Homeಮುಖಪುಟಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್ ಘಟಕದ ರಕ್ಷಣಾ ಗೋಡೆಯು ಪ್ರವಾಹದ ಹೊಡೆತಕ್ಕೆ ಕುಸಿದು ಬಿದ್ದಿದ್ದರಿಂದ, ಘಟಕದಲ್ಲಿದ್ದ ಸುಮಾರು 3,000 ಗ್ಯಾಸ್ ಸಿಲಿಂಡರ್‌ಗಳು ಪಾತಾಳಗಂಗಾ ನದಿಯ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.

ಧಾರಾಕಾರ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಬಾಟ್ಲಿಂಗ್ ಆವರಣಕ್ಕೆ ನುಗ್ಗಿದ ನೀರು ಇಷ್ಟೊಂದು ದೊಡ್ಡ ಪ್ರಮಾಣದ ಸಿಲಿಂಡರ್‌ಗಳನ್ನು ಕೊಚ್ಚಿಕೊಂಡು ಹೋಗಿದೆ. ನದಿಯ ಪ್ರವಾಹದ ಮೇಲೆ ಸಾವಿರಾರು ಸಿಲಿಂಡರ್‌ಗಳು ತೇಲುತ್ತಾ ಸಾಗುತ್ತಿರುವ ದೃಶ್ಯಗಳನ್ನು ಕಂಡು ಸೇತುವೆಯ ಮೇಲಿದ್ದ ಸಾರ್ವಜನಿಕರು ಆಶ್ಚರ್ಯ ಮತ್ತು ಆತಂಕದಿಂದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಸಿಲಿಂಡರ್‌ಗಳು ಪಾತಾಳಗಂಗಾ ನದಿಯಿಂದ ಮುಂದೆ ಖಾರ್ಪಾಡಾ ನದಿಯವರೆಗೂ ಕೊಚ್ಚಿ ಹೋಗಿವೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಮನೆಗೆ ಕೊಂಡೊಯ್ಯಬೇಡಿ, ಜೀವಕ್ಕೆ ಅಪಾಯ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಎಚ್ಚರಿಕೆ

ನದಿಯಲ್ಲಿ ತೇಲುತ್ತಿರುವ ಕೆಲವು ಸಿಲಿಂಡರ್‌ಗಳಲ್ಲಿ ಅನಿಲ (ಗ್ಯಾಸ್) ತುಂಬಿರುವ ಸಾಧ್ಯತೆಯಿರುವುದರಿಂದ ನದಿ ತೀರದ ಜನರಲ್ಲಿ ತೀವ್ರ ಆತಂಕ ಮೂಡಿದೆ. ಈ ಕುರಿತು ತಕ್ಷಣವೇ ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ರಾಯಗಢ ಜಿಲ್ಲಾಧಿಕಾರಿ ಕಿಶನ್ ಜಾವ್ಲೆ ಅವರು, ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ಸಿಲಿಂಡರ್‌ಗಳಲ್ಲಿ ಗ್ಯಾಸ್ ಇದೆಯೇ ಅಥವಾ ಅವು ಸುರಕ್ಷಿತ ಸ್ಥಿತಿಯಲ್ಲಿವೆಯೇ ಎಂಬ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ. ಸಾರ್ವಜನಿಕರು ಕುತೂಹಲಕ್ಕಾಗಲಿ ಅಥವಾ ಬಳಕೆಯ ಆಸೆಗೆ ಬಿದ್ದಾಗಲಿ ಅವುಗಳನ್ನು ಮನೆಗೆ ಕೊಂಡೊಯ್ಯುವುದು, ಕೀಳುವುದು ಅಥವಾ ತೆರೆಯಲು ಯತ್ನಿಸುವುದು ಅತ್ಯಂತ ಅಪಾಯಕಾರಿ, ಎಂದು ಎಚ್ಚರಿಸಿದ್ದಾರೆ.

ಅಲ್ಲದೆ, ನದಿ ತೀರದಲ್ಲಿ ಎಲ್ಲಾದರೂ ಈ ಸಿಲಿಂಡರ್‌ಗಳು ಪತ್ತೆಯಾದರೆ ತಕ್ಷಣವೇ ಕಂಪನಿಯ ಅಧಿಕಾರಿಗಳಿಗೆ ಅಥವಾ ಸ್ಥಳೀಯ ಆಡಳಿತಕ್ಕೆ ಹಸ್ತಾಂತರಿಸಿ ಸಹಕರಿಸಬೇಕೆಂದು ಅವರು ನದಿ ತೀರದ ನಾಗರಿಕರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

ಪ್ರಕೃತಿ ವಿಕೋಪಕ್ಕೆ ತತ್ತರಿಸಿದ ರಾಯಗಢ:

ಕಳೆದ ಒಂದು ವಾರದಿಂದ ಮಹಾರಾಷ್ಟ್ರದಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆ ಮುಂಬೈ ಸೇರಿದಂತೆ ಹಲವು ಜಿಲ್ಲೆಗಳನ್ನು ಜಲಾವೃತಗೊಳಿಸಿದೆ. ರಾಯಗಢ ಜಿಲ್ಲೆಯು ಈ ಪ್ರವಾಹದಿಂದ ಅತಿ ಹೆಚ್ಚು ಹಾನಿಗೊಳಗಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಾರ್ಪೊರೇಟ್ ಘಟಕಗಳ ರಕ್ಷಣಾ ಗೋಡೆಗಳು ಮತ್ತು ಮೂಲಸೌಕರ್ಯಗಳ ವೈಜ್ಞಾನಿಕ ಸುರಕ್ಷತೆಯ ಬಗ್ಗೆಯೂ ಈ ಘಟನೆ ಪ್ರಮುಖ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...