HomeಅಂಕಣಗಳುKarnataka against SIRಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

- Advertisement -
- Advertisement -

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ, ಜನಶಕ್ತಿ ಸಂಘಟನೆ, ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಜಮಾತೆ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜಾಥಾವನ್ನು ಅತ್ಯಂತ ಉತ್ಸಾಹದಿಂದ ಸ್ವಾಗತಿಸಿದರು.

ಜೂನ್ 13ರಂದು ಶಿವಮೊಗ್ಗದಿಂದ ಆಯೋಜನೆಗೊಂಡಿದ್ದ ಈ ಜಾಥಾವು ಈಗಾಗಲೇ ಐದು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದೆ. ಚಿತ್ರದುರ್ಗದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಜಾಥಾದ ನೇತೃತ್ವ ವಹಿಸಿದ್ದ ಸುರೇಶ್ ನಾಯ್ಕ್ ಅವರು, “ಮುಂಬರುವ ಜೂನ್ 20ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಆ ಮೂಲಕ ಚುನಾವಣಾ ಆಯೋಗವು ಪ್ರಜಾಪ್ರಭುತ್ವ ವಿರೋಧಿಯಾದ ಎಸ್‌ಐಆರ್ ವ್ಯವಸ್ಥೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕಡಕ್ ಎಚ್ಚರಿಕೆ ನೀಡಲಾಗುವುದು” ಎಂದು ಪ್ರಕಟಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖ್ಯಾತ ವಕೀಲ ಅನೀಷ್ ಪಾಷಾ, ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಹಿಂಬಾಗಿಲ ರಾಜಕಾರಣಕ್ಕಾಗಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್‌ಐಆರ್ ಜಾರಿಗೊಳಿಸಲು ಮುಂದಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. ಈ ವ್ಯವಸ್ಥೆಯಿಂದಾಗಿ ದೇಶದ ನಿಜವಾದ ಮತದಾರರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಈ ದೇಶದ ಮೂಲ ನಿವಾಸಿಗಳ ಪೌರತ್ವವನ್ನೇ ಪ್ರಶ್ನಿಸುತ್ತಿರುವ ಚುನಾವಣಾ ಆಯೋಗದ ನಡೆ ಅತ್ಯಂತ ಖಂಡನೀಯವಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಹೊರಕೇರಪ್ಪ ಅವರು, ಎಸ್‌ಐಆರ್ ಹೆಸರಿನಲ್ಲಿ ಜನರ ಸಂವಿಧಾನಬದ್ಧ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಂಚು ನಡೆಯುತ್ತಿದೆ ಎಂದರು. ಈಗಾಗಲೇ ಐದು ರಾಜ್ಯಗಳಲ್ಲಿ ಇದರ ಪ್ರಯೋಗದಿಂದಾಗಿ ಲಕ್ಷಾಂತರ ಮತದಾರರ ಹೆಸರುಗಳು ಪಟ್ಟಿಯಿಂದ ನಿಗೂಢವಾಗಿ ಮಾಯವಾಗಿವೆ. ಎಲ್ಲಾ ಸೂಕ್ತ ದಾಖಲೆಗಳಿದ್ದರೂ ಜನಸಾಮಾನ್ಯರನ್ನು ನುಸುಳುಕೋರರಂತೆ ಬಿಂಬಿಸಿ ಹೆಸರು ಕೈಬಿಟ್ಟಿರುವುದರ ಹಿಂದೆ ರಾಜಕೀಯ ಪಿತೂರಿಯಿದೆ. ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಪವಿತ್ರವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸಿದ ಯಾದವ್ ರೆಡ್ಡಿ, ಭಾರತೀಯ ಚುನಾವಣಾ ಆಯೋಗವು ಸದ್ಯ ಒಂದು ರಾಜಕೀಯ ಪಕ್ಷದ ಏಜೆಂಟ್‌ನಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯೇ ಅಸಂವಿಧಾನಿಕವಾಗಿದ್ದು, ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಒಂದು ಪಕ್ಷದ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಸೃಷ್ಟಿಸಿದ ಗೊಂದಲಗಳು ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಬಿಹಾರದ ತೀರ್ಪು ಜನಸಾಮಾನ್ಯರ ವಿರೋಧಿಯಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸಲು ಈ ಜನವಿರೋಧಿ ನೀತಿಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಹಿಮ್ಮೆಟ್ಟಿಸಬೇಕಿದೆ ಎಂದು ಕರೆ ನೀಡಿದರು.

ಮಹಿಳಾ ಮುನ್ನಡೆ ಸಂಘಟನೆಯ ನಾಯಕಿ ಪವಿತ್ರಾ ಅವರು ಜಾಥಾಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸಿ, ಎಸ್‌ಐಆರ್ ಜಾರಿ ನಿರ್ಧಾರದಿಂದ ಸರ್ಕಾರ ತಕ್ಷಣ ಹಿಂದೆ ಸರಿಯಬೇಕು ಹಾಗೂ ಜೂನ್ 20ರ ಬೆಂಗಳೂರು ಸಮಾವೇಶದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮ ಹಕ್ಕುಗಳನ್ನು ಗಟ್ಟಿಯಾಗಿ ಪ್ರತಿಪಾದಿಸಬೇಕು ಎಂದರು. ಮತ್ತೊಬ್ಬ ಮುಖಂಡ ಮುನ್ನ ಕಡೂರು ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜಾಥಾಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಬೆಂಗಳೂರಿನ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಜನಜಾಗೃತಿ ಜಾಥಾದಲ್ಲಿ ಮುಖಂಡರುಗಳಾದ ಶಿವಕುಮಾರ್, ಪುರುಷೋತ್ತಮ, ಸಾಲುಮರದ ರಾಜಕುಮಾರ್, ಹೊರಕೇರಪ್ಪ, ಮಾವಳ್ಳಿ ಗೋವಿಂದಪ್ಪ, ಸೈಯದ್ ಅಲಿ. ಎಸ್.ಕೆ, ಮುಸ್ತಾಕ್, ಮೊಹಮ್ಮದ್ ರಫಿಕ್, ಬೆಂಕಿ ಬಸವರಾಜು, ಬೈಲಮ್ಮ, ಪ್ರಭಾವತಿ ಸೇರಿದಂತೆ ಹಲವು ಪ್ರಮುಖರು ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಎದ್ದೇಳು ಕರ್ನಾಟಕದಿಂದ ಆಯಿಷಾ ಅವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...