Homeಮುಖಪುಟಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

- Advertisement -
- Advertisement -

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು.

‘ಜುಂಜುನು ಎಕ್ಸ್‌ಪ್ರೆಸ್’ ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ನವೀನ್ ಚೌಧರಿ ವಿಡಿಯೋ ಪೋಸ್ಟ್ ಮಾಡಿದ್ದರು. ಈ ಪೇಜ್‌ ಅನ್ನು ಚೌಧರಿ ಸ್ಥಳೀಯ ಸಮಸ್ಯೆಗಳ ಬಗ್ಗೆ ವಿಡಿಯೋ ಹಂಚಿಕೊಳ್ಳಲು ಬಳಸುತ್ತಿದ್ದಾರೆ. ಚೌಧರಿ ಹಂಚಿಕೊಂಡ ವಿಡಿಯೋದಲ್ಲಿ, ಜುಂಜುನು ಜಿಲ್ಲೆಯ ಮೈದಾನವೊಂದರ ಒಂದು ಬದಿಯಲ್ಲಿ ಕೆಲ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ಮತ್ತು ಮತ್ತೊಂದು ಬದಿಯಲ್ಲಿ ಇನ್ನೊಂದು ಗುಂಪಿನ ಮಕ್ಕಳು ಆರ್‌ಎಸ್ಎಸ್ ತರಬೇತಿಯಲ್ಲಿ ತೊಡಗಿದ್ದ ದೃಶ್ಯವಿತ್ತು.

ವಿಡಿಯೋದಲ್ಲಿ, “ನೋಡಿ ನಾನು ಇಂದು ನಿಮಗೆ ಏನು ತೋರಿಸಲಿದ್ದೇನೆ ಎಂದರೆ… ನೀವು ಈ ಎರಡು ಮಕ್ಕಳ ಗುಂಪುಗಳನ್ನು ನೋಡಬಹುದು. ಇವರಿಬ್ಬರ ಭವಿಷ್ಯವೂ ಒಂದು ಖಾಲಿ ಪುಟದ ತರಹ ಇದೆ. ಆದರೆ ಇವರ ನಡುವೆ ಇರುವ ವ್ಯತ್ಯಾಸವೇನು ಗೊತ್ತಾ? ಈ ಎರಡು ಗುಂಪುಗಳಲ್ಲಿ ಒಂದು ಗುಂಪಿಗೆ ಮೈದಾನದಲ್ಲಿ ಬೆವರು ಹರಿಸಲು, ದೇಶಕ್ಕಾಗಿ ಪದಕಗಳನ್ನು ತರಲು ಮತ್ತು ನಮ್ಮ ತ್ರಿವರ್ಣ ಧ್ವಜವು ಹೆಮ್ಮೆ ಪಡುವಂತೆ ಮಾಡಲು ಕಲಿಸಲಾಗುತ್ತಿದೆ” ಎಂದು ಚೌಧರಿ ಹಿಂದಿಯಲ್ಲಿ ಹೇಳಿದ್ದರು.

ಮುಂದುವರಿದು, “ಮತ್ತೊಂದು ಬದಿಯಲ್ಲಿ, ಅದೇ ಸಮಯದಲ್ಲಿ ಮುಗ್ಧ ಮಕ್ಕಳಲ್ಲಿ ಧರ್ಮ ಮತ್ತು ದ್ವೇಷದ ಬೀಜವನ್ನು ಬಿತ್ತಲಾಗುತ್ತಿದೆ. ಅವರಿಗೆ ತಮ್ಮ ತಮ್ಮಲ್ಲೇ ಹೋರಾಡುವುದನ್ನು ಕಲಿಸಲಾಗುತ್ತಿದೆ. ಈಗ ನೀವೇ ಯೋಚಿಸಿ, ಮೈದಾನದಲ್ಲಿ ಬೆವರು ಹರಿಸುತ್ತಿರುವ ಮಗು ದೇಶವನ್ನು ಮುನ್ನಡೆಸುತ್ತದೆ. ಆದರೆ ಯಾರಲ್ಲಿ ದ್ವೇಷದ ಬೀಜ ಬಿತ್ತಲಾಗುತ್ತಿದೆಯೋ, ಆ ಮಗು ಭವಿಷ್ಯದಲ್ಲಿ ದೇಶಕ್ಕಾಗಿ ಏನು ಮಾಡುತ್ತದೆ?” ಎಂದಿದ್ದರು.

“ಅವರು ನನ್ನನ್ನು ಯಾರೋ ಭಯೋತ್ಪಾದಕನಂತೆ ಕಾರಿನೊಳಗೆ ಎಳೆದುಕೊಂಡು ಹೋಗಿ, ನನ್ನ ಮೇಲೆ ಮನಬಂದಂತೆ ಹಲ್ಲೆ ನಡೆಸಿದರು”

ಚೌಧರಿ ಜೂನ್ 20ರ ಸಂಜೆ ವಿಡಿಯೋ ಪೋಸ್ಟ್ ಮಾಡಿದ್ದರು. ಮರುದಿನ, ಅಂದರೆ ಜೂನ್ 21ರ ಮುಂಜಾನೆ ಅವರ ಮನೆಗೆ ಬಂದ ರಾಜಸ್ಥಾನ ಪೊಲೀಸರು, ಅವರನ್ನು ಜುಂಜುನು ಕೊತ್ವಾಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

“ಭಾನುವಾರ (ಜೂ 21) ಮುಂಜಾನೆ ವಿಡಿಯೋ ಡಿಲೀಟ್ ಮಾಡುವಂತೆ ಆರ್‌ಎಸ್ಎಸ್ ಮತ್ತು ಪೊಲೀಸರಿಗೆ ಸಂಬಂಧಿಸಿದ ಜನರಿಂದ ನನಗೆ ಬೆದರಿಕೆ ಕರೆಗಳು ಬರಲು ಪ್ರಾರಂಭವಾದವು. ನಂತರ, ಪೊಲೀಸರು ನಾಲ್ಕರಿಂದ ಐದು ಕಾರುಗಳೊಂದಿಗೆ ನನ್ನ ಮನೆಗೆ ಬಂದರು. ಅವರು ನನ್ನನ್ನು ಯಾರೋ ಭಯೋತ್ಪಾದಕನಂತೆ ಕಾರಿನೊಳಗೆ ಎಳೆದುಕೊಂಡು ಹೋಗಿ, ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗುವ ದಾರಿಯುದ್ದಕ್ಕೂ ನನ್ನ ಮೇಲೆ ಮನಬಂದಂತೆ ಹಲ್ಲೆ ನಡೆಸಿದರು. ನಿಜ ಹೇಳಬೇಕೆಂದರೆ ಪೊಲೀಸರು ನನ್ನನ್ನು ಅಪಹರಿಸಿದ್ದರು” ಎಂದು ಚೌಧರಿ ಜೂನ್ 22ರಂದು ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ.

“ಠಾಣೆಯಲ್ಲಿ ನನಗೆ ಗುರುತಿಸಲು ಸಾಧ್ಯವಾಗದ ಪೊಲೀಸ್ ಅಧಿಕಾರಿಯೊಬ್ಬರು ಹೀಗೆ ಹೇಳಿದರು, ‘ನೀನು ಯಾವ ಭ್ರಮೆಯಲ್ಲಿದ್ದೀಯಾ? ನಿಮ್ಮಂತಹ ಸೊಳ್ಳೆ-ನೊಣಗಳು ಹೀಗೆ ಮಾಡುತ್ತಲೇ ಇರುತ್ತವೆ, ನಾವು ಒಂದು ದಿನ ಈ ದೇಶದಲ್ಲಿ ಕೇಸರಿ ಧ್ವಜವನ್ನು ಹಾರಿಸಿಯೇ ತೀರುತ್ತೇವೆ” ಎಂದು ಚೌಧರಿ ಆರೋಪಿಸಿದ್ದಾರೆ.

“ನನ್ನನ್ನು ಒಂದು ಸಣ್ಣ ಕೋಣೆಯಲ್ಲಿ ಇಡಲಾಗಿತ್ತು, ಫೋನ್ ವಶಪಡಿಸಿಕೊಳ್ಳಲಾಗಿತ್ತು ಮತ್ತು ಸಂಜೆಯವರೆಗೆ ಯಾರೊಂದಿಗೂ ಮಾತನಾಡಲು ಅಥವಾ ಸಹಾಯ ಕೇಳಲು ಅವಕಾಶ ನೀಡಲಿಲ್ಲ ಎಂದು ಚೌಧರಿ ಹೇಳಿದ್ದಾಗಿ ‘ದಿ ವೈರ್’ ವರದಿ ವಿವರಿಸಿದೆ.

“ಸಂಜೆಯ ವೇಳೆಗೆ ನಾನು ಹೇಗೋ ಒಂದು ಫೋನ್ ಪಡೆದು ಸಹಾಯಕ್ಕಾಗಿ ಕರೆ ಮಾಡುವಲ್ಲಿ ಯಶಸ್ವಿಯಾದೆ. ನನಗೆ ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಸಮಸ್ಯೆ ಇರುವುದರಿಂದ ಅನಾರೋಗ್ಯದ ಭಾವನೆ ಉಂಟಾಗಿತ್ತು. ನನ್ನನ್ನು ಬಂಧಿಸಲು ಅವರಿಗೆ ಯಾವುದೇ ಕಾರಣ ಸಿಗದಿದ್ದಾಗ ಸಂಜೆಯ ವೇಳೆಗೆ ಮುಂಜಾಗ್ರತಾ ಕಸ್ಟಡಿಗೆ ತೆಗೆದುಕೊಂಡರು. ಅವರು ನನ್ನಿಂದ ದಾಖಲೆಗಳಿಗೆ ಸಹಿ ಹಾಕಿಸಿಕೊಂಡರು ಮತ್ತು ನಾನು ಆ ರಾತ್ರಿಯನ್ನು ಪೊಲೀಸ್ ಠಾಣೆಯಲ್ಲೇ ಕಳೆಯಬೇಕಾಯಿತು. ಇಂದು ನನಗೆ ಜಾಮೀನು ಸಿಕ್ಕಿದೆ” ಎಂದು ಚೌಧರಿ ಹೇಳಿದ್ದಾಗಿ ಎಂದು ವರದಿ ಉಲ್ಲೇಖಿಸಿದೆ.

‘ಒಬ್ಬ ವ್ಯಕ್ತಿ ಇಂತಹ ವಿಷಯವನ್ನು ಪೋಸ್ಟ್ ಮಾಡಿದರೆ ಸಮಾಜದಲ್ಲಿ ದ್ವೇಷ ಹರಡುತ್ತದೆ’

ಈ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ಜುಂಜುನು ಕೊತ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಶ್ರವಣ್ ಕುಮಾರ್ ಮೀಲ್ ಅವರನ್ನು ನಾವು ಸಂಪರ್ಕಿಸಿದ್ದೆವು. ಈ ವೇಳೆ ಚೌಧರಿ ಮೇಲೆ ಹಲ್ಲೆ ನಡೆಸಿರುವುದನ್ನು ಅವರು ನಿರಾಕರಿಸಿದ್ದಾರೆ ಎಂದು ದಿ ವೈರ್ ವರದಿ ಉಲ್ಲೇಖಿಸಿದೆ.

ಶಾಂತಿ ಕದಡಿದ ಆರೋಪದ ಮೇಲೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 170 ರ ಅಡಿಯಲ್ಲಿ ಚೌಧರಿ ಅವರನ್ನು ಮುಂಜಾಗ್ರತಾ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಎಸ್‌ಎಚ್‌ಒ ಮೀಲ್ ತಿಳಿಸಿದ್ದಾರೆ. ಪೋಸ್ಟ್ ಯಾರ ವಿರುದ್ಧವಾಗಿದೆ ಎಂಬುದಕ್ಕಿಂತ ಸಮಾಜದಲ್ಲಿ ಹಗೆತನ ತಡೆಯುವುದು ತಮ್ಮ ಆದ್ಯತೆಯಾಗಿದ್ದು, ಹಲ್ಲೆ ಆರೋಪಗಳು ಸುಳ್ಳು ಎಂದು ಅವರು ಹೇಳಿದ್ದಾರೆ.

ಚೌಧರಿ ಅವರ ಪೋಸ್ಟ್‌ ವಿರುದ್ಧ ದೂರು ನೀಡಿದ ಜನರಿಂದ ಪೊಲೀಸರಿಗೆ ಹಲವಾರು ಫೋನ್ ಕರೆಗಳು ಬಂದಿದ್ದವು. ಚೌಧರಿ ಅವರನ್ನು ಇಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೀಲ್ ಸೋಮವಾರ ತಿಳಿಸಿದ್ದಾಗಿ ದಿ ವೈರ್ ಉಲ್ಲೇಖಿಸಿದೆ.

ಬೆಂಬಲಕ್ಕೆ ನಿಂತ ಕಾಂಗ್ರೆಸ್

ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

“ಆರ್‌ಎಸ್‌ಎಸ್‌ನ ನಿಜವಾದ ಮುಖವನ್ನು ಬಯಲು ಮಾಡುವ ಈ ವಿಡಿಯೋ ಪೋಸ್ಟ್ ಮಾಡುವುದು ಅಪರಾಧವಾಗಿದ್ದರೆ, ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಈ ಅಪರಾಧವನ್ನು ಪದೇ ಪದೇ ಮಾಡುತ್ತಾನೆ. ದ್ವೇಷ ಮತ್ತು ವಿಭಜನೆಯ ನಡುವೆ ಕ್ರೀಡೆ ಹಾಗೂ ರಾಷ್ಟ್ರ ನಿರ್ಮಾಣದ ಬಗ್ಗೆ ಮಾತನಾಡುವುದು ಅಪರಾಧವಾಗಿದ್ದರೆ, ನಾವು ಈ ಅಪರಾಧವನ್ನು ಪದೇ ಪದೇ ಮಾಡುತ್ತೇವೆ” ಎಂದು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಅವರು ಜೂನ್ 21ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು. ಜೊತೆಗೆ ಚೌಧರಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಪುಟದಿಂದ ಪೋಸ್ಟ್ ಮಾಡಿದ್ದ ವಿಡಿಯೋವನ್ನು ಸಹ ಹಂಚಿಕೊಂಡಿದ್ದರು.

ಜೂನ್ 22ರಂದು ಚೌಧರಿ ಬಿಡುಗಡೆಯಾದ ಬಳಿಕ ಅವರನ್ನು ಭೇಟಿಯಾದ ದೋತಾಸ್ರಾ, “ನವೀನ್ ಅವರ ಧೈರ್ಯ, ಭಯ ಮತ್ತು ದೌರ್ಜನ್ಯದ ನಡುವೆಯೂ ಸತ್ಯವನ್ನು ಮಾತನಾಡುವ ಧೈರ್ಯ ಹೊಂದಿರುವ ಎಲ್ಲಾ ಯುವಕರಿಗೆ ಒಂದು ಸ್ಫೂರ್ತಿಯಾಗಿದೆ. ಎಷ್ಟು ದಮನ ಮಾಡುತ್ತಾರೋ ಆರ್‌ಎಸ್‌ಎಸ್ ಮತ್ತು ಅದರ ದ್ವೇಷದ ನಿಜವಾದ ವಾಸ್ತವಕ್ಕೆ ಅಷ್ಟೇ ಬಲವಾದ ಪ್ರತಿಕ್ರಿಯೆ ಸಿಗುತ್ತದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಬೆದರಿಕೆಗಳ ಹೊರತಾಗಿಯೂ, ನಾನು ನನ್ನ ಪೇಜ್ ಮೂಲಕ ಸಾರ್ವಜನಿಕ ಹಿತಾಸಕ್ತಿಯ ಸ್ಥಳೀಯ ಸಮಸ್ಯೆಗಳನ್ನು ಎತ್ತುತ್ತಲೇ ಇರುತ್ತೇನೆ” ಎಂದು ಚೌಧರಿ ಹೇಳಿದ್ದಾರೆ.

“ಇದು ಪ್ರಜಾಪ್ರಭುತ್ವದ ಕೊಲೆ. ಯಾರು ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಪ್ರಶ್ನಿಸುತ್ತಾರೋ, ಅವರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಯಾರಾದರೂ ತಮ್ಮನ್ನು ಪ್ರಶ್ನಿಸಿದರೆ ಅವರ ಗತಿಯೂ ನನ್ನಂತೆಯೇ ಆಗುತ್ತದೆ ಎಂಬ ಸಂದೇಶವನ್ನು ಅವರು ನೀಡಲು ಬಯಸುತ್ತಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ದೇಶದ ಕೋಮು ಸೌಹಾರ್ದತೆಯನ್ನು ಹಾಳುಮಾಡಲು ಬಯಸುತ್ತಿವೆ ಮತ್ತು ಅದಕ್ಕಾಗಿಯೇ ನಾನು ಆ ವಿಡಿಯೋವನ್ನು ಪೋಸ್ಟ್ ಮಾಡಿದ್ದೆ” ಎಂದು ಚೌಧರಿ ಹೇಳಿರುವುದಾಗಿ ‘ದಿ ವೈರ್’ ವರದಿ ತಿಳಿಸಿದೆ.

Courtesy : thewire.in



















ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...