HomeಅಂಕಣಗಳುKarnataka against SIRಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು “ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ” ನಂತೆ ಕಂಡುಬರುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಜೂನ್ 19 ರಂದು ತಿಳಿಸಿದೆ. ಈ ಮೂಲಕ 90 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟ ಪ್ರಕ್ರಿಯೆಯ ಮೇಲೆ ಸುಪ್ರೀಂ ಕೋರ್ಟ್ ಅನುಮಾನ ವ್ಯಕ್ತಪಡಿಸಿದೆ. ಈ ರೀತಿ ಕೈಬಿಡಲಾದವರಲ್ಲಿ 27 ಲಕ್ಷ ಜನರು ಈಗಾಗಲೇ ಚುನಾವಣೆಗಳು ಮುಗಿದಿದ್ದರೂ ಸಹ ಇನ್ನೂ ತಮ್ಮ ನ್ಯಾಯಸಮ್ಮತ ತೀರ್ಪಿಗಾಗಿ ಕಾಯುತ್ತಿದ್ದಾರೆ.

ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವುದರ ವಿರುದ್ಧ ವಕೀಲ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ ಎಂದು ಲೈವ್‌ಲಾ ವರದಿ ಮಾಡಿದೆ. ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ರಚನೆಯಾದ ಒಂದು ತಿಂಗಳ ನಂತರ ಈ ವಿಚಾರಣೆ ನಡೆಯುತ್ತಿದೆ. ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟಿದ್ದರಿಂದ ಇಂತಹ ಮತದಾರರು ಈ ಚುನಾವಣಾ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಅರ್ಜಿದಾರ ವಕೀಲ ಮೊಹಮ್ಮದ್ ಯಾನ್ ಅಲಿ ಪರ ಹಾಜರಾದ ವಕೀಲ ಶಕೀಲ್ ಶೇಖ್, ತಮ್ಮ ಕಕ್ಷಿದಾರರು ಕಳೆದ ಐದು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ದೇಶದಲ್ಲಿ ಮತದಾನದ ಹಕ್ಕನ್ನು ಚಲಾಯಿಸುತ್ತಾ ಬಂದಿದ್ದಾರೆ. ಅವರ ಮತದಾರರ ಅರ್ಹತೆಯ ಬಗ್ಗೆ ಇದುವರೆಗೆ ಯಾವುದೇ ತನಿಖೆ ನಡೆದಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕೊನೆಯ ಬಾರಿ ತೀವ್ರ ಪರಿಷ್ಕರಣೆ ನಡೆದ 2002ಕ್ಕಿಂತ ಮುಂಚಿನಿಂದಲೂ ಅಲಿ ಅವರು ಕಾನೂನುಬದ್ಧ ಮತದಾರರಾಗಿದ್ದರು ಎಂದು ವಕೀ ಶೇಖ್ ವಾದಿಸಿದ್ದಾರೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಟ್ಟಿರುವುದರ ವಿರುದ್ಧ ಅಲಿ ಅವರು ಪ್ರಜಾಪ್ರತಿನಿಧಿ ಕಾಯ್ದೆ, 1950 ಅಡಿಯಲ್ಲಿ ಮಾರ್ಚ್ 27, 2026ರಂದು ಮೇಲ್ಮನವಿ ಸಲ್ಲಿಸಿದ್ದರು. ಆದಾಗ್ಯೂ, ಅವರಿಗೆ ಇದುವರೆಗೆ ಒಂದೇ ಒಂದು ಬಾರಿಯೂ ವಿಚಾರಣೆಯ ಅವಕಾಶವನ್ನು ನೀಡಿಲ್ಲ ಎಂದು ಅವರು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಈ ಮಧ್ಯೆ, ರಾಜ್ಯದ ವಿಧಾನಸಭೆ ಚುನಾವಣೆ ನಡೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸಿದೆ. ಮುರ್ಷಿದಾಬಾದ್ ಸೇರಿದಂತೆ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದು ಚುನಾವಣಾ ಫಲಿತಾಂಶದ ಮೇಲೆ ಪ್ರಮುಖ ಪರಿಣಾಮ ಬೀರಿದೆ ಎಂದು ‘ದಿ ವೈರ್’ ನಡೆಸಿದ ವಿಶ್ಲೇಷಣೆಗಳು ತೋರಿಸಿವೆ. ಬಂಗಾಳದ ಎಲ್ಲಾ ಜಿಲ್ಲೆಗಳಿಗೆ ಹೋಲಿಸಿದರೆ ಮುರ್ಷಿದಾಬಾದ್‌ನಲ್ಲೇ ಅತ್ಯಂತ ಹೆಚ್ಚು ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠವು, ಅರ್ಜಿದಾರರು 1977ರಿಂದ ವಕೀಲರಾಗಿ ವೃತ್ತಿ ಮಾಡುತ್ತಿದ್ದಾರೆ ಮತ್ತು ಅವರು ಇದೇ ರಾಜ್ಯದ (ಪಶ್ಚಿಮ ಬಂಗಾಳ) ನಿವಾಸಿಯಂತೆ ಕಂಡುಬರುತ್ತಿದ್ದಾರೆ ಎಂದು ಹೇಳಿದೆ. ಲೈವ್‌ಲಾ ವರದಿಯ ಪ್ರಕಾರ, “ಮೇಲ್ನೋಟಕ್ಕೆ ನೀವು ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕರಂತೆ ಕಂಡುಬರುತ್ತೀರಿ ಎಂದು ನಾವು ನಿಮ್ಮೊಂದಿಗೆ ಒಪ್ಪಿಕೊಳ್ಳುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದಾರೆ. ಆದಾಗ್ಯೂ, ನ್ಯಾಯಾಲಯವು ತಕ್ಷಣವೇ ಅಲಿ ಅವರ ಹೆಸರನ್ನು ಮತದಾರರ ಪಟ್ಟಿಗೆ ಮರುಸೇರ್ಪಡೆ ಮಾಡಿಲ್ಲ.

ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ ಹೆಸರು ಕೈಬಿಡುವಿಕೆ ಪ್ರಕ್ರಿಯೆಯನ್ನು ನಿರ್ವಹಿಸಲು ರಚಿಸಲಾದ ವಿಶಾಲವಾದ ಮೇಲ್ಮನವಿ ವ್ಯವಸ್ಥೆಯನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಟ್ರಿಬ್ಯುನಲ್‌ಗಳ ಮುಂದೆ ಭಾರಿ ಸಂಖ್ಯೆಯ ಮೇಲ್ಮನವಿಗಳು ಬಾಕಿ ಉಳಿದಿವೆ ಮತ್ತು ಇದಕ್ಕಾಗಿ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಂದ ತಮಗೆ ಪತ್ರ ಬಂದಿರುವುದನ್ನು ಒಪ್ಪಿಕೊಂಡಿದ್ದಾರೆ.

ಲೈವ್‌ಲಾ ವರದಿಯ ಪ್ರಕಾರ, “ನಿಮ್ಮ ಪ್ರಕರಣದಲ್ಲಿ, ನಿಮಗೆ ಆದ್ಯತೆಯ ಮೇರೆಗೆ (out-of-turn) ವಿಚಾರಣೆ ನಡೆಸಿ, ನಿಮ್ಮ ವಿಷಯವನ್ನು ಇತ್ಯರ್ಥಪಡಿಸುವಂತೆ ಅವರಿಗೆ [ಮೇಲ್ಮನವಿ ಟ್ರಿಬ್ಯುನಲ್] ನಿರ್ದೇಶನ ನೀಡಿ ನಾವು ಆದೇಶ ಹೊರಡಿಸುತ್ತಿದ್ದೇವೆ” ಎಂದು ಮುಖ್ಯ ನ್ಯಾಯಮೂರ್ತಿ ಅರ್ಜಿದಾರ ವಕೀಲ ಮೊಹಮ್ಮದ್ ಯಾನ್ ಅಲಿ ಅವರಿಗೆ ತಿಳಿಸಿದ್ದಾರೆ.

ಅರ್ಜಿದಾರರ ಪ್ರಕರಣವನ್ನು ನಿರ್ದಿಷ್ಟ ಸಮಯದ ಮಿತಿಯೊಳಗೆ ಇತ್ಯರ್ಥಪಡಿಸುವಂತೆ ನ್ಯಾಯಾಲಯವು ಟ್ರಿಬ್ಯುನಲ್‌ಗೆ ನಿರ್ದೇಶನ ನೀಡಿದೆ. ಬಾರ್ ಆಂಡ್ ಬೆಂಚ್ ವರದಿಯ ಪ್ರಕಾರ, “ಇಲ್ಲಿಯವರೆಗೆ ಮೇಲ್ಮನವಿಯ ಕುರಿತು ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ, ಈ ವಿಷಯವನ್ನು ಆದಷ್ಟು ಶೀಘ್ರವಾಗಿ ಮತ್ತು ಪ್ರಮುಖವಾಗಿ ಎರಡು ತಿಂಗಳ ಒಳಗಾಗಿ ಇತ್ಯರ್ಥಪಡಿಸುವಂತೆ ನಾವು ಮೇಲ್ಮನವಿ ಟ್ರಿಬ್ಯುನಲ್‌ಗೆ ವಿನಂತಿಸುತ್ತೇವೆ” ಎಂದು ನ್ಯಾಯಾಲಯ ಹೇಳಿದೆ.

ಮೇಲ್ಮನವಿ ಟ್ರಿಬ್ಯುನಲ್‌ಗಳು (ಅಪೀಲು ನ್ಯಾಯಮಂಡಳಿಗಳು) ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನು ಒಳಗೊಂಡಿವೆ. ಏಪ್ರಿಲ್ 2026ರಿಂದ ಈ ಟ್ರಿಬ್ಯುನಲ್‌ಗಳ ಮುಂದೆ 34 ಲಕ್ಷಕ್ಕೂ ಹೆಚ್ಚು ಮೇಲ್ಮನವಿಗಳು ಸಲ್ಲಿಕೆಯಾಗಿವೆ.

ನ್ಯಾಯಾಲಯದ ಮುಂದೆ ಮಂಡಿಸಲಾದ ಅಂಕಿ-ಅಂಶಗಳ ಪ್ರಕಾರ, ಜನವರಿ 2026ರ ವೇಳೆಗೆ ಎಸ್‌ಐಆರ್ ಪ್ರಕ್ರಿಯೆಯ ಮತದಾರರ ಪಟ್ಟಿ ತಯಾರಿಕೆಯ ಹಂತದಲ್ಲಿ ಹೊರಗಿಡಲಾಗಿದ್ದ 58 ಲಕ್ಷ ಹೆಸರುಗಳ ಪೈಕಿ ಸುಮಾರು 9.64 ಲಕ್ಷ ಮರುಸೇರ್ಪಡೆ ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಆದಾಗ್ಯೂ, ಫೆಬ್ರವರಿ 28, 2026ರಂದು ಪ್ರಕಟವಾದ ಅಂತಿಮ ಮತದಾರರ ಪಟ್ಟಿಯಲ್ಲಿ ಕೇವಲ 1.82 ಲಕ್ಷ ಹೆಸರುಗಳ ಸೇರ್ಪಡೆ ಮಾತ್ರ ಕಂಡುಬಂದಿದೆ.

ಮಾರ್ಚ್ 27, 2026ರಂದು ಅಗತ್ಯ ದಾಖಲೆಗಳೊಂದಿಗೆ ಮೇಲ್ಮನವಿ ಸಲ್ಲಿಸಿ ಮೂರು ತಿಂಗಳು ಕಳೆದಿದ್ದರೂ, ಇಂದಿನವರೆಗೂ ಸಾಮಾನ್ಯ ಮೇಲ್ಮನವಿ ಪ್ರಕ್ರಿಯೆಯಡಿಯಲ್ಲಿ ಅಲಿ ಅವರ ಮನವಿಗೆ ಯಾವುದೇ ಗಮನಾರ್ಹ ಫಲಿತಾಂಶ ಸಿಕ್ಕಿರಲಿಲ್ಲ ಎಂದು ಲೈವ್‌ಲಾ ವರದಿ ಹೇಳಿದೆ.





 

 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...