Homeಮುಖಪುಟಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

- Advertisement -
- Advertisement -

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ ಹಣವನ್ನು ಹಿಂತಿರುಗಿಸಿದ್ದಾರೆ ಎಂಬ ಸತ್ಯವನ್ನು ಕೇಂದ್ರ ಸರ್ಕಾರವೇ ಮಂಗಳವಾರ ಲೋಕಸಭೆಯಲ್ಲಿ ಒಪ್ಪಿಕೊಂಡಿದೆ.

ತಮ್ಮದೇ ಅಧಿಕಾರ ವ್ಯಾಪ್ತಿಯ ತೋಟಗಾರಿಕಾ ಯೋಜನೆಯನ್ನು ಬಳಸಿಕೊಂಡು ಸೌತೆಕಾಯಿ ಕೃಷಿಗಾಗಿ ಸಚಿವರು ₹99 ಲಕ್ಷ ಸಬ್ಸಿಡಿ ಗಿಟ್ಟಿಸಿಕೊಂಡಿದ್ದನ್ನು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ತನಿಖಾ ವರದಿ ಬಯಲಿಗೆಳೆದಿತ್ತು. ವರದಿ ಪ್ರಕಟವಾಗಿ ಸರಿಯಾಗಿ ಒಂದು ತಿಂಗಳ ನಂತರ, ಚೌಧರಿ ಅವರು ಹಣ ವಾಪಸ್ ಮಾಡುವ ನಾಟಕವಾಡಿದ್ದಾರೆ.

ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಕೃಷಿ ಇಲಾಖೆಯ ಇನ್ನೊಬ್ಬ ರಾಜ್ಯ ಸಚಿವ ರಾಮ್‌ನಾಥ್ ಠಾಕೂರ್, ಭಾಗೀರಥ್ ಚೌಧರಿ ಅವರು ಸಬ್ಸಿಡಿ ಮೊತ್ತವನ್ನು ಸಂಬಂಧಪಟ್ಟ ಬ್ಯಾಂಕ್‌ಗೆ ವಾಪಸ್ ಮಾಡಿದ್ದಾರೆ. ಆ ಹಣವನ್ನು ರಾಷ್ಟ್ರೀಯ ತೋಟಗಾರಿಕಾ ಮಂಡಳಿಗೆ (NHB) ಜಮಾ ಮಾಡುವಂತೆ ಬ್ಯಾಂಕ್‌ಗೆ ಸೂಚಿಸಲಾಗಿದೆ ಎಂದಿದ್ದಾರೆ.

ಸಚಿವರು ಮಾತ್ರವಲ್ಲ, ರಾಜಸ್ಥಾನದ ಜಾಲೋರ್‌ನ ಬಿಜೆಪಿ ಸಂಸದ ಲುಂಬಾರಾಮ್ ಚೌಧರಿ ಕೂಡ ಕಳೆದ ಐದು ವರ್ಷಗಳಲ್ಲಿ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ ಈ ಯೋಜನೆಗಳಡಿ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಕೇಂದ್ರ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಪಶುಸಂಗೋಪನಾ ಕಾರ್ಯದರ್ಶಿ ನರೇಶ್ ಪಾಲ್ ಗಂಗ್ವಾರ್ ಕುಟುಂಬದ ಮೂವರು ಸದಸ್ಯರು ಕಳೆದ 5 ವರ್ಷಗಳಲ್ಲಿ ಬರೋಬ್ಬರಿ ₹1.16 ಕೋಟಿ ಸಬ್ಸಿಡಿ ಬಾಚಿಕೊಂಡಿದ್ದಾರೆ.

ಆಯ್ದ ತರಕಾರಿ ಮತ್ತು ಹೂವುಗಳ “ವಾಣಿಜ್ಯ ಕೃಷಿ”ಯನ್ನು ದೊಡ್ಡ ಮಟ್ಟದಲ್ಲಿ ಉತ್ತೇಜಿಸುವ ಈ ಯೋಜನೆಯು ತೋಟಗಾರಿಕೆ ಸಮಗ್ರ ಅಭಿವೃದ್ಧಿ ಮಿಷನ್ (MIDH) ಅಡಿಯಲ್ಲಿ ಬರುತ್ತದೆ. ಇದನ್ನು 2014-15 ರಲ್ಲಿ ಪ್ರಾರಂಭಿಸಲಾಯಿತು. ಇದು ಚೌಧರಿ ಅವರ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಸ್ವಾಯತ್ತ ಸಂಸ್ಥೆಯಾದ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಿಂದ ನಿರ್ವಹಿಸಲ್ಪಡುತ್ತದೆ.

ಕ್ಯಾಪ್ಸಿಕಂ, ಸೌತೆಕಾಯಿ, ಟೊಮೆಟೊ ಮತ್ತು ಗುಲಾಬಿ, ಆಂಥೂರಿಯಂ, ಆರ್ಕಿಡ್ ಸೇರಿದಂತೆ ಎಂಟು ಬಗೆಯ ಹೂವುಗಳ ಕೃಷಿ ಯೋಜನೆಗೆ ಗರಿಷ್ಠ ಶೇ. 50 ರಷ್ಟು ಅಥವಾ ಪ್ರತಿ ಕುಟುಂಬಕ್ಕೆ ಗರಿಷ್ಠ 1 ಕೋಟಿ ರೂಪಾಯಿವರೆಗೆ ಸಬ್ಸಿಡಿ ನೀಡಲಾಗುತ್ತದೆ.

ಸಾಮಾನ್ಯ ರೈತರು ಸಣ್ಣ ಸಬ್ಸಿಡಿಗಾಗಿ, ಸಾಲಕ್ಕಾಗಿ ಬ್ಯಾಂಕ್‌ಗಳ ಮೆಟ್ಟಿಲೇರಿ ಕಣ್ಣೀರು ಹಾಕುತ್ತಿರುವಾಗ, ಅಧಿಕಾರದ ಚುಕ್ಕಾಣಿ ಹಿಡಿದ ಜನಪ್ರತಿನಿಧಿಗಳು ಮತ್ತು ಉನ್ನತಾಧಿಕಾರಿಗಳು ಕೋಟಿ ಕೋಟಿ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳುತ್ತಿರುವುದು ಇಂದಿನ ಆಡಳಿತ ವ್ಯವಸ್ಥೆಯ ದುರಂತಕ್ಕೆ ಸಾಕ್ಷಿ.

ರಾಜಕಾರಣಿಗಳು ಅಥವಾ ಅವರ ಕುಟುಂಬದವರು ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಿದಾಗ ಅಧಿಕಾರ ದುರುಪಯೋಗ ತಡೆಯಲು ಅಥವಾ ಹಿತಾಸಕ್ತಿ ತಡೆಯಲು ನಿಯಮಗಳಿವೆಯೇ ಎಂದು ಅಭಿಷೇಕ್ ಬ್ಯಾನರ್ಜಿ ಸದನದಲ್ಲಿ ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ ಸರ್ಕಾರ, ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ ಈಗಿನ ಮಾರ್ಗದರ್ಶಿ ಸೂತ್ರಗಳಲ್ಲಿ ಜನಪ್ರತಿನಿಧಿಗಳು ಅಥವಾ ಅವರ ಕುಟುಂಬದ ಸದಸ್ಯರು ಸಬ್ಸಿಡಿಗೆ ಅರ್ಜಿ ಸಲ್ಲಿಸುವುದನ್ನು ತಡೆಯುವ ಅಥವಾ ಹಿತಾಸಕ್ತಿ ಸಂಘರ್ಷದ ಕುರಿತು ಯಾವುದೇ ನಿರ್ದಿಷ್ಟ ನಿಯಮಗಳಿಲ್ಲ ಎಂದು ಉಡಾಫೆಯಾಗಿ ಹೇಳಿದೆ. ಅಂದರೆ, ಸಚಿವರು ಮತ್ತು ಸಂಸದರು ಜನಸಾಮಾನ್ಯರ ತೆರಿಗೆ ಹಣವನ್ನು ತಮ್ಮ ಕಿಸೆಗೆ ಹಾಕಿಕೊಳ್ಳಲು ಲೂಟಿ ಬಾಗಿಲು ತೆರೆದೇ ಇದೆ ಎಂಬುದನ್ನು ಸರ್ಕಾರ ಒಪ್ಪಿಕೊಂಡಂತಾಗಿದೆ.

ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ಹಣ ವಾಪಸ್ ನೀಡಿದ ತಕ್ಷಣ ಸಚಿವರ ಅಧಿಕಾರ ದುರುಪಯೋಗದ ಅಪರಾಧ ಇಲ್ಲದಂತಾಗುತ್ತದೆಯೇ? ಸಾಮಾನ್ಯ ರೈತನಾಗಿದ್ದರೆ ಸರ್ಕಾರ ಇದೇ ರೀತಿ ಸುಮ್ಮನಿರುತ್ತಿತ್ತೇ? ಎನ್ನುವ ಪ್ರಶ್ನೆಗಳು ಈಗ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...