HomeಅಂಕಣಗಳುKarnataka against SIRSIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ ನೀಡಬೇಕಾದ ಬೂತ್ ಮಟ್ಟದ ಅಧಿಕಾರಿಗಳು (BLO) ಕಚೇರಿಯಲ್ಲೇ ಕುಳಿತು ನಿಯಮ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ: ಸಾರ್ವಜನಿಕರ ಆಕ್ರೋಶ

ಸರ್ಕಾರದ ನಿಯಮಾವಳಿಗಳ ಪ್ರಕಾರ ಬಿಎಲ್‌ಒಗಳು ಪ್ರತಿಯೊಬ್ಬ ಮತದಾರರ ಮನೆಗೆ ಖುದ್ದಾಗಿ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಬೇಕು. ಆದರೆ, ಕೆಲವು ಕಡೆ ಅಧಿಕಾರಿಗಳು ನಿಯಮ ಗಾಳಿಗೆ ತೂರಿ, ತಮ್ಮ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಕುಳಿತು ಫಾರ್ಮ್‌ಗಳನ್ನು ಹಂಚುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಬೇಜವಾಬ್ದಾರಿತನಕ್ಕೆ ಬ್ರೇಕ್ ಹಾಕಲು ಮುಖ್ಯ ಚುನಾವಣಾಧಿಕಾರಿಗಳು ಈಗ ಬಿಗಿ ಕ್ರಮಕ್ಕೆ ಆದೇಶಿಸಿದ್ದಾರೆ.

ಚುನಾವಣಾಧಿಕಾರಿಗಳಿಗೆ ಸಿಇಒ ನೀಡಿರುವ ಪ್ರಮುಖ ನಿರ್ದೇಶನಗಳು:

ಚುನಾವಣಾ ಆಯೋಗದ ಅಧಿಕೃತ ಮಾರ್ಗಸೂಚಿಗಳ ಪ್ರಕಾರವೇ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಬೇಕು. ಎಲ್ಲಾ ಬಿಎಲ್‌ಒಗಳು ಕಡ್ಡಾಯವಾಗಿ ಪ್ರತಿಯೊಬ್ಬ ಮತದಾರರ ಮನೆಗೆ ಭೇಟಿ ನೀಡುವಂತೆ ಹಿರಿಯ ಅಧಿಕಾರಿಗಳು ಉಸ್ತುವಾರಿ ವಹಿಸಬೇಕು.

ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಆಯೋಗ ಹೊರಡಿಸಿರುವ ಪ್ರತಿಯೊಂದು ನಿಯಮ ಮತ್ತು ಮಾರ್ಗಸೂಚಿಗಳನ್ನು ಅಧಿಕಾರಿಗಳು ಯಾವುದೇ ಲೋಪವಿಲ್ಲದೆ ಕಡ್ಡಾಯವಾಗಿ ಪಾಲಿಸಬೇಕು.ಎನ್ಯುಮರೇಷನ್ ಫಾರ್ಮ್‌ಗಳನ್ನು ಭರ್ತಿ ಮಾಡಲು ಕಷ್ಟಪಡುವ ಅಥವಾ ಗೊಂದಲದಲ್ಲಿರುವ ಸಾರ್ವಜನಿಕರಿಗೆ ಬಿಎಲ್‌ಒಗಳು ಸ್ಥಳದಲ್ಲೇ ಇದ್ದು ಅಗತ್ಯ ನೆರವು ನೀಡಬೇಕು.

ಫಾರ್ಮ್ ಭರ್ತಿ ಮಾಡಲು ಅಥವಾ ಹೆಚ್ಚಿನ ಮಾಹಿತಿಗಾಗಿ ಮತದಾರರು ಹತ್ತಿರದ ‘ಮತದಾರರ ಸೌಲಭ್ಯ ಕೇಂದ್ರ’ಗಳಿಗೆ (Voter Facilitation Centres) ಭೇಟಿ ನೀಡಬಹುದು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದಿದ್ದಾರೆ.

“ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿ ಮತ್ತು ದೋಷಮುಕ್ತವಾಗಿ ನಡೆಯಬೇಕು. ಇದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಲೋಪ ಎಸಗುವ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು” ಎಂದು ಆಯೋಗವು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...