Homeಮುಖಪುಟಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

- Advertisement -
- Advertisement -

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ, ಈಶಾನ್ಯ ದೆಹಲಿಯ ಹೆಚ್ಚುವರಿ ಪೊಲೀಸ್ ಆಯುಕ್ತ (ಡಿಸಿಪಿ) ಸಂದೀಪ್ ಲಂಬಾ ಮಹಿಳಾ ಪ್ರತಿಭಟನಾಕಾರರೊಬ್ಬರ ಕೆನ್ನೆಗೆ ಹೊಡೆದು ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದು, ಆಡಳಿತ ಮತ್ತು ಪೊಲೀಸರ ಈ ಅನಾಗರಿಕ ನಡವಳಿಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ಹಾಗೂ ಟೀಕೆ ವ್ಯಕ್ತವಾಗಿದೆ.

ವೈರಲ್ ಆಗಿರುವ ಈ ವೀಡಿಯೊವನ್ನು ಕಂಡು ಸಾಮಾಜಿಕ ಕಾರ್ಯಕರ್ತರು, ಹಿರಿಯ ಪತ್ರಕರ್ತರು ಹಾಗೂ ವಿರೋಧ ಪಕ್ಷದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಡಿಸಿಪಿ ಸಂದೀಪ್ ಲಂಬಾ ಅವರ ಕೃತ್ಯವನ್ನು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ.

ಕಾಕ್ರೋಚ್ ಜನತಾ ಪಕ್ಷದ ಸ್ಥಾಪಕ ಅಧ್ಯಕ್ಷ ಅಭಿಜೀತ್ ದೀಪ್ಕೆ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್)ನಲ್ಲಿ ವೀಡಿಯೊಗೆ ಪ್ರತಿಕ್ರಿಯಿಸುತ್ತಾ, ಲಂಬಾ ಅವರ ಹಲ್ಲೆಯ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ. “ಪೋಲಿಸ್ ಅಧಿಕಾರಿ ಲಂಬಾ ಅವರು ಗೀತಾಂಜಲಿ ವಾಂಗ್ಚುಕ್ ಅವರನ್ನು ಹೊಡೆಯಲು ಏಕಾಏಕಿ ಟ್ರಕ್ ಮೇಲೆ ಹತ್ತಿದರು, ಆ ಬಳಿಕ ಅವರ ಕೂದಲನ್ನು ಹಿಡಿದು ಎಳೆದರು. ಇಂತಹ ಅಮಾನವೀಯ ಕೃತ್ಯ ಎಸಗಿರುವ ಸಂದೀಪ್ ಲಾಂಬಾ ಅವರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಮಾನಸಿಕವಾಗಿ ಸದೃಢರಾಗಿಲ್ಲ,” ಎಂದು ದೀಪ್ಕೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. “ಇಲ್ಲ! ಅವನು ತನ್ನ ಕರ್ತವ್ಯವನ್ನು ಮಾತ್ರ ಮಾಡುತ್ತಿರಲಿಲ್ಲ! ಸರ್ಕಾರಿ ಅಧಿಕಾರದ ಮದದಲ್ಲಿ ಮೆರೆಯುತ್ತಿರುವ ಇಂತಹ ಪ್ರತಿ ಕ್ರೂರಿಯನ್ನು ನಾವು ಹೆಸರಿಸಿ, ನಾಚಿಕೆಪಡಿಸಿ, ಅವರಿಗೆ ಸಾಮಾಜಿಕ ಬಹಿಷ್ಕಾರ ಉಂಟಾಗುವಂತೆ ನೋಡಿಕೊಳ್ಳಬೇಕು. ಅಷ್ಟೇ ಅಲ್ಲದೆ ಇವರನ್ನು ನ್ಯಾಯಾಲಯದ ಬೋನಿಗೆ ಕರೆದೊಯ್ಯಬೇಕು. ಅದರಲ್ಲಿ ಮೊದಲನೆಯವನೇ ಈ ಸಂದೀಪ್ ಲಂಬಾ. ಇವನನ್ನು ಗುರುತಿಸಿ, ಇವನು ಎಲ್ಲಿ ವಾಸಿಸುತ್ತಾನೆ, ಇವನ ಹಿನ್ನೆಲೆ ಮತ್ತು ದಾಖಲೆ ಏನು ಎಂಬುದನ್ನು ಪತ್ತೆಹಚ್ಚಿ. ಕಾನೂನು ತಂಡಗಳು ದಯವಿಟ್ಟು ಇವನ ವಿರುದ್ಧ ದಾಖಲೆಗಳ ಕೆಲಸವನ್ನು ತಕ್ಷಣವೇ ಪ್ರಾರಂಭಿಸಿ,” ಎಂದು ಮೊಯಿತ್ರಾ ಆಕ್ರೋಶದ ಕರೆ ನೀಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಸಹ ಈ ವಿಡಿಯೋವನ್ನು ಹಂಚಿಕೊಂಡು, ಕೇಂದ್ರ ಸರ್ಕಾರದ ಹಸ್ತಕ್ಷೇಪ ಹಾಗೂ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. “ಇದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಸಮವಸ್ತ್ರದಲ್ಲಿರುವ ಗೂಂಡಾಗಳ ನಿಜವಾದ ಮುಖ,” ಎಂದು ಆಕ್ರೋಶ ಹೊರಹಾಕಿದ್ದಾರೆ. 

ಮುಂದುವರಿದು, “ಹೆಚ್ಚುವರಿ ಡಿಸಿಪಿ ಸಂದೀಪ್ ಲಂಬಾ ಅವರಂತಹ ಅನೇಕ ಪೊಲೀಸ್ ಅಧಿಕಾರಿಗಳು ತಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಮುಗ್ಧ ವಿದ್ಯಾರ್ಥಿನಿಯರ ಮೇಲೆ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಸಮವಸ್ತ್ರದ ಬ್ಯಾಡ್ಜ್‌ಗಳನ್ನು ತೆಗೆದುಹಾಕಿ, 12 ರಿಂದ 14 ವರ್ಷ ವಯಸ್ಸಿನ ಅಪ್ರಾಪ್ತ ಮಕ್ಕಳ ಮೇಲೆಯೂ ಕೈಮಾಡುತ್ತಿರುವ ಲೆಕ್ಕವಿಲ್ಲದಷ್ಟು ವೀಡಿಯೊಗಳು ಲಭ್ಯವಿವೆ. 

ಪೊಲೀಸರೇ ಸ್ವತಃ ಕಾರಿನ ಕಿಟಕಿಗಳನ್ನು ಒಡೆದು, ಕಲ್ಲು ತೂರಾಟ ನಡೆಸಿ, ಸಾಮಾನ್ಯ ಉಡುಪಿನಲ್ಲಿರುವ ಗೂಂಡಾಗಳು ಶಾಂತಿಯುತ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸುವಂತೆ ಪ್ರೋತ್ಸಾಹಿಸುತ್ತಿರುವುದನ್ನು ನಾವು ಕಣ್ಣಾರೆ ನೋಡಿದ್ದೇವೆ,” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವರದಿಗಳು ಬಂದಾಗ, ವೈರಲ್ ವೀಡಿಯೊ ಅಥವಾ ಲಂಬಾ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಕುರಿತು ದೆಹಲಿ ಪೊಲೀಸ್ ಇಲಾಖೆ ಯಾವುದೇ ಅಧಿಕೃತ ಸಾರ್ವಜನಿಕ ಸ್ಪಷ್ಟನೆ ಅಥವಾ ಪ್ರತಿಕ್ರಿಯೆ ನೀಡಿಲ್ಲ. ಏತನ್ಮಧ್ಯೆ, ಸುದ್ದಿ ಸಂಸ್ಥೆ ‘ಐಎಎನ್ಎಸ್’ (IANS) ಜೊತೆ ಮಾತನಾಡಿದ ಸಂದೀಪ್ ಲಂಬಾ, ಪ್ರತಿಭಟನಾಕಾರರೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ತಮ್ಮ ಮೊಣಕಾಲಿಗೆ ಗಾಯವಾಗಿದೆ ಮತ್ತು ತಮ್ಮ ಪೊಲೀಸ್ ಸಮವಸ್ತ್ರ ಹರಿದುಹೋಗಿದೆ ಎಂದು ತಮ್ಮ ಸ್ವಪಕ್ಷ ಸಮರ್ಥನೆ ಮಾಡಿಕೊಂಡಿದ್ದಾರೆ.

ಸಂಸತ್ತಿಗೆ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಈ ಭೀಕರ ದಮನ ಕಾರ್ಯಾಚರಣೆಯಲ್ಲಿ, ಪೊಲೀಸರು ಜನಸಂದಣಿಯನ್ನು ಚದುರಿಸಲು ಲಾಠಿ ಚಾರ್ಜ್ ಹಾಗೂ ಅತಿಯಾದ ಬಲಪ್ರಯೋಗ ನಡೆಸಿದ್ದರಿಂದ ಸುಮಾರು 100 ಕ್ಕೂ ಹೆಚ್ಚು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಬಹುತೇಕರು ವಿದ್ಯಾರ್ಥಿಗಳು ಹಾಗೂ ಹದಿಹರೆಯದವರಾಗಿದ್ದಾರೆ ಎಂಬುದು ಕಳವಳಕಾರಿ ಸಂಗತಿಯಾಗಿದೆ.

ವಿಶೇಷವೆಂದರೆ, ಅಧಿಕಾರಿ ಸಂದೀಪ್ ಲಂಬಾ ಈ ಹಿಂದೆ ವಿವಾದಕ್ಕೆ ಸಿಲುಕಿದ್ದು ಇದೇ ಮೊದಲೇನಲ್ಲ. 2020 ರಲ್ಲಿ ನಡೆದ ಈಶಾನ್ಯ ದೆಹಲಿಯ ಮುಸ್ಲಿಂ ವಿರೋಧಿ ಹಿಂಸಾಚಾರದ ವೇಳೆ ದೆಹಲಿ ಪೊಲೀಸರು ನಡೆಸಿದ ವಿವಾದಾಸ್ಪದ ತನಿಖೆಯಲ್ಲಿ ಲಂಬಾ ಅವರ ಪಾತ್ರವನ್ನು ಹಕ್ಕುಗಳ ಹೋರಾಟಗಾರರು ಮತ್ತು ವಿಮರ್ಶಕರು ಗುರುತಿಸಿದ್ದರು. 

ಗಮನಾರ್ಹ ಸಂಗತಿಯೆಂದರೆ, ಅದೇ ತನಿಖೆಗಾಗಿ ಕೇಂದ್ರ ಗೃಹ ಸಚಿವಾಲಯವು ಅವರಿಗೆ ‘ತನಿಖಾ ಶ್ರೇಷ್ಠತೆ ಪದಕ’ ನೀಡಿ ಗೌರವಿಸಿತ್ತು. ಇಂತಹ ವಿವಾದಾಸ್ಪದ ಹಿನ್ನೆಲೆಯ ಅಧಿಕಾರಿಯೇ ಈಗ ಮತ್ತೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...