Homeಅಂತರಾಷ್ಟ್ರೀಯಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

- Advertisement -
- Advertisement -

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್‌ನೊಳಗೆ ಪರಿಸ್ಥಿತಿ ತದ್ವಿರುದ್ಧವಾಗಿರುತ್ತದೆ ಎಂದು ತಾವು ನಿರೀಕ್ಷಿಸಿದ್ದಾಗಿ ತಿಳಿಸಿರುವ ಅವರು, ಅಲ್ಲಿನ ಜನಸಾಗರ ನೋಡಿ ಆಶ್ಚರ್ಯವಾಯಿತು ಮತ್ತು ಇರಾನ್‌ನ ಜನರು ಖಮೇನಿಯನ್ನು ದ್ವೇಷಿಸುತ್ತಾರೆ ಎಂದೇ ನಾನು ಭಾವಿಸಿದ್ದೆ ಎಂದು ಆಕ್ಸಿಯಾಸ್ ಸಂಸ್ಥೆಯೊಂದಿಗೆ ಮಾತನಾಡುತ್ತಾ ತಮ್ಮ ಆಘಾತವನ್ನು ಹೊರಹಾಕಿದ್ದಾರೆ.

ಶನಿವಾರ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿ ಖಮೇನಿ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭವಾಗಿದ್ದು, ಲಕ್ಷಾಂತರ ಶೋಕತಪ್ತರು ಜಮಾಯಿಸಿದ್ದಾರೆ. ಜನರು ಖಮೇನಿ ಅವರ ಚಿತ್ರವಿರುವ ಬ್ಯಾನರ್‌ಗಳನ್ನು ಹಿಡಿದು, “ನಮ್ಮ ಮಾತು ಒಂದೇ, ಸೇಡು ಸೇಡು” ಎಂದು ತೀವ್ರ ಆಕ್ರೋಶದ ಘೋಷಣೆಗಳನ್ನು ಕೂಗುತ್ತಿದ್ದಾರೆ. 1989 ರಿಂದ ಇರಾನ್ ಅನ್ನು ಮುನ್ನಡೆಸಿದ್ದ 86 ವರ್ಷದ ಖಮೇನಿ ಅವರು, ಇರಾನ್-ಇಸ್ರೇಲ್ ಯುದ್ಧದ ಆರಂಭದಲ್ಲಿ ನಡೆದ ಇಸ್ರೇಲಿ ದಾಳಿಯಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಹತರಾಗಿದ್ದರು. ಯುದ್ಧದ ತೀವ್ರತೆಯ ಕಾರಣದಿಂದಾಗಿ ಇಷ್ಟು ದಿನ ಅವರ ಅಂತ್ಯಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಶಿಯಾ ಸಂಪ್ರದಾಯದಂತೆ ಪುರುಷರ ಗುಂಪುಗಳು ತೀವ್ರ ದುಃಖದಿಂದ ಎದೆಗೆ ಬಡಿದುಕೊಳ್ಳುತ್ತಾ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಖಮೇನಿ ಅವರ ಪಾರ್ಥಿವ ಶರೀರವನ್ನು ಸದ್ಯ ಮೂರು ದಿನಗಳ ಕಾಲ ಟೆಹ್ರಾನ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ತದನಂತರ ಜುಲೈ 7ರ ಮಂಗಳವಾರದಂದು ಪವಿತ್ರ ನಗರವಾದ ಕೋಮ್‌ಗೆ ಕೊಂಡೊಯ್ಯಲಾಗುವುದು. ಬುಧವಾರ ನೆರೆಯ ದೇಶವಾದ ಇರಾಕ್‌ನಲ್ಲಿ ದೊಡ್ಡ ಮೆರವಣಿಗೆ ನಡೆಸಿದ ಬಳಿಕ, ಗುರುವಾರ ಅವರ ಹುಟ್ಟೂರಾದ ಮಶಾದ್‌ನಲ್ಲಿ ಸಮಾಧಿ ಮಾಡಲಾಗುವುದು. ಇಸ್ರೇಲ್ ದಾಳಿಯಲ್ಲಿ ಮೃತಪಟ್ಟ ಅವರ ಮಗಳು, ಅಳಿಯ ಹಾಗೂ ಮೊಮ್ಮಗಳ ಪಕ್ಕದಲ್ಲೇ ಖಮೇನಿ ಅವರನ್ನು ಹೂಳಲು ನಿರ್ಧರಿಸಲಾಗಿದೆ.

ಇದೇ ವೇಳೆ ಇರಾನ್‌ನ ಪ್ರಸ್ತುತ ಹೊಸ ಸರ್ವೋಚ್ಚ ನಾಯಕ ಹಾಗೂ ಖಮೇನಿ ಅವರ ಪುತ್ರರಾದ ಮೊಜ್ತಬಾ ಖಮೇನಿ ಅವರು ಭದ್ರತಾ ಕಾರಣಗಳಿಂದಾಗಿ ತಮ್ಮ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ ಎಂಬ ಮಹತ್ವದ ಮಾಹಿತಿ ಹೊರಬಿದ್ದಿದೆ. ಇಸ್ರೇಲ್‌ನ ನಿರಂತರ ಬೆದರಿಕೆ ಹಾಗೂ ಕಣ್ಗಾವಲು ಇರುವುದರಿಂದ, ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪಾಯಕಾರಿ ಎಂದು ಭಾರತದಲ್ಲಿನ ಇರಾನ್ ಪ್ರತಿನಿಧಿ ಅಯತೊಲ್ಲಾ ಹಕೀಮ್ ಇಲಾಹಿ ಸ್ಪಷ್ಟಪಡಿಸಿದ್ದಾರೆ.

ಈ ಭಾರಿ ಅಂತ್ಯಕ್ರಿಯೆಯು ಇರಾನ್‌ನ ಹೊಸ ನಾಯಕತ್ವಕ್ಕೆ ಮತ್ತು ಅಲ್ಲಿನ ಆಡಳಿತಕ್ಕೆ ಹೊಸ ಶಕ್ತಿ ನೀಡುವ ಸಾಧ್ಯತೆಯಿದೆ. ಸದ್ಯ ಇರಾನ್ ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ಹಿಡಿತವನ್ನು ಬಳಸಿಕೊಂಡು, ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಅಮೆರಿಕದೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದೆ. ಮತ್ತೊಂದೆಡೆ ಇಸ್ರೇಲ್ ಮತ್ತೆ ದಾಳಿ ಮಾಡಬಹುದು ಎಂಬ ಆತಂಕವೂ ಇರಾನ್ ಅನ್ನು ಕಾಡುತ್ತಿದ್ದು, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಈ ಅಂತ್ಯಕ್ರಿಯೆ ಭಾರಿ ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...