HomeಅಂಕಣಗಳುKarnataka against SIRಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

- Advertisement -
- Advertisement -

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ ಎಂದು ಮೌನವಾಗಿ ಕುಳಿತಿರುವ ಜನ ಕಾರಣವೇ ಎಂಬ ಪ್ರಶ್ನೆಯನ್ನು ನಾವೆಲ್ಲರೂ ಕೇಳಿಕೊಳ್ಳಬೇಕಿದೆ ಎಂದು ಹಿರಿಯ ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಸ್‌ಐಆರ್‌ (SIR) ವಿರೋಧಿಸಿ ಪ್ರಜಾತಾಂತ್ರಿಕ ಹಕ್ಕುಗಳಿಗಾಗಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಇಲ್ಲಿ ನೆರೆದಿರುವ ನಮ್ಮೆಲ್ಲರಿಗೂ ಈ ಸಮಸ್ಯೆಯ ತೀವ್ರತೆ ಗೊತ್ತಿದೆ. ನಮ್ಮ ಮೂಲಕ ಈ ಆತಂಕದ ವಿಚಾರ ರಾಜ್ಯದ ಪ್ರತಿ ಮನೆಗೂ ತಲುಪಬೇಕಿದೆ. ಮತದಾನದ ಮಹತ್ವ ನಮಗೆ ತಿಳಿದಿದೆ, ಆದರೆ ಮತ ಹಾಕದಂತೆ ಅಡ್ಡಿಪಡಿಸುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಕಡುಬಡವರ ಬಳಿ ಇಲ್ಲದ ದಾಖಲೆಗಳನ್ನು ಕೇಳುವ ಮೂಲಕ ಅವರನ್ನು ಮತದಾನಕ್ಕೆ ಅಯೋಗ್ಯರು ಎಂದು ಬಿಂಬಿಸಲಾಗುತ್ತಿದೆ. ನಾಗರಿಕ ಸಮಾಜದ ಒಬ್ಬ ವ್ಯಕ್ತಿಯಾಗಿ ತನ್ನ ಹಕ್ಕು ಚಲಾಯಿಸಲು ಸಾಧ್ಯವಾಗದ ಸ್ಥಿತಿ ಎದುರಾಗಿದೆ. ಎಸ್‌ಐಆರ್‌ನ ಅನಾಹುತಗಳು ಕೇವಲ ಒಬ್ಬರ ಸಮಸ್ಯೆಯಲ್ಲ, ಇದು ಇಡೀ ರಾಜ್ಯದ ಅಸ್ತಿತ್ವದ ಪ್ರಶ್ನೆಯಾಗಿದೆ ಎಂಬುವುದನ್ನು ನಾವು ಗಂಭೀರವಾಗಿ ಅರ್ಥ ಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

ಮತದಾರರ ಹಕ್ಕುಗಳನ್ನು ಉಳಿಸಿಕೊಳ್ಳಲು ಆಯೋಜಿಸಲಾದ ಈ ಸಮಾವೇಶದ ಉದ್ದೇಶವನ್ನು ಎಲ್ಲರೂ ಅರಿತು ಸೂಕ್ತವಾಗಿ ಸ್ಪಂದಿಸಬೇಕಿದೆ ಎಂದು ಅವರು ಕರೆ ನೀಡಿದರು. ಇದೇ ವೇಳೆ ಮಾಧ್ಯಮಗಳ ಜವಾಬ್ದಾರಿಯನ್ನು ನೆನಪಿಸಿದ ಅವರು, “ಮಾಧ್ಯಮಗಳು ಮನಸ್ಸು ಮಾಡಿದರೆ ಎಸ್‌ಐಆರ್‌ನ ಅಪಾಯಗಳನ್ನು ಹಳ್ಳಿ-ಹಳ್ಳಿಗಳಿಗೂ ತಲುಪಿಸಬಲ್ಲವು. ಈ ವಿಷಯದಲ್ಲಿ ಮಾಧ್ಯಮದವರು ಹೆಚ್ಚಿನ ಕಾಳಜಿ ವಹಿಸಬೇಕು” ಎಂದು ಮನವಿ ಮಾಡಿದರು.

“ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸುವ ಭರವಸೆಯನ್ನು ನೀಡಬೇಕು. ಸರ್ಕಾರ ನಮಗೆ ತಾಯಿಯಂತೆ ಜೊತೆ ನಿಲ್ಲಬೇಕು. ಪ್ರಜಾಪ್ರಭುತ್ವದಲ್ಲಿ ನಾವು ನಂಬಿರುವುದು ಸರ್ಕಾರ ಮತ್ತು ನ್ಯಾಯಾಂಗವನ್ನು ಮಾತ್ರ. ಅವರೇ ನಮ್ಮನ್ನು ಕೈಬಿಟ್ಟರೆ ನಾವು ಅನಾಥರಾಗುತ್ತೇವೆ. ಹಾಗಾಗಿ, ಜನರಿಗೆ ಈಗ ಸರ್ಕಾರದ ಬೆಂಬಲದ ಅವಶ್ಯಕತೆ ಇದೆ. ಪ್ರಜೆಗಳು ಪ್ರಾಮಾಣಿಕವಾಗಿ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮುಂದುವರಿಸಬೇಕು” ಎಂದು ಬಿ.ಟಿ. ಲಲಿತಾ ನಾಯ್ಕ್ ಒತ್ತಾಯಿಸಿದರು.

‘ಚುನಾವಣಾ ಆಯೋಗಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು.
  3. ಚುನಾವಣಾ ಮ್ಯಾನ್ಯೂಯಲ್‌ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು.
  4. ಅಪೀಲ್ ಸಲ್ಲಿಸಲು ಕನಿಷ್ಠ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು.

‘ರಾಜ್ಯ ಸರಕಾರಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...