HomeಅಂಕಣಗಳುKarnataka against SIRಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು.

ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ ಕೊಟ್ಟು ಅವರು ಮಾತನಾಡಿದರು.

ಮಹಾತ್ಮ ಗಾಂಧಿ ಮತ್ತಿತರ ಮಹನೀಯರು ಹೋರಾಡಿ ನಮಗೆ ಸ್ವಾತಂತ್ರ್ಯ ತಂದು ಕೊಟ್ಟರು. ಆ ಬಳಿಕ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಶ್ರೇಷ್ಠ ಸಂವಿಧಾನದ ಮೂಲಕ ಸರ್ವರಿಗೆ ಸಮಬಾಲು, ಸಮಪಾಲು ಕೊಟ್ಟರು. ಅದನ್ನು ಜವಹರಲಾಲ್ ನೆಹರು ನೇತೃತ್ವದ ಸರ್ಕಾರ ಜಾರಿಗೆ ತಂದಿತು. ನಮಗೆ ನಮ್ಮನ್ನು ಅಳುವವರನ್ನು ಆಯ್ಕೆ ಮಾಡಲು ಮತದಾನದ ಹಕ್ಕು ನೀಡಿತು. ಆ ಹಕ್ಕನ್ನು ಎಸ್ಐಆರ್ ಮೂಲಕ ಕಿತ್ತುಕೊಳ್ಳಲು ಮುಂದಾಗಿದ್ದಾರೆ ಎಂದರು.

ಎಸ್ಐಆರ್ ಎಂಬ ಈ ಕುತಂತ್ರದ ಬಗ್ಗೆ ನಾವೆಲ್ಲ ಜಾಗೃತರಾಗಬೇಕು, ನಾವು ಇದರ ವಿರುದ್ಧ ಒಂದಾಗಬೇಕು, ನಾವು ಸಂಘಟಿತರಾದರೆ ಯಾರಿಂದಲೂ ನಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು‌ ಹೇಳಿದರು.

ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ ತಂಡಕ್ಕೆ ಶುಭ ಕೋರಿದರು.‌‌ ನಾವು ನಿಮ್ಮೊಂದಿಗೆ ಇದ್ದೇವೆ ಎಂದರು.

ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ನಾಯಕ ಲಕ್ಷ್ಮಣ್ ಬಕ್ಕಾಯಿ ಮಾತನಾಡಿ, ಆರ್ಯರು, ಮೂಲಭೂತವಾದಿಗಳು ಅಧಿಕಾರವಹಿಸಿಕೊಂಡು ದೇಶವನ್ನು ಹಾಳುಗೆಡವುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ದೇಶದಲ್ಲಿ ದಲಿತರು, ಅಲ್ಪಸಂಖ್ಯಾತರು ಸೇರಿ ಹಿಂದುಳಿದವರು ಶೇಕಡ 85% ಇದ್ದೇವೆ. ನಾವೆಲ್ಲರೂ ಒಟ್ಟಾಗಿ ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕು. ನಮ್ಮ‌ ನಾಯಕರು ತಂದು ಕೊಟ್ಟ ಸ್ವಾತಂತ್ರ್ಯ ಮುಂದಿನ ಪೀಳಿಗೆಗೆ ಉಳಿಸುವ ಸಂಘಟಿತ ಹೋರಾಟ ಅಗತ್ಯ ಎಂದರು.

ಅಂಬೇಡ್ಕರ್ ಪ್ರತಿಮೆ ಬಳಿ ಜಾಥಾ ಉದ್ಘಾಟನೆಗೊಂಡ ಬಳಿಕ, ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಯಿತು. ಜಾಥಾ ಸಂಚಾಲಕ ಯೂಸುಫ್ ಕನ್ನಿ, ಇಸಾಬೆಲ್ಲ ಝೇವಿಯರ್, ಸರೋವರ್ ಬೆಂಕಿಕೆರೆ ಜಾಥಾದ ಉದ್ದೇಶ ಮತ್ತು ಚುನಾವಣಾ ಆಯೋಗದ ಮುಂದಿಟ್ಟಿರುವ ಬೇಡಿಕೆಗಳನ್ನು ವಿವರಿಸಿದರು.

ಎರಡೂ ಕಾರ್ಯಕ್ರಮಗಳಲ್ಲಿ ಅಂಜುಮನ್ ಎ ಇಸ್ಲಾಮ್ ಧಾರವಾಡದ ಉಪಾಧ್ಯಕ್ಷ ಬಶೀರ್ ಖಾನ್ ಜಗೀರ್ ದಾರ್, ಗಾಂಧಿ ಶಾಂತಿ ಪ್ರತಿಷ್ಠಾನ ಧಾರವಾಡದ ಅಧ್ಯಕ್ಷ ಡಾ. ಸಂಜು ಕುಲಕರ್ಣಿ, ಕ.ವಿ.ವ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಹಾಲಗತ್ತಿ, ಸಾಧನಾ ಸಂಸ್ಥೆಯ ಅಧ್ಯಕ್ಷೆ ವಿಶ್ವೇಶ್ವರಿ ಹಿರೇಮಠ್, ಕದಳಿ ಸಮಾಜದ ಜಿಲ್ಲಾಧ್ಯಕ್ಷೆ ಪ್ರಮೀಳಾ ಜಕ್ಕಪ್ಪನವರ್, ಜಮಾಅತೆ ಇಸ್ಲಾಮಿ‌ ಹಿಂದ್ ಧಾರವಾಡದ ಮಹಿಳಾ‌ ಘಟಕದ ಅಧ್ಯಕ್ಷೆ ನೂರ್ ಜಾನ್ ಭಾಗಿ ಇದ್ದರು.

ಸುದ್ದಿಗೋಷ್ಠಿಯ ಬಳಿಕ ಜಾಥಾ ತಂಡ ಹೋಲಿ ಕ್ರಾಸ್‌ ಚರ್ಚ್‌ನಲ್ಲಿ ಫಾದರ್ ಅವರನ್ನ ಭೇಟಿಯಾಗಿ ಮತುಕತೆ ನಡೆಸಿತು. ನಂತರ ಮುರುಘಾ ಮಠಕ್ಕೆ ತೆರಳಿ ಸ್ವಾಮೀಜಿ ಜೊತೆ ಎಸ್‌ಐಆರ್ ಕುರಿತು ಚರ್ಚೆ ನಡೆಸಿತು. ಜನರಲ್ಲಿ ಜಾಗೃತಿ ಮೂಡಿಸಲು ಸಹಕಾರ ಕೋರಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...