Homeಮುಖಪುಟತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

- Advertisement -
- Advertisement -

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ.

28 ವರ್ಷ ವಯಸ್ಸಿನ ರಾಜ್ ಕುಮಾರ್ ಎಂಬಾತ 17 ವರ್ಷದ ಸಂತ್ರಸ್ತೆ, ಆಕೆಯ ತಾಯಿ ಮತ್ತು ಅಜ್ಜಿಯನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ಮೊದಲು ಸಂತ್ರಸ್ತೆಯ ತಾಯಿ ಮತ್ತು ಅಜ್ಜಿಯನ್ನು ಅವರ ಮನೆಯಲ್ಲೇ ಕೊಲೆ ಮಾಡಿದ್ದು, ನಂತರ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ.

ನಂತರ ಆತ ತನ್ನ ಮನೆಗೆ ಮರಳಿ, ತನ್ನ ಪತ್ನಿ ಸರಿತಾ ಮತ್ತು ಇಬ್ಬರು ಮಕ್ಕಳಾದ ಪರೀಕ್ಷಿತ್ (3) ಹಾಗೂ ದೈವಿಕ್ಷಿತ್ (2) ಅವರನ್ನು ಹರಿತವಾದ ಆಯುಧದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹತ್ಯೆಗಳ ನಂತರ, ಆತ ತನ್ನ ಪೋಷಕರಿಗೆ ಕರೆ ಮಾಡಿ ತಾನು ತನ್ನ ಕುಟುಂಬವನ್ನು ಕೊಂದಿರುವುದಾಗಿ ತಿಳಿಸಿ, ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಮಾಹಿತಿ ಪಡೆದ ಫ್ಯೂಚರ್ ಸಿಟಿ ಪೊಲೀಸ್ ಕಮಿಷನರ್ ತರುಣ್ ಜೋಶಿ, ಚೇವೆಲ್ಲಾ ಡಿಸಿಪಿ ಯೋಗೇಶ್ ಗೌತಮ್ ಮತ್ತು ಇತರ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಬೆರಳಚ್ಚು ಹಾಗೂ ಸಾಕ್ಷ್ಯ ಸಂಗ್ರಹಿಸುವ ಕ್ಲೂಸ್ (Clues) ತಂಡಗಳು ಮತ್ತು ಶ್ವಾನ ದಳಗಳು ಸಹ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿವೆ. ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೇ ತಿಂಗಳಲ್ಲಿ ಪೋಕ್ಸೊ ಪ್ರಕರಣ ದಾಖಲಾದ ನಂತರ, ಆರೋಪಿ ತಲೆಮರೆಸಿಕೊಂಡಿದ್ದ. ನಂತರ ಜೂನ್‌ನಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಆತ ಮೇಲಿರುವ ಆರೋಪಕ್ಕೆ ಗರಿಷ್ಠ ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ಇರುವುದರಿಂದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಪೊಲೀಸರು ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಿದ್ದರು ಎಂದು ವರದಿಯಾಗಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿಶ್ತ್ವಾರ್ ಪೊಲೀಸರ ಹತ್ಯೆ : ‘ಮಸೀದಿ ಘೋಷಣೆ’ ಕುರಿತ ಬಿಜೆಪಿ ಶಾಸಕಿಯ ಹೇಳಿಕೆಗೆ ಆಕ್ರೋಶ; ತನಿಖೆಗೆ ಕಾಂಗ್ರೆಸ್ ಆಗ್ರಹ

ಕಿಶ್ತ್ವಾರ್‌ನಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ (ಎಸ್‌ಪಿಒ) ಹತ್ಯೆಯ ಕುರಿತು ಹಲವು ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಈ ಘಟನೆಯನ್ನು ಮಸೀದಿ ಘೋಷಣೆಗಳೊಂದಿಗೆ ತಳುಕು ಹಾಕುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಯತ್ನಕ್ಕೆ ಸ್ಥಳೀಯ...

SIR ವಿವಾದ: ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಸುಪ್ರೀಂ ಕೋರ್ಟ್ ಅನುಮತಿ ಕೋರಿದ ರಾಹುಲ್ ಗಾಂಧಿ!

ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಏಕಪಕ್ಷೀಯ ನಿರ್ಧಾರಗಳು ಮತ್ತು ಬೃಹತ್ ಪ್ರಮಾಣದ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಿರುವ ಆರೋಪಗಳಿಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ...

ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷ ಭಾಷಣ | ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ : ಸಚಿವ ಮಧು ಬಂಗಾರಪ್ಪ

ಶಾಲಾ ಮಕ್ಕಳ ಮುಂದೆ ರಾಜಕೀಯ ದ್ವೇಷ ಭಾಷಣ ಮಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...

ಬಿಲ್ಕಿಸ್ ಬಾನು ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್

2002ರ ಗುಜರಾತ್ ಕೋಮುಗಲಭೆಯ ಸಂದರ್ಭದಲ್ಲಿ ನಡೆದಿದ್ದ ಭೀಕರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿ ಅವರಿಗೆ ಜಾಮೀನು ಮಂಜೂರು...

‘ನೀವು ಆ ಕುರ್ಚಿಯಲ್ಲಿ ಕೂರಲು ಅರ್ಹರಲ್ಲ, ನಿಮಗೆ ಸಮಗ್ರತೆ ಇಲ್ಲ’: ಸುಪ್ರೀಂ ಕೋರ್ಟ್‌ನಲ್ಲಿ ಸಿಜೆಐ ಸೂರ್ಯ ಕಾಂತ್ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಮ್ಯೂಟ್!

ನವದೆಹಲಿ: ಭಾರತೀಯ ನ್ಯಾಯಾಂಗದ ಇತ್ತೀಚಿನ ಇತಿಹಾಸದಲ್ಲೇ ಅತ್ಯಂತ ಅಪರೂಪದ ಮತ್ತು ತೀವ್ರ ಘರ್ಷಣೆಯೊಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುಂದೆ ವಾದ ಮಂಡಿಸಲು...

ಜಾರ್ಖಂಡ್‌ | ಕಲ್ಲಿದ್ದಲು ಗಣಿ ವಿಸ್ತರಣೆಗೆ ಕೇಂದ್ರ ಅನುಮತಿ : 6 ಲಕ್ಷ ಮರಗಳ ಮಾರಣಹೋಮ, ಆನೆಗಳ ಆವಾಸಸ್ಥಾನ ನಾಶಕ್ಕೆ ಕಾರಣವಾಗಲಿರುವ ಯೋಜನೆ!

ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿನ ಓಪನ್‌ಕಾಸ್ಟ್ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯ ವಿಸ್ತರಣೆಗಾಗಿ 928.03 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಿಕೊಳ್ಳುವ (ವರ್ಗಾಯಿಸುವ) ಯೋಜನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿರುವ ಅರಣ್ಯ...

ಹೈದರಾಬಾದ್‌ನಲ್ಲಿ ಇಸ್ರೇಲಿ ಕಂಪನಿಗಳ ಕಾರ್ಯಕ್ರಮಕ್ಕೆ ವಿರೋಧ : SIO, APCR ನಾಯಕರನ್ನು ವಶಕ್ಕೆ ಪಡೆದು ಬಿಡುಗಡೆಗೊಳಿಸಿದ ಪೊಲೀಸರು

ಹೈದರಾಬಾದ್‌ನ ಟಿ-ಹಬ್‌ನಲ್ಲಿ ನಡೆಯುತ್ತಿರುವ ಇಸ್ರೇಲಿ ಕಂಪನಿಗಳ ಕಾರ್ಯಕ್ರಮವನ್ನು ವಿರೋಧಿಸಿದ್ದಕ್ಕಾಗಿ ಸೋಮವಾರ (ನ.16) ಮುಂಜಾನೆ ತೆಲಂಗಾಣ ಪೊಲೀಸರು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್)...

ದೋಷಯುಕ್ತ ಬ್ರೇಕ್‌ಗಳೊಂದಿಗೆ 463 ಕಿ.ಮೀ. ಸಂಚರಿಸಿದ ವಂದೇ ಭಾರತ್ ರೈಲು; ತನಿಖೆಗೆ ಆದೇಶ

ಬ್ರೇಕ್ ಸಾಮರ್ಥ್ಯದ ಕೊರತೆಯ ಬಗ್ಗೆ ಲೋಕೋ ಪೈಲಟ್ ಎಚ್ಚರಿಕೆ ನೀಡಿದ್ದರೂ ಸಹ, ಖಾಲಿ ವಂದೇ ಭಾರತ್ ರೈಲನ್ನು ಅಕ್ಟೋಬರ್ 24 ರಂದು ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ನಡುವೆ 463 ಕಿ.ಮೀ. ದೂರ...

ಹಲವು ಸಾವುಗಳು ವರದಿಯಾಗಿದ್ದರೂ, ಇರಾನ್ ಯುದ್ಧದಲ್ಲಿ ‘ಕಳೆದ 5 ತಿಂಗಳಲ್ಲಿ ಒಬ್ಬ ಸೈನಿಕನನ್ನೂ ಕಳೆದುಕೊಂಡಿಲ್ಲ’ ಎಂದ ಟ್ರಂಪ್!

ಇರಾನ್ ವಿರುದ್ಧದ ಅಮೆರಿಕದ ಸೇನಾ ಕಾರ್ಯಾಚರಣೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸತ್ಯಕ್ಕೆ ದೂರವಾದ ಹೇಳಿಕೆ ನೀಡಿದ್ದು, ಕಳೆದ ಐದು ತಿಂಗಳಲ್ಲಿ ಒಬ್ಬ ಅಮೆರಿಕನ್ ಸೈನಿಕನೂ ಪ್ರಾಣ ಕಳೆದುಕೊಂಡಿಲ್ಲ ಎಂದು...

‘ಹೊಸ ಸರ್ಕಾರದಲ್ಲೂ ಸುಲಿಗೆ ದಂಧೆ ಮುಂದುವರಿದಿದೆ’: ಅಕ್ರಮ ತಡೆಯಲು ಒಂದು ವರ್ಷ ಕಾಲಾವಕಾಶ ಕೋರಿದ ಪಶ್ಚಿಮ ಬಂಗಾಳದ ಹಣಕಾಸು ಸಚಿವ!

ಪಶ್ಚಿಮ ಬಂಗಾಳದಲ್ಲಿ ‘ಬದಲಾವಣೆಯ ಭರವಸೆ’ ನೀಡಿ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ, ರಾಜ್ಯದಲ್ಲಿ ‘ಸಿಂಡಿಕೇಟ್ ಸಂಸ್ಕೃತಿ’ ಮತ್ತು ಸುಲಿಗೆ (Extortion) ದಂಧೆ ಯಾವುದೇ ಅಡೆತಡೆಯಿಲ್ಲದೆ ಮುಂದುವರಿದಿದೆ ಎಂಬ ಕಠಿಣ...