Homeಮುಖಪುಟವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ 'ಕಾಕ್ರೋಚ್ ಜನತಾ ಪಾರ್ಟಿ'

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

- Advertisement -
- Advertisement -

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

ಪ್ರತಿಭಟನಾಕಾರರಿಗೆ ಬೆಂಬಲ ನೀಡುತ್ತಿದ್ದ ಸ್ವಯಂಸೇವಕರನ್ನು ಬಂಧಿಸಲಾಗುತ್ತಿದೆ ಮತ್ತು ವಶಕ್ಕೆ ಪಡೆಯಲಾಗುತ್ತಿದೆ ಎಂದು ವರದಿಗಳನ್ನು ಉಲ್ಲೇಖಿಸಿರುವ ಅವರು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಹಾಗೂ ದೆಹಲಿಯಲ್ಲಿ ಇನ್ನೂ ನೂರಾರು ಜನರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು  ತಕ್ಷಣವೇ ಹಿಂಪಡೆಯಬೇಕು, ಬಂಧಿತ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು (ಒಪ್ಪಂದದ ಪ್ರಕಾರ) ದೆಹಲಿ ಪೋಲೀಸರು, ಕೇಂದ್ರ ತನಿಖಾ ಸಂಸ್ಥೆಗಳು ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಪೋಲೀಸರು ಭವಿಷ್ಯದಲ್ಲಿ ಯಾವುದೇ ಎಫ್‌ಐಆರ್ ದಾಖಲಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ.

ಈ ಬೇಡಿಕೆಗಳನ್ನು ಈಡೇರಿಸದಿದ್ದರೆ CJP ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಮುಂದುವರಿದು, ಕೇಸ್ ಅಥವಾ ಕಾನೂನು ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸರ್ಕಾರ ನೀಡಿದ್ದ ಲಿಖಿತ ಒಪ್ಪಂದದ ಪ್ರತಿಯನ್ನು ಮತ್ತು ಭಾರತ ಸರ್ಕಾರದ ಮುಂದಿನ ಕಾಲಮಿತಿಯನ್ನು ನಾಳೆಯೊಳಗೆ ನಮಗೆ ಹಂಚಿಕೊಳ್ಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

‘ಲಾಠಿಚಾರ್ಜ್ ಮಾಡಲು ಸಾಧ್ಯವಿಲ್ಲ’ ಎಂದ ಸುಪ್ರೀಂ ಕೋರ್ಟ್

ಇನ್ನೊಂದೆಡೆ, ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸ್ವಯಂ-ರೂಪಿತ ಶಿಸ್ತು ಅತ್ಯಗತ್ಯ ಎಂದು ಸೋಮವಾರದಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಕೇವಲ ಪ್ರತಿಭಟನೆ ಅಥವಾ ಚಳವಳಿ ನಡೆಯುತ್ತಿದೆ ಎಂಬ ಮಾತ್ರಕ್ಕೆ ಪೋಲೀಸ್ (ದೌರ್ಜನ್ಯ)  ಹಿಂಸಾಚಾರಕ್ಕೆ ಆಸ್ಪದವಿಲ್ಲ ಎಂದು ಸ್ಪಷ್ಟಪಡಿಸಿದೆ.

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ನೀಟ್ (NEET) ಪ್ರತಿಭಟನಾಕಾರರ ಮೇಲೆ ಪೋಲೀಸರು ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿ ರಾಜ್ಯಸಭಾ ಸಂಸದ ಮನೋಜ್ ಝಾ ಸಲ್ಲಿಸಿದ್ದ ಅರ್ಜಿ ಸೇರಿದಂತೆ ಹಲವು ಅರ್ಜಿಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿತು.

“ಪ್ರತಿಭಟನೆ ನಡೆಸುವುದು, ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಚಳವಳಿ ಮಾಡುವುದು ಸಂವಿಧಾನ ನಮಗೆ ನೀಡಿರುವ ಮೂಲಭೂತ ಹಕ್ಕು. ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿರುವಾಗ, ಕೇವಲ ಚಳವಳಿ ನಡೆಯುತ್ತಿದೆ ಎಂಬ ಕಾರಣಕ್ಕೆ ಪೋಲೀಸರು ಅತಿಯಾದ ಬಲಪ್ರಯೋಗ ಅಥವಾ ದೌರ್ಜನ್ಯ ನಡೆಸಲು ಸಾಧ್ಯವಿಲ್ಲ” ಎಂದು ಸಿಜೆಐ ಸೂರ್ಯ ಕಾಂತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...