Homeಮುಖಪುಟಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

- Advertisement -
- Advertisement -

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

“ದೇಶದ ಯುವಜನರು ಗೊಂದಲದ ಜಾಲದಲ್ಲಿ ಸಿಲುಕಿಕೊಳ್ಳಬಾರದು ಎಂದು ಖಚಿತಪಡಿಸಿಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಪ್ರಧಾನ್ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಎರಡು ಪುಟಗಳ ರಾಜೀನಾಮೆ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನ್, “ನಮ್ಮ ಪ್ರಜಾಪ್ರಭುತ್ವದ ಶಕ್ತಿಯ ಬಗ್ಗೆ ತಮಗೆ ಯಾವಾಗಲೂ ಅಚಲ ನಂಬಿಕೆ ಇದೆ, ದೇಶದ ಯುವಕರ ಆಕಾಂಕ್ಷೆಗಳನ್ನು ಆಳವಾಗಿ ಗೌರವಿಸುತ್ತೇನೆ” ಎಂದು ಹೇಳಿದ್ದಾರೆ. ಜಂತರ್ ಮಂತರ್‌ನಲ್ಲಿನ ಪರಿಸ್ಥಿತಿಯನ್ನು ಉಲ್ಲೇಖಿಸಿ, “ಕಳೆದ 10 ದಿನಗಳಿಂದ ನಡೆದ ಘಟನೆಗಳ ಬಗ್ಗೆ ನಾನು ದುಃಖಿತನಾಗಿದ್ದೇನೆ” ಎಂದು ಹೇಳಿದ್ದಾರೆ.

ಜಂತರ್ ಮಂತರ್ ಮತ್ತು ದೇಶಾದ್ಯಂತದ ಪರಿಸ್ಥಿತಿಯ ಲಾಭ ಪಡೆಯಲು ರಾಷ್ಟ್ರವಿರೋಧಿ ಶಕ್ತಿಗಳಿಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದರು.

“ಇದು ನನಗೆ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ, ನೀಟ್ ಪತ್ರಿಕೆ ಸೋರಿಕೆಯ ಜವಾಬ್ದಾರಿಯನ್ನು ನಾನು ಮೊದಲ ದಿನದಿಂದಲೇ ವಹಿಸಿಕೊಂಡಿದ್ದೇನೆ” ಎಂದಿದ್ದಾರೆ.

ರಾಷ್ಟ್ರ ರಾಜಧಾನಿಯಾದ್ಯಂತ ಈಗಾಗಲೇ ಭದ್ರತಾ ವ್ಯವಸ್ಥೆಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದ್ದು, ದೆಹಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಪದರಗಳ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ಭದ್ರತಾ ಕವಚಗಳನ್ನು ಭೇದಿಸುವ ಪ್ರಯತ್ನಗಳನ್ನು ತಡೆಯಲು ಭಾರೀ ಸರಪಳಿಗಳಿಂದ ಅವುಗಳನ್ನು ಬಲಪಡಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗಳು ಮತ್ತು ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಸಿಜೆಪಿ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಧರ್ಮೇಂದ್ರ ಪ್ರಧಾನ ರಾಜೀನಾಮೆ ಕೊಡದೇ ಇದ್ದರೆ ವಾರಾಂತ್ಯದಲ್ಲಿ ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆ ಇತ್ತು.

ಪೊಲೀಸ್ ಮೂಲಗಳ ಪ್ರಕಾರ, ನವದೆಹಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ, ವಿಶೇಷವಾಗಿ ಜಂತರ್ ಮಂತರ್ ಪ್ರತಿಭಟನಾ ಸ್ಥಳ ಮತ್ತು ಇತರ ಆಯಕಟ್ಟಿನ ಸ್ಥಳಗಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಬ್ಬಿಣದ ಬ್ಯಾರಿಕೇಡ್‌ಗಳ ಬಹು ಸಾಲುಗಳನ್ನು ಇರಿಸಲಾಗಿದೆ.

ಪ್ರತಿಭಟನಾ ಸ್ಥಳದ ಸುತ್ತಲೂ ಸ್ಥಾಪಿಸಲಾದ ಮುಖ ಗುರುತಿಸುವಿಕೆ ವ್ಯವಸ್ಥೆಗಳು ಕಳೆದ ಕೆಲವು ದಿನಗಳಿಂದ ಈ ಪ್ರದೇಶಕ್ಕೆ ಪ್ರವೇಶಿಸುತ್ತಿರುವ ಕ್ರಿಮಿನಲ್ ಹಿನ್ನೆಲೆಯ 2,500 ಕ್ಕೂ ಹೆಚ್ಚು ಜನರನ್ನು ಈಗಾಗಲೇ ಗುರುತಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಿರಳೆ ಜನತಾ ಪಕ್ಷ (ಸಿಜೆಪಿ) ದೆಹಲಿ ಪೊಲೀಸರ “ಹೆಚ್ಚುತ್ತಿರುವ ಸರ್ವಾಧಿಕಾರಿ ಕ್ರಮಗಳನ್ನು” ಖಂಡಿಸಿ, ಜನರ್ ಮಂತರ್‌ನಲ್ಲಿ ಮುತ್ತಿಗೆ ಹಾಕುವುದನ್ನು ನಿಲ್ಲಿಸುವಂತೆ ಒತ್ತಾಯಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...

‘ಉತ್ತರ ಪ್ರದೇಶ ಪೊಲೀಸರಿಗೆ ತನಿಖೆಯ ಸೂಕ್ತ ತರಬೇತಿ ಅಗತ್ಯ’: 6 ವರ್ಷ ಅನಗತ್ಯವಾಗಿ ಜೈಲಿನಲ್ಲಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ₹6 ಲಕ್ಷ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ಅಪಹರಣ ಮತ್ತು ಕೊಲೆ ಪ್ರಕರಣವೊಂದರಲ್ಲಿ ಯಾವುದೇ ಆಧಾರವಿಲ್ಲದೆ ಸುದೀರ್ಘ 6 ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಕಾಲ ಕಳೆದ ಅರುಣ್ ಅಲಿಯಾಸ್ ದೀಪಕ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿರಪರಾಧಿ...

ನವದೆಹಲಿ| ರಾಷ್ಟ್ರಪತಿ ಭವನ ಸಮೀಪದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ; ದಟ್ಟ ಹೊಗೆ

ನವದೆಹಲಿಯ ರಾಷ್ಟ್ರಪತಿ ಭವನದ ಸಮೀಪವಿರುವ ನಾರ್ತ್ ಬ್ಲಾಕ್ ಪ್ರದೇಶದಲ್ಲಿ ಸೋಮವಾರ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ...

ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳ ಡಿಕ್ಕಿ; ಎಸ್‌ಐಟಿ ತನಿಖೆಗೆ ಆದೇಶ

ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಸುಲ್ತಾನ್‌ಪುರ ನ್ಯಾಯಾಲಯಕ್ಕೆ ತೆರಳುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆಯಲ್ಲಿದ್ದ ಹಲವು ವಾಹನಗಳು 'ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ'ನಲ್ಲಿ ಪರಸ್ಪರ ಡಿಕ್ಕಿ...

ಮಹಾರಾಷ್ಟ್ರ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, ತಡೆ ನೀಡಲು ನಿರಾಕರಣೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...

ಕರ್ನಾಟಕ SIR : ಚುನಾವಣಾ ಅಧಿಕಾರಿಗಳಿಂದಲೇ 61,000ಕ್ಕೂ ಹೆಚ್ಚು ಫಾರಂ-7 ಅರ್ಜಿ ಸಲ್ಲಿಕೆ; ಒಂದರಲ್ಲೂ ಕಾರಣ ಉಲ್ಲೇಖಿಸಿಲ್ಲ-ವರದಿ

ಕರ್ನಾಟಕದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವಂತೆ ಕೋರಿ ಕನಿಷ್ಠ 61,059 ಫಾರಂ-7 ಅರ್ಜಿಗಳನ್ನು ಸ್ವತಃ ಚುನಾವಣಾ ಅಧಿಕಾರಿಗಳೇ ಸಲ್ಲಿಸಿದ್ದು, ಅವುಗಳಲ್ಲಿ ಒಂದೇ ಒಂದು ಅರ್ಜಿಯಲ್ಲೂ ಹೆಸರು ಕೈಬಿಡಲು ಕಾರಣವನ್ನು ನಮೂದಿಸಿಲ್ಲ. ಮತದಾರರ ನೋಂದಣಿ...

ಮತದಾರರನ್ನು ಪ್ರಭಾವಿಸಲು ಬಿಜೆಪಿ ಹಣ – ಬೆದರಿಕೆ ಬಳಸುತ್ತಿದೆ: ಮಮತಾ ಆರೋಪ

ಬಿಜೆಪಿ ಹಣ ಮತ್ತು ಬೆದರಿಕೆಯನ್ನು ಬಳಸಿ ಜನರನ್ನು ಪ್ರಭಾವಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರ ದೌರ್ಜನ್ಯಗಳು ಹೆಚ್ಚಾಗಿವೆ, ಸರ್ಕಾರಿ ಅಧಿಕಾರಿಗಳು...

ಬ್ರೆಜಿಲ್ ಚುನಾವಣೆ: ಟ್ರಂಪ್ ಬೆಂಬಲಿತ ಬಲಪಂಥೀಯ ಬೋಲ್ಸೊನಾರೊಗೆ ಸೋಲು; ನಾಲ್ಕನೇ ಬಾರಿಗೆ ಎಡಪಂಥೀಯ ಲುಲಾಗೆ ಗೆಲುವು 

ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ತೀವ್ರ ಬಲಪಂಥೀಯ ಎದುರಾಳಿ ಫ್ಲಾವಿಯೊ ಬೋಲ್ಸೊನಾರೊ ಅವರನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶ ಬ್ರೆಜಿಲ್‌ನ...