Homeಮುಖಪುಟಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

- Advertisement -
- Advertisement -

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ (ಜು.15) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಎಲ್ಲಾ ಕಟ್ಟಡಗಳನ್ನು ಯಾವುದೇ ಅನುಮೋದಿತ ಕಟ್ಟಡ ಯೋಜನೆಗಳಿಲ್ಲದೆ (ನಕ್ಷೆ ಮಂಜೂರಾತಿ ಇಲ್ಲದೆ) ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ ಎಂದು ಪ್ರಾಧಿಕಾರ ಹೇಳಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಉತ್ತರ ಪ್ರದೇಶ ನಗರಾಭಿವೃದ್ಧಿ ಮತ್ತು ಯೋಜನಾ ಕಾಯ್ದೆ 1973ರ ಸೆಕ್ಷನ್ 27(1) ರ ಅಡಿಯಲ್ಲಿ ಕಟ್ಟಡಗಳನ್ನು ಕೆಡವಲು ಆದೇಶ ಹೊರಡಿಸಲಾಗಿದೆ. ಪ್ರಕರಣದ ವಿಚಾರಣೆ ಹಾಗೂ ದಾಖಲೆಗಳ ಕೂಲಂಕಷ ಪರಿಶೀಲನೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ರಾಂಪುರ ಜಿಲ್ಲಾಧಿಕಾರಿ ಅಜಯ್ ಕುಮಾರ್ ದ್ವಿವೇದಿ ಅವರ ಪ್ರಕಾರ, ವಿಶ್ವವಿದ್ಯಾಲಯದ ಆವರಣದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳು ನಡೆದಿರುವ ಬಗ್ಗೆ ಪ್ರಾದೇಶಿಕ ಕಿರಿಯ ಇಂಜಿನಿಯರ್ (ಜೂನಿಯರ್ ಇಂಜಿನಿಯರ್) ವರದಿ ನೀಡಿದ ನಂತರ ಈ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿತ್ತು. ಈ ಸಂಬಂಧ ನೋಟಿಸ್ ಜಾರಿಯಾದ ಬಳಿಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಜುಲೈ 8ರಂದು ತನ್ನ ಲಿಖಿತ ಉತ್ತರವನ್ನು ಸಲ್ಲಿಸಿತ್ತು. ತದನಂತರ ಜುಲೈ 15ರಂದು ಅದಕ್ಕೆ ವೈಯಕ್ತಿಕ ವಿಚಾರಣೆಯ ಅವಕಾಶವನ್ನು ಸಹ ನೀಡಲಾಗಿತ್ತು.

ವಿಚಾರಣೆಯ ಸಮಯದಲ್ಲಿ, ಸಿಂಗನ್‌ಖೇಡಾ ಗ್ರಾಮದಲ್ಲಿರುವ ವಿಶ್ವವಿದ್ಯಾಲಯದ ಜಾಗವು ಸೆಪ್ಟೆಂಬರ್ 27,2024 ರವರೆಗೆ ಆರ್‌ಡಿಎ ವ್ಯಾಪ್ತಿಯಿಂದ ಹೊರಗಿತ್ತು, ಆದ್ದರಿಂದ ಕಟ್ಟಡ ನಿರ್ಮಾಣಕ್ಕೆ ಅದರ ಅನುಮೋದನೆಯ ಅಗತ್ಯವಿರಲಿಲ್ಲ ಎಂದು ವಿಶ್ವವಿದ್ಯಾಲಯವು ವಾದಿಸಿದೆ. ಅಲ್ಲದೆ, ಈ ಕಟ್ಟಡಗಳನ್ನು ಬಹಳ ಹಿಂದೆಯೇ ನಿರ್ಮಿಸಲಾಗಿದ್ದು, ಪ್ರಸ್ತುತ ನಿಯಮಗಳ ಅಡಿಯಲ್ಲಿ ಅವುಗಳನ್ನು ಕಾನೂನುಬಾಹಿರ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಆಡಳಿತ ಮಂಡಳಿ ಪ್ರತಿಪಾದಿಸಿದೆ.

ಆದರೆ ಈ ವಾದಗಳನ್ನು ತಿರಸ್ಕರಿಸಿದ ಆರ್‌ಡಿಎ, ಕಟ್ಟಡ ನಿರ್ಮಾಣದ ಸಮಯದಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿತ್ತು ಎಂದು ಪ್ರತಿಪಾದಿಸಿದೆ. ಆ ಪ್ರದೇಶವು ನಂತರದ ದಿನಗಳಲ್ಲಿ ತನ್ನ ವ್ಯಾಪ್ತಿಗೆ ಒಳಪಟ್ಟಿದೆಯೇ ಅಥವಾ ಇಲ್ಲವೇ ಎಂಬುದು ಇಲ್ಲಿ ಮುಖ್ಯವಾಗುವುದಿಲ್ಲ ಎಂದು ಹೇಳಿದೆ.

ಆದೇಶದ ಪ್ರಕಾರ, ರಾಂಪುರ ಜಿಲ್ಲಾ ಪಂಚಾಯತ್‌ನ ದಾಖಲೆಗಳು ಕೇವಲ ವೈದ್ಯಕೀಯ ಕಾಲೇಜು ಮತ್ತು ಶೈಕ್ಷಣಿಕ ಬ್ಲಾಕ್‌ಗೆ ಮಾತ್ರ ಅನುಮೋದಿತ ಕಟ್ಟಡ ಯೋಜನೆಗಳಿರುವುದನ್ನು ತೋರಿಸಿವೆ. ಆದರೆ, ಉಳಿದ 38 ಕಟ್ಟಡಗಳಿಗೆ ಯಾವುದೇ ಮಾನ್ಯತೆ ಇರುವ ಅನುಮೋದನೆ ಇಲ್ಲದಿರುವುದು ಕಂಡುಬಂದಿದೆ. ವಿಶ್ವವಿದ್ಯಾಲಯಕ್ಕೆ ಈ ಕಟ್ಟಡ ನಕ್ಷೆಯ ಅನುಮೋದನೆಯ ಅಗತ್ಯತೆಯ ಬಗ್ಗೆ ಮೊದಲೇ ತಿಳಿದಿತ್ತು ಎಂಬುದನ್ನು ಸಹ ಆದೇಶದಲ್ಲಿ ಉಲ್ಲೇಖಿಸಲಾಗಿದೆ; ಏಕೆಂದರೆ ಅದು ಈಗಾಗಲೇ ಅನುಮತಿ ಪಡೆದ ಎರಡು ಕಟ್ಟಡಗಳಿಗೆ ಮಂಜೂರಾತಿ ಪಡೆದುಕೊಂಡಿತ್ತು, ಆದರೆ ಉಳಿದ ಕಟ್ಟಡಗಳನ್ನು ಯಾವುದೇ ಅಧಿಕೃತ ಅನುಮತಿಯಿಲ್ಲದೆ ಕಾನೂನುಬಾಹಿರವಾಗಿ ನಿರ್ಮಿಸಿದೆ.

ಈ ಎಲ್ಲಾ ನಿರ್ಮಾಣಗಳು ಉತ್ತರ ಪ್ರದೇಶ ನಗರಾಭಿವೃದ್ಧಿ ಮತ್ತು ಯೋಜನಾ ಕಾಯ್ದೆಯನ್ನು ಉಲ್ಲಂಘಿಸಿವೆ, ಆದ್ದರಿಂದ ಇವುಗಳನ್ನು ಧ್ವಂಸಗೊಳಿಸುವುದು ಅನಿವಾರ್ಯ ಎಂದು ಪ್ರಾಧಿಕಾರವು ತೀರ್ಮಾನಿಸಿದೆ.

ಉತ್ತರ ಪ್ರದೇಶ ಶಾಸಕಾಂಗದ ಕಾಯ್ದೆಯ ಮೂಲಕ 2006ರಲ್ಲಿ ಸ್ಥಾಪನೆಯಾದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯವು ಆಝಂ ಖಾನ್ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ, ಇದು ಭೂ ಒತ್ತುವರಿ ಮತ್ತು ಗುತ್ತಿಗೆ ನಿಯಮಗಳ ಉಲ್ಲಂಘನೆಯ ಆರೋಪಗಳ ಮೇಲೆ ಕಾನೂನು ವಿವಾದಗಳಲ್ಲಿ ಸಿಲುಕಿಕೊಂಡಿದೆ. ಈ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ಸರ್ಕಾರವು ವಿಶ್ವವಿದ್ಯಾಲಯದ ಜಮೀನಿನ ಬಹುದೊಡ್ಡ ಭಾಗವನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಈ ವರ್ಷದ ಆರಂಭದಲ್ಲಿ, ಆಝಂ ಖಾನ್ ಮತ್ತು ಅವರ ಕುಟುಂಬ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯಿಂದ (ಟ್ರಸ್ಟ್) ಅಧಿಕೃತವಾಗಿ ಕೆಳಗಿಳಿದಿದೆ. ಈ ವಿಶ್ವವಿದ್ಯಾಲಯವನ್ನು ಮುನ್ನಡೆಸುವ ಮೌಲಾನಾ ಮೊಹಮ್ಮದ್ ಅಲಿ ಜೌಹರ್ ಟ್ರಸ್ಟ್‌ನ ಚಾನ್ಸಲರ್ ಮತ್ತು ಆಜೀವ ಅಧ್ಯಕ್ಷರಾಗಿ ಖಾನ್ ಅವರು ಸೇವೆ ಸಲ್ಲಿಸುತ್ತಿದ್ದರು.

Courtesy : timesofindia.indiatimes.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...