Homeಮುಖಪುಟಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

- Advertisement -
- Advertisement -

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ.

‘ಕ್ಲಾರಿಯನ್ ಇಂಡಿಯಾ’ ವರದಿ ಪ್ರಕಾರ, ಈ ಘಟನೆ ಜುಲೈ 9 ರಂದು ವಲ್ಸಾದ್ ಜಿಲ್ಲೆಯ ಧರಂಪುರದಲ್ಲಿ ನಡೆದಿದೆ. ನಕಲಿ ಗೋರಕ್ಷಕರ ಗುಂಪಿನ ನೇತೃತ್ವವನ್ನು ಮಹೇಂದ್ರ ಸಿಂಗ್ ರಾಜಪುರೋಹಿತ್ ವಹಿಸಿದ್ದಾನೆ ಎಂದು ತಿಳಿದು ಬಂದಿದೆ. ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳಕ್ಕೆ ಸಂಬಂಧಿಸಿದ ವ್ಯಕ್ತಿಗಳನ್ನು ಸೇರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವೀಡಿಯೊಗಳಲ್ಲಿ, ಹಿಂದುತ್ವ ಗುಂಪಿನ ಸದಸ್ಯರು ದನಗಳನ್ನು ಸಾಗಿಸುತ್ತಿದ್ದ ಪಿಕಪ್ ಟ್ರಕ್ ಅನ್ನು ಬಲವಂತವಾಗಿ ನಿಲ್ಲಿಸುವ ಮೊದಲು ಬೆನ್ನಟ್ಟುತ್ತಿರುವುದನ್ನು ಕಾಣಬಹುದು. ಚಾಲಕನನ್ನು ತಡೆದ ಗುಂಪು ಆತನ ಹೆಸರು, ಗುರುತು ಮತ್ತು ತಲುಪಬೇಕಾದ ಸ್ಥಳದ ಕುರಿತು ಹೇಳುವಂತೆ ಒತ್ತಾಯಿಸಿದ್ದಾರೆ. ಚಾಲಕ ಪ್ರಾಣಿಗಳನ್ನು ವಧೆಗಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ ಎಂದು ಗೋರಕ್ಷಕರು ಆರೋಪಿಸಿದ್ದಾರೆ.

“ವಾಹನವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀಯಾ? ಹೆಸರು ಹೇಳು! ನಾವು ನಿನನಗೆ ಸರಿಯಾಗಿ ‘ಸೇವೆ’ ಮಾಡುತ್ತೇವೆ! ವಾಹನದಿಂದ ಇಳಿ” ಎಂದು ವ್ಯಕ್ತಿಯೊಬ್ಬ ಚಾಲಕನಿಗೆ ಬೆದರಿಕೆ ಹಾಕುತ್ತಿರುವುದು ಕೇಳಿಸುತ್ತದೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳ ಪ್ರಕಾರ, ಚಾಲಕನಿಗೆ ಬೆದರಿಕೆ ಹಾಕಲಾಗಿದ್ದು, ದನಗಳನ್ನು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಒಪ್ಪಿಕೊಳ್ಳಲು ಒತ್ತಡ ಹೇರಲಾಗಿದೆ ಎಂದು ಆರೋಪಿಸಲಾಗಿದೆ. ಸಾಗಣೆದಾರರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಂದು ವಾಹನವನ್ನು ತಡೆಹಿಡಿಯಲಾಗಿದೆ, ಅದರ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಪಿಕಪ್ ಟ್ರಕ್ ಅನ್ನು ಹಿಂದುತ್ವ ಗುಂಪು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಈ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗಿದೆ. ಖಾಸಗಿ ವ್ಯಕ್ತಿಗಳು ಸಾರ್ವಜನಿಕ ರಸ್ತೆಗಳಲ್ಲಿ ವಾಹನಗಳನ್ನು ಹೀಗೆ ಹಿಂಬಾಲಿಸಬಹುದೇ? ವಾಹನಗಳನ್ನು ನಿಲ್ಲಿಸಲು ಮತ್ತು ಜಾನುವಾರು ಸಾಗಣೆ ಅಪರಾಧಗಳ ಬಗ್ಗೆ ವಾಹನ ಚಾಲಕರನ್ನು ಹೀಗೆಲ್ಲಾ ವಿಚಾರಣೆ ಮಾಡಬಹುದೇ ಎಂದು ಪ್ರಶ್ನಿಸಿದ್ದಾರೆ.

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಪೊಲೀಸ್ ತನಿಖೆಗೆ ಒತ್ತಾಯಿಸಿ, ಅಕ್ರಮ ದನ ಸಾಗಣೆಯ ಅನುಮಾನಗಳಿದ್ದರೂ, ಕಾನೂನು ಜಾರಿ ಪೊಲೀಸರು ಮತ್ತು ನ್ಯಾಯಾಲಯಗಳ ಮೇಲಿದೆ, ನಕಲಿ ಗೋರಕ್ಷಕ ಗುಂಪುಗಳದ್ದಲ್ಲ ಎಂದು ವಾದಿಸಿದ್ದಾರೆ.

“ಗುಜರಾತ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಮತ್ತು ನಾಗರಿಕರಿಗೆ ಭದ್ರತೆ ಒದಗಿಸುವುದು ಪೊಲೀಸರು ಮತ್ತು ನ್ಯಾಯಾಲಯಗಳ ಏಕೈಕ ಜವಾಬ್ದಾರಿಯಾಗಿದೆ. ಯಾವುದೇ ಸಂಘಟನೆ ಅಥವಾ ಬಾಹ್ಯ ಅಂಶವು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸಲಾಗುವುದಿಲ್ಲ. ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳಲು ಕಠಿಣ ಕ್ರಮ ಯಾವಾಗ ತೆಗೆದುಕೊಳ್ಳಲಾಗುತ್ತದೆ?” ಎಂದು ಎಕ್ಸ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

ಘಟನೆಯ ಸಂದರ್ಭಗಳನ್ನು ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಆರೋಪಗಳನ್ನು ದೃಢೀಕರಿಸುವ ಅಧಿಕೃತ ಹೇಳಿಕೆಯನ್ನು ಗುಜರಾತ್ ಪೊಲೀಸರು ನೀಡಿಲ್ಲ.

ವೈರಲ್ ವೀಡಿಯೊಗಳಲ್ಲಿ ಕಂಡುಬರುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆಯೇ ಅಥವಾ ಯಾವುದೇ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...