HomeಮುಖಪುಟSIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಒಡಿಶಾದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಆರ್. ಎಸ್. ಗೋಪಾಲನ್ ಅವರು ಮೇ 20ರಂದು ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದಾಗ (ಫ್ರೀಝ್ ಮಾಡಿದಾಗ) ರಾಜ್ಯದಲ್ಲಿ 3.33 ಕೋಟಿ ನೋಂದಾಯಿತ ಮತದಾರರಿದ್ದರು ಎಂದು ತಿಳಿಸಿದ್ದಾರೆ.

ಮೇ 30 ಮತ್ತು ಜೂನ್ 28 ರ ನಡುವೆ ನಡೆದ ಗಣತಿ ಪ್ರಕ್ರಿಯೆಯ ನಂತರ, ಕರಡು ಮತದಾರರ ಪಟ್ಟಿಯು ಈಗ 3.13 ಕೋಟಿ ಮತದಾರರನ್ನು ಹೊಂದಿದೆ. ಇದರಲ್ಲಿ 1.60 ಕೋಟಿ ಪುರುಷರು, 1.53 ಕೋಟಿ ಮಹಿಳೆಯರು ಮತ್ತು 2,775 ತೃತೀಯ ಲಿಂಗಿ ಮತದಾರರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯ ಚುನಾವಣಾಧಿಕಾರಿಯ ಪ್ರಕಾರ, ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 20 ಲಕ್ಷಕ್ಕೂ ಹೆಚ್ಚು ಹೆಸರುಗಳಲ್ಲಿ, 8.32 ಲಕ್ಷ ಮೃತಪಟ್ಟವರಾಗಿದ್ದಾರೆ. ಇನ್ನುಳಿದಂತೆ 10.07 ಲಕ್ಷ ಮತದಾರರು ಬೇರೆಡೆಗೆ ವಲಸೆ ಹೋಗಿದ್ದಾರೆ ಅಥವಾ ಗಣತಿ ಪ್ರಕ್ರಿಯೆಯ ಸಮಯದಲ್ಲಿ ಗೈರುಹಾಜರಾಗಿದ್ದರು ಮತ್ತು 1.58 ಲಕ್ಷ ಮತದಾರರು ವಿವಿಧ ಸ್ಥಳಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಿಕೊಂಡಿರುವುದು ಕಂಡುಬಂದಿದೆ.

ಗಣತಿ ಪ್ರಕ್ರಿಯೆಯ ಸಮಯದಲ್ಲಿ ಸುಮಾರು 14,000 ಮತದಾರರು ತಮ್ಮ ಗಣತಿ ನಮೂನೆಗಳನ್ನು (ಫಾರ್ಮ್‌ಗಳನ್ನು) ಬೂತ್ ಮಟ್ಟದ ಅಧಿಕಾರಿಗಳಿಗೆ ಮರಳಿ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ.

“ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಮತದಾರರು, ತಮ್ಮ ಹಕ್ಕು ಅಥವಾ ಆಕ್ಷೇಪಣೆಯನ್ನು ಬಿಎಲ್‌ಒ ಮೂಲಕ ಅಥವಾ ಇಸಿಐನೆಟ್ ಮೊಬೈಲ್ ಆಪ್ ಅಥವಾ voters.eci.gov.in ವೆಬ್‌ಸೈಟ್ ಮೂಲಕ ಸಲ್ಲಿಸಬಹುದು” ಎಂದು ಗೋಪಾಲನ್ ಸುದ್ದಿಗಾರರಿಗೆ ಹೇಳಿದ್ದಾರೆ.

ಆಗಸ್ಟ್ 4ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಸೆಪ್ಟೆಂಬರ್ 6ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

“ಯಾರಾದರೂ ತಮ್ಮ ಹೆಸರನ್ನು ಕರಡು ಮತದಾರರ ಪಟ್ಟಿಯಲ್ಲಿ ಹೊಂದಿಲ್ಲದಿದ್ದರೆ, ಅವರು ನಿಗದಿತ ನಮೂನೆಯನ್ನು (ಫಾರ್ಮ್) ಭರ್ತಿ ಮಾಡಿ, ಘೋಷಣಾ ಪತ್ರ ಮತ್ತು ಇತರ ದಾಖಲೆಗಳೊಂದಿಗೆ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು” ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.

ಜುಲೈ 5ರಿಂದ ಆಗಸ್ಟ್ 4ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ಆನಂತರ, 147 ಚುನಾವಣಾ ನೋಂದಣಿ ಅಧಿಕಾರಿಗಳು (EROs) ಮತ್ತು 994 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು (AEROs) ಸೆಪ್ಟೆಂಬರ್ 2 ರೊಳಗೆ ಅರ್ಜಿಗಳನ್ನು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

“ನಿಗದಿತ ಸಮಯದೊಳಗೆ ಎಲ್ಲಾ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವುದನ್ನು ಖಚಿತಪಡಿಸಿಕೊಳ್ಳಲು, ಅಗತ್ಯವಿದ್ದರೆ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಲಾಗುವುದು” ಎಂದು ಗೋಪಾಲನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...