HomeಅಂಕಣಗಳುKarnataka against SIRಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

- Advertisement -
- Advertisement -

‘ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ’ ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ (ಜೂ.20) ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಅವರು ಮಾತನಾಡಿದರು.

ಇದು ರಾಜಕೀಯ ಸಭೆಯಲ್ಲ, ಸಾರ್ವಜನಿಕರ, ಸಂವಿಧಾನ ಪ್ರೇಮಿಗಳ ದೇಶ ಪ್ರೇಮಿಗಳ ಸಭೆಯಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲ ನಾವೆಲ್ಲರೂ ಭಾಗವಹಿಸಿ ಅಗತ್ಯ ದಾಖಲೆಗಳನ್ನು ಹೊಂದಿಸಿಕೊಂಡು ಬಗ್ಗೆ ಜಾಗೃತಿ ಮೂಡಿಸಲು ನಾವಿಲ್ಲಿ ಜಮಾಯಿಸಿದ್ದೇವೆ ಎಂದು ಸಮಾವೇಶದ ಕುರಿತು ಅವರು ಹೇಳಿದರು.

ಮತದಾರರ ಪಟ್ಟಿಯ ಪರಿಷ್ಕರಣೆಗೆ ನಾವು ಸಹಕಾರ ಕೋಡುತ್ತೇವೆ. ಆದರೆ, ಕೆಲವರು ಹೆಸರನ್ನ ತೆಗೆಯುವುದು, ಕೆಲವರ ಹೆಸರು ಉಳಿಸುವಂತೆ ಆಗದಂತೆ ನೋಡಿಕೊಳ್ಳಬೇಕು. ಒಬ್ಬರೇ ಒಬ್ಬರು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗಿಡದಂತೆ ನೋಡಿಕೊಳ್ಳಬೆಕು ಎಂದರೆ.

ʼಚುನಾವಣಾ ಆಯೋಗಕ್ಕೆʼ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು.
  3. ಚುನಾವಣಾ ಮ್ಯಾನ್ಯೂಯಲ್ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು.
  4. ಅಪೀಲ್ ಸಲ್ಲಿಸಲು ಕನಿಷ್ಟ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು.

‘ರಾಜ್ಯ ಸರಕಾರಕ್ಕೆʼ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲಿದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...