Homeಮುಖಪುಟ47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ ವಯಸ್ಸನ್ನು ಗಮನಿಸಿ ಶಿಕ್ಷೆಯನ್ನು 7.5 ವರ್ಷದಿಂದ ನಾಲ್ಕು ವರ್ಷಗಳಿಗೆ ಇಳಿಸಿದೆ. ಈ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಸಂಭವಿಸಿತ್ತು.

ನ್ಯಾಯಾಧೀಶ ಸಂತೋಷ್ ರೈ ಅವರು, ಆರೋಪಿಯಾಗಿರುವ ರಾಮ್ ಸ್ವರೂಪ್ ಸಲ್ಲಿಸಿದ ಕ್ರಿಮಿನಲ್ ಮೇಲ್ಮನವಿಯನ್ನು ಭಾಗಶಃ ಅನುಮತಿಸಿದರು. ಆತನಿಗೆ ಶರಣಾಗುವಂತೆ ಸೂಚಿಸಿ ಉಳಿದ ಶಿಕ್ಷೆಯನ್ನು ಅನುಭವಿಸಬೇಕು ಎಂದು ಆದೇಶಿಸಿದೆ.

ಅಕ್ಟೋಬರ್ 31 ಮತ್ತು ನವೆಂಬರ್ 1, 1979 ರ ಮಧ್ಯರಾತ್ರಿ, 15 ರಿಂದ 17 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಯನ್ನು ಮೂವರಾದ ಕಾಳಿ ಚರಣ್, ರಾಮ್ ಲಾಲ್ ಮತ್ತು ರಾಮ್ ಸ್ವರೂಪ್ ಎಂಬುವವರು ಚಾಕು ತೋರಿಸಿ ಅಪಹರಿಸಿದ್ದರು. ಆಕೆಯನ್ನು ರೈಲಿನಲ್ಲಿ ಶಹಜಹಾನ್‌ಪುರದ ಮೂಲಕ ತಿಲ್ಹಾರ್‌ನಲ್ಲಿರುವ ಖಾಲಿ ಮನೆಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆಯನ್ನು ಒಂದು ವಾರ ಬಂಧನದಲ್ಲಿಟ್ಟು ಪದೇಪದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಲಾಯಿತು.

1983 ರಲ್ಲಿ ಮೂವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಯಿತು, ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪಿಲಿಭಿತ್ ಅವರು ಮೂವರೂ ತಪ್ಪಿತಸ್ಥರು ಎಂದು ಘೋಷಿಸಿದ್ದರು. ಆಗ ಮೂವರಿಗೂ ಗರಿಷ್ಠ ಏಳೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಆದರೆ, ಅಪರಾಧಿಗಳು 1983 ರಲ್ಲಿ ಹೈಕೋರ್ಟ್‌ನಲ್ಲಿ ತೀರ್ಪನ್ನು ಪ್ರಶ್ನಿಸಿದ್ದರು.

ಮೇಲ್ಮನವಿ ವಿಚಾರಣೆಯ ಸಮಯದಲ್ಲಿ, ಸಹ-ಆರೋಪಿಗಳಾದ ಕಾಳಿ ಚರಣ್ ಮತ್ತು ರಾಮ್ ಲಾಲ್ ನಿಧನರಾದರು. ಇಬ್ಬರಿಗೂ ಸಂಬಂಧಿಸಿದ ಮೇಲ್ಮನವಿಯನ್ನು 2022 ರಲ್ಲಿ ವಜಾಗೊಳಿಸಲಾಯಿತು.

ವಿಚಾರಣೆಯ ಸಮಯದಲ್ಲಿ, ಆರೋಪಿ ಪರ ವಕೀಲರು ಅಪರಾಧ ನಿರ್ಣಯದ ಪ್ರಶ್ನೆಯ ಮೇಲೆ ಮೇಲ್ಮನವಿವೆಗೆ ಒತ್ತಾಯಿಸಲಿಲ್ಲ. ಶಿಕ್ಷೆಯ ಪ್ರಶ್ನೆಗೆ ಮಾತ್ರ ತಮ್ಮ ಮನವಿಯನ್ನು ಸೀಮಿತಗೊಳಿಸಿದರು.

ವಿಚಾರಣಾ ನ್ಯಾಯಾಲಯವು ನೀಡಿದ ಶಿಕ್ಷೆಯನ್ನು ಈ ನ್ಯಾಯಾಲಯಕ್ಕೆ ಲಭ್ಯವಿರುವ ವಿವೇಚನೆಯನ್ನು ಬಳಸಿಕೊಂಡು ಸೂಕ್ತವಾಗಿ ಮಧ್ಯಸ್ಥಿಕೆ ವಹಿಸಲು ಅರ್ಹವಾದ ಪ್ರಕರಣ ಇದಾಗಿದೆ ಎಂದು ವಾದಿಸಲಾಯಿತು.

“ಬಲಿಪಶುವಿನ ಸಾಕ್ಷ್ಯವು ಶಿಕ್ಷೆಯ ಮೂಲಾಧಾರವಾಗಿರುವ ಇಂತಹ ಪ್ರಕರಣಗಳಲ್ಲಿ, ಅಪರಾಧಿಗೆ ಅನಗತ್ಯ ಸಹಾನುಭೂತಿ ತೋರಿಸುವುದು ನ್ಯಾಯವನ್ನು ಸಂಪೂರ್ಣ ತಪ್ಪುದಾರಿಗೆಳೆದಂತಾಗುತ್ತದೆ” ಎಂದು ಹೇಳುತ್ತಾ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತು. ಶಿಕ್ಷೆ ವಿಧಿಸುವುದು ಕೇವಲ ಪ್ರತೀಕಾರದ ಪ್ರಕ್ರಿಯೆಯಲ್ಲ, ಅದು ಅಪರಾಧಿ ಮತ್ತು ಇತರರಿಗೆ ಪ್ರತಿಬಂಧಕವಾಗಿ ಕಾರ್ಯನಿರ್ವಹಿಸಬೇಕು. ದುರ್ಬಲರನ್ನು ರಕ್ಷಿಸುವ ಶಾಸಕಾಂಗ ಉದ್ದೇಶವನ್ನು ಪ್ರತಿಬಿಂಬಿಸಬೇಕು” ಎಂದು ಕೋರ್ಟ್‌ ಹೇಳಿದೆ.

ಈ ಅಪರಾಧವನ್ನು ಘೋರ ಎಂದು ಹೇಲಿದ ನ್ಯಾಯಾಲಯವು, “ಲೈಂಗಿಕ ಹಿಂಸೆಯ ಸಾಮಾಜಿಕ ಪರಿಣಾಮವು ಆಳವಾದದ್ದು, ಈ ಪ್ರಮಾಣದ ಪ್ರಕರಣದಲ್ಲಿ ಪರೀಕ್ಷಾರ್ಥ ಅವಧಿಯ ಪ್ರಯೋಜನವನ್ನು ನೀಡುವುದು ಸಾಮಾಜಿಕ ಹಿತಾಸಕ್ತಿ ಮತ್ತು ಕ್ರಿಮಿನಲ್ ನ್ಯಾಯದ ತತ್ವಗಳಿಗೆ ವಿರುದ್ಧವಾಗಿರುತ್ತದೆ” ಎಂದು ಮತ್ತಷ್ಟು ಹೇಳಿತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಅಧಾರದಲ್ಲಿ, ವಿಶೇಷ ಕಾರಣಗಳಿಗಾಗಿ ನ್ಯಾಯಾಲಯಗಳು ಶಾಸನಬದ್ಧ ಏಳು ವರ್ಷಗಳಿಗಿಂತ ಶಿಕ್ಷೆಯನ್ನು ಕಡಿಮೆ ಮಾಡಲು ಅವಕಾಶ ಮಾಡಿಕೊಟ್ಟಿತು ಎಂದು ನ್ಯಾಯಾಲಯವು ಗಮನಿಸಿತು.

ಘಟನೆಯು 1979 ರ ವರ್ಷ ಅಂದರೆ ಸುಮಾರು 47 ವರ್ಷ ಹಳೆಯದಾಗಿದೆ, ಮೇಲ್ಮನವಿಯು ಮೇಲ್ಮನವಿದಾರರ ಯಾವುದೇ ತಪ್ಪಿಲ್ಲದೆ ಸುಮಾರು 43 ವರ್ಷಗಳಿಂದ ಈ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ ಎಂಬ ಅಂಶವನ್ನು ಕೋರ್ಟ್‌ ಗಣನೆಗೆ ತೆಗೆದುಕೊಂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...