Homeಮುಖಪುಟಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

- Advertisement -
- Advertisement -

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಆದರೆ, ಈ ಕ್ರಮವನ್ನು ತೀವ್ರವಾಗಿ ಪ್ರಶ್ನಿಸಿರುವ ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ, ಕೇವಲ ಒಬ್ಬ ಕೆಳಹಂತದ ಸಿಬ್ಬಂದಿಯನ್ನು ಅಮಾನತುಗೊಳಿಸುವುದು ಸಾಕಾಗುವುದಿಲ್ಲ; ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಮಾಡಲು ಮತ್ತು ಗುಂಡು ಹಾರಿಸಲು ಆದೇಶ ನೀಡಿದ ಹಿರಿಯ ಅಧಿಕಾರಿಗಳ ಹೊಣೆಗಾರಿಕೆಯನ್ನು ನಿರ್ಧರಿಸುವ ತನಿಖೆ ನಡೆಯಬೇಕು ಎಂದು ಪಟ್ಟುಹಿಡಿದಿರುವುದಾಗಿ ಮಕ್ತೂಬ್ ಮೀಡಿಯಾ ವರದಿ ಮಾಡಿದೆ. 

ಈ ಕುರಿತು ‘ಮಕ್ತೂಬ್’ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಸಂಸದ ಮನೋಜ್ ಝಾ, ಕಾನ್‌ಸ್ಟೆಬಲ್‌ನ ಅಮಾನತು ಕೇವಲ ಕಣ್ಣೊರೆಸುವ ತಂತ್ರ ಎಂದಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸ್ ಕಾರ್ಯಾಚರಣೆಗೆ ಅಧಿಕಾರ ನೀಡಿದ ‘ಆಜ್ಞಾ ಸಾಲಿನ’ (Chain of Command) ಕುರಿತು ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ. “ಆ ಕಾನ್‌ಸ್ಟೆಬಲ್ ಬಂದೂಕನ್ನು ಹಿಡಿದುಕೊಂಡಿದ್ದ, ಗುಂಡು ಹಾರಿಸಿದ ಎಂಬುದು ನಿಜ. ಆದರೆ ಹಿರಿಯ ಅಧಿಕಾರಿಗಳು ಆತನಿಗೆ ಖಂಡಿತವಾಗಿಯೂ ಆಜ್ಞೆ ನೀಡಿದ್ದರು. ಇಂತಹ ಸಂದರ್ಭಗಳಲ್ಲಿ ಕೆಳಹಂತದ ಕಿರಿಯ ಅಧಿಕಾರಿಯನ್ನು ಬಲಿಪಶು ಮಾಡಲಾಗುತ್ತದೆ, ಆದರೆ ಆ ಪೊಲೀಸ್ ಸಿಬ್ಬಂದಿಗೆ ಬಲಪ್ರಯೋಗಕ್ಕೆ ಅವಕಾಶ ಮಾಡಿಕೊಟ್ಟ ನಿಜವಾದ ಅಪರಾಧಿಗಳು ಸುರಕ್ಷಿತವಾಗಿ ಹಿಂದೆ ಕುಳಿತುಕೊಳ್ಳುತ್ತಾರೆ. ನನ್ನ ಪ್ರಯತ್ನ ಕೇವಲ ಒಬ್ಬ ಪೊಲೀಸ್ ಸಿಬ್ಬಂದಿಯ ಅಮಾನತಿಗೆ ಸೀಮಿತವಾದುದಲ್ಲ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ಆದೇಶ ನೀಡಿದವರು ಯಾರು ಎಂಬುದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಬೇಕು” ಎಂದು ಝಾ ಕಟುವಾಗಿ ಪ್ರಶ್ನಿಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಲೆ ಅಖಿಲ ಭಾರತ ವಿದ್ಯಾರ್ಥಿ ಸಂಘ (AISA) ಕರೆ ನೀಡಿದ್ದ ‘ಬಿಹಾರ ಬಂದ್’ ಸಂದರ್ಭದಲ್ಲಿ ಸಿವಾನ್ ಜಿಲ್ಲೆಯಲ್ಲಿ ನಡೆದ ಪ್ರದರ್ಶನಗಳ ಮೇಲೆ ಪೊಲೀಸರು ನಡೆಸಿದ ದಮನಕಾರಿ ಕಾರ್ಯಾಚರಣೆ ವೇಳೆ ಗುಂಡು ಹಾರಿಸಲಾಗಿದ್ದು, ಈ ಘಟನೆಯಲ್ಲಿ ಮೂವರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಈ ಘಟನೆಯು ಜುಲೈ 20 ರಿಂದ 25 ರವರೆಗೆ ‘ಕಾಕ್ರೋಚ್ ಜನತಾ ಪಕ್ಷ’ (CJP) ಕರೆ ನೀಡಿದ್ದ ದೇಶವ್ಯಾಪಿ ಪ್ರತಿಭಟನೆಗಳ ಸಂದರ್ಭದಲ್ಲಿ ವರದಿಯಾದ ಅತಿಯಾದ ಪೊಲೀಸ್ ಬಲಪ್ರಯೋಗದ ಸರಣಿ ಆರೋಪಗಳ ಪೈಕಿ ಒಂದಾಗಿದೆ. ದೆಹಲಿಯ ಜಂತರ್ ಮಂತರ್ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್, ಅಶ್ರುವಾಯು, ಪೆಲೆಟ್ ಗನ್ ಹಾಗೂ ಅನಿಯಂತ್ರಿತ ಬಂಧನಗಳಂತಹ ಅಸಮಾನ ಬಲಪ್ರಯೋಗ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪೋಲಿಸ್ ಬಲಪ್ರಯೋಗದ ಈ ವಿಶಾಲ ಮಾದರಿಯನ್ನು ಉಲ್ಲೇಖಿಸಿದ ಸಂಸದರು, ಈ ಹಿಂಸಾಚಾರವು ಬಿಹಾರಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಇದು ಬಿಹಾರದಲ್ಲಿ ಮಾತ್ರ ಸಂಭವಿಸಿಲ್ಲ. ಎಲ್ಲೆಡೆ ಪ್ರತಿಭಟನಾಕಾರರ ಮೇಲೆ ಅತಿಯಾದ ಬಲಪ್ರಯೋಗ ಮಾಡಲಾಯಿತು ಮತ್ತು ಪೊಲೀಸರು ಅವರನ್ನು ಕ್ರೂರವಾಗಿ ಥಳಿಸಿದರು. ಇದಕ್ಕೆ ಸಂಬಂಧಿಸಿದ ವೀಡಿಯೊಗಳು ಸಾರ್ವಜನಿಕ ವಲಯದಲ್ಲಿವೆ” ಎಂದು ಝಾ ಮಕ್ತೂಬ್‌ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಪ್ರದರ್ಶನಗಳ ಸಮಯದಲ್ಲಿ ಪೊಲೀಸರ ನಡವಳಿಕೆಯನ್ನು ನಿಯಂತ್ರಿಸಲು ಸಾಂಸ್ಥಿಕ ಸುಧಾರಣೆಗಳನ್ನು ತರಬೇಕೆಂದು ಅವರು ಕರೆ ನೀಡಿದ್ದು, ಭವಿಷ್ಯದಲ್ಲಿ ಇಂತಹ ಪ್ರತಿಭಟನೆಗಳನ್ನು ನಿರ್ವಹಿಸಲು ಪೊಲೀಸ್ ಇಲಾಖೆಯೊಳಗೆ ನಿರ್ದಿಷ್ಟ ‘ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ವನ್ನು (SOP) ಹೊರಡಿಸಬೇಕು ಹಾಗೂ ಈ ರೀತಿಯ ಕ್ರೌರ್ಯ ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ನಡುವೆ, ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಎಸಗಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಂಸದ ಝಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಡ್ವೊಕೇಟ್-ಆನ್-ರೆಕಾರ್ಡ್ ಉಜ್ವಲ್ ಸಿಂಗ್ ಅವರ ಮೂಲಕ ಸಲ್ಲಿಸಲಾದ ಈ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಉಲ್ಲೇಖಿಸಲಾಗಿದೆ. 

ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗದ ಆರೋಪದ ಕುರಿತು ಸಲ್ಲಿಸಲಾದ ಇತರ ಅರ್ಜಿಗಳ ಜೊತೆಗೆ ಈ ವಿಷಯವೂ ಮಂಗಳವಾರ ವಿಚಾರಣೆಗೆ ಬರಲಿದೆ. “ಈ ಪ್ರಕರಣದ ವಿಚಾರಣೆ ನಾಳೆ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿಗಳ ವಿಧಾನವನ್ನು ಇದು ಅವಲಂಬಿಸಿದೆ. ನ್ಯಾಯಾಲಯವು ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ನಾವು ಆಶಿಸೋಣ” ಎಂದು ವಿಚಾರಣೆಗೆ ಮುಂಚಿತವಾಗಿ ಝಾ ಭರವಸೆ ವ್ಯಕ್ತಪಡಿಸಿದ್ದಾರೆ.

ಸಂಸದ ಝಾ ತಮ್ಮ ಅರ್ಜಿಯಲ್ಲಿ, ಜುಲೈ 20 ರಿಂದ 25 ರವರೆಗೆ ನಡೆದ ಪ್ರತಿಭಟನೆಗಳಲ್ಲಿ (ವಿಶೇಷವಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ) ಪೊಲೀಸ್ ದೌರ್ಜನ್ಯದ ಆರೋಪಗಳು ಬಂದಲ್ಲೆಲ್ಲಾ ಎಫ್‌ಐಆರ್ ದಾಖಲಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ. ತನಿಖೆಯು ನ್ಯಾಯಯುತವಾಗಿ ನಡೆಯಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಮಾರ್ಗದರ್ಶನದಲ್ಲಿ ಮತ್ತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ನ್ಯಾಯಾಲಯಕ್ಕೆ ಪ್ರಾರ್ಥಿಸಿದ್ದಾರೆ.

ಪ್ರತಿಯೊಂದು ರಾಜ್ಯದಲ್ಲೂ ಪೊಲೀಸ್ ಮಹಾನಿರ್ದೇಶಕರ (DGP) ನೇತೃತ್ವದಲ್ಲಿ ಮತ್ತು ಇನ್ಸ್‌ಪೆಕ್ಟರ್ ಜನರಲ್ (IG) ಹುದ್ದೆಗಿಂತ ಕಡಿಮೆಯಿಲ್ಲದ ಇಬ್ಬರು ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ‘ವಿಶೇಷ ತನಿಖಾ ತಂಡ’ಗಳ (SIT) ರಚನೆಗೆ ಅರ್ಜಿಯಲ್ಲಿ ವಿನಂತಿಸಲಾಗಿದೆ.

ಅಷ್ಟೇ ಅಲ್ಲದೆ, ಸಿಸಿಟಿವಿ ದೃಶ್ಯಾವಳಿಗಳು, ಡ್ರೋನ್ ರೆಕಾರ್ಡಿಂಗ್‌ಗಳು, ಬಾಡಿ-ಕ್ಯಾಮೆರಾ ವೀಡಿಯೊಗಳು, ಕಾರ್ಯಾಚರಣೆಯ ನಿಯೋಜನೆ ಯೋಜನೆಗಳು, ಬಲಪ್ರಯೋಗಕ್ಕೆ ಅಧಿಕಾರ ನೀಡುವ ಆದೇಶಗಳು ಮತ್ತು ಪ್ರತಿಭಟನಾಕಾರರು ಹಾಗೂ ಪೊಲೀಸ್ ಸಿಬ್ಬಂದಿಗೆ ಆಗಿರುವ ಗಾಯಗಳ ದಾಖಲೆಗಳು ಸೇರಿದಂತೆ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ಎಲ್ಲಾ ವೀಡಿಯೊ ಹಾಗೂ ದಾಖಲೆ ಪುರಾವೆಗಳನ್ನು ತಕ್ಷಣ ಸಂರಕ್ಷಿಸುವಂತೆ ನ್ಯಾಯಾಲಯವನ್ನು ಕೋರಲಾಗಿದೆ. ಹೊಣೆಗಾರರಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮತ್ತು ಇಲಾಖಾ ಕ್ರಮ ಜರುಗಿಸುವುದು, ಬಲಿಪಶುಗಳಿಗೆ ಪರಿಹಾರ ಮತ್ತು ಉಚಿತ ವೈದ್ಯಕೀಯ ಆರೈಕೆ ನೀಡುವುದು, ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಬಹಿರಂಗಪಡಿಸುವುದು ಹಾಗೂ ಬೆದರಿಕೆಯ ವಿರುದ್ಧ ಅವರಿಗೆ ರಕ್ಷಣೆ ನೀಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿದೆ.

ಅಂತಿಮವಾಗಿ, ನಿರಾಯುಧ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅಗತ್ಯವಿರುವ ಅತ್ಯಂತ ಕನಿಷ್ಠ ಬಲವನ್ನು ಮಾತ್ರ ಬಳಸಬೇಕು, ಜನಸಂದಣಿ ನಿಯಂತ್ರಣ ಕಾರ್ಯಾಚರಣೆಗಳ ಕಡ್ಡಾಯ ದಾಖಲಾತಿಯನ್ನು ಕಾಯ್ದುಕೊಳ್ಳಬೇಕು, ಅಧಿಕಾರಿಗಳು ಸ್ಪಷ್ಟವಾಗಿ ಕಾಣಿಸುವ ಹೆಸರುಳ್ಳ ಬ್ಯಾಡ್ಜ್‌ಗಳನ್ನು ಧರಿಸಬೇಕು ಮತ್ತು ವಿಶೇಷ ತನಿಖಾ ತಂಡಗಳ ಮೂಲಕ ಪೊಲೀಸ್ ದೌರ್ಜನ್ಯದ ದೂರುಗಳ ಸ್ವತಂತ್ರ ತನಿಖೆಗೆ ಅವಕಾಶ ನೀಡುವಂತೆ ರಾಷ್ಟ್ರವ್ಯಾಪಿ ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದು ಸಂಸದ ಮನೋಜ್ ಝಾ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...