Homeಮುಖಪುಟನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

- Advertisement -
- Advertisement -

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ ಕೈಬಿಡುವಂತೆ ವಿರೋಧ ಪಕ್ಷಗಳ ನಾಯಕರ ಕಳಕಳಿಯ ಮನವಿಯನ್ನು ಖ್ಯಾತ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ನಿರಾಕರಿಸಿದ್ದಾರೆ. ಸರ್ಕಾರದಿಂದ ಯಾವುದೇ ಸೂಕ್ತ ಸ್ಪಂದನೆ ಬರದ ಹೊರತು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬುಧವಾರ ತಡರಾತ್ರಿ, ಅಂದರೆ ತಮ್ಮ ಉಪವಾಸ ಸತ್ಯಾಗ್ರಹದ 18ನೇ ದಿನದಂದು ವೀಡಿಯೊ ಸಂದೇಶವೊಂದನ್ನು ಬಿಡುಗಡೆ ಮಾಡಿರುವ ಸೋನಮ್ ವಾಂಗ್‌ಚುಕ್, ಸರ್ಕಾರದ ಯಾವುದೇ ಕ್ರಮವಿಲ್ಲದೆ ಪ್ರತಿಭಟನೆಯನ್ನು ಅಂತ್ಯಗೊಳಿಸಿದರೆ ಈ ಇಡೀ ಹೋರಾಟದ ಉದ್ದೇಶವೇ ವ್ಯರ್ಥವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನಾನು ಅನ್ನ ತಿಂದರೆ ಸರ್ಕಾರಕ್ಕೆ ಏನು ಸಂದೇಶ ಹೋಗುತ್ತದೆ?:

ಈಗ ನಾನು ಉಪವಾಸವನ್ನು ಕೊನೆಗೊಳಿಸಿ ಅನ್ನ ತಿಂದರೆ ಸರ್ಕಾರಕ್ಕೆ ಏನು ಸಂದೇಶ ಹೋಗುತ್ತದೆ? ಇಲ್ಲಿ ಯಾರಿಗೂ ಉತ್ತರದಾಯಿತ್ವದ ಅಗತ್ಯವಿಲ್ಲ, ಪ್ರತಿಭಟನಾಕಾರರು ಬರುತ್ತಾರೆ, ಕುಳಿತು ಹೊರಟುಹೋಗುತ್ತಾರೆ’ ಎಂಬ ತಪ್ಪು ಸಂದೇಶ ಸರ್ಕಾರಕ್ಕೆ ತಲುಪುತ್ತದೆ. ನಾನೀಗ ಧರಣಿ ಹಿಂಪಡೆದರೆ ಬದಲಾಗುವುದಾದರೂ ಏನು? ಎಂದು ವಾಂಗ್‌ಚುಕ್ ಪ್ರಶ್ನಿಸಿದ್ದಾರೆ.

ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ಕೋರಿ ತಮಗೆ ಸಾವಿರಾರು ಬೆಂಬಲಿಗರಿಂದ ಸಂದೇಶಗಳು ಬಂದಿವೆ ಮತ್ತು ಹಲವು ರಾಜಕೀಯ ನಾಯಕರು ಕಾಳಜಿಯಿಂದ ಭೇಟಿಯಾಗಿದ್ದಾರೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಅಲ್ಲದೆ, ತಾವು ಆಹಾರ ಸೇವಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕೆಲವು ಬೆಂಬಲಿಗರು ನ್ಯಾಯಾಲಯದ ಬಾಗಿಲು ತಟ್ಟಿದ್ದಾರೆ ಎಂದೂ ಅವರು ಬಹಿರಂಗಪಡಿಸಿದ್ದಾರೆ.

“ನಾನಿನ್ನೂ 2-4 ದಿನದಲ್ಲಿ ಸಾಯಲ್ಲ, ಹೃದಯ ಗಟ್ಟಿಯಾಗಿದೆ:

ತಮ್ಮ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿರುವ ಹಿತೈಷಿಗಳಿಗೆ ಧೈರ್ಯ ತುಂಬಿರುವ ವಾಂಗ್‌ಚುಕ್, ವೈದ್ಯಕೀಯ ತಪಾಸಣೆಗಳಲ್ಲಿ ಯಾವುದೇ ತಕ್ಷಣದ ಜೀವಾಪಾಯದ ಲಕ್ಷಣಗಳು ಕಂಡುಬಂದಿಲ್ಲ ಎಂದಿದ್ದಾರೆ.

ನನ್ನ ಪರಿಸ್ಥಿತಿ ಇನ್ನು ಎರಡು ಅಥವಾ ನಾಲ್ಕು ದಿನಗಳಲ್ಲಿ ಸತ್ತುಹೋಗುವಷ್ಟೇನೂ ಹದಗೆಟ್ಟಿಲ್ಲ. ಹಲವು ವೈದ್ಯಕೀಯ ಪರೀಕ್ಷೆಗಳು ನಡೆದಿದ್ದು, 18 ದಿನಗಳ ಉಪವಾಸಕ್ಕೆ ಹೋಲಿಸಿದರೆ ರಿಸಲ್ಟ್ ಸಾಮಾನ್ಯವಾಗಿಯೇ ಇದೆ. ಇಸಿಜಿ (ECG) ವರದಿಯೂ ತೃಪ್ತಿಕರವಾಗಿದೆ. ನಾನು ಇನ್ನೂ ಹಲವು ದಿನಗಳ ಕಾಲ ಉಪವಾಸವನ್ನು ಮುಂದುವರಿಸಬಲ್ಲೆ, ಎಂದು ಹೇಳಿದ್ದಾರೆ. ಉಪವಾಸದಿಂದಾಗಿ ದೇಹದ ಸ್ನಾಯುಗಳ ಶಕ್ತಿ ಕುಂದಿದ್ದು, ಶಾರೀರಿಕವಾಗಿ ಬಲಹೀನತೆ ಎನಿಸುತ್ತಿದೆಯಾದರೂ, ತಮ್ಮ ಹೃದಯ ಮತ್ತು ಒಟ್ಟಾರೆ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.

ಜುಲೈ 20ಕ್ಕೆ ‘ಸಂಸತ್ ಚಲೋ’ ವಿದ್ಯಾರ್ಥಿ-ಯುವಜನರಿಗೆ ಕರೆ:

ತಮ್ಮ ಉಪವಾಸವನ್ನು ಬಿಡಿವಂತೆ ಮನವಿ ಮಾಡುವ ಬದಲಿಗೆ, ಜುಲೈ 20 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ‘ಸಂಸತ್ ಚಲೋ’ (Chalo Sansad) ಪಾದಯಾತ್ರೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿ-ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಾಂಗ್‌ಚುಕ್ ವಿನಂತಿಸಿದ್ದಾರೆ.

ಅಲ್ಲದೆ, ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಕರೆ ನೀಡಿರುವ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಅಡಿಯಲ್ಲಿ ಜುಲೈ 20 ರ ಪ್ರತಿಭಟನೆಯನ್ನು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನೇರವಾಗಿ ಅನುಭವಿಸುವ ಪ್ರಾಯೋಗಿಕ ಶಿಕ್ಷಣದ ದಿನವನ್ನಾಗಿ ಪರಿಗಣಿಸಬೇಕು. ವಿದ್ಯಾರ್ಥಿಗಳು ರಾಜಕೀಯ ವಿಜ್ಞಾನ ಮತ್ತು ಪ್ರಜಾಪ್ರಭುತ್ವದ ನೈಜ ಪಾಠಕ್ಕೆ ಸಾಕ್ಷಿಯಾಗಲು ಮತ್ತು ಭಾಗವಹಿಸಲು ಇದು ದೊಡ್ಡ ಅವಕಾಶ ಎಂದಿದ್ದಾರೆ.

ಜುಲೈ 20 ರಂದು ಸಾವಿರಾರು ಸಂಖ್ಯೆಯಲ್ಲಿ ದೆಹಲಿಗೆ ಬನ್ನಿ. ನಾವೆಲ್ಲರೂ ಒಟ್ಟಾಗಿ ಈ ಪರೀಕ್ಷಾ ಅಕ್ರಮಗಳ ವಿಷಯವನ್ನು ಸಂಸತ್ತಿಗೆ ತಲುಪಿಸೋಣ. ಆಗ ಮಾತ್ರ ಈ ಹೋರಾಟ ಸರಿಯಾದ ದಿಕ್ಕಿಗೆ ತಲುಪಿದೆ ಎಂದು ನಾನು ನಂಬುತ್ತೇನೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಜುಲೈ 20 ರಂದೇ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಸಂಸತ್ತಿಗೆ ಮುತ್ತಿಗೆ ಹಾಕುವ ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...