HomeಅಂಕಣಗಳುKarnataka SIRವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

- Advertisement -
- Advertisement -

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ರಾಮದಾಸ್ ಅವರ ಹೆಸರನ್ನು ಕೈಬಿಟ್ಟಿರುವುದನ್ನು ಉಲ್ಲೇಖಿಸಿ, ಪೊಲೀಸರು ನಕಾರಾತ್ಮಕ ವರದಿ (Adverse Report) ನೀಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಾಗಿ ಅವರ ಪಾಸ್‌ಪೋರ್ಟ್ ನವೀಕರಣ ವಿಳಂಬವಾಗುತ್ತಿದ್ದು, ಇದು ಪತ್ರಕರ್ತರು ಮತ್ತು ರಾಜಕೀಯ ನಾಯಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

“ಖ್ಯಾತ ಹಿರಿಯ ಪತ್ರಕರ್ತ ಆರ್. ರಾಜಗೋಪಾಲ್ ಅವರಿಗೆ ಪಾಸ್‌ಪೋರ್ಟ್ ನವೀಕರಣವನ್ನು ನಿರಾಕರಿಸಿರುವ ವರದಿಗಳ ಹಿನ್ನೆಲೆಯಲ್ಲಿ, ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಕೋರಿ ನಾನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ” ಎಂದು ಕೇರಳ ಸಿಎಂ ಸತೀಶನ್ ತಮ್ಮ ‘X’ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಬರೆದಿರುವ ಪತ್ರದಲ್ಲಿ, ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದರ ವಿರುದ್ಧ ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದ್ದರೂ, ಪೊಲೀಸರು ಅದನ್ನೇ ಆಧಾರವಾಗಿಟ್ಟುಕೊಂಡು ನಕಾರಾತ್ಮಕ ವರದಿ ನೀಡಿರುವುದು ಸರಿಯಲ್ಲ ಎಂದಿದ್ದಾರೆ.

“ವಿಶೇಷ ತೀವ್ರ ಪರಿಷ್ಕರಣೆಯ ಸಂದರ್ಭದಲ್ಲಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದನ್ನೇ ಆಧಾರವಾಗಿಟ್ಟುಕೊಂಡು ಈ ನಕಾರಾತ್ಮಕ ವರದಿ ನೀಡಲಾಗಿದೆ ಎಂದು ನನಗೆ ತಿಳಿದುಬಂದಿದೆ. ಈ ಮತದಾರರ ಪಟ್ಟಿಯ ಸಮಸ್ಯೆಯನ್ನು ಈಗಾಗಲೇ ಸೂಕ್ತ ಮೇಲ್ಮನವಿ ಪ್ರಕ್ರಿಯೆಯ ಮೂಲಕ ಪರಿಹರಿಸಲಾಗುತ್ತಿದೆ. ಆದರೂ, ಪೊಲೀಸರ ಈ ವರದಿಯಿಂದಾಗಿ ಅವರ ಪಾಸ್‌ಪೋರ್ಟ್ ನವೀಕರಣ ವಿಳಂಬವಾಗಿದೆ,” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜಗೋಪಾಲ್ ರಾಮದಾಸ್ ಅವರು ಕಳೆದ ಮೂರು ದಶಕಗಳಿಂದ ಕೋಲ್ಕತ್ತಾದಲ್ಲಿ ವಾಸಿಸುತ್ತಾ ಕೆಲಸ ಮಾಡುತ್ತಿರುವ ಒಬ್ಬ ಹೆಸರಾಂತ ಮಲಯಾಳಿ ಪತ್ರಕರ್ತರಾಗಿದ್ದಾರೆ ಎಂದು ಬಣ್ಣಿಸಿದ ಸತೀಶನ್, ಭಾರತೀಯ ಪತ್ರಿಕೋದ್ಯಮಕ್ಕೆ ಅವರ ಕೊಡುಗೆ ಮತ್ತು ಅವರ ಕುಟುಂಬದ ಸಾರ್ವಜನಿಕ ಸೇವೆಯ ಪರಂಪರೆಯನ್ನು ಎತ್ತಿ ತೋರಿಸಿದ್ದಾರೆ. “ಇದನ್ನು ಗಮನದಲ್ಲಿಟ್ಟುಕೊಂಡು, ತಾವು ವೈಯಕ್ತಿಕವಾಗಿ ಈ ವಿಷಯವನ್ನು ತುರ್ತಾಗಿ ಪರಿಶೀಲಿಸಬೇಕೆಂದು ವಿನಂತಿಸುತ್ತೇನೆ,” ಎಂದು ಕೇರಳ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ರಾಜಕೀಯ ದ್ವೇಷದ ಆರೋಪ ಮಾಡಿದ ಪಿಣರಾಯಿ ವಿಜಯನ್

ಈ ವಿವಾದವು ಕೇರಳದ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಅವರಿಂದಲೂ ತೀವ್ರ ರಾಜಕೀಯ ಪ್ರತಿಕ್ರಿಯೆಯನ್ನು ಸೆಳೆದಿದೆ. ಪಾಸ್‌ಪೋರ್ಟ್ ನವೀಕರಣವನ್ನು ನಿರಾಕರಿಸಿರುವುದನ್ನು “ದಿಗ್ಭ್ರಮೆಗೊಳಿಸುವಂತಹದ್ದು” ಎಂದು ಕರೆದಿರುವ ಅವರು, ಇದು ಅಧಿಕಾರಿಗಳ ರಾಜಕೀಯ ದ್ವೇಷದ ಕ್ರಮ ಎಂದು ಆರೋಪಿಸಿದ್ದಾರೆ.

ಪಿಣರಾಯಿ ವಿಜಯನ್ ಅವರ ಪ್ರಕಾರ, ಮಾರ್ಚ್ ತಿಂಗಳಲ್ಲಿ ಕೋಲ್ಕತ್ತಾದ ಬಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಹೆಸರು ಕಳೆದುಕೊಂಡ ಸುಮಾರು 27 ಲಕ್ಷ ಮತದಾರರಲ್ಲಿ ರಾಮದಾಸ್ ಕೂಡ ಒಬ್ಬರಾಗಿದ್ದಾರೆ. ಈ ಹೆಸರು ಕೈಬಿಟ್ಟಿರುವುದನ್ನು ಹಿರಿಯ ಪತ್ರಕರ್ತರು ಈಗಾಗಲೇ ನ್ಯಾಯಾಧೀಕರಣದ (Tribunal) ಮುಂದೆ ಪ್ರಶ್ನಿಸಿದ್ದಾರೆ.

ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ (RPO) ಹಾಜರಾಗಲು ಕೋರಿದ್ದರೂ, ರಾಮದಾಸ್ ಅವರಿಗೆ ಜುಲೈ 17 ರಂದು ಮಾತ್ರ ಅಪಾಯಿಂಟ್‌ಮೆಂಟ್ ನೀಡಲಾಗಿದೆ. ಇದರಿಂದಾಗಿ ಅವರು ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿರುವ ತಮ್ಮ ಮಗಳ ಮದುವೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ.

“ಜಾಗತಿಕವಾಗಿ ಪ್ರಸಿದ್ಧರಾದ ಒಬ್ಬ ಸಂಪಾದಕರ ಪರಿಸ್ಥಿತಿಯೇ ಹೀಗಾದರೆ, ಇನ್ನು ಈ ದೇಶದ ಸಾಮಾನ್ಯ ನಾಗರಿಕರ ಸ್ಥಿತಿ ಏನಾಗಬೇಡ?” ಎಂದು ವಿಜಯನ್ ಪ್ರಶ್ನಿಸಿದ್ದಾರೆ.

ಬಿಜೆಪಿಯನ್ನು ಸತತವಾಗಿ ಟೀಕಿಸುತ್ತಿದ್ದ ಕಾರಣಕ್ಕಾಗಿಯೇ ರಾಮದಾಸ್ ಅವರನ್ನು ಗುರಿ ಮಾಡಲಾಗಿದೆ ಎಂದು ಆರೋಪಿಸಿದ ವಿಜಯನ್, ನಾಗರಿಕರನ್ನು ವ್ಯವಸ್ಥಿತವಾಗಿ ಹೊರಗಿಡಲು ಅಧಿಕಾರಿಗಳು ಈ SIR ಪ್ರಕ್ರಿಯೆಯನ್ನು ಒಂದು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

“ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ವಿಭಜಕ ಹಿಂದುತ್ವ ರಾಜಕೀಯದ ಅಜೆಂಡಾವನ್ನು ಮುನ್ನಡೆಸುವ ಸಾಧನವಾಗಿ ಮಾರ್ಪಟ್ಟಿದೆ. ಈ ಪ್ರಕ್ರಿಯೆಯ ಆಧಾರದ ಮೇಲೆ ನಾಗರಿಕತ್ವವನ್ನು ನಿರ್ಧರಿಸದಂತೆ ನೋಡಿಕೊಳ್ಳಬೇಕು. ನಾಗರಿಕರ ಬದುಕು ಮತ್ತು ಹಕ್ಕುಗಳನ್ನು ತುಳಿದುಹಾಕಿದಾಗ, ಈ ದೇಶವನ್ನು ಪ್ರೀತಿಸುವವರು ಸುಮ್ಮನೆ ಕೂರಲು ಸಾಧ್ಯವಿಲ್ಲ,” ಎಂದು ಅವರು ಹೇಳಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತಾದ ಚರ್ಚೆಗಳು ಈಗಾಗಲೇ ದೇಶಾದ್ಯಂತ ನಡೆಯುತ್ತಿದ್ದು, ಈಗ ಈ ಪಾಸ್‌ಪೋರ್ಟ್ ವಿವಾದವು ಅದಕ್ಕೆ ಮತ್ತೊಂದು ರಾಜಕೀಯ ಆಯಾಮವನ್ನು ನೀಡಿದೆ. ವಿರೋಧ ಪಕ್ಷದ ನಾಯಕರು ಇದರ ಅನುಷ್ಠಾನ ಮತ್ತು ನಾಗರಿಕರ ಹಕ್ಕುಗಳ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ತೀವ್ರ ಕಳವಳ ವ್ಯಕ್ಪಡಿಸಿದ್ದಾರೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತೀವ್ರ ಖಂಡನೆ

ಈ ನಡುವೆ, ಟ್ರಿಬ್ಯುನಲ್‌ಗಳ ಮುಂದೆ ಬಾಕಿ ಇರುವ ಇಂತಹ ಅಪೀಲುಗಳ ವಿಚಾರಣೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಕಲ್ಕತ್ತಾ ಹೈಕೋರ್ಟ್‌ಗೆ ಸೂಚಿಸಿದೆ. ಭಾನುವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ದೇಶದ ಪ್ರತಿಷ್ಠಿತ ‘ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ’ ಸಂಸ್ಥೆಯು, “ಯಾರು ಭಾರತದ ನಾಗರಿಕರು ಮತ್ತು ಯಾರು ಅಲ್ಲ ಎಂಬುದನ್ನು ನಿರ್ಧರಿಸುವ ಇಂತಹ ಅಧಿಕಾರಿಶಾಹಿ ಧೋರಣೆ”ಯನ್ನು ತೀವ್ರವಾಗಿ ಖಂಡಿಸಿದೆ.

“ಚುನಾವಣಾ ಆಯೋಗ ನಡೆಸುತ್ತಿರುವ ಈ ವಿಶೇಷ ತೀವ್ರ ಪರಿಷ್ಕರಣೆಯಿಂದಾಗಿ (SIR) ದೇಶದ ಲಕ್ಷಾಂತರ ಭಾರತೀಯರು ಎಂತಹ ನರಕಯಾತನೆ ಅನುಭವಿಸುತ್ತಿದ್ದಾರೆ ಎಂಬುದಕ್ಕೆ ರಾಜಗೋಪಾಲ್ ಅವರ ಪರಿಸ್ಥಿತಿಯೇ ಸಾಕ್ಷಿ. ದೇಶವೇ ಗುರುತಿಸುವ ಒಬ್ಬ ಪ್ರಮುಖ ಸಾರ್ವಜನಿಕ ವ್ಯಕ್ತಿಗೇ ಇಂತಹ ಪರಿಸ್ಥಿತಿ ಎದುರಾಗಬೇಕಾದರೆ, ಇನ್ನು ಅಧಿಕಾರಿಗಳ ಒಂದೇ ಒಂದು ಪೆನ್ನಿನ ಗೀಟಿಗೆ ವೋಟಿನ ಹಕ್ಕನ್ನು ಕಳೆದುಕೊಂಡು, ತಮ್ಮ ನೋವನ್ನು ಹೇಳಿಕೊಳ್ಳಲು ಧ್ವನಿಯೇ ಇಲ್ಲದ ಸಾಮಾನ್ಯ ಬಡ ಜನರ ಗತಿ ಏನಾಗಿರಬೇಡ ಎಂಬುದನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ,” ಎಂದು ಎಡಿಟರ್ಸ್ ಗಿಲ್ಡ್ ಆಕ್ರೋಶ ವ್ಯಕ್ತಪಡಿಸಿದೆ.

ಕೋಲ್ಕತ್ತಾದ ಬ್ಯಾಲಿಗಂಜ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ರಾಜಗೋಪಾಲ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ನೋಟ್‌ನಲ್ಲಿ ಬಹಿರಂಗಪಡಿಸಿದ್ದರು. ಬಂಗಾಳ ವಿಧಾನಸಭೆ ಚುನಾವಣೆಗೆ ಮುನ್ನ ಹೆಸರು ಕಳೆದುಕೊಂಡಿರುವ ಸುಮಾರು 27 ಲಕ್ಷ ಮತದಾರರ ಪ್ರಕರಣಗಳನ್ನು ಇತ್ಯರ್ಥಪಡಿಸಲು ರಚಿಸಲಾಗಿರುವ ಅಪೀಲು ಟ್ರಿಬ್ಯುನಲ್ ಮುಂದೆ ಸದ್ಯ ಇವರ ಅರ್ಜಿಯೂ ಬಾಕಿ ಇದೆ.

ಕಳೆದ ಮೇ ತಿಂಗಳಲ್ಲಿ ಈ ಕುರಿತು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, “ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸುವ ಅರ್ಹತೆಯನ್ನು ನಿರ್ಧರಿಸಲು ಚುನಾವಣಾ ಆಯೋಗವು ಒಬ್ಬ ವ್ಯಕ್ತಿಯ ಪೌರತ್ವದ ಬಗ್ಗೆ ಸೀಮಿತ ವಿಚಾರಣೆ ನಡೆಸಬಹುದು. ಆದರೆ, ಆ ತನಿಖೆಯನ್ನೇ ಆ ವ್ಯಕ್ತಿಯ ಪೌರತ್ವದ ಅಂತಿಮ ನಿರ್ಧಾರ ಎಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟವಾಗಿ ಹೇಳಿತ್ತು.

ಆದರೆ, ವಾಸ್ತವದಲ್ಲಿ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆಯಡಿ ಹೆಸರು ಕಳೆದುಕೊಂಡ ಲಕ್ಷಾಂತರ ಜನರಿಗೆ ಇವತ್ತು ಬ್ಯಾಂಕ್ ಖಾತೆ, ಪಡಿತರ ಸೌಲಭ್ಯ ಸೇರಿದಂತೆ ಎಲ್ಲಾ ಸರ್ಕಾರಿ ಯೋಜನೆಗಳನ್ನು ನಿರಾಕರಿಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ, ಬಂಗಾಳದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು, ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದ ಮಹಿಳೆಯರಿಗೆ ಮಾಸಿಕ 3,000 ರೂಪಾಯಿ ನೀಡುವ ಕಲ್ಯಾಣ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಈಗಾಗಲೇ ಘೋಷಿಸಿದೆ. ವೋಟರ್ ಲಿಸ್ಟ್‌ನಿಂದ ಹೆಸರು ತೆಗೆದ ನೆಪದಲ್ಲಿ ಬಡವರ ಬದುಕುವ ಹಕ್ಕನ್ನೇ ಕಸಿದುಕೊಳ್ಳಲಾಗುತ್ತಿದೆ ಎಂಬುದಕ್ಕೆ ಈ ಹಿರಿಯ ಪತ್ರಕರ್ತನ ಕಥೆಯೇ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...