Homeಮುಖಪುಟ"8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

- Advertisement -
- Advertisement -

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿ ಅತ್ಯಂತ ಆತಂಕಕಾರಿ ಹಂತ ತಲುಪಿದೆ. ಜೂನ್ 28 ರಿಂದ ಕೇವಲ ನೀರು ಕುಡಿದು ಹೋರಾಟ ನಿರತರಾಗಿರುವ ವಾಂಗ್‌ಚುಕ್ ಅವರು ಈಗಾಗಲೇ ಬರೋಬ್ಬರಿ 8.5 ಕೆಜಿ ತೂಕ ಕಳೆದುಕೊಂಡಿದ್ದು, ಮುಂದಿನ ಎರಡು ದಿನಗಳಲ್ಲಿ ಅವರ ಪ್ರಾಣಕ್ಕೇ ಅಪಾಯವಾಗುವ ಭೀತಿ ಎದುರಾಗಿದೆ. ಈ ಆಘಾತಕಾರಿ ಬೆಳವಣಿಗೆಯ ಬೆನ್ನಲ್ಲೇ, ಅವರ ಪ್ರಾಣ ರಕ್ಷಣೆಗಾಗಿ ತುರ್ತು ವೈದ್ಯಕೀಯ ಹಸ್ತಕ್ಷೇಪ ಮಾಡಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (PIL) ದಾಖಲಿಸಲಾಗಿದೆ.

ಬಲವಂತವಾಗಿ ಆಹಾರ ನೀಡಿಯಾದರೂ ಜೀವ ಉಳಿಸಿ: ಅರ್ಜಿದಾರರ ಮನವಿ

ಪ್ರಮುಖ ಕಾನೂನು ಸುದ್ದಿ ಜಾಲತಾಣ ‘ಲೈವ್ ಲಾ’ ವರದಿ ಮಾಡಿರುವ ಪ್ರಕಾರ, ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿರುವ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ರಾಕೇಶ್ ಕುಮಾರ್ ಸೈನಿ ಅವರು ದೆಹಲಿ ಹೈಕೋರ್ಟ್‌ಗೆ ಈ ಪ್ರಮುಖ ಅರ್ಜಿಯನ್ನು ಸಲ್ಲಿಸಿದ್ದಾರೆ. ತೀವ್ರವಾಗಿ ಜರ್ಜರಿತರಾಗಿರುವ ಸೋನಮ್ ವಾಂಗ್‌ಚುಕ್ ಅವರನ್ನು ಕೂಡಲೇ ಹತ್ತಿರದ ಸುಸಜ್ಜಿತ ಆಸ್ಪತ್ರೆಗೆ ದಾಖಲಿಸಿ, ಅವರ ಜೀವ ರಕ್ಷಿಸಲು ಬಲವಂತವಾಗಿ ಆಹಾರ ನೀಡುವಂತೆ (Force-feed) ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ತಕ್ಷಣದ ಆದೇಶ ಹೊರಡಿಸಬೇಕು ಎಂದು ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

“ದೇಶದ ಅತ್ಯಂತ ಪ್ರಾಮಾಣಿಕ ಮತ್ತು ಸೃಜನಶೀಲ ನಾಗರಿಕನೊಬ್ಬ ಇಡೀ ರಾಷ್ಟ್ರದ ಕಣ್ಣೆದುರೇ ಪ್ರಾಣ ತ್ಯಜಿಸುವ ಸ್ಥಿತಿಗೆ ತಲುಪುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಅತ್ಯಂತ ದುಃಖಕರ ಮತ್ತು ಅಷ್ಟೇ ದುರದೃಷ್ಟಕರ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿ ಸರ್ಕಾರಕ್ಕೆ ಕಠಿಣ ಆದೇಶ ನೀಡಬೇಕು.” ಎಂದು ರಾಕೇಶ್ ಕುಮಾರ್ ಸೈನಿ ಕೇಳಿಕೊಂಡಿದ್ದಾರೆ. 

ಕಲಾಪ ಬಹಿಷ್ಕಾರದ ನಡುವೆಯೂ ತುರ್ತು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್

ಬುಧವಾರ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯ ಪ್ರಸ್ತಾಪ ಬಂದಿತ್ತು. ದೆಹಲಿ ಹೈಕೋರ್ಟ್‌ನ ಬಾರ್ ಅಸೋಸಿಯೇಷನ್ ಕರೆ ನೀಡಿದ್ದ ನ್ಯಾಯಾಲಯದ ಕಲಾಪದ ಗೈರುಹಾಜರಿಯ (Boycott) ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳಾಗಲಿ ಅಥವಾ ಸರ್ಕಾರದ ಪರ ವಕೀಲರಾಗಲಿ ನ್ಯಾಯಾಲಯದ ಮುಂದೆ ಹಾಜರಿರಲಿಲ್ಲ. ಆದರೆ, ಅರ್ಜಿಯ ಗಂಭೀರತೆಯನ್ನು ಗಮನಿಸಿದ ಪೀಠವು ಈ ಪ್ರಕರಣವನ್ನು ನಿರ್ಲಕ್ಷಿಸಲು ನಿರಾಕರಿಸಿತು.

“ವಿಷಯದ ಗಂಭೀರತೆಯನ್ನು ಪರಿಗಣಿಸಿ, ನಾಳೆಯೇ (ಗುರುವಾರ) ಈ ಅರ್ಜಿಯನ್ನು ವಿಚಾರಣಾ ಪಟ್ಟಿಯಲ್ಲಿ ಸೇರಿಸಿ” ಎಂದು ನ್ಯಾಯಪೀಠವು ಅಧಿಕಾರಿಗಳಿಗೆ ಆದೇಶಿಸಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಜೊತೆಗೆ, ಈ ಆದೇಶದ ನಕಲು ಪ್ರತಿಯನ್ನು ತಕ್ಷಣವೇ ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಮತ್ತು ದೆಹಲಿ ಸರ್ಕಾರದ ಮುಖ್ಯ ವಕೀಲರಿಗೆ ತಲುಪಿಸಿ ಸಿದ್ಧರಾಗಿರಲು ಕೋರ್ಟ್ ನಿರ್ದೇಶಿಸಿದೆ.

ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ವಿರುದ್ಧದ ಕ್ರಾಂತಿ

ಈ ಇಡೀ ಹೋರಾಟದ ಮೂಲ ಇರುವುದು ಯುವಜನರ ಭವಿಷ್ಯವನ್ನು ಕಮರಿಸುತ್ತಿರುವ ದೇಶದ ಶಿಕ್ಷಣ ವ್ಯವಸ್ಥೆಯ ಭ್ರಷ್ಟಾಚಾರದ ವಿರುದ್ಧ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ಇಲಾಖೆಯೊಳಗಿನ ಸಾಲು ಸಾಲು ಆಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಶಿಕ್ಷಣ ವ್ಯವಸ್ಥೆಯ ಈ ದಯನೀಯ ಸ್ಥಿತಿಯ ವಿರುದ್ಧ ಜೂನ್ 20 ರಿಂದಲೇ ‘ಕಾಕ್ರೋಚ್ ಜನತಾ ಪಕ್ಷ’ (CJP) ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿತ್ತು. 

ದೇಶದ ಯುವ ಸಮುದಾಯದ ಧ್ವನಿಗೆ ಸಾಥ್ ನೀಡಲು ಮುಂದೆ ಬಂದ ಸೋನಮ್ ವಾಂಗ್‌ಚುಕ್ ಅವರು ಜೂನ್ 28 ರಂದು ಖುದ್ದಾಗಿ ಈ ಸತ್ಯಾಗ್ರಹಕ್ಕೆ ಧುಮುಕಿದರು. ಅಲ್ಲಿಂದ ಇಂದಿನವರೆಗೂ ಯಾವುದೇ ಆಹಾರ ಸೇವಿಸದೆ ಕೇವಲ ಸತ್ಯದ ಬಲದಿಂದ ಹೋರಾಡುತ್ತಿರುವ ವಾಂಗ್‌ಚುಕ್ ಅವರ ಪ್ರಾಣ ಈಗ ಆಡಳಿತ ವರ್ಗದ ಹಠಮಾರಿ ಧೋರಣೆಯಿಂದಾಗಿ ಸಂಕಟಕ್ಕೆ ಸಿಲುಕಿದೆ. 

ಜನಾಂದೋಲನಗಳಿಗೆ ಸ್ಪಂದಿಸದ ಮತ್ತು ಜನಸಾಮಾನ್ಯರ ಜೀವಕ್ಕೆ ಬೆಲೆ ನೀಡದ ಪ್ರಭುತ್ವದ ಕ್ರೌರ್ಯವನ್ನು ಈ ಧರಣಿ ಮತ್ತು ಹೈಕೋರ್ಟ್ ಮೆಟ್ಟಿಲೇರಿರುವ ಈ ಇಡೀ ಪ್ರಕ್ರಿಯೆ ಬಯಲುಮಾಡಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Supreme court intervention is must. It should have voluntarily taken up the case in the interest of the nation.
    Should not spare the government which not caring the life of a citizen who is fighting for justice.
    This amounts to murder of citizens by the rulers. The responcible statutory bodies are not discharging
    their duties as per the constitution instead the bodies have become the agents of BJP and RSS.

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...