Homeಕರ್ನಾಟಕಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ...

ಸಿಎಎ ಪರ ಜನಜಾಗೃತಿಗೆ ತಡೆ: ಬಿಜೆಪಿ ಕಾರ್ಯಕರ್ತರಿಗೆ ಬೆವರಿಳಿಸಿದ ಹೊಸಪೇಟೆ ಜನತೆ…

ಏನೂ ಮಾಡಿದರೂ ಇಲ್ಲಿ ಪ್ರಚಾರ ಸಾಧ್ಯವಿಲ್ಲ ಎಂದು ಅರಿತ ನಂತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆಲ್ಲಗೆ ಒಬ್ಬಬ್ಬರಾಗಿ ಸ್ಥಳದಿಂದ ಕೊನೆಗೂ ನಿರ್ಗಮಿಸಿದ್ದಾರೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಜನಜಾಗೃತಿ ಮೂಡಿಸಲು ಮನೆ ಮನೆ ಭೇಟಿಗೆ ತೆರಳಿದ್ದ ಬಿಜೆಪಿ  ಮುಖಂಡರು, ಕಾರ್ಯಕರ್ತರನ್ನು ತಡೆದು ಧಿಕ್ಕಾರದ ಘೋಷಣೆ ಕೂಗಿ ವಾಪಸ್‌ ಕಳಿಸಿದ ಘಟನೆ ಇಂದು ಹೊಸಪೇಟೆಯಲ್ಲಿ ಜರುಗಿದೆ.

ಇದರಿಂದ ಬಿಜೆಪಿ ಕಾರ್ಯಕರ್ತರಿಗೆ ತೀವ್ರ ಮುಖಭಂಗವುಂಟಾಗಿದ್ದು ಒಂದು ಕರಪತ್ರ ಹಂಚದೆ ವಾಪಸ್‌ ತೆರಳಬೇಕಾಗ ಪರಿಸ್ಥಿತಿ ಉಂಟಾಗಿದೆ.

ಹೊಸಪೇಟೆಯ ಚಲವಾದಿಕೇರಿ ಓಣಿಗೆ ಇಂದು ಬೆಳಿಗ್ಗೆಯೇ ಹಲವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಎ ಪರ ಪ್ರಚಾರಕ್ಕೆ ಹೊರಟಿದ್ದರು. ಬಿಜೆಪಿ ಕಾರ್ಯಕರ್ತರು ಬರುವ ವಿಷಯ ಗೊತ್ತಾಗುತ್ತಿದ್ದಂತೆ ಓಣಿಯ ಪ್ರವೇಶ ದ್ವಾರ ಬಳಿ ಸೇರಿದ ಸ್ಥಳೀಯ ನಿವಾಸಿಗಳು ಕಪ್ಪು ಬಾವುಟ ಪ್ರದರ್ಶಿಸಿ, ಗೋ ಬ್ಯಾಕ್, ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ.

ಅಲ್ಲದೇ ಬಿಜೆಪಿ, ಆರ್‌ಎಸ್‌ಎಸ್‌ನಿಂದ ಆಜಾದಿ, ಹಿಂದೂಸ್ತಾನ್ ಜಿಂದಾಬಾದ್, ಸಂವಿಧಾನ ಜಿಂದಾಬಾದ್‌ ಘೋಷಣೆಗಳನ್ನು ಕೂಗಿ ಓಣಿಗೆ ಪ್ರವೇಶ ನೀಡದೇ ತಡೆದಿದ್ದಾರೆ. ‘ನಾವು ಕರಪತ್ರಗಳನ್ನು ಕೊಟ್ಟು ಹೋಗಲು ಬಂದಿದ್ದೇವೆ. ಅದಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಬಿಜೆಪಿ ಮುಖಂಡರು ಮನವಿ ಮಾಡಿದರೂ ಅದಕ್ಕೆ ಸೊಪ್ಪು ಹಾಕದ ಸ್ಥಳೀಯರು ನೀವು ಇಲ್ಲಿಗೆ ಬರುವುದೇ ಬೇಡ, ನಿಮಗೆ ಪ್ರವೇಶವಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಎರೂ ಕಡೆಯವರ ನಡುವೆ ಪರಸ್ಪರ ವಾಗ್ವಾದ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಬಂದಿದ್ದು, ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿದರು. ನಾವು ಪ್ರಚಾರ ನಡೆಸಿಯೇ ಸಿದ್ದ ಎಂದು ಓಣಿ ಪ್ರವೇಶಿಸಿಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಜನರು ತಡೆದಿದ್ದಾರೆ. ಸ್ಥಳದಲ್ಲಿ ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರು ಅಸಹಾಯಕರಾಗಿ ಬಿಜೆಪಿಯವರಿಗೆ ಬುದ್ದಿ ಹೇಳಿದ್ದಾರೆ.

ಓಣಿಯಲ್ಲಿ ದಲಿತರು, ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ನಮಗೆ ಸಿಎಎ, ಎನ್‌ಆರ್‌ಸಿ ಬೇಡ. ಹಿಂದೂ ಮುಸ್ಲಿಮರು ಅಣ್ಣತಮ್ಮಂದಿರಂತೆ ಬದುಕುತ್ತಿದ್ದೇವೆ. ಈ ದೇಶ ನಮ್ಮದು. ಇಲ್ಲಿಯೇ ಹುಟ್ಟಿದ್ದೇವೆ, ಇಲ್ಲಿಯೇ ಸಾಯುತ್ತೇವೆ. ನೀವು ಇಲ್ಲಿ ಬಂದು ನಮ್ಮ ಸೌಹಾರ್ದ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನೂ ಮಾಡಿದರೂ ಇಲ್ಲಿ ಪ್ರಚಾರ ಸಾಧ್ಯವಿಲ್ಲ ಎಂದು ಅರಿತ ನಂತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆಲ್ಲಗೆ ಒಬ್ಬಬ್ಬರಾಗಿ ಸ್ಥಳದಿಂದ ಕೊನೆಗೂ ನಿರ್ಗಮಿಸಿದ್ದಾರೆ. ಪೊಲೀಸರು ನಿಟ್ಟುಸಿರುಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...