Homeಮುಖಪುಟಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

- Advertisement -
- Advertisement -

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ ನಡೆದ ಮಹಿಳೆಯರ ಶಾಟ್‌ಪುಟ್ ಎಫ್‌57 ಸ್ಪರ್ಧೆಯಲ್ಲಿ ಅವರು ಚಿನ್ನ ಗೆದ್ದಿದ್ದಾರೆ.

40 ವರ್ಷ ವಯಸ್ಸಿನ ಶರ್ಮಿಳಾ ಸಿಡಬ್ಲ್ಯೂಜಿನಲ್ಲಿ ಪ್ಯಾರಾ-ಅಥ್ಲೆಟಿಕ್ಸ್‌ ಪದಕಕ್ಕಾಗಿ ಭಾರತದ 20 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿದ್ದಾರೆ. ಆ ಮೂಲಕ 9.81 ಮೀಟರ್ ದೂರ ಎಸೆದು ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.

ವಿವಾದಾತ್ಮಕ ಸಂದರ್ಭಗಳ ನಡುವೆ ಭಾರತೀಯರ ಪ್ರತಿಭಟನೆಯ ನಂತರ ಭಾರತದ ಶಿಲ್ಪಾ ಶೈಲಾ ಅವರಿಗೆ ಕಂಚಿನ ಪದಕ ನೀಡಲಾಯಿತು. ಶೈಲಾ 7.26 ಮೀಟರ್ ವೈಯಕ್ತಿಕ ಅತ್ಯುತ್ತಮ ಪ್ರಯತ್ನ ಮಾಡಿದ್ದರು.

ನೈಜೀರಿಯಾದ ಯುಚಾರಿಯಾ ಇಯಾಜಿ ಅವರನ್ನು ಆರಂಭದಲ್ಲಿ ಕಂಚಿನ ಪದಕ ಸ್ಥಾನದಲ್ಲಿ ಇರಿಸಲಾಗಿತ್ತು. ಆದರೆ, ಭಾರತದ ಪ್ರತಿಭಟನೆ ಮತ್ತು ಅಧಿಕೃತ ಪರಿಶೀಲನೆಯ ನಂತರ, ಅವರ ಏಕೈಕ ಮಾನ್ಯ ಅಂಕವನ್ನು ಫೌಲ್ ಎಂದು ನಿರ್ಣಯಿಸಲಾಯಿತು.

ಇದರಿಂದಾಗಿ ಶೈಲಾ ಅವರನ್ನು ಆರಂಭಿಕ ನಾಲ್ಕನೇ ಸ್ಥಾನದಿಂದ ಕಂಚಿಗೆ ಬಡ್ತಿ ನೀಡಲಾಯಿತು. ಆದರೆ, ನೈಜೀರಿಯಾ ಕೂಡ ಇದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ಸೋಮವಾರ ರಾತ್ರಿ ನಡೆದ ಶರ್ಮಿಳಾ ಅವರ ಪ್ರದರ್ಶನವು, ಫಲಿತಾಂಶಕ್ಕೆ ಮಾತ್ರ ಸೀಮಿತವಾಗಿರದೆ, ಅವರು ಜೀವನದಲ್ಲಿ ಇಲ್ಲಿಯವರೆಗೆ ಬರಲು ತೆಗೆದುಕೊಂಡ ಸಂಕಲ್ಪಕ್ಕೂ ಒಂದು ಉದಾಹರಣೆಯಾಗಿದೆ.

ಹರಿಯಾಣದ ಚಿತ್ರೋಲಿಯವರಾದ ಶರ್ಮಿಳಾ ಅವರ ಎಡಗಾಲು ಎರಡು ವರ್ಷ ವಯಸ್ಸಿನಲ್ಲಿ ಪೋಲಿಯೊದಿಂದ ದುರ್ಬಲವಾಗಿತ್ತು.

ಭಾರತೀಯ ಕ್ರೀಡಾ ಪ್ರಾಧಿಕಾರ ಹಂಚಿಕೊಂಡ ಪ್ರೊಫೈಲ್ ಪ್ರಕಾರ, ಶರ್ಮಿಳಾ ಅವರಿಗೆ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ವಿವಾಹವಾಯಿತು. ಕುಟುಂಬದ ಬೆಂಬಲದೊಂದಿಗೆ ಜೀವನವನ್ನು ಕಟ್ಟಿಕೊಳ್ಳುವ ಮೊದಲೇ ಅವರು ಕಷ್ಟದ ದಾಂಪತ್ಯದಲ್ಲಿ ಸಿಲುಕಿಕೊಂಡರು. ಗಂಡನಿಂದ ಬೇರ್ಪಟ್ಟ ಬಳಿಕ ಅವರು ಅಂತಿಮವಾಗಿ ರೇವಾರಿಯ ಉದ್ಯಮಿ ಅಜಿತ್ ಸಿಂಗ್ ಅವರನ್ನು ಮರು ವಿವಾಹವಾದರು, ಈಗ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

2020 ರಲ್ಲಿ ಶರ್ಮಿಳಾ ಪ್ಯಾರಾ ಅಥ್ಲೆಟಿಕ್ಸ್ ವೃತ್ತಿಜೀವನವನ್ನು ಪ್ರಾರಂಭಿಸಲು ಪ್ರೋತ್ಸಾಹಿಸಿದವರು ಅಜಿತ್.

ತರಬೇತುದಾರ ಟೆಕ್ ಚಂದ್ ಅವರ ಮಾರ್ಗದರ್ಶನದಲ್ಲಿ ಒಂದು ವರ್ಷದೊಳಗೆ ಅವರು ರಾಷ್ಟ್ರೀಯ ಚಾಂಪಿಯನ್‌ಶಿಪ್ ಗೆದ್ದರು. ಅಂದಿನಿಂದ ಶಾಟ್ ಪುಟ್ ಮತ್ತು ಡಿಸ್ಕಸ್ ಥ್ರೋ (ಎಫ್‌57) ಸ್ಪರ್ಧೆಗಳಲ್ಲಿ ಭಾರತದ ಪ್ರಮುಖ ಪ್ಯಾರಾ ಥ್ರೋವರ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.

ಈ ವರ್ಷ ಫಝಾ ಇಂಟರ್ನ್ಯಾಷನಲ್ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಶರ್ಮಿಳಾ ಚಿನ್ನದ ಪದಕ ಗೆದ್ದರು. ಅವರು 2022 ರ ಬರ್ಮಿಂಗ್ಹ್ಯಾಮ್ ಕ್ರೀಡಾಕೂಟದಲ್ಲಿಯೂ ಭಾಗವಹಿಸಿ ನಾಲ್ಕನೇ ಸ್ಥಾನ ಪಡೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...