Homeಮುಖಪುಟಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು ವಿರುದ್ಧ ಕೊಚ್ಚಿಯ ತ್ರಿಕ್ಕಾಕರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಸ್ಲಿಂ ಸಮುದಾಯವನ್ನು ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆಗೆ ಲಿಂಕ್ ಮಾಡುವ ಮೂಲಕ ಇಸ್ಲಾಮೋಫೋಬಿಕ್ ಹಾಗೂ ಮಾನನಷ್ಟ ಹೇಳಿಕೆಗಳನ್ನು ನೀಡಿದ ಆರೋಪ ಇವರ ಮೇಲಿದೆ.

ಕೇರಳ ಪೊಲೀಸರು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ ‘ಆಪರೇಷನ್ ತೂಫಾನ್’ ಹಿನ್ನೆಲೆಯಲ್ಲಿ ಈ ವಿವಾದ ಭುಗಿಲೆದ್ದಿದೆ. ಈ ಅಭಿಯಾನದ ಭಾಗವಾಗಿ ಕೇರಳದ ಗೃಹ ಸಚಿವರಾದ ರಮೇಶ್ ಚೆನ್ನಿತ್ತಲ ಅವರು ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆಯಾದ ‘ಸಮಸ್ತ’ದ ಅಧ್ಯಕ್ಷರಾದ ಜಿಫ್ರಿ ಮುತ್ತುಕೋಯ ತಂಗಲ್ ಅವರ ಬೆಂಬಲವನ್ನು ಕೋರಿದ್ದರು. ಗೃಹ ಸಚಿವರ ಈ ಕ್ರಮವನ್ನು ಉಲ್ಲೇಖಿಸಿ ಆರ್.ವಿ. ಬಾಬು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವಿವಾದಾತ್ಮಕ ಬರಹವೊಂದನ್ನು ಪೋಸ್ಟ್ ಮಾಡಿದ್ದರು.

ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್‌ನಲ್ಲೇನಿತ್ತು? 

ಆರ್.ವಿ. ಬಾಬು ತಮ್ಮ ಪೋಸ್ಟ್‌ನಲ್ಲಿ, “ಕೇರಳವನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಗೃಹ ಇಲಾಖೆ ಜಾರಿಗೆ ತಂದಿರುವ ‘ಆಪರೇಷನ್ ತೂಫಾನ್’ ಅಭಿಯಾನವನ್ನು ಬೆಂಬಲಿಸುವಂತೆ ಗೃಹ ಸಚಿವರು ಸಮಸ್ತ ನಾಯಕ ಜಿಫ್ರಿ ಮುತ್ತುಕೋಯ ತಂಗಲ್ ಅವರ ಸಹಾಯ ಕೋರಿರುವುದು ಒಳ್ಳೆಯ ನಡೆ. ಆದರೆ, ಇತರ ಸಮುದಾಯಗಳ ನಾಯಕರಿಗಿಂತ ಹೆಚ್ಚಾಗಿ ಈ ವಿಷಯದಲ್ಲಿ ಸಮಸ್ತದ ನಾಯಕರು ಮತ್ತು ಅವರ ಸಹಚರರೇ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಬೇಕಾಗಿದೆ. ಏಕೆಂದರೆ ರಾಜ್ಯದಲ್ಲಿ ಮಾದಕ ದ್ರವ್ಯಗಳ ವ್ಯಾಪಕ ಮಾರಾಟ ಮತ್ತು ಕೇರಳಕ್ಕೆ ಅವುಗಳನ್ನು ಕಳ್ಳಸಾಗಣೆ ಮಾಡುವಲ್ಲಿ ತೊಡಗಿರುವವರಲ್ಲಿ ಹೆಚ್ಚಿನವರು ಇದೇ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇದು ಆ ಸಮುದಾಯಕ್ಕೆ ನಾಚಿಕೆಗೇಡಿನ ವಿಷಯ. ಅದು ಮಾದಕ ದ್ರವ್ಯ ಕಳ್ಳಸಾಗಣೆಯಾಗಿರಲಿ ಅಥವಾ ಭಯೋತ್ಪಾದನೆಯಾಗಿರಲಿ, ‘ನಮ್ಮ ಜನರು’ (ಮುಸ್ಲಿಮರನ್ನು ಉಲ್ಲೇಖಿಸಲು ಬಳಸುವ ಆಡುಮಾತು) ಎಂಬ ಪದದ ಅರಿವಿಲ್ಲದೆ ಇಲ್ಲಿ ಏನೂ ನಡೆಯುವುದಿಲ್ಲ” ಎಂದು ಗಂಭೀರ ಆರೋಪ ಮಾಡಿದ್ದರು.

ಪಿಡಿಪಿ ನಾಯಕನಿಂದ ದೂರು ದಾಖಲು: ಆರ್.ವಿ. ಬಾಬು ಅವರ ಈ ಸೋಷಿಯಲ್ ಮೀಡಿಯಾ ಪೋಸ್ಟ್ ಮುಸ್ಲಿಂ ಸಮುದಾಯ ಮತ್ತು ಧಾರ್ಮಿಕ ನಾಯಕರ ತೇಜೋವಧೆ ಮಾಡುವ ಉದ್ದೇಶವನ್ನು ಹೊಂದಿದೆ ಹಾಗೂ ಸಮಾಜದಲ್ಲಿ ಕೋಮು ಸಂಘರ್ಷ ಮತ್ತು ದ್ವೇಷವನ್ನು ಪ್ರಚೋದಿಸುವಂತಿದೆ ಎಂದು ಆರೋಪಿಸಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಕೇಂದ್ರ ಸಮಿತಿಯ ನಾಯಕ ಅಶ್ರಫ್ ವಝಕ್ಕಲ ಅವರು ತ್ರಿಕ್ಕಾಕರ ಅಸಿಸ್ಟೆಂಟ್ ಪೊಲೀಸ್ ಕಮಿಷನರ್‌ಗೆ ಅಧಿಕೃತ ದೂರು ನೀಡಿದ್ದರು.

ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್: ದೂರಿನ ಆಧಾರದ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ತ್ರಿಕ್ಕಾಕರ ಪೊಲೀಸರು, ಹಿಂದೂ ಐಕ್ಯ ವೇದಿಕೆಯ ನಾಯಕನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಮತ್ತು ಕೇರಳ ಪೊಲೀಸ್ ಕಾಯ್ದೆಯ ಸಂಬಂಧಿತ ಕಠಿಣ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು, ಸಮಾಜದಲ್ಲಿ ಸುಳ್ಳು ಮಾಹಿತಿಯನ್ನು ಹರಡುವುದು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಆರೋಪಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಶೀಘ್ರದಲ್ಲೇ ಆರ್.ವಿ. ಬಾಬು ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೇರಳದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಯೋಜಿತ ಹಿಂದುತ್ವ ಸಂಘಟನೆಯಾಗಿರುವ ಹಿಂದೂ ಐಕ್ಯ ವೇದಿಕೆಯ ಪ್ರಮುಖ ನಾಯಕರಾಗಿರುವ ಆರ್.ವಿ. ಬಾಬು, ಈ ಹಿಂದೆಯೂ ಸಹ ಇಸ್ಲಾಮೋಫೋಬಿಕ್ ಮತ್ತು ಕೋಮು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಹಲವು ಕಾನೂನು ಕಾನೂನು ಪ್ರಕ್ರಿಯೆಗಳನ್ನು ಎದುರಿಸುತ್ತಿದ್ದಾರೆ. ಸದ್ಯ ಮಾದಕ ದ್ರವ್ಯದಂತಹ ಗಂಭೀರ ಸಾಮಾಜಿಕ ಪಿಡುಗನ್ನು ನಿರ್ದಿಷ್ಟ ಸಮುದಾಯಕ್ಕೆ ಲಿಂಕ್ ಮಾಡಿರುವುದಕ್ಕೆ ಕೇರಳದ ವಿವಿಧ ಸಾಮಾಜಿಕ ಹಾಗೂ ರಾಜಕೀಯ ವಲಯಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...