HomeಅಂಕಣಗಳುKarnataka against SIRಸಂವಿಧಾನ ವಿರೋಧಿ 'SIR'ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

- Advertisement -
- Advertisement -

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ ‘SIR’ (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಜಾಥಾಕ್ಕೆ ತಾಲ್ಲೂಕಿನಾದ್ಯಂತ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಯಿತು.

ಜಾಥಾವನ್ನು ಅತ್ಯಂತ ಸೌಹಾರ್ದಯುತವಾಗಿ ಸ್ವಾಗತಿಸಿ ಮಾತನಾಡಿದ ‘ಎದ್ದೇಳು ಕರ್ನಾಟಕ’ ಸಂಘಟನೆಯ ಪ್ರಮುಖ ಮುಖಂಡರಾದ ಅನೀಷ್ ಪಾಷಾ ಅವರು, ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ ಈ ಹೊಸ ನಿಯಮವು ಸಂಪೂರ್ಣವಾಗಿ ಸಂವಿಧಾನ ವಿರೋಧಿಯಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನರಿಗೆ ಸುಳ್ಳು ಭರವಸೆಗಳ ಸರಮಾಲೆಯನ್ನೇ ನೀಡುತ್ತಾ ದ್ರೋಹ ಎಸಗುತ್ತಿದೆ ಎಂದು ದೂರಿದ ಅವರು, ನೋಟು ರದ್ದತಿ, ಜಿಎಸ್‌ಟಿ ಹಾಗೂ ಸಿಎಎ-ಎನ್‌ಆರ್‌ಸಿಯಂತಹ ಜನವಿರೋಧಿ ನೀತಿಗಳ ಮುಂದುವರಿದ ಭಾಗವಾಗಿ ಈಗ ‘SIR’ ತರಲಾಗುತ್ತಿದೆ ಎಂದರು. ಇದು ಬಹುಸಂಖ್ಯಾತರು ಸೇರಿದಂತೆ ದೇಶದ ಸಾಮಾನ್ಯ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳುವ ವ್ಯವಸ್ಥಿತ ಸಂಚಾಗಿದ್ದು, ಇದಕ್ಕೆ ನಾವೆಲ್ಲರೂ ಒಗ್ಗಟ್ಟಿನಿಂದ ತಕ್ಕ ಪ್ರತಿರೋಧ ಒಡ್ಡಬೇಕಿದೆ ಎಂದು ಕರೆ ನೀಡಿದರು.

ದೇಶಭಕ್ತಿಯ ಮುಖವಾಡ ಧರಿಸಿ ದೇಶದ ಸಂಪತ್ತನ್ನು ಲೂಟಿ ಮಾಡುತ್ತಿರುವ ಶಕ್ತಿಗಳನ್ನು ಜನಸಾಮಾನ್ಯರು ತಡೆಯಬೇಕಾದ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿದ ಅನೀಷ್ ಪಾಷಾ ಅವರು, ಇತ್ತೀಚಿನ ಚುನಾವಣೆಯಲ್ಲಿ ತಾವಂದುಕೊಂಡ ‘ಚಾರ್ ಸೌ ಪಾರ್’ (400ಕ್ಕೂ ಅಧಿಕ ಸೀಟುಗಳು) ಫಲಿತಾಂಶ ಬಾರದ ಕಾರಣ, ಈಗ ಹೇಗಾದರೂ ಮಾಡಿ ಅಧಿಕಾರವನ್ನು ಭದ್ರಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂದು ಆರೋಪಿಸಿದರು. ಇದಕ್ಕಾಗಿ ವಿರೋಧ ಪಕ್ಷಗಳ ಹಾಗೂ ತಮಗೆ ಬೀಳಬಹುದಾದ ವಿರೋಧಿ ಮತಗಳನ್ನು ಮತದಾರರ ಪಟ್ಟಿಯಿಂದಲೇ ತೆಗೆದುಹಾಕುವ ಕುತಂತ್ರಕ್ಕೆ ಕೈಹಾಕಲಾಗಿದೆ. ಕುವೆಂಪು ಅವರು ಆಶಿಸಿದ ‘ಸರ್ವಜನಾಂಗದ ಶಾಂತಿಯ ತೋಟ’ವನ್ನು ಯಾವುದೇ ಕಾರಣಕ್ಕೂ ನಾಶ ಮಾಡಲು ಬಿಡುವುದಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದಲೂ ಇರದಿದ್ದ ಇಂತಹ ನಿಯಮವನ್ನು ಈಗ ಜಾರಿಗೊಳಿಸಿ, ಈ ದೇಶದ ಮೂಲ ನಿವಾಸಿಗಳಾದ ನಾವೇ ನಮ್ಮ ನಾಗರಿಕತ್ವ ಮತ್ತು ಪೌರತ್ವವನ್ನು ಸಾಬೀತುಪಡಿಸಲು ದಾಖಲೆಗಳನ್ನು ಹಿಡಿದು ನಿಲ್ಲುವಂತೆ ಮಾಡಿರುವುದು ಅತ್ಯಂತ ದುರದೃಷ್ಟಕರ ಎಂದು ಆತಂಕ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮತ್ತೊಬ್ಬ ಹಿರಿಯ ಮುಖಂಡರಾದ ಹೆಚ್.ಕೆ. ಕೊಟ್ರಪ್ಪ ಅವರು, ಸಂವಿಧಾನ ನಮಗೆ ನೀಡಿರುವ ಅತ್ಯಂತ ಪವಿತ್ರ ಹಾಗೂ ಮಹತ್ವದ ಹಕ್ಕೆಂದರೆ ಅದು ಮತದಾನದ ಹಕ್ಕು. ಇದನ್ನು ಯಾವುದೇ ಕಾರಣಕ್ಕೂ ಯಾರೂ ಕಳೆದುಕೊಳ್ಳಬಾರದು ಎಂದು ಎಚ್ಚರಿಸಿದರು. ಕೇಂದ್ರ ಸರ್ಕಾರವು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯನ್ನು ತನಗೆ ಬೇಕಾದಂತೆ, ತನ್ನ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಂಡ ಪರಿಣಾಮವಾಗಿ, ಇಂದು ಆಯೋಗದಲ್ಲಿ ಅವರ ಪರವಾಗಿರುವವರೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅದರ ನೇರ ಫಲಿತಾಂಶವೇ ಇಂದು ಜಾರಿಗೆ ಬಂದಿರುವ ಈ ವಿವಾದಿತ ನಿಯಮವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಾಥಾದ ಸಾರಥ್ಯವನ್ನು ವಹಿಸಿಕೊಂಡಿದ್ದ ಪ್ರಮುಖರಾದ ಸುರೇಶ್ ನಾಯ್ಕ್ ಅವರು ಮಾತನಾಡಿ, ಈ ತಾರತಮ್ಯದ ನಿಯಮವನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇಲ್ಲೇ ಹುಟ್ಟಿ, ಇಲ್ಲೇ ಬೆಳೆದ ನಾವು ಇಂದು ನಮ್ಮ ಅಸ್ತಿತ್ವ ಮತ್ತು ನಾಗರಿಕತೆಯನ್ನು ನಿರೂಪಿಸಬೇಕಾದ ದುಸ್ಥಿತಿ ಎದುರಾಗಿರುವುದು ಪ್ರಜಾಪ್ರಭುತ್ವದ ದುರಂತವಾಗಿದೆ. ಗ್ರಾಮೀಣ ಭಾಗದ ಅಮಾಯಕ ಜನರಿಗೆ ಇದರ ದುಷ್ಪರಿಣಾಮಗಳ ಅರಿವಿಲ್ಲ. ಇದೆಲ್ಲವೂ ಒಳ್ಳೆಯದೇ ಇರಬಹುದು ಎಂದು ಅವರು ಭಾವಿಸಿದ್ದಾರೆ, ಆದರೆ ಇದರ ಹಿಂದೆ ತಮ್ಮ ಮತಗಳೇ ಕಣ್ಮರೆಯಾಗುವ ಅಪಾಯವಿದೆ ಎಂಬ ಸತ್ಯ ಅವರಿಗೆ ತಿಳಿದಿಲ್ಲ. ಹಾಗಾಗಿ ಪ್ರತಿಯೊಬ್ಬರಿಗೂ ಇದರ ಅರಿವು ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಹರಿಹರ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಐತಿಹಾಸಿಕ ಜಾಗೃತಿ ಜಾಥಾದಲ್ಲಿ ಮುಖಂಡರುಗಳಾದ ಅನೀಷ್ ಪಾಷಾ, ಹೆಚ್.ಕೆ. ಕೊಟ್ರಪ್ಪ, ಅಬ್ದುಲ್ ರೆಹಮಾನ್, ಡಾ. ಮೊಹಮ್ಮದ್ ಇಸಾಕ್, ಮುನೀರ್, ಎಂ.ಬಿ. ಅಣ್ಣಪ್ಪ, ಕೆ.ಬಿ. ರಾಜಶೇಖರ್, ಹಾಲ್ಸ್ವಾಮಿ, ಡಾ. ಗುಲಾಮ್ ನಬಿ, ಮೊಹಮ್ಮದ್ ಇಕ್ಬಾಲ್ ಇನಾಮ್ದಾರ್ ಹಾಗೂ ಮಗ್ದುಂ ಸೇರಿದಂತೆ ನೂರಾರು ಪ್ರಮುಖರು ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು. ಇಡೀ ಜಾಥಾದ ಯಶಸ್ವಿ ನೇತೃತ್ವವನ್ನು ಸುರೇಶ್ ನಾಯ್ಕ್, ಮುನ್ನ ಕಡೂರು, ಸುಮಂತ್ ಮತ್ತು ರಾಜೀತ್ ಅವರು ವಹಿಸಿಕೊಂಡು ಜಾಗೃತಿ ಮೂಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...