HomeಅಂಕಣಗಳುKarnataka against SIRಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು:...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

- Advertisement -
- Advertisement -

“ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ 19.37 ಕೋಟಿಗೆ ಏರಿಕೆಯಾಯಿತು. ಆದರೆ, ಇಂದು 2024ರಲ್ಲಿ ಸರ್ಕಾರ ರಚಿಸಿದವರು, 2025ರ ಹೆಸರಿನಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ನೆಪದಲ್ಲಿ ಕೋಟ್ಯಂತರ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ” ಎಂದು ಜಮಾತೆ ಇಸ್ಲಾಮಿ ಹಿಂದ್‌ನ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಯೂಸುಫ್ ಕನ್ನಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಮಾತನಾಡಿದ ಅವರು, “ಒಟ್ಟು 6 ಕೋಟಿ 50 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇವರೆಲ್ಲರೂ ನುಸುಳುಕೋರರಾ ಅಥವಾ ಸತ್ತು ಹೋಗಿದ್ದಾರಾ? 2024ರಿಂದ 26ರ ಅವಧಿಯಲ್ಲಿ ಸತ್ತವರನ್ನು ನೆಪವಾಗಿಟ್ಟುಕೊಂಡು ಚುನಾವಣೆಯಲ್ಲಿ ಗೆದ್ದವರು, ಈಗ 65 ಲಕ್ಷ ಜನರನ್ನು ಹೊರಹಾಕುವಾಗ 23 ಲಕ್ಷ ಜನ ಸತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಈ ಹಿಂದೆ ಈ ಸತ್ತವರು ಮತ ಹಾಕಿದ್ದರೇ? ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ ಆ ಜನರು ಯಾರು ಎಂಬುವುದನ್ನು ಚುನಾವಣಾ ಆಯೋಗ ಮೊದಲು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಇಲ್ಲಿಯವರೆಗೆ ಪಟ್ಟಿಯಿಂದ ತೆಗೆದ ಲಕ್ಷಾಂತರ ಜನರಲ್ಲಿ ಒಬ್ಬನೇ ಒಬ್ಬ ನುಸುಳುಕೋರ ಸಿಕ್ಕಿಲ್ಲ. ಇಷ್ಟು ದೊಡ್ಡ ಸಂಖ್ಯೆಯ ಜನರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದು ಏಕೆ? ಇದು ಚುನಾವಣಾ ಆಯೋಗದ ಜವಾಬ್ದಾರಿಯಲ್ಲವೇ? ಈ ಹೊಣೆಗಾರಿಕೆಯನ್ನು ಆಯೋಗ ಏಕೆ ನಿರ್ವಹಿಸುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

“ಕರ್ನಾಟಕಕ್ಕೆ ಎಸ್ಐಆರ್ (SIR) ಕಾಲಿಟ್ಟಿದೆ. ಕಳೆದ ಆರು ತಿಂಗಳಿನಿಂದ ನೂರಾರು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಒಂದಕ್ಕೂ ಉತ್ತರ ಸಿಕ್ಕಿಲ್ಲ. ‘ಎದ್ದೇಳು ಕರ್ನಾಟಕ’, ‘ನನ್ನ ಮತ-ನನ್ನ ಹಕ್ಕು’, ‘ಜಾಗೃತ ಕರ್ನಾಟಕ’ದಂತಹ ಸಂಘಟನೆಗಳು ಜನರಲ್ಲಿ ಅರಿವು ಮೂಡಿಸಲು ಹೋಗುತ್ತಿದ್ದೇವೆ. ಆದರೆ, ಎಸ್ಐಆರ್ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯೇ ಇಲ್ಲ. ಹಿಂದೆಲ್ಲಾ ಚುನಾವಣಾ ಆಯೋಗವೇ ಹಳ್ಳಿ ಹಳ್ಳಿಗಳಿಗೆ ಹೋಗಿ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುತ್ತಿತ್ತು. ಈಗ ಅದೇ ಆಯೋಗ ಮಾಡುತ್ತಿರುವುದೇನು?” ಎಂದು ಅವರು ತೀವ್ರವಾಗಿ ಆಕ್ಷೇಪಿಸಿದರು.

“ಈ ಸಭೆಯಲ್ಲಿರುವ ಪ್ರತಿಯೊಬ್ಬರೂ ಜಾಗೃತರಾಗಬೇಕು. ರಾಜ್ಯದಲ್ಲಿ ಯಾರೊಬ್ಬರ ಮತವೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ನಮ್ಮೆಲ್ಲಾ ಸಂಘಟನೆಗಳ ಜವಾಬ್ದಾರಿಯಾಗಿದೆ” ಎಂದು ಮೊಹಮ್ಮದ್ ಯೂಸುಫ್ ಕನ್ನಿ ಅವರು ಕರೆ ನೀಡಿದರು.

‘ಚುನಾವಣಾ ಆಯೋಗಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಆಗ್ರಹಿಸಿದರು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು ಎಂದು ಒತ್ತಾಯಿಸಿದರು.
  3. ಚುನಾವಣಾ ಮ್ಯಾನ್ಯೂಯಲ್‌ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
  4. ಅಪೀಲ್ ಸಲ್ಲಿಸಲು ಕನಿಷ್ಠ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು ಎಂದು ಒತ್ತಾಯಿಸಿದರು.

‘ರಾಜ್ಯ ಸರಕಾರಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು ಎಂದು ಆಗ್ರಹಿಸಿದರು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು ಎಂದು ಒತ್ತಾಯಿಸಿದರು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...