Homeಮುಖಪುಟಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

- Advertisement -
- Advertisement -

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ ಯಾವುದೇ ಸ್ಪಂದನೆ ಸಿಗದೆ ಪ್ರತಿಭಟನೆಯನ್ನು ಹಿಂತೆಗೆದುಕೊಂಡರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ.

“ನಾನು ಆಹಾರ ಸೇವಿಸಿದರೆ, ಯಾವ ಸಂದೇಶ ರವಾನೆಯಾಗುತ್ತದೆ? ಸರ್ಕಾರಕ್ಕೆ ಹೊಣೆಗಾರಿಕೆಯ ಅಗತ್ಯವೇ ಇಲ್ಲ ಎಂಬ ಸಂದೇಶ ಹೋಗುತ್ತದೆ. ಪ್ರತಿಭಟನಾಕಾರರು ಬರುತ್ತಾರೆ ಮತ್ತು ಹಾಗೇ ಹೊರಟುಹೋಗುತ್ತಾರೆ” ಎಂದು ತಾವು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರೆ ಏನಾದರೂ ಬದಲಾಗುತ್ತದೆಯೇ ಎಂದು ಪ್ರಶ್ನಿಸುತ್ತಾ ವಾಂಗ್‌ಚುಕ್ ಹೇಳಿದ್ದಾರೆ.

ಬುಧವಾರ (ಜು.15) ತಡರಾತ್ರಿ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ, ತಮ್ಮ ಉಪವಾಸ ಸತ್ಯಾಗ್ರಹದ 18ನೇ ದಿನದಂದು ಪ್ರತಿಭಟನೆಯನ್ನು ಕೈಬಿಡುವಂತೆ ವ್ಯಾಪಕ ಮನವಿಗಳು ಬಂದಿವೆ ಎಂದು ಹೇಳಿದ್ದಾರೆ.

“ಉಪವಾಸ ಕೈಬಿಡುವಂತೆ ಕೋರಿ ನನಗೆ ಸಾವಿರಾರು ಸಂದೇಶಗಳು ಬಂದಿವೆ. ಅನೇಕ ಹಿರಿಯ ರಾಜಕಾರಣಿಗಳು ನನ್ನ ಬಳಿ ಬಂದು ಪ್ರೀತಿ ಮತ್ತು ಕಾಳಜಿಯಿಂದ ಮಾತನಾಡಿದ್ದಾರೆ. ನನಗೆ ಆಹಾರ ನೀಡುವಂತೆ ನಿರ್ದೇಶನ ನೀಡಲು ಕೋರಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ” ಎಂದು ವಾಂಗ್‌ಚುಕ್ ತಿಳಿಸಿದ್ದಾರೆ.

ತಮ್ಮ ಆರೋಗ್ಯದ ಬಗೆಗಿನ ಕಳವಳಗಳನ್ನು ಉದ್ದೇಶಿಸಿ ಮಾತನಾಡಿದ ವಾಂಗ್‌ಚುಕ್, “ವೈದ್ಯಕೀಯ ತಪಾಸಣೆಗಳು ಯಾವುದೇ ತಕ್ಷಣದ ಅಪಾಯವನ್ನು ಸೂಚಿಸಿಲ್ಲ” ಎಂದು ಹೇಳಿದ್ದಾರೆ.

“ನನ್ನ ಪರಿಸ್ಥಿತಿ ಎರಡು-ನಾಲ್ಕು ದಿನಗಳಲ್ಲಿ ಸಾಯುವಷ್ಟೇನೂ ಕೆಟ್ಟದಾಗಿಲ್ಲ. ಅನೇಕ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದ್ದು, 18 ದಿನಗಳ ಉಪವಾಸಕ್ಕೆ ಹೋಲಿಸಿದರೆ ಫಲಿತಾಂಶಗಳು ಸಾಕಷ್ಟು ಸಾಮಾನ್ಯವಾಗಿವೆ. ಇಸಿಜಿ ಕೂಡ ಮಾಡಲಾಗಿದ್ದು, ಅದು ಕಳಪೆಯಾಗಿಲ್ಲ. ನಾನು ಇನ್ನೂ ಅನೇಕ ದಿನಗಳವರೆಗೆ ಇದನ್ನು ಮುಂದುವರಿಸಬಲ್ಲೆ. ಹೌದು, ದೌರ್ಬಲ್ಯವಿದೆ ಮತ್ತು ನನ್ನ ಸ್ನಾಯುಗಳು ದುರ್ಬಲಗೊಳ್ಳುತ್ತಿವೆ, ಆದರೆ ನನ್ನ ಹೃದಯ ಮತ್ತು ದೇಹದ ಮುಖ್ಯ ಭಾಗಗಳು ಇನ್ನೂ ಚೆನ್ನಾಗಿಯೇ ಇವೆ” ಎಂದಿದ್ದಾರೆ.

ತಮ್ಮ ಉಪವಾಸವನ್ನು ಕೊನೆಗೊಳಿಸುವಂತೆ ಮನವಿ ಮಾಡುವ ಬದಲು, ಸರ್ಕಾರಕ್ಕೆ ಬಲವಾದ ಸಂದೇಶವನ್ನು ರವಾನಿಸಲು ಜುಲೈ 20ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಮ್ಮಿಕೊಂಡಿರುವ “ಚಲೋ ಸಂಸದ್” ಮಾರ್ಚ್‌ನಲ್ಲಿ ಭಾರಿ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಾಂಗ್‌ಚುಕ್ ಅವರು ಬೆಂಬಲಿಗರಿಗೆ ಕರೆ ನೀಡಿದ್ದಾರೆ.

“ರಾಷ್ಟ್ರೀಯ ಶಿಕ್ಷಣ ನೀತಿಯಡಿ (ಎನ್‌ಇಪಿ) ಜುಲೈ 20 ಅನ್ನು ಪ್ರಾಯೋಗಿಕ ಶಿಕ್ಷಣದ ದಿನವನ್ನಾಗಿ ಆಚರಿಸುವಂತೆ ನಾನು ಎಲ್ಲಾ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ವಿನಂತಿಸುತ್ತೇನೆ. ವಿದ್ಯಾರ್ಥಿಗಳು ರಾಜಕೀಯ ವಿಜ್ಞಾನ ಮತ್ತು ಪ್ರಜಾಪ್ರಭುತ್ವದ ನೈಜ ಪಾಠವನ್ನು ಕಣ್ಣಾರೆ ವೀಕ್ಷಿಸಲು ಮತ್ತು ಅದರಲ್ಲಿ ಭಾಗವಹಿಸಲು ಇದು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಅಭಿಯಾನದ ವೆಬ್‌ಸೈಟ್ ಅಥವಾ ಮಿಸ್ಡ್-ಕಾಲ್ ಮೂಲಕ ಈ ಮಾರ್ಚ್‌ಗಾಗಿ ನೋಂದಾಯಿಸಿಕೊಳ್ಳುವಂತೆ ಜನರಿಗೆ ಕರೆ ನೀಡಿದ್ದಾರೆ.

“ಜುಲೈ 20ರಂದು ಸಾವಿರಾರು ಸಂಖ್ಯೆಯಲ್ಲಿ ಬನ್ನಿ. ನಾವೆಲ್ಲರೂ ಒಟ್ಟಾಗಿ ಈ ಸಮಸ್ಯೆಯನ್ನು ಸಂಸತ್ತಿಗೆ ಹಸ್ತಾಂತರಿಸೋಣ. ಆಗ ಇದು ಸರಿಯಾದ ಕೈಗಳಿಗೆ ಸೇರಿದೆ ಎಂದು ನಾನು ನಂಬುತ್ತೇನೆ” ಎಂದು ವಾಂಗ್‌ಚುಕ್ ಹೇಳಿದ್ದಾರೆ.

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ಕ್ಷೇತ್ರದ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಿಂದ ಪ್ರತಿಭಟನೆ ನಡೆಸುತ್ತಿದೆ. ಇದೇ ಜಾಗದಲ್ಲಿ ಸೋನಮ್ ವಾಂಗ್‌ಚುಕ್ ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿರುವ ಜುಲೈ 20ರಂದು ಸಿಜೆಪಿ “ಚಲೋ ಸಂಸದ್” ಮಾರ್ಚ್‌ಗೂ ಕರೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...