HomeಅಂಕಣಗಳುKarnataka against SIRಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

- Advertisement -
- Advertisement -

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು.

ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ ದೃಷ್ಟಿಕೋನವು ಸಂವಿಧಾನ ವಿರೋಧಿಯಾಗಿದೆ. ಸೋದರತ್ವಕ್ಕೆ ಮತ್ತು ದೇಶದ ಏಕತೆಗೆ ಮಾರಕವಾಗಿರುವ ಇವರ ಮಾತುಗಳು, ಮತದಾನದ ಹಕ್ಕು ಉಳಿಯಬೇಕು ಎಂದು ಕೇಳುವವರ ಮೇಲೆ ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟುವ ಮೂಲಕ ಸುಳ್ಳುಗಳನ್ನು ಹರಡುತ್ತಿವೆ. ಈ ಸುಳ್ಳುಗಳ ಮುಖವಾಡವನ್ನು ನಾವು ಬಯಲು ಮಾಡಬೇಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರ ದೃಷ್ಟಿಕೋನದಿಂದ ನೋಡುವುದಾದರೆ, ಇ-ಶ್ರಮ್ ಕಾರ್ಡ್ ಪಡೆದ ಒಂದು ಕೋಟಿ ಏಳು ಲಕ್ಷ ಮಂದಿ, ಕಟ್ಟಡ ಕಾರ್ಮಿಕರು ಹಾಗೂ ಶಾಪ್ ಅಂಡ್ ಎಸ್ಟಾಬ್ಲಿಷ್ಮೆಂಟ್ ಕಾಯ್ದೆಯಡಿ ಇರುವ ಲಕ್ಷಾಂತರ ಕಾರ್ಮಿಕರಲ್ಲಿ ಸುಮಾರು 60 ಪ್ರತಿಶತದಷ್ಟು ಮಂದಿ ವಲಸೆ ಕಾರ್ಮಿಕರು. ಈ ನಾಡನ್ನು ಕಟ್ಟುತ್ತಿರುವ ಇವರ ಬಳಿ 2002ರ ದಾಖಲೆಗಳನ್ನು ಕೇಳುವುದು ಎಷ್ಟರಮಟ್ಟಿಗೆ ಸರಿ? ಇವರನ್ನು ಹೊರಗಿಡುವ ಕೆಲಸ ಖಂಡನೀಯ. ರಾಜ್ಯ ಸರ್ಕಾರವೂ ಸಹ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಸೌಲಭ್ಯಗಳನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕುತ್ತಿದ್ದು, ಇದನ್ನು ವಿರೋಧಿಸಬೇಕಿದೆ. ನಾವು ಕರ್ನಾಟಕದಲ್ಲಿ ಎಸ್ಐಆರ್ ಅನ್ನು ಸೋಲಿಸಲೇಬೇಕಿದೆ ಎಂದು ಅವರು ಕರೆ ನೀಡಿದರು.

ಹಿಂದೆ ಇದೇ ಪ್ರೀಡಂ ಪಾರ್ಕ್‌ನಲ್ಲಿ 25 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ದಾಖಲೆಗಳನ್ನು ಕೇಳುವ ಸರ್ಕಾರದ ವಿಧಾನದ ವಿರುದ್ಧ ಹೋರಾಡಿದ್ದೆವು. ಐದು ಕೋಟಿ ನಾಲ್ಕು ಲಕ್ಷ ಜನರ ಮ್ಯಾಪಿಂಗ್ ಕೆಲಸದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ದೊಡ್ಡದು. ಆದರೆ, ಈ ಕೆಲಸದ ನಂತರ ಕಾರ್ಯಕರ್ತೆಯರು ಜೈಲಿಗೆ ಹೋಗುವ ಆತಂಕವಿದೆ ಎಂದು ಆಗಲೇ ಸರ್ಕಾರಕ್ಕೆ ಎಚ್ಚರಿಸಿದ್ದೆವು. ಬಿಎಲ್‌ಒಗಳು 2002ರ ನಂತರದ ದಾಖಲೆಗಳನ್ನು ಕೇಳುತ್ತಿದ್ದಾರೆ. 2001ರ ದಾಖಲೆಗಳಿಲ್ಲದ ಸೊಸೆಯಂದಿರನ್ನು ಮನೆಯ ಮಗಳು ಅಥವಾ ಮೊಮ್ಮಗಳೆಂದು ದಾಖಲಿಸಲು ಅಧಿಕಾರಿಗಳು ಸೂಚಿಸುತ್ತಿದ್ದಾರೆ. ಇದರಿಂದ ಕೆಲಸ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ. ಹಿಂದುಳಿದ ವರ್ಗಗಳ ವಾಸಸ್ಥಳಗಳಲ್ಲಿ ಈ ಸಮಸ್ಯೆ ಹೆಚ್ಚಿದೆ. ತಮಿಳುನಾಡು-ಕೇರಳದಲ್ಲಿ ನಡೆಯದ ಈ ಕುತಂತ್ರ ಕರ್ನಾಟಕದಲ್ಲಿ ನಡೆಯದಂತೆ ಸರ್ಕಾರ ನೋಡಿಕೊಳ್ಳಬೇಕು. ಜನರು ದಾಖಲೆ ಒದಗಿಸುವ ರೀತಿ ಸರ್ಕಾರ ಕೆಲಸ ಮಾಡಬೇಕೇ ಹೊರತು, ದಾಖಲೆ ಕೇಳಿ ಅವರನ್ನು ಸತಾಯಿಸಬಾರದು ಎಂದು ವರಲಕ್ಷ್ಮಿ ಅವರು ಸರ್ಕಾರವನ್ನು ಒತ್ತಾಯಿಸಿದರು.

ʼಚುನಾವಣಾ ಆಯೋಗಕ್ಕೆʼ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು.
  3. ಚುನಾವಣಾ ಮ್ಯಾನ್ಯೂಯಲ್ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು.
  4. ಅಪೀಲ್ ಸಲ್ಲಿಸಲು ಕನಿಷ್ಟ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು.

‘ರಾಜ್ಯ ಸರಕಾರಕ್ಕೆʼ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲಿದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...