತುಕೊಳ್ಳುವ ಎಸ್‌ಐಆರ್ ವಿರೋಧಿಸಲೇಬೇಕು. ಜನರಿಗೆ ಇದರ ಅನಾಹುತಗಳನ್ನು ತಿಳಿಸಬೇಕು ಎಂದರು.

ವಿಜಯಪುರ ನಗರದಲ್ಲಿ ಜಾಗೃತಿ ಜಾಥಾ

ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ಪಡೆದ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ, ನಗರದ ಗಾಂಧಿ ಕಟ್ಟೆ ಸರ್ಕಲ್ ಬಳಿಗೆ ಸಾಗಿತು. ಅಲ್ಲಿ ಜಾಥಾದ ನಾಯಕರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಐಆರ್‌ನ ಅನಾಹುತಗಳನ್ನು ತಿಳಿಸಿಕೊಟ್ಟು, ಅದನ್ನು ಹೇಗೆ ಎದುರಿಸಬೇಕು ಮತ್ತು ತಮ್ಮ ಮತದಾನದ ಹಕ್ಕನ್ನು ಹೇಗೆ ಉಳಿಸಿಕೊಳ್ಳಬೇಕು ಎಂದು ವಿವರಿಸಿದರು.

ಗಾಂಧಿ ಕಟ್ಟೆ ಸರ್ಕಲ್‌ನ ಕಾರ್ಯಕ್ರಮವನ್ನು ರಸ್ತೆಯ ಇಕ್ಕೆಲಗಳಲ್ಲಿ ನಿಂತ ನೂರಾರು ಜನರು ವೀಕ್ಷಿಸಿದರು, ಭಾಷಣಗಳನ್ನು ಆಲಿಸಿದರು. ಇದೇ ಸಂದರ್ಭದಲ್ಲಿ ಜನರಿಗೆ ಕರಪತ್ರಗಳನ್ನು ವಿತರಿಸಲಾಯಿತು.

ಗಾಂಧಿ ಕಟ್ಟೆಯಿಂದ ಹೊರಟ ಜಾಥಾ ಇತಿಹಾಸ ಪ್ರಸಿದ್ದ ಜಾಮಿಯಾ ಮಸೀದಿ ಬಳಿಯ ಝಂಡಾ ಕಟ್ಟೆಗೆ ತೆರಳಿತು. ಅಲ್ಲಿ ಕಾಲಿ ಮಸ್ಜಿದ್ ಮುಂಭಾಗದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಹೋರಾಟಗಾರರು ಮಾತನಾಡಿದರು.

ಮೊದಲ ದಿನದ ಜಾಥಾ ವಿಜಯಪುರ ನಗರದಲ್ಲಿ ಸಮಾಪ್ತಿಗೊಂಡಿತು. ಎರಡನೇ ದಿನ, ಅಂದರೆ ಜೂನ್ 14ರಂದು ವಿಜಯಪುರದಿಂದ ಹೊರಡುವ ಜಾಥಾ ಬಾಗಲಕೋಟೆ ತಲುಪಲಿದೆ. ಅಲ್ಲಿನ ವಿವಿಧ ಕೇಂದ್ರಗಳಲ್ಲಿ ಜನಜಾಗೃತಿ ಸಭೆಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...