Homeಮುಖಪುಟಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

- Advertisement -
- Advertisement -

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ.

ಶನಿವಾರ ಮಧ್ಯಾಹ್ನ ಪ್ರಾರಂಭವಾದ ಧರಣಿ ಅಹೋರಾತ್ರಿ ಮುಂದುವರೆದಿದ್ದು, ಪ್ರತಿಭಟನಾಕಾರರು ಪೊಲೀಸರ ಕಣ್ಗಾವಲಿನಲ್ಲಿ ಪ್ರತಿಭಟನೆ ಧರಣಿ ಮುಂದುವೆರಸಿದ್ದಾರೆ. ರಾತ್ರಿಯಿಡೀ ಆಂದೋಲನದಲ್ಲಿ ಭಾಗವಹಿಸುವವರಿಗೆ ಕೆಲವರು ಆಹಾರ ಮತ್ತು ಕುಡಿಯುವ ನೀರು ವಿತರಿಸಿದರು.

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಭಟನೆ ಸೋಮವಾರವೂ ಮುಂದುವರಿಯಲಿದೆ ಎಂದು ಭಾನುವಾರ ಘೋಷಿಸಿದರು. ತಮ್ಮ ಚಳವಳಿಗೆ ಬೆಂಬಲ ನೀಡುವಂತೆ ಅವರು ರೈತ ಸಂಘಗಳು ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಪ್ರತಿಭಟನಾ ಸ್ಥಳದಲ್ಲಿ ಸರ್ಕಾರದ ವಿರುದ್ಧ ಘೋಷಣೆ, ಭಾಷಣ ಮತ್ತು ಸಾಂಸ್ಕೃತಿಕ ಪ್ರದರ್ಶನಗಳಿಗೆ ಸಾಕ್ಷಿಯಾಯಿತು. ಪ್ರತಿಭಟನಾಕಾರರು ದೇಶಭಕ್ತಿ ಗೀತೆಗಳನ್ನು ಹಾಡಿದರು. ಸಂಜೆಯ ಹೊತ್ತಿಗೆ, 200 ಕ್ಕೂ ಹೆಚ್ಚು ಜನರು ಸ್ಥಳದಲ್ಲಿ ಜಮಾಯಿಸಿದರು ಎಂದು ಸಂಘಟಕರು ತಿಳಿಸಿದ್ದಾರೆ.

ಪರೀಕ್ಷಾ ವಿವಾದದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೊಣೆಗಾರಿಕೆಗೆ ಆಗ್ರಹಿಸಿರುವ ದಿಪ್ಕೆ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ನೀಟ್ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿಯ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವಂತೆಯೂ ಅವರು ಒತ್ತಾಯಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಪ್ರವೇಶವನ್ನು ನಿರ್ಬಂಧಿಸದಂತೆ ಅಧಿಕಾರಿಗಳನ್ನು ದೀಪ್ಕೆ ಒತ್ತಾಯಿಸಿದರು. ಮುಖ್ಯವಾಗಿ, ಸಾರ್ವಜನಿಕ ಶೌಚಾಲಯಗಳಿಗೆ ನೀರು ಸರಬರಾಜು ಪುನಃಸ್ಥಾಪಿಸುವಂತೆ ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಮೂಲಭೂತ ಸೌಲಭ್ಯಗಳ ಅಸ್ತವ್ಯಸ್ತತೆ ಪ್ರತಿಭಟನಾಕಾರರು ಆರೋಪಿಸಿದ್ದರು. ಆಕ್ರೋಶದ ಬಳಿಕ ಕುಡಿಯುವ ನೀರಿನ ವ್ಯವಸ್ಥೇಯನ್ನು ಪುನಃಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ತಮ್ಮ ಬೇಡಿಕೆಗಳನ್ನು ಪರಿಹರಿಸುವವರೆಗೆ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಿಜೆಪಿ ಹೇಳಿದೆ. ಸಂಘಟಕರ ಪ್ರಕಾರ, ರೈತ ಸಂಘಟನೆಗಳು ಹಗಲಿನಲ್ಲಿ ಪ್ರತಿಭಟನೆಗೆ ಸೇರುವ ನಿರೀಕ್ಷೆಯಿದೆ.

ಪೊಲೀಸರ ಭದ್ರತೆಯಲ್ಲಿ ಹೋರಾಟ ನಡೆಸಲಾಗುತ್ತಿದೆ. ಸ್ಥಳದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರತಿಭಟನಾ ಪ್ರದೇಶದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ಕಾಕ್ರೋಚ್ ಜನತಾ ಪಾರ್ಟಿ ಸರಣಿ ಪ್ರತಿಭಟನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೇಶದಾದ್ಯಂತ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ನೀಟ್ ಪತ್ರಿಕೆ ಸೋರಿಕೆ ಮತ್ತು ಸಿಬಿಎಸ್‌ಇ ಆನ್‌ಸ್ಕ್ರೀನ್ ಮಾರ್ಕಿಂಗ್ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳನ್ನು ನಡೆಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಚಳವಳಿ ಈಗ ಜಂತರ್ ಮಂಥರ್‌ನಲ್ಲಿ ಮುಂದುವರೆದಿದೆ.

ಜಂತರ್ ಮಂತರ್‌ನಲ್ಲಿ ಮೊದಲ ಪ್ರತಿಭಟನೆ

ಜೂನ್ 6 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿಯ ಮೊದಲ ಬೃಹತ್ ಪ್ರತಿಭಟನೆ ನಡೆಯಿತು. ಅಮೆರಿಕದಿಂದ ಹಿಂದಿರುಗಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ನೇರವಾಗಿ ಆಗಮಿಸಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಜೂನ್ 20 ರಿಂದ ದೆಹಲಿಯಲ್ಲಿ ಎರಡನೇ ಹಂತದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪೊಲೀಸರು ನಿಗದಿಪಡಿಸಿದ ಸಂಜೆ 5 ಗಂಟೆಯ ಸಮಯ ಮುಗಿದರೂ ಪ್ರತಿಭಟನಾಕಾರರು ಸ್ಥಳದಲ್ಲೇ ಉಳಿದು, ಮೊಬೈಲ್ ಫ್ಲ್ಯಾಶ್‌ಲೈಟ್ ಮೂಲಕ, ತಟ್ಟೆ-ಚಮಚಗಳನ್ನು ಬಡಿಯುವ ಮೂಲಕ ವಿನೂತನವಾಗಿ ಆಕ್ರೋಶ ಹೊರಹಾಕಿದರು. ಶಿಕ್ಷಣ ಸಚಿವರು ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಸಿಜೆಪಿ ಪಟ್ಟು ಹಿಡಿದಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ

ಸುರಿಯುವ ಮಳೆಯನ್ನೂ ಲೆಕ್ಕಿಸದೆ ನೂರಾರು ಜನ ಸಿಜೆಪಿ ಬೆಂಬಲಿಗರು ಜೂನ್ 14 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಲಡಾಖ್‌ನ ಪ್ರಮುಖ ಪರಿಸರ ಕಾರ್ಯಕರ್ತರಾದ ಸೋನಮ್ ವಾಂಗ್‌ಚುಕ್ ಮತ್ತು ಬಹುಭಾಷಾ ನಟ ಪ್ರಕಾಶ್ ರಾಜ್‌ ಕೂಡ ಭಾಗವಹಿಸಿದ್ದರು.

    “ಇದು ಕೇವಲ ರಾಜಕೀಯ ಅಧಿಕಾರಕ್ಕಾಗಿ ನಡೆಸುತ್ತಿರುವ ಹೋರಾಟವಲ್ಲ, ಬದಲಿಗೆ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಮಾಡುತ್ತಿರುವ ಪ್ರಯತ್ನ” ಎಂದು ಸೋನಮ್‌ ವಾಂಗ್‌ಚುಕ್ ತಿಳಿಸಿದರು.

    ಬೆಂಗಳುರಿನ ಪ್ರತಿಭಟನೆಯಲ್ಲಿ ಮಾತನಾಡಿದ ದೀಪ್ಕೆ, “ವ್ಯವಸ್ಥೆಯ ಲೋಪಗಳನ್ನು ಎತ್ತಿ ತೋರಿಸಿದಾಗ ನಮ್ಮನ್ನು ಜಿರಳೆಗಳು (ಕಾಕರೂಚ್) ಎಂದು ಕರೆಯಲಾಗುತ್ತದೆ. ಹಕ್ಕುಗಳಿಗಾಗಿ ಜೈಲಿಗೆ ಹೋಗಲು ನಾನು ಸಿದ್ಧ” ಎಂದು ಘೋಷಿಸಿದ್ದರು.

    ದೆಹಲಿ ಮತ್ತು ಬೆಂಗಳೂರು ಮಾತ್ರವಲ್ಲದೆ, ದೇಶದ ವಿವಿಧ ಭಾಗಗಳಲ್ಲಿ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಸಿಜೆಪಿ ಅಭಿಯಾನ ನಡೆಸಿದೆ. ಪುಣೆ, ಲಕ್ನೋ, ಅಮೃತಸರ, ಜೈಪುರ ಮತ್ತು ಜಾನ್‌ಪುರ ನಗರಗಳಲ್ಲಿ ನೀಟ್ ಆಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

    ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

    ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

    ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

    ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

    ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

    ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

    "ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

    ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

    ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

    ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

    ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

    ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

    'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

    ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

    ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

    ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

    ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

    ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

    ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...