Homeಮುಖಪುಟ'ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ': ಮೋದಿಗೆ ಬಹಿರಂಗ ಪತ್ರ ಬರೆದ...

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

- Advertisement -
- Advertisement -

“ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?” ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ.

ದೇಶದ ಯುವ ಸಮೂಹದ ಧ್ವನಿಯನ್ನು ಕೇಂದ್ರ ಸರ್ಕಾರ ಇನ್ನೆಷ್ಟು ದಿನಗಳ ಕಾಲ ನಿರ್ಲಕ್ಷಿಸುತ್ತದೆ ಎಂದು ಪ್ರಶ್ನಿಸಿರುವ ಸಂಘಟನೆಯು, ಪ್ರಧಾನಿಯವರ ಮೌನವು ಯುವಜನರನ್ನು ಕೀಟಗಳಂತೆ ಪರಿಗಣಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಪತ್ರದಲ್ಲಿ ಗಂಭೀರವಾಗಿ ಆರೋಪಿಸಿದೆ.

ಪತ್ರದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದೆ.

ನಾಗರಿಕ ಸಮಾಜದಲ್ಲಿ ಉಪವಾಸ ಸತ್ಯಾಗ್ರಹ ಎನ್ನುವುದು ಆಡಳಿತ ಚುಕ್ಕಾಣಿ ಹಿಡಿದವರ ಮೇಲೆ ನೈತಿಕ ಒತ್ತಡವನ್ನು ತರಲು ಇರುವಂತಹದ್ದಾಗಿದೆ. ಇದರ ಹಿಂದಿರುವ ಮೂಲ ತತ್ವ ಅತ್ಯಂತ ಸರಳ: ಈ ದೇಶಕ್ಕಾಗಿ ಹಾಗೂ ಶಿಕ್ಷಣದ ಉದಾತ್ತ ಉದ್ದೇಶಕ್ಕಾಗಿ ತಮ್ಮ ಇಡೀ ಜೀವನ, ಮನಸ್ಸು ಮತ್ತು ಆತ್ಮವನ್ನು ಮುಡುಪಾಗಿಟ್ಟ ಸೋನಮ್ ವಾಂಗ್ಚುಕ್ ಅವರಂತಹ ವ್ಯಕ್ತಿಯೊಬ್ಬರು ಆಹಾರ ಸೇವಿಸಲು ನಿರಾಕರಿಸಿದಾಗ, ಅದು ಸರ್ಕಾರದಿಂದ ನೈತಿಕ ಅಥವಾ ರಾಜಕೀಯ ಪ್ರಜ್ಞಾಪೂರ್ವಕ ಪ್ರತಿಕ್ರಿಯೆಯನ್ನು ಉಂಟುಮಾಡಬೇಕಿತ್ತು. ಆದಾಗ್ಯೂ, ನೀವು ಒಂದು ಸಣ್ಣ ಪದವನ್ನೂ ಸಹ ಆಡಿಲ್ಲ,” ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ತಮ್ಮ ಬಹಿರಂಗ ಪತ್ರದಲ್ಲಿ ಪ್ರಧಾನಿ ಮೋದಿಯವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಹಿರಂಗ ಪತ್ರಕ್ಕೆ ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಹಾಗೂ ವಕ್ತಾರರಾದ ಅಶುತೋಷ್ ರಾಂಕಾ, ವೈಷ್ಣವಿ ಗೌರ್, ಆಫ್ರೀನ್ ನವಾಝ್, ದೀಪಕ್ ಬಲಿಯಾನ್, ರತ್ನಾ ಸಿಂಗ್ ಮತ್ತು ವಿಜೇತಾ ದಹಿಯಾ ಸಹಿ ಮಾಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಕಳೆದ 16 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಸಿಜೆಪಿ ಬೆಂಬಲಿಗರು ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವು ಇಂದು 8ನೇ ದಿನಕ್ಕೆ ಕಾಲಿಟ್ಟಿದೆ.

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸೋರಿಕೆಗಳಿಂದಾಗಿ ಕೋಟಿ ಕೋಟಿ ಯುವಜನರ ನಂಬಿಕೆ ಧ್ವಂಸವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ನಮ್ಮ ಶಿಕ್ಷಣ ಸಚಿವರು ತಮ್ಮ ನೈತಿಕ ಜವಾಬ್ದಾರಿಯನ್ನು ಒಪ್ಪಿಕೊಂಡು, ಕಳೆದ ಸುಮಾರು ಐದು ವರ್ಷಗಳಿಂದ ತಾವು ಅಲಂಕರಿಸಿರುವ ಹುದ್ದೆಗೆ ರಾಜೀನಾಮೆ ನೀಡಲು ನಿರಾಕರಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ನಾವು ಇಲ್ಲಿ ಪ್ರತಿಭಟನೆಗೆ ಕುಳಿತಿದ್ದೇವೆ. ಈ ಕಳಪೆ ಮತ್ತು ಮುರಿದುಬಿದ್ದಿರುವ ವ್ಯವಸ್ಥೆಯ ತೀವ್ರ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಕನಿಷ್ಠ ಪರಿಹಾರ, ಗೌರವ ಅಥವಾ ನ್ಯಾಯವನ್ನು ಒದಗಿಸಲು ನಿಮ್ಮ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ಈ ಎಲ್ಲದಕ್ಕಿಂತ ಮಿಗಿಲಾಗಿ, ಚುನಾಯಿತ ಪ್ರತಿನಿಧಿಗಳು ಮತದಾರರಿಗೆ ಉತ್ತರದಾಯಿಯಾಗಿರುತ್ತಾರೆ ಎಂಬ ಸಂವಿಧಾನದ ಅತ್ಯಂತ ಮೂಲಭೂತ ಭರವಸೆಯನ್ನು ನಾವು ಇಂದಿಗೂ ನಂಬಿರುವುದರಿಂದಲೇ ಇಲ್ಲಿ ಧರಣಿ ಕುಳಿತಿದ್ದೇವೆ” ಎಂದು ಪತ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ.

“ಯಾವ ಸರ್ಕಾರವೂ ಪ್ರಶ್ನಾತೀತವಲ್ಲ, ಯಾವ ಸಚಿವರೂ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಉತ್ತರಗಳನ್ನು ಕೇಳುವ ನಾಗರಿಕರ ಧ್ವನಿಯನ್ನು ಅಡಗಿಸಲು ಯಾವುದೇ ಆಡಳಿತಕ್ಕೂ ಸಾಧ್ಯವಿಲ್ಲ” ಎಂದು ಸಿಜೆಪಿ ತನ್ನ ಪತ್ರದಲ್ಲಿ ಒತ್ತಿಹೇಳಿದೆ.

“ಈ ಪ್ರತಿಭಟನೆ ಒಂದು ರಾಜಕೀಯ ಚಟುವಟಿಕೆಯಲ್ಲ, ಬದಲಿಗೆ ನಮ್ಮ ದೇಶದ ಯುವಜನರ ಜೀವ ಉಳಿಸಲು ಮಾಡುತ್ತಿರುವ ಒಂದು ಹತಾಶೆಯ ಕೂಗಾಗಿದೆ. ನಾವು ಜೂನ್ 20ರಂದು ಪ್ರತಿಭಟನೆಗೆ ಕೂರುವ ಮುನ್ನ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಗಳ ರದ್ದತಿಯ ಸರಣಿ ಆಘಾತ ತಾಳಲಾರದೆ 11 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಇಂದು, ನೀವು ಇದನ್ನು ನಿರ್ಲಕ್ಷಿಸುತ್ತಲೇ ಮುಂದುವರಿದಿರುವುದರಿಂದ, ಆ ದುರದೃಷ್ಟಕರ ಬಲಿ ಸಂಖ್ಯೆ 29 ದಾಟಿದೆ. ನಿಮ್ಮ ಸರ್ಕಾರ ಮೌನವನ್ನು ಆಯ್ದುಕೊಳ್ಳುವ ಪ್ರತಿ ದಿನವೂ, ಭಾರತದ ಭವಿಷ್ಯವಾಗಿರುವ ಯುವಜನರ ಹೆಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ” ಎಂದು ಪತ್ರದಲ್ಲಿ ಅತ್ಯಂತ ಕಳವಳ ವ್ಯಕ್ತಪಡಿಸಲಾಗಿದೆ.

“ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನಮ್ಮನ್ನು ‘ಭಯೋತ್ಪಾದಕರು’ ಎಂದು ಕರೆದಿದ್ದಾರೆ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಧ್ಯಕ್ಷ ನಿತಿನ್ ನಬಿನ್ ಅವರು ನಮಗೆ ಬೆದರಿಕೆ ಹಾಕಿದ್ದಾರೆ” ಎಂದು ಸಿಜೆಪಿ ತನ್ನ ಪತ್ರದಲ್ಲಿ ಗಂಭೀರ ಆರೋಪ ಮಾಡಿದೆ.

“ದೇಶದ ಪ್ರಧಾನಮಂತ್ರಿಯಾಗಿ ನೀವು ಕಾಕ್ರೋಚ್ ಜನತಾ ಪಾರ್ಟಿಯ ಈ ಶಾಂತಿಯುತ ಉಪವಾಸ ಸತ್ಯಾಗ್ರಹಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರೆ, ನಿಮ್ಮ ಆ ಮೌನವು ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಸಿಗುವ ಒಂದು ಮೌನ ಒಪ್ಪಿಗೆಯಾಗಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“ಭಾರತದ ಶಿಕ್ಷಣ ವ್ಯವಸ್ಥೆಯ ವಿನಾಶದಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪಾತ್ರವನ್ನು ಒಪ್ಪಿಕೊಳ್ಳಲು ನಿರಾಕರಿಸುವ ಮೂಲಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರದ ಶಕ್ತಿಯನ್ನು ಪ್ರದರ್ಶಿಸುತ್ತಿಲ್ಲ. ಬದಲಿಗೆ ತಮ್ಮ ಆಡಳಿತದಲ್ಲಿನ ತೀವ್ರ ಅಹಂಕಾರ ಮತ್ತು ಉತ್ತರದಾಯಿತ್ವದ ಸಂಪೂರ್ಣ ಕೊರತೆಯನ್ನು ಪ್ರದರ್ಶಿಸುತ್ತಿದ್ದಾರೆ” ಎಂದು ಪತ್ರದಲ್ಲಿ ನೇರವಾಗಿ ಟೀಕಿಸಲಾಗಿದೆ.

“ಒಂದು ಶಾಂತಿಯುತ ಪ್ರತಿಭಟನೆ, 29 ಕುಟುಂಬಗಳ ವಿನಾಶ ಮತ್ತು ಸಾವು-ಬದುಕಿನ ನಡುವೆ ಹೋರಾಡುತ್ತಿರುವ ವ್ಯಕ್ತಿಯ ಉಪವಾಸ ಸತ್ಯಾಗ್ರಹವೂ ನಿಮ್ಮ ಸರ್ಕಾರವನ್ನು ಕದಲಿಸಲು ಸಾಧ್ಯವಾಗದಿದ್ದರೆ, ನೀವು ಭಾರತದ ಯುವ ಸಮೂಹವನ್ನು ಸಂಪೂರ್ಣವಾಗಿ ಹತಾಶೆ, ಭ್ರಮನಿರಸನ ಮತ್ತು ಅಸಹಾಯಕತೆಗೆ ತಳ್ಳಿದಂತಾಗುತ್ತದೆ. ಭಾರತದ ಭವಿಷ್ಯವು ಸಂಪೂರ್ಣವಾಗಿ ನಾಶವಾಗುವ ಮುನ್ನ ನೀವು ನಿಮ್ಮ ಮೌನವನ್ನು ಮುರಿದು, ಯುವಜನರ ಧ್ವನಿಗೆ ಕಿವಿಗೊಡಬೇಕು ಹಾಗೂ ನಿಮ್ಮ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಪತ್ರದಲ್ಲಿ ಕೊನೆಯದಾಗಿ ಉಲ್ಲೇಖಿಸಲಾಗಿದೆ.






 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...