Homeಮುಖಪುಟಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ನೀಡುವಂತೆ ಕೋರಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಏಪ್ರಿಲ್‌ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಲಭಿಸಿದ 58,812 ಮತಗಳ ವಿರುದ್ಧ ಸುವೇಂದು ಅಧಿಕಾರಿ ಅವರು 73,917 ಮತಗಳನ್ನು ಪಡೆಯುವ ಮೂಲಕ 15,105 ಮತಗಳ ಅಂತರದಿಂದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆಯನ್ನು ಸೋಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೌರಂಗ್ ಕಾಂತ್ ಅವರ ಪೀಠವು, ಮಮತಾ ಬ್ಯಾನರ್ಜಿ ಅವರು ಸಲ್ಲಿಸಿರುವ ಚುನಾವಣಾ ಅರ್ಜಿಯು ಪ್ರಜಾಪ್ರತಿನಿಧಿ ಕಾಯ್ದೆಯ ನಿಯಮಾವಳಿಗಳಿಗೆ ಅನುಗುಣವಾಗಿದೆ ಎಂಬುದು ಮೇಲ್ನೋಟಕ್ಕೆ ಮನವರಿಕೆಯಾಗಿದೆ ಎಂದು ತಿಳಿಸಿದೆ. ಆದ್ದರಿಂದ, ಈ ಹಂತದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 86(1) ರ ಅಡಿಯಲ್ಲಿ ಈ ಅರ್ಜಿಯನ್ನು ವಜಾಗೊಳಿಸಲು ಯಾವುದೇ ಆಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ.

“ಪ್ರತಿವಾದಿಗಳ ಪರ ವಕೀಲರು ನಾಲ್ಕು ವಾರಗಳ ಒಳಗೆ ತಮ್ಮ ಆಕ್ಷೇಪಣಾ ಅಫಿಡವಿಟ್‌ಗಳನ್ನು ಸಲ್ಲಿಸಬೇಕು. ಅದಕ್ಕೆ ಪ್ರತಿಯಾಗಿ ಅರ್ಜಿದಾರರು ಮುಂದಿನ ನಾಲ್ಕು ವಾರಗಳಲ್ಲಿ ಉತ್ತರಿಸಬೇಕು,” ಎಂದು ಆದೇಶಿಸಿದ ನ್ಯಾಯಾಲಯವು, ಪ್ರಕರಣದ ಮುಂದಿನ ವಿಚಾರಣೆಯನ್ನು 12 ವಾರಗಳ ವರೆಗೆ ಮುಂದೂಡಿದೆ. ಇದರೊಂದಿಗೆ, ಭವಾನಿಪುರ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಬಳಸಲಾದ ಎಲೆಕ್ಟ್ರಾನಿಕ್ ಮತಯಂತ್ರಗಳು, ವಿವಿಪ್ಯಾಟ್ ಯಂತ್ರಗಳು ಹಾಗೂ ಮತ ಎಣಿಕೆ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಕಾಯ್ದಿರಿಸುವಂತೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳ ಸ್ಪಷ್ಟನೆ:

ವಿಶೇಷವೆಂದರೆ, ಪ್ರಕರಣದ ವಿಚಾರಣೆ ಆರಂಭಿಸುವ ಮುನ್ನ ನ್ಯಾಯಮೂರ್ತಿ ಗೌರಂಗ್ ಕಾಂತ್ ಅವರು ತಮ್ಮ ಸಹೋದರ ಭಾರತೀಯ ಜನತಾ ಪಾರ್ಟಿಯ (BJP) ರಾಷ್ಟ್ರೀಯ ವಕ್ತಾರರಾಗಿದ್ದಾರೆ ಎಂಬ ವಿಷಯವನ್ನು ಬಹಿರಂಗಪಡಿಸಿದರು. “ನನ್ನ ಹಿರಿಯ ಸಹೋದರ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆ ಅದು ನಿಮ್ಮ ಆತಂಕಕ್ಕೆ ಕಾರಣವಾಗಬಹುದು. ಆದ್ದರಿಂದ, ಈ ವಿಷಯವನ್ನು ಸಂಪೂರ್ಣವಾಗಿ ಮುಂಚಿತವಾಗಿಯೇ ಬಹಿರಂಗಪಡಿಸುತ್ತಿದ್ದೇನೆ, ಇದರಿಂದ ನಿಮಗೆ ಮುಂದೆ ಯಾವುದೇ ಸಮಸ್ಯೆಯಾಗಬಾರದು. ನಿಮ್ಮ ಒಪ್ಪಿಗೆಯ ನಂತರವೇ ನಾನು ಇದರ ವಿಚಾರಣೆ ನಡೆಸುತ್ತೇನೆ,” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಮಮತಾ ಬ್ಯಾನರ್ಜಿ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಲ್ಯಾಣ್ ಬಂಡೋಪಾಧ್ಯಾಯ ಅವರು, ತಮಗೆ ನ್ಯಾಯಮೂರ್ತಿ ಕಾಂತ್ ಅವರ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಅವರು ಪ್ರಕರಣದ ವಿಚಾರಣೆ ನಡೆಸುವುದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದರು.

ತದನಂತರ ವಾದ ಮುಂದುವರಿಸಿದ ಕಲ್ಯಾಣ್ ಬಂಡೋಪಾಧ್ಯಾಯ, “ಮತ ಎಣಿಕೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ನಡೆದಿವೆ. ಆ ಅಧಿಕಾರಿಯಿಂದ ಪಕ್ಷಪಾತವಾಗುವ ಸಾಧ್ಯತೆ ಇದೆ ಎಂಬ ಆಕ್ಷೇಪಗಳಿದ್ದರೂ ಭವಾನಿಪುರ ಕ್ಷೇತ್ರಕ್ಕೆ ಅವರನ್ನೇ ಜವಾಬ್ದಾರರನ್ನಾಗಿ ಮಾಡಲಾಗಿತ್ತು. ಈಗ ಅವರನ್ನು ಮುಖ್ಯಮಂತ್ರಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ,” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

“ನಮ್ಮ ಎರಡನೇ ಪ್ರಮುಖ ಆಕ್ಷೇಪಣೆಯೆಂದರೆ ಪಕ್ಷಪಾತ ಧೋರಣೆ. ಇದೇ ಚುನಾವಣಾಧಿಕಾರಿ (RO) 2021 ರ ನಂದಿಗ್ರಾಮ ಚುನಾವಣೆಯಲ್ಲೂ ಕಾರ್ಯನಿರ್ವಹಿಸಿದ್ದರು. ಆ ಬಾರಿಯೂ ನನ್ನ ಕಕ್ಷಿದಾರರು (ಮಮತಾ ಬ್ಯಾನರ್ಜಿ) ಸೋಲನ್ನು ಅನುಭವಿಸಿದ್ದರು. ಈ ಅಧಿಕಾರಿಯ ವಿರುದ್ಧ ಹಲವು ದೂರುಗಳಿವೆ,” ಎಂದು ಬಂಡೋಪಾಧ್ಯಾಯ ವಾದಿಸಿದರು.

ಇಂದು ಹೊರಡಿಸಲಾದ ಆದೇಶದಲ್ಲಿ ನ್ಯಾಯಾಲಯವು ಮತ್ತೊಂದು ಅಂಶವನ್ನು ದಾಖಲಿಸಿಕೊಂಡಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಅವಧಿಯಲ್ಲಿ ಗಣನೀಯ ಸಂಖ್ಯೆಯ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕಾನೂನುಬಾಹಿರವಾಗಿ ಕೈಬಿಡಲಾಗಿದೆ ಎಂಬ ಮಮತಾ ಬ್ಯಾನರ್ಜಿ ಅವರ ವಾದವನ್ನೂ ಪರಿಗಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...