Homeಮುಖಪುಟಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ 'ಸಂಯುಕ್ತ ಹೋರಾಟ ಸಮಿತಿ' ತೀವ್ರ ಖಂಡನೆ

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

- Advertisement -
- Advertisement -

“ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ” ಎಂದು ‘ಸಂಯುಕ್ತ ಹೋರಾಟ-ಕರ್ನಾಟಕ’ (ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನೆನ್ನೆ (ಜುಲೈ 13) ಬಿಡದಿಯ ಮಂದಲಹಳ್ಳಿಯಲ್ಲಿ ಪೊಲೀಸ್ ಕಾವಲಿನಲ್ಲಿ ಜೆಎಂಸಿ ಸರ್ವೆ ಮಾಡಲು ಬಂದ ಅಧಿಕಾರಿಗಳನ್ನು ರೈತರು ಪ್ರತಿರೋಧಿಸಿದ ಘಟನೆಯ ಬೆನ್ನಲ್ಲೇ, ಸಮಿತಿಯು ಜುಲೈ 14 ರಂದು ಮಹತ್ವದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಮಾತು ತಪ್ಪಿದ ಸರ್ಕಾರ: ರೈತರ ಆಕ್ರೋಶಕ್ಕೆ ಕಾರಣವೇನು?

“ಬಿಡದಿ ಸುತ್ತಮುತ್ತಲಿನ ಹಳ್ಳಿಗಳ ರೈತರು ಕಳೆದ ಒಂದೂವರೆ ವರ್ಷದಿಂದ (18 ತಿಂಗಳು) ‘ನಮ್ಮ ಜಮೀನು ನಮಗೆ ಬೇಕು, ಈ ಯೋಜನೆಗೆ ನಮ್ಮ ಸಮ್ಮತಿ ಇಲ್ಲ’ ಎಂದು ನಿರಂತರವಾಗಿ ಧರಣಿ ನಡೆಸುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ” ಎಂದು ಸಮಿತಿ ನೆನಪಿಸಿದೆ.

ಇತ್ತೀಚೆಗಷ್ಟೇ ಸ್ಥಳೀಯ ಶಾಸಕರು ಸಭೆ ಕರೆದು ಭೂಮಿಗೆ ಎಷ್ಟು ಬೆಲೆ ಬೇಕು ಎಂದು ಕೇಳಿದಾಗಲೂ, ರೈತರು ಅತ್ಯಂತ ಸ್ಪಷ್ಟವಾಗಿ ನಮಗೆ ಬೆಲೆ ಮುಖ್ಯವಲ್ಲ, ನಾವು ಭೂಮಿ ಮಾರಲು ಸಿದ್ಧರಿಲ್ಲ. ಭೂಸ್ವಾಧೀನವನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂಬ ಏಕೈಕ ಬೇಡಿಕೆಯನ್ನು ಇಟ್ಟಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳೇ ಮಧ್ಯಪ್ರವೇಶಿಸಿ, “ಹಾಗಾದರೆ ಈ ವಿಚಾರವನ್ನು ಮುಖ್ಯಮಂತ್ರಿಗಳೇ ತೀರ್ಮಾನಿಸಬೇಕು. ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ರೈತರ ಸಭೆ ನಿಗದಿಪಡಿಸುತ್ತೇವೆ” ಎಂದು ಭರವಸೆ ನೀಡಿ ಮಾತು ಕೊಟ್ಟಿದ್ದರು.

ಆದರೆ, ಕೊಟ್ಟ ಮಾತನ್ನು ಗಾಳಿಗೆ ತೂರಿ, ಇದ್ದಕ್ಕಿದ್ದಂತೆ ನೂರಾರು ಪೊಲೀಸರನ್ನು ಕರೆತಂದು ಬಲವಂತವಾಗಿ ಜಂಟಿ ಸರ್ವೆಗೆ ಮುಂದಾಗಿರುವುದು ಅತ್ಯಂತ ಅಪ್ರಜಾಪ್ರಭುತ್ವವಾದಿ ನಡೆ ಎಂದು ಸಮಿತಿ ಆಕ್ಷೇಪಿಸಿದೆ.

ಬಲವಂತದ ಭೂಸ್ವಾಧೀನಕ್ಕೆ ಮುಂದಾದರೆ ರಾಜ್ಯಾದ್ಯಂತ ಹೋರಾಟ

ಸರ್ಕಾರದ ಈ ದಬ್ಬಾಳಿಕೆಯನ್ನು ಕಟುವಾಗಿ ಟೀಕಿಸಿರುವ ಸಂಯುಕ್ತ ಹೋರಾಟದ ನಾಯಕರು, “ಸರ್ಕಾರ ಒಂದು ವೇಳೆ ಪೊಲೀಸ್ ಬಲ ಬಳಸಿ ಬಲವಂತವಾಗಿ ಭೂಸ್ವಾಧೀನ ಮಾಡಲು ಮುಂದಾದರೆ, ಇದು ಕೇವಲ ಬಿಡದಿ ರೈತರ ಹೋರಾಟವಾಗಿ ಉಳಿಯುವುದಿಲ್ಲ. ಇಡೀ ರಾಜ್ಯದ ರೈತರು ಒಗ್ಗೂಡಿ ಸರ್ಕಾರದ ವಿರುದ್ಧ ಬೀದಿಗಿಳಿಯಲಿದ್ದಾರೆ. ಇದರ ಗಂಭೀರ ರಾಜಕೀಯ ಮತ್ತು ಸಾಮಾಜಿಕ ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ” ಎಂದು ಕಟು ಎಚ್ಚರಿಕೆ ನೀಡಿದ್ದಾರೆ.

“ಅತ್ಯಂತ ಫಲವತ್ತಾದ, ನೀರಾವರಿ ಸಮೃದ್ಧ ಹಾಗೂ ಬಹುವಾರ್ಷಿಕ ಬೆಳೆಗಳನ್ನು ಬೆಳೆಯುವ ರೈತರ ಜೀವನಾಡಿಯಾದ ಭೂಮಿಯನ್ನು ಕಿತ್ತುಕೊಂಡು, ಅಲ್ಲಿ ಕಾಂಕ್ರೀಟ್ ಟೌನ್‌ಶಿಪ್ ಮಾಡಲು ಹೊರಟಿರುವ ಈ ವಿನಾಶಕಾರಿ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಹಿಂದೆ ರೈತರಿಗೆ ಕೊಟ್ಟ ಭರವಸೆಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ತಕ್ಷಣವೇ ಸಭೆ ಕರೆದು ಈ ಸಮಸ್ಯೆಗೆ ಶಾಶ್ವತ ಕೊನೆ ಹಾಡಬೇಕು” ಎಂದು ಸಮಿತಿ ಒತ್ತಾಯಿಸಿದೆ.

ನಿನ್ನೆ ನಡೆದ ಸಂಘರ್ಷದ ವೇಳೆ ಅಧಿಕಾರಿಗಳು ಮತ್ತು ಪೊಲೀಸರು ರೈತರ ಮನೆಗಳಿಗೆ ನುಗ್ಗಿ ಜಮೀನನ್ನು ವಶಪಡಿಸಿಕೊಳ್ಳಬಹುದು ಎಂಬ ಆತಂಕ ಸೃಷ್ಟಿಯಾಗಿದ್ದರಿಂದ ರೈತ ಮಹಿಳೆಯರು ಹಾಗೂ ಹಿರಿಯರು ತೀವ್ರವಾಗಿ ಪ್ರತಿಭಟಿಸಿದ್ದಾರೆ. ಈ ವೇಳೆ ಕೆಲವು ಅಹಿತಕರ ಘಟನೆಗಳು ನಡೆದಿರುವುದನ್ನು ಪ್ರಸ್ತಾಪಿಸಿರುವ ಸಮಿತಿಯು ರೈತರಲ್ಲಿ ವಿಶೇಷ ಮನವಿ ಮಾಡಿದೆ.

“ಯಾವದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂಬ ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಸರ್ಕಾರದ ದಬ್ಬಾಳಿಕೆಗೆ ನಾವು ತೀವ್ರ ಪ್ರತಿರೋಧ ಒಡ್ಡೋಣ, ಆದರೆ ಯಾವುದೇ ಕಾರಣಕ್ಕೂ ಶಾಂತಿ ಮತ್ತು ಸಂಯಮವನ್ನು ಕಳೆದುಕೊಳ್ಳಬಾರದು. ಕೇವಲ ಶಾಂತಿಯುತ ಹಾಗೂ ಸಂಘಟಿತ ಹೋರಾಟದ ಮೂಲಕವೇ ನಮ್ಮ ಭೂಮಿಯನ್ನು ನಾವು ಉಳಿಸಿಕೊಳ್ಳೋಣ” ಎಂದು ರೈತ ಬಂಧುಗಳಲ್ಲಿ ಸಂಯುಕ್ತ ಹೋರಾಟ ಸಮಿತಿ ವಿನಂತಿಸಿದೆ.

ಈ ಮಾಧ್ಯಮ ಹೇಳಿಕೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಪ್ರೊ. ಆರ್. ಬಸವರಾಜಪ್ಪ, ಕರ್ನಾಟಕ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಯು. ಬಸವರಾಜ್ ಡಾ. ಯಶವಂತ ಸೇರಿದಂತೆ ಇಡೀ ಕರ್ನಾಟಕದ ಪ್ರಮುಖ ರೈತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಒಮ್ಮತದ ಬೆಂಬಲ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...