Homeಮುಖಪುಟಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

- Advertisement -
- Advertisement -

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ ಬೃಹತ್ ‘ಸಂಸತ್‌ ಚಲೋ ಮೆರವಣಿಗೆ ಸೋಮವಾರ ಆರಂಭವಾಗಿದೆ. ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮತ್ತೊಂದೆಡೆ, ಜಂತರ್‌ ಮಂತರ್‌ನಲ್ಲಿ ಸಿಜೆಪಿ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವು ಇಂದು 22ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ಮೈದಾನದಲ್ಲಿ ರಾಜಕೀಯ ನಾಯಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ.

ಸಂಸತ್ತಿನ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಸಿಜೆಪಿ ಸಂಸತ್ ಮುತ್ತಿಗೆಗೆ ಕರೆ ನೀಡಿರುವ ಕಾರಣ, ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ಅತ್ಯಂತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ.

ಇದೇ ವೇಳೆ ದೆಹಲಿ ಪೊಲೀಸರು ಯುಕವನ ಮೇಲೆ ಲಾಠಿ ಪ್ರಹಾರ ನಡೆಸುತ್ತಿದ್ದರೂ, ಆ ಯುವಕ ಕದಲದೆ ಹೊಡೆಯಿರಿ ಸರ್‌, ಹೊಡೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಭದ್ರತೆ ಮತ್ತು ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಆದರೂ, ಸಾವಿರಾರು ಜನರು ಜಂತರ್‌ ಮಂತರ್‌ಗೆ ಧಾವಿಸಿದ್ದಾರೆ. ಸಂಸತ್ತಿನ ಬೀದಿಯ ಬಳಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೂ, ಬಗ್ಗದ ಪ್ರತಿಭಟನಾಕಾರರು ಬೃಹತ್ ಪ್ರತಿಭಟನೆ ಮುಂದುವರೆಸಿದ್ದಾರೆ.

ಸಿಜೆಪಿ ಪ್ರೊಟೆಸ್ಟ್‌

ಪ್ರತಿಭಟನಾಕಾರರು ಸಂಸತ್ತಿನ ಕಡೆಗೆ ಮುನ್ನುಗ್ಗುವುದನ್ನು ತಡೆಯಲು ಭದ್ರತಾ ಕಾರಣ ನೀಡಿ ದೆಹಲಿ ಮೆಟ್ರೋ ರೈಲು ನಿಗಮ (DMRC) ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಹಠಾತ್ ಮುಚ್ಚಿದೆ.

  • ರಾಜೀವ್‌ ಚೌಕ್‌
  • ಜನಪಥ್‌
  • ಪಟೇಲ್‌ ಚೌಕ್‌
  • ಸೆಂಟ್ರಲ್‌ ಸೆಕ್ರೆಟರಿಯೇಟ್‌
  • ಸೇವಾ ತೀರ್ಥ

ಈ ಐದು ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಮುಂದಿನ ಸೂಚನೆವರೆಗೆ ಸಾರ್ವಜನಿಕರ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ಡಿಎಮ್‌ಆರ್‌ಸಿ ತನ್ನ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪ್ರಕಟಿಸಿದೆ.

ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಲು ಸಿಜೆಪಿಗೆ ಯಾವುದೇ ಅಧಿಕೃತ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹೊಸದಿಲ್ಲಿ ಜಿಲ್ಲೆಯಾದ್ಯಂತ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) ಸೆಕ್ಷನ್‌ 163 ರ ಅಡಿಯಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೆಹಲಿ ಪೊಲೀಸ್‌ ಉಪ ಆಯುಕ್ತರ (DCP) ಮಾಹಿತಿ ಪ್ರಕಾರ, ಪೂರ್ವಾನುಮತಿ ಪಡೆದಿರುವ ಜಂತರ್‌ ಮಂತರ್‌ನ ನಿಗದಿತ ಸ್ಥಳವನ್ನು ಹೊರತುಪಡಿಸಿ, ಇತರೆಡೆ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸೇರುವುದು, ಮೆರವಣಿಗೆ ಮಾಡುವುದು ಹಾಗೂ ಧರಣಿ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ 223 ರ ಅಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಹೋರಾಟದ ಪಟ್ಟಿನಿಂದ ಹಿಂದೆ ಸರಿಯದ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್, ಸರ್ಕಾರಕ್ಕೆ ಎರಡು ಪ್ರಮುಖ ಷರತ್ತುಗಳನ್ನು ವಿಧಿಸಿದ್ದಾರೆ.

ಹೊಣೆಗಾರಿಕೆ ಒಪ್ಪಿಕೊಳ್ಳಬೇಕು. ಇಲ್ಲವೇ, ಈ ಮುಂಗಾರು ಅಧಿವೇಶನದಲ್ಲೇ ಶಿಕ್ಷಣ ಕ್ಷೇತ್ರದ ದುಸ್ಥಿತಿ ಮತ್ತು ಹೊಣೆಗಾರಿಕೆ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸುವುದಾಗಿ ಸಂಸದರು ಭರವಸೆ ನೀಡಬೇಕು. ಈ ಎರಡರಲ್ಲಿ ಯಾವುದಾದರೂ ಒಂದನ್ನು ಈಡೇರಿಸಿದರೆ ಮಾತ್ರ ನಾವು ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುತ್ತೇವೆ. ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...