Homeಮುಖಪುಟಕನಿಷ್ಠ 20 ಸಾವಿರ 'ಕಾಕ್ರೋಚ್‌'ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ - ಅಶ್ರುವಾಯು

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

- Advertisement -
- Advertisement -

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಯುವಜನರ ಮೇಲೆ ಭದ್ರತಾ ಸಿಬ್ಬಂದಿ ಲಾಠಿ ಚಾರ್ಜ್‌ ಮಾಡಿದ್ದಾರೆ.

ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಾದ ನೀಟ್‌ನಲ್ಲಿ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕು ಎಂದು ಸಿಜೆಪಿ “ಸಂಸತ್ ಚಲೋ”ಗೆ ಕರೆ ನೀಡುತ್ತು. ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದ ಸಾವಿರಾರು ಕಾಕ್ರೋಚ್‌ಗಳನ್ನು ಚದುರಿಸಲು ಅಶ್ರುವಾಯು ಮತ್ತು ಲಾಠಿಗಳನ್ನು ಬಳಸಿದರು.

ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸುವಾಗ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ ಕೆಲವು ಪ್ರತಿಭಟನಾಕಾರರು ಮತ್ತು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಸಹ ಸ್ಥಗಿತಗೊಳಿಸಲಾಗಿತ್ತು.

ಶಾಂತಿಯುತ ಪ್ರತಿಭಟನೆಗೆ ಸಿಜೆಪಿ ಕರೆ

“ಕೆಲವು ಕಡೆಗಳಲ್ಲಿ ನಿಮ್ಮನ್ನು ತಡೆಯಲಾಗಿದೆ; ಆದರೂ ನೀವಯ ಶಾಂತವಾಗಿರಿ. ನಾವು ಶಾಂತಿ ಮತ್ತು ಪ್ರೀತಿಯಿಂದ ಮಾತ್ರ ಇದನ್ನು ಗೆಲ್ಲುತ್ತೇವೆ” ಎಂದು ಪಕ್ಷ ಹೇಳಿದೆ.

ಸಂಸತ್ ಮೆರವಣಿಗೆಗೆ ಪೊಲೀಸರು ಅನುಮತಿ ನಿರಾಕರಿಸಿ ದೊಡ್ಡ ಸಭೆಗಳನ್ನು ನಿಷೇಧಿಸಿದ್ದರು. ನಿಷೇಧಾಜ್ಞೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದರು.

“ಜಂತರ್ ಮಂತರ್‌ನಲ್ಲಿ ನಿಗದಿಪಿಡಿದ ಪ್ರತಿಭಟನಾ ಸ್ಥಳವನ್ನು ಹೊರತುಪಡಿಸಿ, ಪೂರ್ವಾನುಮತಿಯೊಂದಿಗೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಪ್ರತಿಭಟನಾ ಮೆರವಣಿಗೆಗಳು, ಹೋರಾಟಗಳು ಮತ್ತು ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ರಾಜೀವ್ ಚೌಕ್, ಜನಪಥ್, ಪಟೇಲ್ ಚೌಕ್, ಕೇಂದ್ರ ಸಚಿವಾಲಯ ಮತ್ತು ಸೇವಾ ತೀರ್ಥ ಎಂಬ ಐದು ಮೆಟ್ರೋ ನಿಲ್ದಾಣಗಳನ್ನು ಭದ್ರತಾ ಕಾರಣಗಳಿಗಾಗಿ ಮುಂದಿನ ಸೂಚನೆಗಳವರೆಗೆ ಮುಚ್ಚಿದ ನಂತರ ದೆಹಲಿಯ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿಯೂ ಅವ್ಯವಸ್ಥೆ ಉಂಟಾಯಿತು.

ನೂರಾರು ಪ್ರಯಾಣಿಕರು ಮಾರ್ಗಮಧ್ಯೆ ಸಿಕ್ಕಿಹಾಕಿಕೊಂಡರು, ತಮ್ಮ ನಿಲ್ದಾಣಗಳಿಗೆ ತಲುಪಲು ದೀರ್ಘ ಮಾರ್ಗಗಳನ್ನು ತೆಗೆದುಕೊಳ್ಳಬೇಕಾಯಿತು.

ದೆಹಲಿಯ ಅತ್ಯಂತ ಜನನಿಬಿಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಒಂದಾದ ರಾಜೀವ್ ಚೌಕ್‌ನಲ್ಲಿ, ಮುಚ್ಚಿದ ನಿರ್ಗಮನ ದ್ವಾರಗಳ ಬಳಿ ಪ್ರಯಾಣಿಕರು ಕಿಕ್ಕಿರಿದು ತುಂಬಿರುವುದು ಕಂಡುಬಂದಿದೆ.

ಸಿಜೆಪಿ ಹುಟ್ಟಿದ್ದು ಹೇಗೆ?

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಯುವಕರನ್ನು “ಪರಾವಲಂಬಿಗಳು” ಮತ್ತು “ಜಿರಳೆಗಳು” ಎಂಬ ಹೇಳಿಕೆಯ ವಿವಾದದ ನಂತರ, ಮೇ ತಿಂಗಳಲ್ಲಿ ಅಭಿಜೀತ್ ದಿಪ್ಕೆ ಅವರು ವಿಡಂಬನಾತ್ಮಕ ಡಿಜಿಟಲ್ ಸಂಘಟನೆಯಾಗಿ ಜಿರಳೆ ಜನತಾ ಪಕ್ಷವನ್ನು ಪ್ರಾರಂಭಿಸಿದರು.

ಕೆಲವೇ ದಿನಗಳಲ್ಲಿ, ಇದು ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸಿತು. ಇದು ವಿವಿಧ ವಿರೋಧ ಪಕ್ಷದ ರಾಜಕಾರಣಿಗಳು, ಕಾರ್ಯಕರ್ತರು, ಕಲಾವಿದರು ಮತ್ತು ಕ್ರೀಡಾಪಟುಗಳಿಂದ ಬೆಂಬಲವನ್ನು ಗಳಿಸಿತು.

ಕಳೆದ ಎರಡು ವರ್ಷಗಳಿಂದ ಅಮೆರಿಕದಲ್ಲಿ ವಾಸಿಸುತ್ತಿರುವ 30 ವರ್ಷದ ದಿಪ್ಕೆ, ನಂತರ ಜೂನ್‌ನಲ್ಲಿ ಭಾರತಕ್ಕೆ ಮರಳಿದರು. ಪತ್ರಿಕೆ ಸೋರಿಕೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳಿಗೆ ಕರೆ ನೀಡಿದರು.

ನಂತರ ಜೂನ್ 28 ರಂದು ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಿದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರೊಂದಿಗೆ ಸೇರಿಕೊಂಡರು.

ಜುಲೈ 15 ರಂದು ಜಿರಳೆ ಜನತಾ ಪಕ್ಷಗಳ (ಸಿಜೆಪಿ) ಪ್ರತಿಭಟನೆಯ ಸಂದರ್ಭದಲ್ಲಿ ಸೋನಮ್ ವಾಂಗ್‌ಚುಕ್ ಅವರ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹದ 18 ನೇ ದಿನದಂದು ವೈದ್ಯಕೀಯ ವೃತ್ತಿಪರರು ಹಾಜರಿದ್ದರು.

59 ವರ್ಷದ ವಾಂಗ್‌ಚುಕ್ ಅವರನ್ನು ಕಳೆದ ಶನಿವಾರ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...

‘ಉತ್ತರ ಪ್ರದೇಶ ಪೊಲೀಸರಿಗೆ ತನಿಖೆಯ ಸೂಕ್ತ ತರಬೇತಿ ಅಗತ್ಯ’: 6 ವರ್ಷ ಅನಗತ್ಯವಾಗಿ ಜೈಲಿನಲ್ಲಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ₹6 ಲಕ್ಷ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ಅಪಹರಣ ಮತ್ತು ಕೊಲೆ ಪ್ರಕರಣವೊಂದರಲ್ಲಿ ಯಾವುದೇ ಆಧಾರವಿಲ್ಲದೆ ಸುದೀರ್ಘ 6 ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಕಾಲ ಕಳೆದ ಅರುಣ್ ಅಲಿಯಾಸ್ ದೀಪಕ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿರಪರಾಧಿ...

ನವದೆಹಲಿ| ರಾಷ್ಟ್ರಪತಿ ಭವನ ಸಮೀಪದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ; ದಟ್ಟ ಹೊಗೆ

ನವದೆಹಲಿಯ ರಾಷ್ಟ್ರಪತಿ ಭವನದ ಸಮೀಪವಿರುವ ನಾರ್ತ್ ಬ್ಲಾಕ್ ಪ್ರದೇಶದಲ್ಲಿ ಸೋಮವಾರ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ...

ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳ ಡಿಕ್ಕಿ; ಎಸ್‌ಐಟಿ ತನಿಖೆಗೆ ಆದೇಶ

ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಸುಲ್ತಾನ್‌ಪುರ ನ್ಯಾಯಾಲಯಕ್ಕೆ ತೆರಳುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆಯಲ್ಲಿದ್ದ ಹಲವು ವಾಹನಗಳು 'ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ'ನಲ್ಲಿ ಪರಸ್ಪರ ಡಿಕ್ಕಿ...

ಮಹಾರಾಷ್ಟ್ರ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, ತಡೆ ನೀಡಲು ನಿರಾಕರಣೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...

ಕರ್ನಾಟಕ SIR : ಚುನಾವಣಾ ಅಧಿಕಾರಿಗಳಿಂದಲೇ 61,000ಕ್ಕೂ ಹೆಚ್ಚು ಫಾರಂ-7 ಅರ್ಜಿ ಸಲ್ಲಿಕೆ; ಒಂದರಲ್ಲೂ ಕಾರಣ ಉಲ್ಲೇಖಿಸಿಲ್ಲ-ವರದಿ

ಕರ್ನಾಟಕದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವಂತೆ ಕೋರಿ ಕನಿಷ್ಠ 61,059 ಫಾರಂ-7 ಅರ್ಜಿಗಳನ್ನು ಸ್ವತಃ ಚುನಾವಣಾ ಅಧಿಕಾರಿಗಳೇ ಸಲ್ಲಿಸಿದ್ದು, ಅವುಗಳಲ್ಲಿ ಒಂದೇ ಒಂದು ಅರ್ಜಿಯಲ್ಲೂ ಹೆಸರು ಕೈಬಿಡಲು ಕಾರಣವನ್ನು ನಮೂದಿಸಿಲ್ಲ. ಮತದಾರರ ನೋಂದಣಿ...

ಮತದಾರರನ್ನು ಪ್ರಭಾವಿಸಲು ಬಿಜೆಪಿ ಹಣ – ಬೆದರಿಕೆ ಬಳಸುತ್ತಿದೆ: ಮಮತಾ ಆರೋಪ

ಬಿಜೆಪಿ ಹಣ ಮತ್ತು ಬೆದರಿಕೆಯನ್ನು ಬಳಸಿ ಜನರನ್ನು ಪ್ರಭಾವಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರ ದೌರ್ಜನ್ಯಗಳು ಹೆಚ್ಚಾಗಿವೆ, ಸರ್ಕಾರಿ ಅಧಿಕಾರಿಗಳು...

ಬ್ರೆಜಿಲ್ ಚುನಾವಣೆ: ಟ್ರಂಪ್ ಬೆಂಬಲಿತ ಬಲಪಂಥೀಯ ಬೋಲ್ಸೊನಾರೊಗೆ ಸೋಲು; ನಾಲ್ಕನೇ ಬಾರಿಗೆ ಎಡಪಂಥೀಯ ಲುಲಾಗೆ ಗೆಲುವು 

ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ತೀವ್ರ ಬಲಪಂಥೀಯ ಎದುರಾಳಿ ಫ್ಲಾವಿಯೊ ಬೋಲ್ಸೊನಾರೊ ಅವರನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶ ಬ್ರೆಜಿಲ್‌ನ...